‘ಸುಂಟರಗಾಳಿ’ ಖ್ಯಾತಿಯ ಹಿರಿಯ ನಟಿ ಲಲಿತಮ್ಮ ನಿಧನ

ಬೆಂಗಳೂರು : ಕನ್ನಡ ಚಿತ್ರರಂಗ, ಕಿರುತೆರೆ ಹಾಗೂ ರಂಗಭೂಮಿಯಲ್ಲಿ ಹಲವು ದಶಕಗಳ ಕಾಲದಿಂದ ಪಾತ್ರಗಳನ್ನು ನಿರ್ವಹಿಸುತ್ತಿದ್ದ ಹಿರಿಯ ಪೋಷಕ ನಟಿ ಲಲಿತಮ್ಮ (65) ಭಾನುವಾರ (ಅಕ್ಟೋಬರ್ 4) ನಿಧನರಾಗಿದ್ದಾರೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಬೆಂಗಳೂರಿನ ‘ಅಮ್ಮನ ಮಡಿಲು ಟ್ರಸ್ಟ್’ ವೃದ್ಧಾಶ್ರಮದಲ್ಲಿ ಕೊನೆಯುಸಿರೆಳೆದಿದ್ದಾರೆ. ಕೆಲ ತಿಂಗಳ ಹಿಂದೆ ಲಲಿತಮ್ಮ ಅವರಿಗೆ ಪಾರ್ಶ್ವವಾಯು ಆಗಿತ್ತು. ವೃದ್ಧಾಪ್ಯ ಹಾಗೂ … Continued

ಮಡಗಾಂವ್-ಮಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಬೆಂಗಳೂರು ವರೆಗೆ ವಿಸ್ತರಣೆ

ಕಾರವಾರ: ಮಡಗಾಂವ್‌ (ಗೋವಾ)-ಮಂಗಳೂರು ನಡುವೆ ಸಂಚರಿಸುತ್ತಿದ್ದ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನು ಇದೀಗ ಬೆಂಗಳೂರಿನ ವರೆಗೆ ವಿಸ್ತರಿಸಲಾಗಿದೆ. ಈ ಕುರಿತು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಪತ್ರದ ಮೂಲಕ ತಮಗೆ ಮಾಹಿತಿ ನೀಡಿದ್ದನ್ನು ಉತ್ತರ ಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. “ಬೆಂಗಳೂರು ಮತ್ತು ಮಡಗಾಂವ್ ನಡುವೆ … Continued

ಅಕ್ಟೋಬರ್‌ 3ರಿಂದ ಕೇಂದ್ರ ತಂಡದಿಂದ ಕರ್ನಾಟಕದ ಬರಪೀಡಿತ ಪ್ರದೇಶಗಳ ಪರಿಶೀಲನೆ : ಕುಮಾರಸ್ವಾಮಿ

ಬೆಂಗಳೂರು: ಕರ್ನಾಟಕದಲ್ಲಿ ತೀವ್ರಗೊಂಡಿರುವ ಬರ ಪರಿಸ್ಥಿತಿಯ ಪರಿಶೀಲನೆಗಾಗಿ ಕೇಂದ್ರದ ಅಂತರ ಸಚಿವಾಲಯ ತಂಡ (IMCT) ಅಕ್ಟೋಬರ್ 3ರಿಂದ 7ರ ವರೆಗೆ ರಾಜ್ಯಕ್ಕೆ ಭೇಟಿ ನೀಡಲಿದೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ. ಕರ್ನಾಟಕಕ್ಕೆ ಕೇಂದ್ರದಿಂದ ತುರ್ತು ನೆರವು ನೀಡುವಂತೆ ಕೋರಿಕುಮಾರಸ್ವಾಮಿ ಅವರು ಸೆಪ್ಟೆಂಬರ್ 24ರಂದು ಕೇಂದ್ರ ಕೃಷಿ ಸಚಿವ ಶಿವರಾಜ ಸಿಂಗ್ ಚೌಹಾಣ ಅವರಿಗೆ … Continued

ವಿಡಿಯೋ..| ಬೆಂಗಳೂರು : ಬಾಡಿಗೆ ವಿಚಾರಕ್ಕೆ ನಡು ರಸ್ತೆಯಲ್ಲೇ ಇಬ್ಬರು ಯುವತಿಯರು-ಆಟೋ ಚಾಲಕನ ನಡುವೆ ಹೊಡೆದಾಟ

ಬೆಂಗಳೂರು: ಬೆಂಗಳೂರು ಮಹಾನಗರದ ನಗರದ ಎಚ್‌ಎಸ್‌ಆರ್ ಲೇಔಟ್ 3ನೇ ಸೆಕ್ಟರ್‌ನಲ್ಲಿ ಇಬ್ಬರು ಯುವತಿಯರು ಮತ್ತು ಆಟೋ ಚಾಲಕನ ನಡುವೆ ನಡೆದ ಬೀದಿ ಜಗಳದ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಸೋಮವಾರ ಮಧ್ಯಾಹ್ನ ಈ ಘಟನೆ ನಡೆದಿದೆ ಎನ್ನಲಾಗಿದ್ದು, ವೈರಲ್ ಆಗಿರುವ ವಿಡಿಯೊದಲ್ಲಿ ಇಬ್ಬರು ಯುವತಿಯರು ಮತ್ತು ಆಟೋ ಚಾಲಕ ಪರಸ್ಪರ ಹೊಡೆದಾಡುತ್ತಿರುವ ದೃಶ್ಯಗಳು ಕಂಡುಬಂದಿವೆ. … Continued

ಬೆಂಗಳೂರು : ಫೇಸ್‌ಬುಕ್‌ ಜಾಹೀರಾತು ನಂಬಿ ಬರೋಬ್ಬರಿ 1.9 ಕೋಟಿ ರೂ. ಕಳೆದುಕೊಂಡ ಟೆಕ್ಕಿ !

ಬೆಂಗಳೂರು: ಆನ್‌ಲೈನ್‌ ಟ್ರೇಡಿಂಗ್‌ ಮೂಲಕ ಹೆಚ್ಚಿನ ಲಾಭ ಗಳಿಸಬಹುದು ಎಂದು ಭರವಸೆ ನೀಡಿದ ಫೇಸ್‌ಬುಕ್‌ ಜಾಹೀರಾತಿಗೆ ಮರುಳಾಗಿ ಬೆಂಗಳೂರಿನ 47 ವರ್ಷದ ಟೆಕ್ಕಿಯೊಬ್ಬರು ಬರೋಬ್ಬರಿ ₹1.9 ಕೋಟಿ ಕಳೆದುಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಈ ಪ್ರಕರಣದಲ್ಲಿ ನಕಲಿ ಹೂಡಿಕೆ ಪ್ಲಾಟ್‌ಫಾರ್ಮ್‌ ಮೂಲಕ ವಂಚನೆ ನಡೆದಿರುವ ಶಂಕೆ ವ್ಯಕ್ತವಾಗಿದ್ದು, ಪೂರ್ವ ವಿಭಾಗದ ಸೈಬರ್‌ ಅಪರಾಧ ಠಾಣೆ ಪೊಲೀಸರು … Continued

ಬೆಂಗಳೂರಿನಲ್ಲಿ ಕಾಡಾನೆ ಪ್ರತ್ಯಕ್ಷ : ಬೆಳಿಗ್ಗೆ ವಾಕಿಂಗ್ ಮಾಡುತ್ತಿದ್ದ ವ್ಯಕ್ತಿಯನ್ನು ಸಾಯಿಸಿದ ಸಲಗ

ಬೆಂಗಳೂರು: ಮಹಾನಗರದ ಮೈಸೂರು ರಸ್ತೆಯ ರಾಜರಾಜೇಶ್ವರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ (RRMCH) ಹಿಂಭಾಗದ ಪ್ರದೇಶದಲ್ಲಿ ಸೋಮವಾರ ಮುಂಜಾನೆ ನಡೆದ ಶಂಕಿತ ಕಾಡಾನೆ ದಾಳಿಯಲ್ಲಿ ಬೆಳಗಿನ ವಾಯುವಿಹಾರಕ್ಕೆ ತೆರಳಿದ್ದ 60 ವರ್ಷದ ನಾಗರಾಜು ಮೃತಪಟ್ಟಿರುವ ದುರ್ಘಟನೆ ನಡೆದಿದೆ ಎಂದು ವರದಿಯಾಗಿದೆ. ಅಂಚೆಪಾಳ್ಯದ ನಿವಾಸಿಯಾಗಿದ್ದ ನಾಗರಾಜು ಇತ್ತೀಚೆಗೆ ಕಾರ್ಖಾನೆಯ ಉದ್ಯೋಗದಿಂದ ನಿವೃತ್ತರಾಗಿದ್ದರು. ಪ್ರತಿದಿನದಂತೆ ಸೋಮವಾರ ಬೆಳಿಗ್ಗೆ ವಾಯುವಿಹಾರಕ್ಕೆ … Continued

ನಕಲಿ ಔಷಧ ಪ್ರಕರಣ: ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಪ್ರಮುಖ ಆರೋಪಿಯ ಬಂಧನ

ಬೆಂಗಳೂರು: ನಕಲಿ ಔಷಧ ತಯಾರಿಕೆ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಸೋಮವಾರ ಅಜರ್‌ಬೈಜಾನ್‌ನಿಂದ ಭಾರತಕ್ಕೆ ಮರಳಿದ ಪ್ರಕರಣದ ಪ್ರಮುಖ ಆರೋಪಿಯನ್ನು ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಿದೆ. ಪೊಲೀಸರ ಮಾಹಿತಿ ಪ್ರಕಾರ, ನಕಲಿ ಔಷಧ ಜಾಲ ಬಹಿರಂಗವಾದ ಬಳಿಕ ಪ್ರಕರಣದ ಪ್ರಮುಖ ಆರೋಪಿ ಪ್ರಶಾಂತ ರಂಜನ್ ಬಾಬು ಎಂಬಾತ ಅಜರ್‌ಬೈಜಾನ್‌ಗೆ … Continued

ಬೆಂಗಳೂರು | ಸ್ಕೂಟರ್‌ ಸವಾರನ ಗಿಟಾರ್‌ ಬ್ಯಾಗನ್ನೇ ಹಿಂಬದಿ ಸವಾರ ಎಂದು ಭಾವಿಸಿದ ಟ್ರಾಫಿಕ್‌ ಕ್ಯಾಮೆರಾ : 500 ರೂಪಾಯಿ ದಂಡ !

ಬೆಂಗಳೂರು: ಕೃತಕ ಬುದ್ಧಿಮತ್ತೆ (AI) ಆಧಾರಿತ ಸಂಚಾರ ಕ್ಯಾಮೆರಾ ಗಿಟಾರ್‌ ಅನ್ನು ಹೆಲ್ಮೆಟ್‌ ಧರಿಸದ ಹಿಂಬದಿ ಸವಾರ ಎಂದು ತಪ್ಪಾಗಿ ಗ್ರಹಿಸಿ ವ್ಯಕ್ತಿಯೊಬ್ಬರಿಗೆ ₹500 ದಂಡ ವಿಧಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ವ್ಯಕ್ತಿಯೊಬ್ಬರು ಆರೋಪಿಸಿದ್ದಾರೆ. ಸೌವಿಕ್‌ ದತ್ತಾ ಎಂಬುವರು ತಮ್ಮ ಪತ್ನಿಯ ಎಲೆಕ್ಟ್ರಿಕ್‌ ಸ್ಕೂಟರ್‌ನಲ್ಲಿ ಒಬ್ಬರೇ ಪ್ರಯಾಣಿಸುತ್ತಿದ್ದರು. ಈ ವೇಳೆ ಅವರು … Continued

ಬೆಂಗಳೂರು | ಖಾಲಿ ಜಾಗದಲ್ಲಿ ಹಾಸಿಗೆಯಲ್ಲಿ ಸುತ್ತಿ ಎಸೆದ ಕೊಳೆತ ಶವದ ಕೊಲೆ ರಹಸ್ಯ ಬಯಲು ಮಾಡಿದ ಬಟ್ಟೆಯ ಟ್ಯಾಗ್‌ !

ಬೆಂಗಳೂರು: ಖಾಲಿ ನಿವೇಶನ ಸ್ವಚ್ಛಗೊಳಿಸುವ ವೇಳೆ ಪತ್ತೆಯಾಗಿದ್ದ ಕೊಳೆತ ಸ್ಥಿತಿಯಲ್ಲಿದ್ದ 28 ವರ್ಷದ ಮಹಿಳೆಯ ಶವದ ಗುರುತು ಪತ್ತೆ ಹಚ್ಚಲು ಬಟ್ಟೆಯ ಮೇಲಿದ್ದ ಒಂದು ಸಣ್ಣ ಟ್ಯಾಗ್‌ ಪ್ರಮುಖ ಸುಳಿವಾಗಿ ಪರಿಣಮಿಸಿದ್ದು, ಅದರ ಆಧಾರದಲ್ಲಿ ಪೊಲೀಸರು ಕೊಲೆ ಪ್ರಕರಣವನ್ನು ಭೇದಿಸಿದ್ದಾರೆ. ಈ ತಿಂಗಳ ಸೆಪ್ಟೆಂಬರ್‌ 2ರಂದು ಅಗ್ರಹಾರ ಲೇಔಟ್‌ನ ಖಾಲಿ ಜಾಗವೊಂದರಲ್ಲಿ ಬೆಳೆದಿದ್ದ ಗಿಡಗಂಟಿಗಳನ್ನು ತೆರವುಗೊಳಿಸುತ್ತಿದ್ದ … Continued

ಆಕ್ಸ್‌ಫರ್ಡ್ ಗ್ಲೋಬಲ್ ಸಿಟೀಸ್ ಇಂಡೆಕ್ಸ್ 2026 ; ಕರ್ನಾಟಕದ 6 ನಗರಗಳಿಗೆ ಜಾಗತಿಕ ಸ್ಥಾನ

ಬೆಂಗಳೂರು : ಪ್ರತಿಷ್ಠಿತ ‘ಆಕ್ಸ್‌ಫರ್ಡ್ ಗ್ಲೋಬಲ್ ಸಿಟೀಸ್ ಇಂಡೆಕ್ಸ್ 2026’ (Oxford Global Cities Index 2026) ನಲ್ಲಿ ಕರ್ನಾಟಕದ ಒಟ್ಟು ಆರು ನಗರಗಳು ಸ್ಥಾನ ಪಡೆದಿವೆ. ರಾಜ್ಯದಿಂದ ಬೆಂಗಳೂರು, ಹುಬ್ಬಳ್ಳಿ-ಧಾರವಾಡ ಅವಳಿ ನಗರ, ಮೈಸೂರು, ಮಂಗಳೂರು, ಕಲಬುರಗಿ, ಬೆಳಗಾವಿ ಈ ಪಟ್ಟಿಯಲ್ಲಿ ಸ್ಥಾನ ಪಡೆದಿವೆ. ಆಕ್ಸ್‌ಫರ್ಡ್ ಎಕನಾಮಿಕ್ಸ್ ಜಗತ್ತಿನ ಮುಂಚೂಣಿಯಲ್ಲಿರುವ ಸ್ವತಂತ್ರ ಆರ್ಥಿಕ ಸಲಹಾ … Continued