ಬೆಂಗಳೂರು | ಅಂಗಡಿ ಮುಚ್ಚುವ ವೇಳೆ ಸಿನಿಮೀಯ ರೀತಿಯಲ್ಲಿ ಚಿನ್ನಾಭರಣದ ಅಂಗಡಿಗೆ ನುಗ್ಗಿ ದರೋಡೆ ; ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಬೆಂಗಳೂರು: ಸಿನೆಮಾದ ದೃಶ್ಯದಂತೆ ಕಾಣುವ ಈ ದೃಶ್ಯದಲ್ಲಿ, ಬೆಂಗಳೂರಿನಲ್ಲಿ ಆಭರಣ ಅಂಗಡಿ ಮುಚ್ಚುವುದಕ್ಕಿಂತ ಸ್ವಲ್ಪ ಮೊದಲಿಗೆ ಅಂಗಡಿಗೆ ನುಗ್ಗಿದ ಮುಸುಕುಧಾರಿ ದರೋಡೆಕೋರರು ಅಪಾರ ಪ್ರಮಾಣದ ಚಿನ್ನವನ್ನು ದೋಚಿ ಪರಾರಿಯಾಗಿದ್ದಾರೆ. ಕೆಲವೇ ನಿಮಿಷಗಳಲ್ಲಿ ಚಿನ್ನಾಭರಣ ನಡೆಸಿ ಪರಾರಿಯಾಗಿರುವ ದರೋಡೆಕೋರರ ಕೃತ್ಯ ಅಂಗಡಿಯೊಳಗೆ ಅಳವಡಿಸಲಾಗಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಬೆಂಗಳೂರಿನ ಮಾಗಡಿ ರಸ್ತೆಯ ಮಾಚೋಹಳ್ಳಿ ಗೇಟ್​ ಬಳಿ ಇರುವ ಭೈರವೇಶ್ವರ … Continued

ರಾಜ್ಯದಲ್ಲಿ ಹೊಸದಾಗಿ ನಿರ್ಮಿಸುವ ಬಹುಮಹಡಿ ಕಟ್ಟಡಗಳಿಗೆ 1%ರಷ್ಟು ಫೈರ್ ಸೆಸ್ : ಸಚಿವ ಸಂಪುಟ ತೀರ್ಮಾನ

ಬೆಂಗಳೂರು: ರಾಜ್ಯಾದ್ಯಂತ ಹೊಸದಾಗಿ ನಿರ್ಮಾಣವಾಗುತ್ತಿರುವ ಬಹುಮಹಡಿ ಕಟ್ಟಡಗಳಿಗೆ ಶೇ1ರಷ್ಟು ಫೈರ್ ಸೆಸ್ ವಿಧಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.‌ ಈ ಸಂಬಂಧ ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ದಿ ಕರ್ನಾಟಕ ಫೈರ್‌ ಫೋರ್ಸ್‌ ಆಕ್ಟ್‌ (The Karnataka Fire Force Act) 1964ಕ್ಕೆ ತಿದ್ದುಪಡಿ ತರಲು ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ … Continued

ಬೆಂಗಳೂರು | ರೌಡಿಶೀಟರ್ ಬಿಕ್ಲು ಶಿವ ಹತ್ಯೆ ಪ್ರಕರಣದ ತನಿಖೆ ಸಿಐಡಿ ಹೆಗಲಿಗೆ

ಬೆಂಗಳೂರು: ನಗರದ ಹಲಸೂರು ಕೆರೆ ಬಳಿ ಹತ್ಯೆಯಾದ ರೌಡಿಶೀಟರ್ ಬಿಕ್ಲು ಶಿವ ಹತ್ಯೆ ಪ್ರಕರಣದ ತನಿಖೆಯನ್ನು ಸಿಐಡಿ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಶಿವಪ್ರಕಾಶ್ ತಾಯಿ ವಿಜಯಲಕ್ಷ್ಮೀ ನೀಡಿದ ದೂರಿನ ಮೇರೆಗೆ ಶಾಸಕ ಬೈರತಿ ಬಸವರಾಜ್ ಸೇರಿದಂತೆ ಹಲವರ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡಿದ್ದ ಭಾರತೀನಗರ ಪೊಲೀಸರು ಈವರೆಗೆ 14 ಮಂದಿ ಆರೋಪಿಗಳನ್ನು ಬಂಧಿಸಿದ್ದು, … Continued

ಕಾಲೇಜಿನಲ್ಲಿ ರ‍್ಯಾಗಿಂಗಿಗೆ ಹೆದರಿ ವೀಡಿಯೊ ಮಾಡಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ

ಬೆಂಗಳೂರು : ರ‍್ಯಾಗಿಂಗ್‌ಗೆ ಹೆದರಿ ಆರ್ಕಿಟೆಕ್ಚರ್ ವಿದ್ಯಾರ್ಥಿಯೊಬ್ಬ ವೀಡಿಯೊ ಮಾಡಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ (Self Harming) ನೆಲಮಂಗಲ ನಂದರಾಮಯ್ಯನ ಪಾಳ್ಯದಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಮೃತನನ್ನು ಹಾಸನ ಮೂಲದ ಚನ್ನಕೇಶವ ಹಾಗೂ ತುಳಸಿ ದಂಪತಿಯ ಹಿರಿಯ ಮಗ ಅರುಣ (22) ಎಂದು ಗುರುತಿಸಲಾಗಿದೆ. ಜುಲೈ 11ರಂದು ತಂದೆ, ತಾಯಿ ಕೆಲಸಕ್ಕೆ ತೆರಳಿದ್ದ ವೇಳೆ ಅರುಣ … Continued

ವಿವಾಹಿತ ಮಹಿಳೆಗೆ ಮದುವೆಯಾಗುವಂತೆ ಕಿರುಕುಳ; ಬುದ್ಧಿವಾದ ಹೇಳಿದ್ದಕ್ಕೆ ಆಕೆಯ ಸಂಬಂಧಿಯ ಕತ್ತು ಕೊಯ್ದ…!

ಬೆಂಗಳೂರು : ಇನ್‌ಸ್ಟಾಗ್ರಾಮ್‌ನಲ್ಲಿ ಪರಿಚಯವಾಗಿದ್ದ ವಿವಾಹಿತ ಮಹಿಳೆಗೆ ಮದುವೆಯಾಗುವಂತೆ ಕಿರುಕುಳ ನೀಡುತ್ತಿದ್ದ ಯುವಕನಿಗೆ ಬುದ್ಧಿ ಹೇಳಿದ ಮಹಿಳೆಯ ಸಂಬಂಧಿಯ ಕತ್ತು ಕೊಯ್ದು ಕೊಲೆಗೆ ಯತ್ನಿಸಿದ ಘಟನೆ ಬೆಂಗಳೂರಿನ ಎಚ್‌ಎಎಲ್ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಈ ಘಟನೆ ಜುಲೈ ೧೭ರಂದು ನಡೆದಿದ್ದು, ಗಾಯಗೊಂಡಿರುವ ಖಾಸಗಿ ಕಂಪನಿಯ ಉದ್ಯೋಗ ಪ್ರಶಾಂತ ಎಂಬವರು ಈಗ ಆಸ್ಪತ್ರೆಯಲ್ಲಿ … Continued

ಕನ್ನಡ-ಕರ್ನಾಟಕದ ಬಗ್ಗೆ ಅವಹೇಳನ ; ಪಶ್ಚಿಮ ಬಂಗಾಳದ ವ್ಯಕ್ತಿ ಬಂಧನ

ಬೆಂಗಳೂರು: ಕರ್ನಾಟಕ (Karnataka) ಮತ್ತು ಕನ್ನಡ ಭಾಷಿಕರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಜುಲೈ 17 ರಂದು ಬೆಳಗ್ಗೆ 9:30 ರ ಸುಮಾರಿಗೆ ಈ ಘಟನೆ ನಡೆದಿದ್ದು, ಆನ್‌ಲೈನ್ ಪ್ಲಾಟ್‌ಫಾರ್ಮ್ ಮೂಲಕ ಆರ್ಡರ್ ಮಾಡಿದ್ದ ಟಿ-ಶರ್ಟ್ ತಲುಪಿಸಲು ವಿಳಾಸ ದೃಢೀಕರಣಕ್ಕಾಗಿ ಡೆಲಿವರಿ ಎಕ್ಸಿಕ್ಯೂಟಿವ್ ರಂಜಿತ್ … Continued

ಆಗಸ್ಟ್ 11 ರಿಂದ ರಾಜ್ಯ ವಿಧಾನ ಮಂಡಲದ ಮುಂಗಾರು ಅಧಿವೇಶನ

ಬೆಂಗಳೂರು: ರಾಜ್ಯದ ವಿಧಾನ ಮಂಡಲದ ಮುಂಗಾರು ಅಧಿವೇಶನ ಆಗಸ್ಟ್ 11 ರಿಂದ 22ರವರೆಗೆ 9 ದಿನಗಳ ಕಾಲ ನಡೆಯಲಿದೆ. ಈ ಸಂಬಂಧ ಅಧಿಸೂಚನೆ ಹೊರಡಿಸಲಾಗಿದೆ. ಆಗಸ್ಟ್ 11 ರಂದು ಬೆಳಗ್ಗೆ 11 ಗಂಟೆಗೆ ರಾಜ್ಯಪಾಲ ಥಾವರಚಂದ ಗೆಹ್ಲೋಟ್ ಅವರು ವಿಧಾನಸಭೆ ಹಾಗೂ ವಿಧಾನಪರಿಷತ್ತಿನ ಜಂಟಿ ಅಧಿವೇಶವನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ. ಕರ್ನಾಟಕ ರೋಹಿತ್ ವೇಮುಲಾ ಮಸೂದೆ, ಕರ್ನಾಟಕ … Continued

ಸಿಎಂ ಸಿದ್ದರಾಮಯ್ಯ ಫೇಸ್‌ಬುಕ್‌ ಪೋಸ್ಟ್‌ ತಪ್ಪು ಅನುವಾದ ; ಕ್ಷಮೆಯಾಚಿಸಿದ ಮೆಟಾ

ಬೆಂಗಳೂರು: ನಟಿ ಬಿ. ಸರೋಜಾದೇವಿ ಅವರಿಗೆ ಕನ್ನಡದಲ್ಲಿ ಶ್ರದ್ಧಾಂಜಲಿ ಸಲ್ಲಿಸಿದ್ದ ಫೇಸ್‌ಬುಕ್ ಪೋಸ್ಟ್‌ನ ಆಟೋ ಟ್ರಾನ್ಸ್‌ಲೇಷನ್‌ ಅವಾಂತರದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ‌ ಅಸಮಾಧಾನ ವ್ಯಕ್ತಪಡಿಸಿದ್ದರು. ಇದರ ಬೆನ್ನಲ್ಲೇ ಮೆಟಾದವರು ತಮ್ಮ ತಪ್ಪಿಗೆ ಕ್ಷಮೆ ಕೇಳಿ, ದೋಷವನ್ನು ಸರಿಪಡಿಸುವುದಾಗಿ ಇ-ಮೇಲ್‌ ಮೂಲಕ ಸಿದ್ದರಾಮಯ್ಯ ಅವರಿಗೆ ತಿಳಿಸಿದ್ದಾರೆ. ಈ ಬಗ್ಗೆ ಸಿದ್ದರಾಮಯ್ಯ ಅವರು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. … Continued

ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭೂಕುಸಿತ: ಸಂಚಾರ ಬಂದ್

ಮಂಗಳೂರು: ಭಾರೀ ಮಳೆಯ ಪರಿಣಾಮ ದಕ್ಷಿಣ ಕನ್ನಡದ ಕಡಬ ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ-75 ರಲ್ಲಿ ಭಾರಿ ಭೂಕುಸಿತ ಸಂಭವಿಸಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ಮತ್ತು ಮಂಗಳೂರು ನಡುವಿನ ಲಾರಿ, ಬಸ್, ಟ್ರಕ್​ಗಳ ಸಂಚಾರ ಸಂಪೂರ್ಣ ಬಂದ್ ಆಗಿದೆ. ಭೂ ಕುಸಿತದಿಂದ ಬೆಂಗಳೂರಿನಿಂದ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯಕ್ಕೆ ಸಂಚಾರಕ್ಕೆ ಯಾವುದೇ ಅಡಚಣೆಗಳು ಎದುರಾಗಿಲ್ಲ. ಆದರೆ, ಮಂಗಳೂರಿನಿಂದ ಬೆಂಗಳೂರಿಗೆ … Continued

ಮುಜರಾಯಿ ಇಲಾಖೆ ವಶಕ್ಕೆ ಗಾಳಿ ಆಂಜನೇಯಸ್ವಾಮಿ ದೇವಾಲಯ ; ಸರ್ಕಾರದ ಆದೇಶಕ್ಕೆ ತಡೆ ನೀಡಲು ಹೈಕೋರ್ಟ್‌ ನಕಾರ

ಬೆಂಗಳೂರು : ಬೆಂಗಳೂರು ಮಹಾನಗರದ ನಗರದ ಪ್ರಸಿದ್ಧ ಗಾಳಿ ಆಂಜನೇಯಸ್ವಾಮಿ ದೇವಾಲಯವನ್ನು ಸುಪರ್ದಿಗೆ ಪಡೆದು ರಾಜ್ಯ ಮುಜರಾಯಿ ಇಲಾಖೆ ಹೊರಡಿಸಿರುವ ಆದೇಶಕ್ಕೆ ತಡೆಯಾಜ್ಞೆ ನೀಡಬೇಕು ಎಂದು ಕೋರಿದ್ದ ಮನವಿಯನ್ನು ಬುಧವಾರ ಕರ್ನಾಟಕ ಹೈಕೋರ್ಟ್‌ ತಿರಸ್ಕರಿಸಿದೆ. ಸರ್ಕಾರದ ಆದೇಶ ರದ್ದು ಕೋರಿ ಗಾಳಿ ಆಂಜನೇಯ ಸ್ವಾಮಿ ದೇವಾಲಯದ ಆಡಳಿ ಮಂಡಳಿ ಸಲ್ಲಿಸಿದ್ದ ಅರ್ಜಿಯ ಮಧ್ಯಂತರ ಕೋರಿಕೆಯನ್ನು ನ್ಯಾಯಮೂರ್ತಿ … Continued