ಹಾಸ್ಯಗಾರರ ʼದಶರೂಪಗಳ ದಶಾವತಾರʼ ಕೃತಿ ಯಕ್ಷಗಾನಕ್ಕೊಂದು ಆಕರ ಗ್ರಂಥ

 ಶಿರಸಿ: ದಶರೂಪಗಳ ದಶಾವತಾರ ಕೃತಿಯನ್ನು ವಿಶ್ರಾಂತ ಸಂಪಾದಕ ಅಶೋಕ ಹಾಸ್ಯಗಾರ ಅವರು ಹತ್ತು ವರ್ಷಗಳ ಸತತ ಅಧ್ಯಯನ, ಪರಿಶ್ರಮದಿಂದ ರಚಿಸಿದ್ದಾರೆ. ಯಕ್ಷಗಾನಕ್ಕೆ ಇದೊಂದು ಆಕರ ಗ್ರಂಥ ವಾಗುವುದರಲ್ಲಿ ಸಂಶಯವಿಲ್ಲ. ಎಂದು ಖ್ಯಾತ ಪತ್ರಕರ್ತ, ಅಂಕಣಕಾರ ರಾಜು ಅಡ್ಕಳ್ಳಿ ಹೇಳಿದರು. ಅವರು ಬೆಂಗಳೂರಿನ ಆನಂದ ರಾವ್ ವೃತ್ತದ ಲೆಕ್ಕಾಧಿಕಾರಿಗಳ ಸಂಘದಲ್ಲಿ ವಿಶ್ವಾಭಿಗಮನಮ್ ಯಕ್ಷನೃತ್ಯ, ಸಾಹಿತಿ, ಪ್ರಸಂಗಕರ್ತ ದಿನೇಶ … Continued

ಬೀದಿ ನಾಯಿ ʼಪಿಕಾಚುʼ ಗೌರವಾರ್ಥ ಹೃದಯಸ್ಪರ್ಶಿ ಭಿತ್ತಿಚಿತ್ರ ಕೆತ್ತಿಸಿದ ಬೆಂಗಳೂರು ನಿವಾಸಿಗಳು…!

ಬೆಂಗಳೂರು : ಬೆಂಗಳೂರಿನ ಜೆ.ಪಿ. ನಗರದ ಡಾಲರ್ ಕಾಲೋನಿಯ ನಿವಾಸಿಗಳು ʼಪಿಕಾಚುʼ ಎಂಬ ಪ್ರೀತಿಯ ಬೀದಿ ನಾಯಿಯ ನೆನಪಿಗಾಗಿ ಒಂದು ಭಿತ್ತಿಚಿತ್ರವನ್ನು ಕಲ್ಲಿನಲ್ಲಿ ಕೆತ್ತಿಸುವ ಮೂಲಕ ಗೌರವ ಸಲ್ಲಿಸಿದ್ದಾರೆ. . ಪೋಕ್ಮನ್ ಪಾತ್ರದ ಹೆಸರಿನಿಂದ ಕರೆಯಲ್ಪಡುವ ಪಿಕಾಚು ಎಂಬ ಬೀದಿ ನಾಯಿಯನ್ನು ನಿವಾಸಿಗಳು ಅಪಾರವಾಗಿ ಪ್ರೀತಿಸುತ್ತಿದ್ದರು ಮತ್ತು ಈಗ ಕಲ್ಲಿನಲ್ಲಿ ಕೆತ್ತಿದ ಈ ನಾಯಿಯ ಭಿತ್ತಿಚಿತ್ರವು … Continued

ಕಿರುತೆರೆ ನಟಿ-ನಿರೂಪಕಿಗೆ ಚಾಕುವಿನಿಂದ ಇರಿದ ಗಂಡ…

ಬೆಂಗಳೂರು: ಕಿರುತೆರೆ ಧಾರಾವಾಹಿ ನಟಿ ಹಾಗೂ ನಿರೂಪಕಿಗೆ ಆಕೆಯ ಗಂಡನೇ ಚಾಕುವಿನಿಂದ ಇರಿದಿರುವ ಘಟನೆ ಶುಕ್ರವಾರ ವರದಿಯಾಗಿದೆ. ವರದಿಗಳ ಪ್ರಕಾರ, ಧಾರಾವಾಹಿ ನಟಿ ಹಾಗೂ ಖಾಸಗಿ ವಾಹಿನಿಯ ನಿರೂಪಕಿಗೆ ಮಂಜುಳಾ ಅಲಿಯಾಸ್‌ ಶ್ರುತಿ ಎಂಬವರಿಗೆ ಚಾಕು ಇರಿಯಲಾಗಿದ್ದು,  ಆಕೆಯ ಗಂಡನೇ ಆಕೆಯ ಮೇಲೆ ಪೆಪ್ಪರ್ ಸ್ಪ್ರೇ ಹಾಕಿ ಬಳಿಕ ಆಕೆಗೆ ಚಾಕುವಿನಿಂದ ಇರಿದಿದ್ದಾನೆ ಎನ್ನಲಾಗಿದೆ. ಬೆಂಗಳೂರಿನ … Continued

ಕಾಂಗ್ರೆಸ್ ಶಾಸಕ ಸುಬ್ಬಾರೆಡ್ಡಿಗೆ ಇಡಿ ಶಾಕ್‌; ಹಲವು ಕಡೆ ದಾಳಿ

ಬೆಂಗಳೂರು: ಬಾಗೇಪಲ್ಲಿ ಕಾಂಗ್ರೆಸ್‌ ಶಾಸಕ ಸುಬ್ಬಾ ರೆಡ್ಡಿ ಮನೆ ಹಾಗೂ ಕಚೇರಿಯ ಮೇಲೆ ಗುರುವಾರ ಜಾರಿ ನಿರ್ದೇಶನಾಲಯ( ಇ.ಡಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಶಾಸಕ ಸುಬ್ಬಾ ರೆಡ್ಡಿಗೆ ಸೇರಿದ 5 ಸ್ಥಳಗಳ ಮೇಲೆ ಇ.ಡಿ ಅಧಿಕಾರಿಗಳು ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸಲಾಗುತ್ತಿದೆ. ದೇಶದ ವಿವಿಧ ಕಡೆಗಳಲ್ಲಿ ಇದೇ ರೀತಿಯಲ್ಲಿ ಇತರರ ಮೇಲೆ ದಾಳಿ … Continued

ರಾಜಕಾರಣಿಗಳ ಹೆಸರು ಬಳಸಿ 30 ಕೋಟಿ ರೂ. ವಂಚನೆ ಆರೋಪ ; ಮಹಿಳೆ ಬಂಧನ

ಬೆಂಗಳೂರು: ಮುಖ್ಯಮಂತ್ರಿ, ಉಪಮುಖ್ಯಮಂತ್ರಿ  ಸೇರಿದಂತೆ ರಾಜಕೀಯ ನಾಯಕರ ಹೆಸರು ಹೇಳಿಕೊಂಡು ಕಿಟ್ಟಿ ಪಾರ್ಟಿಯಲ್ಲಿ ಪರಿಚಯವಾದ ಸ್ನೇಹಿತೆಯರಿಗೆ ಕೋಟ್ಯಂತರ ರೂಪಾಯಿ ವಂಚನೆ ಮಾಡಿದ ಆರೋಪದ ಮೇರೆಗೆ ಪೊಲೀಸರು ಮಹಿಳೆಯೊಬ್ಬರನ್ನು ಬಂಧಿಸಿದ್ದಾರೆ. ಕಿಟ್ಟಿ ಪಾರ್ಟಿ ಹೆಸರಲ್ಲಿ ಶ್ರೀಮಂತ ಮಹಿಳೆಯರನ್ನು ಪರಿಚಯ ಮಾಡಿಕೊಂಡಿದ್ದ ಸವಿತಾ ತನಗೆ ಹಲವು ರಾಜಕೀಯ ನಾಯಕರು ಗೊತ್ತು ಎಂದು ಹೇಳಿ ಪರಿಚಿತರೆಂದು ಹೇಳಿಕೊಂಡು ವಂಚಿಸುತ್ತಿದ್ದ ಆರೋಪದ … Continued

ವೀಡಿಯೊ…| ಬೆಂಗಳೂರು : ತಡೆಗೋಡೆಗೆ ಟೆಂಪೋ ಡಿಕ್ಕಿ ; ವಾಹನವೇ ಅರ್ಧಕ್ಕೆ ತುಂಡು. ; ಸೇತುವೆಯಿಂದ ಕೆಳಕ್ಕೆ ಬಿದ್ದ ಕ್ಯಾಬಿನ್…!

ಬೆಂಗಳೂರು: ಬೆಂಗಳೂರಿನ ನೈಸ್ ರಸ್ತೆಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಗೂಡ್ಸ್‌ ಟೆಂಪೊವೊಂದು ತಡೆಗೋಡೆಗೆ ಡಿಕ್ಕಿಯಾದ ನಂತರ ಪೀಸ್‌ ಪೀಸ್‌ ಆದ ಘಟನೆ ನಡೆದಿದೆ. ಬೆಂಗಳೂರಿನ ಜ್ಞಾನಭಾರತಿ ಸಂಚಾರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿನ ನೈಸ್ ರಸ್ತೆಯಲ್ಲಿ ಈ ಘಟನೆ ನಡೆದಿದ್ದು ಅಪಘಾತದ ಭೀಕರ ವೀಡಿಯೊ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಜ್ಞಾನಭಾರತಿ ಬಳಿಯ ನೈಸ್‌ ರಸ್ತೆಯ ರಾಮಸಂದ್ರ ಸೇತುವೆ ಬಳಿ … Continued

ಹುಡುಗಿಗೆ ಅಶ್ಲೀಲ ಸಂದೇಶ ಕಳುಹಿಸಿದ ಆರೋಪ; ಯುವಕನ ವಿವಸ್ತ್ರಗೊಳಿಸಿ ಹಿಗ್ಗಾಮುಗ್ಗಾ ಥಳಿತ

 ಬೆಂಗಳೂರು : ಬೆಂಗಳೂರಿನ ಹೊರವಲಯದಲ್ಲಿ ಯುವಕನನ್ನು ಅಪಹರಿಸಿ, ವಿವಸ್ತ್ರಗೊಳಿಸಿ, ಕ್ರೂರವಾಗಿ ಹಲ್ಲೆ ಮಾಡಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಹಲ್ಲೆಯ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡ ನಂತರ ಆಕ್ರೋಶಕ್ಕೆ ಕಾರಣವಾದ ಈ ಘಟನೆಗೆ ಸಂಬಂಧಿಸಿದಂತೆ ಎಂಟು ಜನರನ್ನು ಬಂಧಿಸಲಾಗಿದೆ. ಜೂನ್ 30 ರಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿಯಲ್ಲಿ ಈ ಘಟನೆ ನಡೆದಿದೆ … Continued

ಕ್ಯಾಂಪಸ್‌ ಶೌಚಾಲಯದಲ್ಲಿ ಮಹಿಳಾ ಉದ್ಯೋಗಿಗಳ ವೀಡಿಯೊ ಚಿತ್ರೀಕರಣ ; ಇನ್ಫೋಸಿಸ್‌ ಉದ್ಯೋಗಿಯ ಬಂಧನ

ಬೆಂಗಳೂರು :  ಕ್ಯಾಂಪಸ್‌ನ ಶೌಚಾಲಯದಲ್ಲಿ ಮಹಿಳಾ ಸಹೋದ್ಯೋಗಿಗಳ ಅಶ್ಲೀಲ ವೀಡಿಯೊಗಳನ್ನು ರಹಸ್ಯವಾಗಿ ರೆಕಾರ್ಡ್ ಮಾಡಿದ ಆರೋಪದ ಮೇಲೆ ಟೆಕ್ ಕಂಪನಿ ಇನ್ಫೋಸಿಸ್‌ನ ಉದ್ಯೋಗಿಯನ್ನು ಬಂಧಿಸಲಾಗಿದೆ. ಆರೋಪಿಯನ್ನು ಸ್ವಪ್ನಿಲ್ ನಾಗೇಶ ಮಾಲಿ (28) ಎಂದು ಗುರುತಿಸಲಾಗಿದೆ, ಈತ ಆಂಧ್ರಪ್ರದೇಶದವರಾಗಿದ್ದು, ಇನ್ಫೋಸಿಸ್‌ನ ಹೆಲಿಕ್ಸ್ ಘಟಕದಲ್ಲಿ ಹಿರಿಯ ಅಸೋಸಿಯೇಟ್ ಸಲಹೆಗಾರನಾಗಿದ್ದಾನೆ ಎನ್ನಲಾಗಿದೆ. ಪೊಲೀಸ್ ವರದಿಯ ಪ್ರಕಾರ, ಜೂನ್ 30 ರಂದು … Continued

30 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬೆಂಗಳೂರು ಸ್ಫೋಟದ ಪ್ರಮುಖ ಆರೋಪಿ ಅರೆಸ್ಟ್‌

ಚೆನ್ನೈ : ಬೆಂಗಳೂರು ನಗರ ಸೇರಿ ದಕ್ಷಿಣ ಭಾರತದ ಹಲವು ಬಾಂಬ್ ಸ್ಫೋಟ ಪ್ರಕರಣಗಳ ಪ್ರಮುಖ ಆರೋಪಿಯನ್ನು 30 ವರ್ಷಗಳ ಬಳಿಕ ತಮಿಳುನಾಡು ಪೊಲೀಸರು ಬಂಧಿಸಿದ್ದಾರೆ. ತಮಿಳುನಾಡಿನ ನಾಗೂರು ನಿವಾಸಿ ಅಬೂಬಕರ್ ಸಿದ್ದಿಕ್ (60) ಬಂಧಿತ ಉಗ್ರ ಎಂದು ಹೇಳಲಾಗಿದೆ. ಈತ 1995ರಿಂದ ತಲೆ ಮರೆಸಿಕೊಂಡಿದ್ದ. ಈತನನ್ನು ತಮಿಳುನಾಡು ಪೊಲೀಸರು ಆಂಧ್ರಪ್ರದೇಶದ ಅನ್ನಮಯ ಜಿಲ್ಲೆಯಲ್ಲಿ ಬಂಧಿಸಿದ್ದಾರೆ. … Continued