ಸಂಗೀತ ನಿರ್ದೇಶಕ ಹಂಸಲೇಖ ಆಸ್ಪತ್ರೆಗೆ ದಾಖಲು

ಬೆಂಗಳೂರು: ಕನ್ನಡದ ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಅವರಿಗೆ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಬೆಂಗಳೂರಿನ ರಾಜಾಜಿ ನಗರ ಫಸ್ಟ್ ಬ್ಲಾಕ್ ನಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ. ಹಂಸಲೇಖ ಅವರಿಗೆ ವೈದ್ಯರು ಚಿಕಿತ್ಸೆ ನೀಡುತ್ತಿದ್ದು, ಆತಂಕ ಪಡುವ ಅವಶ್ಯಕತೆ ಇಲ್ಲ ಎಂದು ತಿಳಿಸಿದ್ದಾರೆ ಎನ್ನಲಾಗಿದೆ. ಮಾಹಿತಿಯ ಪ್ರಕಾರ ಹಂಸಲೇಖ ಅವರು ಗ್ಯಾಸ್ಟ್ರಿಕ್ … Continued

ಕನ್ನಡದ ಹಿರಿಯನಟ ಲೋಹಿತಾಶ್ವ ಆರೋಗ್ಯ ಸ್ಥಿತಿ ಗಂಭೀರ: ಆಸ್ಪತ್ರೆಗೆ ದಾಖಲು

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಲೋಹಿತಾಶ್ವ ಅವರ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಸಾಗರ್ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ. ಲೋಹಿತಾಶ್ವ ಅವರಿಗೆ ತೀವ್ರ ಎದೆನೋವು ಕಾಣಿಸಿಕೊಂಡಿದೆ ಎಂದು ಹೇಳಲಾಗಿದ್ದು, ಅವರನ್ನು ತಕ್ಷಣವೇ ಬೆಂಗಳೂರಿನ ಕುಮಾರಸ್ವಾಮಿ ಲೇಔಟ್‌ನ ಸಾಗರ್ ಅಪೋಲೋ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅವರು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಟ … Continued

ಬೆಂಗಳೂರು: ಸೋಮವಾರದಿಂದ ಮತ್ತೆ ಒತ್ತುವರಿ ತೆರವು ಕಾರ್ಯಚರಣೆ

ಬೆಂಗಳೂರು: ದಸರಾ ಹಬ್ಬದ ಅಂಗವಾಗಿ ಬಿಡುವು ನೀಡಲಾಗಿದ್ದ ದೊಡ್ಡ ದೊಡ್ಡ ಕಟ್ಟಡಗಳ ಒತ್ತುವರಿ ತೆರವು ಕಾರ್ಯಚರಣೆ ಸೋಮವಾರದಿಂದ ಮತ್ತೆ ಆರಂಭವಾಗಲಿದೆ. ಈಗಾಗಲೇ ಒತ್ತುವರಿದಾರ ಪಟ್ಟಿ ಸಿದ್ದಪಡಿಸಿಕೊಂಡಿರುವ ಕಂದಾಯ ಇಲಾಖೆ ಮತ್ತು ಬಿಬಿಎಂಪಿ ಅಧಿಕಾರಿಗಳು ಸೋಮವಾರದಿಂದ ಒತ್ತುವರಿ ತೆರವು ಕಾರ್ಯಚರಣೆಯನ್ನು ಮತ್ತೆ ಆರಂಭಿಸಲು ನಿರ್ಧರಿಸಿದ್ದಾರೆ. ಮಳೆ ಬಂದಾಗ ಬಿಬಿಎಂಪಿ ವಿರುದ್ಧ ಹೇಳಿಕೆ ನೀಡುವ ಪ್ರತಿಷ್ಠಿತ ವ್ಯಕ್ತಿಗಳು ಹಾಗೂ … Continued

ನಸುಕಿನ ಜಾವ ಬೆಂಗಳೂರು, ಮಂಗಳೂರು, ಶಿರಸಿ ಸೇರಿ ರಾಜ್ಯದ ಹಲವೆಡೆ ಏಕಕಾಲಕ್ಕೆ ಎನ್‌ಐಎ ದಾಳಿ

ಬೆಂಗಳೂರು: ಗುರುವಾರ ನಸುಕಿನ ಜಾವ ಬೆಂಗಳೂರು, ಮಂಗಳೂರು, ಶಿರಸಿ ಸೇರಿದಂತೆ ರಾಜ್ಯದ ಹಲವೆಡೆ ರಾಷ್ಟ್ರೀಯ ತನಿಖಾ ದಳದ (NIA) ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ಪಿಎಫ್​ಐ, ಎಸ್​ಡಿಪಿಐ ಪದಾಧಿಕಾರಿಗಳ ಮನೆಗಳು ಹಾಗೂ ಪಿಎಫ್​ಐ ಕಚೇರಿಗಳ ಮೇಲೆ ದಾಳಿ ನಡೆಸಲಾಗಿದೆ. ಕರ್ನಾಟಕದಲ್ಲಿ ಬೆಂಗಳೂರು, ಶಿವಮೊಗ್ಗ, ಮಂಗಳೂರು, ಉತ್ತರ ಕನ್ನಡ, ಕೊಪ್ಪಳ ಹಾಗೂ ಕಲಬುರಗಿ ಜಿಲ್ಲೆಗಳಲ್ಲಿ ದಾಳಿಗಳನ್ನು ನಡೆಸಲಾಗಿದೆ. … Continued

ಕುಮಟಾ: ಸರ್ಕಾರಿ ಪ್ರಾಥಮಿಕ ಶಾಲಾ ಗ್ರೇಡ್ 2 ದೈಹಿಕ ಶಿಕ್ಷಣ ಶಿಕ್ಷಕರ ಸಂಘಟನೆ ರಾಜ್ಯಾಧ್ಯಕ್ಷರಾಗಿ ರವೀಂದ್ರ ಭಟ್ಟ ಸೂರಿ ಆಯ್ಕೆ

ಕುಮಟಾ: ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲಾ ಗ್ರೇಡ್ 2 ದೈಹಿಕ ಶಿಕ್ಷಣ ಶಿಕ್ಷಕರ ಸಂಘಟನೆ ರಚನೆಯಾಗಿದ್ದು ರಾಜ್ಯಾಧ್ಯಕ್ಷರಾಗಿ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಹೊಲನಗದ್ದೆ ಪ್ರಾಥಮಿಕ ಶಾಲೆಯ ದೈಹಿಕ  ಶಿಕ್ಷಣ ಶಿಕ್ಷಕ ರವೀಂದ್ರ ಭಟ್ಟ ಸೂರಿ ಒಮ್ಮತದ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದಾರೆ. ಇಂದು, ಭಾನುವಾರ ಬೆಂಗಳೂರಿನ ಐಸಾಕ್ ನ್ಯೂಟನ್ ಹೈಸ್ಕೂಲ್ ಸಭಾಂಗಣದಲ್ಲಿ … Continued

ಬೆಂಗಳೂರು ರಾಜಕಾಲುವೆ ಅತಿಕ್ರಮ ತೆರವು ಕಾರ್ಯಾಚರಣೆಯಲ್ಲಿ ಭೇದಭಾವ ಮಾಡುವ ಪ್ರಶ್ನೆಯೇ ಇಲ್ಲ: ಸಿಎಂ ಬೊಮ್ಮಾಯಿ

ಬೆಂಗಳೂರು: ರಾಜಕಾಲುವೆ ಒತ್ತುವರಿ ತೆರವುಗೊಳಿಸುವ ಕಾರ್ಯಾಚರಣೆಯಲ್ಲಿ ಭೇದಭಾವ ಮಾಡುವ ಪ್ರಶ್ನೆಯೇ ಇಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಇಂದು ಸೋಮವಾರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರಾಜಕಾಲುವೆ ಮೇಲೆ ಕಟ್ಟಡ ಹಾಗೂ ಮನೆ ಕಟ್ಟಿದವರ ಮೇಲೆ ಹಾಗೂ ಕಾಲುವೆ ನೀರನ್ನು ಹರಿದು ಹೋಗಲು ತೊಂದರೆ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಇದರಲ್ಲಿ ಭೇದಿ-ಬಾವ … Continued

ಇಂದಿನಿಂದ ವಿಧಾನಮಂಡಲ ಅಧಿವೇಶನ ಆರಂಭ

ಬೆಂಗಳೂರು: ಇಂದಿನಿಂದ (ಸೆಪ್ಟಂಬರ್‌ 12) ವಿಧಾನಮಂಡಲದ ಅಧಿವೇಶನ ಆರಂಭವಾಗಲಿದ್ದು, ಸೆಪ್ಟಂಬರ್‌ 23 ರವರೆಗೆ ನಡೆಯಲಿದೆ. ಮೊದಲ ದಿನದಿಂದಲೇ ಅಧಿವೇಶನ ಕಾವೇರುವ ಸಾಧ್ಯತೆಯಿದೆ. ಕೆಲವು ಮಸೂದೆಗಳನ್ನು ಮಂಡಿಸಿ ಅಂಗೀಕಾರ ಪಡೆದುಕೊಳ್ಳಲು ಆಡಳಿತ ಪಕ್ಷ ಮುಂದಾಗಲಿದೆ. ಸುಗ್ರೀವಾಜ್ಞೆ ಮೂಲಕ ಜಾರಿಗೆ ತಂದಿರುವ ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ಮಸೂದೆ, ಬೆಂಗಳೂರು ಸಂಚಾರ ದಟ್ಟಣೆ ನಿರ್ವಹಣೆಗೆ ಪ್ರತ್ಯೇಕ ಪ್ರಾಧಿಕಾರ … Continued

ಪ್ರವಾಹಕ್ಕೆ ಸಿಲುಕಿದ ಕರ್ನಾಟಕ, ಕೇರಳ: ಬೆಂಗಳೂರಲ್ಲಿ ಜನಜೀವನವೇ ತಲ್ಲಣ; ಮತ್ತೆ ಭಾರೀ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ನವದೆಹಲಿ: ಭಾರತ ಹವಾಮಾನ ಇಲಾಖೆ (IMD) ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶದಲ್ಲಿ ಸೆಪ್ಟೆಂಬರ್ 8 ಮತ್ತು 9 ರಂದು ಭಾರಿ ಮಳೆ, ಗುಡುಗು ಮತ್ತು ಸಿಡಿಲಿನ ಮುನ್ಸೂಚನೆ ನೀಡಿದೆ. ಏತನ್ಮಧ್ಯೆ, ಕೇರಳ, ಲಕ್ಷದ್ವೀಪ, ತೆಲಂಗಾಣ ಮತ್ತು ಕರಾವಳಿ ಆಂಧ್ರಪ್ರದೇಶ ಸೆಪ್ಟೆಂಬರ್ 6, 7 ಮತ್ತು 9 ರಂದು ‘ಅತಿಯಾದ ಭಾರೀ ಮಳೆ’ಗೆ ಸಾಕ್ಷಿಯಾಗಲಿದೆ ಎಂದು ಮುನ್ಸೂಚನೆ ನೀಡಿದೆ. … Continued

ಆಮ್‌ ಆದ್ಮಿ ಪಕ್ಷಕ್ಕೆ ಸೇರ್ಪಡೆಯಾದ ಕಾಂಗ್ರೆಸ್‌ ಮಾಜಿ ರಾಷ್ಟ್ರೀಯ ವಕ್ತಾರ ಬ್ರಿಜೇಶ್‌ ಕಾಳಪ್ಪ

ಬೆಂಗಳೂರು: ಕಾಂಗ್ರೆಸ್‌ ಪಕ್ಷದ ಮಾಜಿ ರಾಷ್ಟ್ರೀಯ ವಕ್ತಾರ ಹಾಗೂ ಸುಪ್ರೀಂಕೋರ್ಟ್‌ ಹಿರಿಯ ವಕೀಲ ಬ್ರಿಜೇಶ್‌ ಕಾಳಪ್ಪ ಅವರು ಆಮ್‌ ಆದ್ಮಿ ಪಾರ್ಟಿಗೆ ಸೋಮವಾರ ಸೇರ್ಪಡೆಯಾದರು. ಬೆಂಗಳೂರಿನ ಹೊಟೇಲ್‌ ಪರಾಗ್‌ನಲ್ಲಿ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಎಎಪಿಯ ಕರ್ನಾಟಕ ಉಸ್ತುವಾರಿ ದಿಲೀಪ್‌ ಪಾಂಡೆ ಅವರು ಬ್ರಿಜೇಶ್‌ ಕಾಳಪ್ಪ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು. ಪಕ್ಷದ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ … Continued

ನೇತ್ರ ದಾನದ ಬಗ್ಗೆ ಅರಿವು ಮೂಡಿಸಲು ಸೈಕಲ್ ಜಾಥಾ

ಬೆಂಗಳೂರು : ಗೋ ಗ್ರೀನ್ ಮತ್ತು ಡಾಕ್ಟರ್ ಅಗರವಾಲ್ ಕಣ್ಣಿನ ಆಸ್ಪತ್ರೆ ಸಹಯೋಗದೊಂದಿಗೆ ಇಂದು, ಭಾನುವಾರ “ನೇತ್ರ ದಾನ – ಮಹಾ ದಾನ ” ಎಂಬ ಘೋಷ ವಾಕ್ಯದೊಂದಿಗೆ ನೇತ್ರ ದಾನದ ಬಗ್ಗೆ ಜನಲ್ಲಿ ಅರಿವು ಮೂಡಿಸಲು ಬೆಂಗಳೂರಿನ ಬನಶಂಕರಿಯಲ್ಲಿ ಸೈಕಲ್ ಜಾಥಾ ನಡೆಸಲಾಯಿತು . ಜಾಥಾದಲ್ಲಿ ನೂರಾರು ಸೈಕಲ್ ಪಟುಗಳು ಭಾಗವಹಿಸಿದ್ದರು. ಸೈಕಲ್‌ ಜಾಥಾಕ್ಕೆ … Continued