ಬೆಂಗಳೂರು ರಾಮೇಶ್ವರಂ ಕೆಫೆ ಬಾಂಬ್​ ಬ್ಲಾಸ್ಟ್​ ಪ್ರಕರಣ : ಪ್ರಮುಖ ಆರೋಪಿ ಬಂಧನ

ನವದೆಹಲಿ : ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದ ಪ್ರಮುಖ ಸಂಚುಕೋರನನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಬಂಧಿಸಿದೆ ಎಂದು ಗುರುವಾರ ಎನ್‌ಐಎ ಪ್ರಕಟಣೆ ತಿಳಿಸಿದೆ. ಕರ್ನಾಟಕದ 12, ತಮಿಳುನಾಡಿನ 5 ಮತ್ತು ಉತ್ತರ ಪ್ರದೇಶದ 1 ಸೇರಿದಂತೆ 18 ಸ್ಥಳಗಳಲ್ಲಿ ಎನ್‌ಐಎ ತಂಡಗಳು ದಾಳಿ ನಡೆಸಿದ ನಂತರ ಮುಝಮ್ಮಿಲ್ ಷರೀಫ್‌ ಎಂಬಾತನನ್ನು ಬುಧವಾರ ಈ … Continued

ಎಸ್ ಎಸ್ ಎಲ್ ಸಿ ಪರೀಕ್ಷೆ ವಿದ್ಯಾರ್ಥಿಗಳ ಮಾರಾಮಾರಿ : ಚಾಕು ಇರಿತ

ಬೆಂಗಳೂರು : ಎಸ್ ಎಸ್ ಎಲ್ ಸಿ ಪರೀಕ್ಷೆ ಸಂದರ್ಭದಲ್ಲಿ ವಿದ್ಯಾರ್ಥಿಗಳ ನಡುವೆ ಮಾರಾಮಾರಿ ನಡೆದು, ಮೂವರು ವಿದ್ಯಾರ್ಥಿಗಳಿಗೆ ಚಾಕು ಇರಿದ ಘಟನೆ ಬೆಂಗಳೂರಿನ ರಾಗಿಗುಡ್ಡ ಬಳಿ ನಡೆದಿದೆ ಎಂದು ವರದಿಯಾಗಿದೆ. ಮಾರ್ಚ್‌ 27ರಂದು ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯಲು ಬಂದ ವೇಳೆ ಈ ಘಟನೆ ನಡೆದಿದೆ ಎನ್ನಲಾಗಿದೆ. ಬೇರೆ ಬೇರೆ ಕಡೆಗಳಿಂದ … Continued

ರಾಜ್ಯದಲ್ಲಿ ತಾಪಮಾನ ಏರಿಕೆ : ಮಾರ್ಗಸೂಚಿ ಬಿಡುಗಡೆ ಮಾಡಿದ ಆರೋಗ್ಯ ಇಲಾಖೆ

ಬೆಂಗಳೂರು : ಕರ್ನಾಟಕದಲ್ಲಿ ತಾಪಮಾನ ಏರುತ್ತ ಸಾಗಿದೆ. ಕೆಲವು ಜಿಲ್ಲೆಗಳಲ್ಲಿ ಮಳೆ ಬಂದಿದ್ದರೂ ಧಗೆ ಕಡಿಮೆಯಾಗಿಲ್ಲ. ಹೀಗಾಗಿ ಏರುತ್ತಿರುವ ತಾಪಮಾನದಿಂದ ಎಚ್ಚರ ವಹಿಸುವಂತೆ ಆರೋಗ್ಯ ಇಲಾಖೆ (Health Department) ಮಾರ್ಗಸೂಚಿ ಬಿಡುಗಡೆ ಮಾಡಿದೆ. ಮುಂದಿನ ನಾಲ್ಕೈದು ದಿನ ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಿಗೆ ತಾಪಮಾನ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಬಹುತೇಕ ಎಲ್ಲ … Continued

ಕೆಎಸ್​ಆರ್​ಟಿಸಿ ಬಸ್​ನಲ್ಲಿ ಅಜ್ಜಿ ಮೊಮ್ಮಗಳಿಗೆ ಉಚಿತ ಟಿಕೆಟ್ : ಆದ್ರೆ ನಾಲ್ಕು ಪಕ್ಷಿಗಳಿಗೆ 444 ರೂ. ಟಿಕೆಟ್…!

ಮೈಸೂರು : ಕೆಎಸ್​ಆರ್​ಟಿಸಿ ಬಸ್​ನಲ್ಲಿ ಅಪರೂಪದ ಘಟನೆಯೊಂದು ವರದಿಯಾಗಿದೆ. ಬೆಂಗಳೂರಿನಿಂದ ಮೈಸೂರಿಗೆ ಬಸ್​ನಲ್ಲಿ ಹೊರಟ್ಟಿದ ಅಜ್ಜಿ ಮೊಮ್ಮಗಳಿಗೆ ಉಚಿತ ಟಿಕೆಟ್ ನೀಡಿದ ಕಂಡಕ್ಟರ್ ಆದರೆ ಅವರು ತಮ್ಮೊಂದಿಗೆ ಒಯ್ದಿದ್ದ ನಾಲ್ಕು ಪಕ್ಷಿಗಳಿಗೆ ಬರೋಬ್ಬರಿ 444 ರೂ. ಮೌಲ್ಯದ ಟಿಕೆಟ್‌ ಅನ್ನು ಕೊಟ್ಟಿದ್ದಾರೆ…! ಬುಧವಾರ (ಮಾರ್ಚ್‌ 27) ಬೆಳಗ್ಗೆ 8 ಗಂಟೆಗೆ ಅಜ್ಜಿ ಮೊಮ್ಮಗಳು ಉಚಿತ ಬಸ್ … Continued

ಬೆಂಗಳೂರು ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ : ಬೆಂಗಳೂರು, ತೀರ್ಥಹಳ್ಳಿ, ಚೆನ್ನೈ ಸೇರಿದಂತೆ ಅನೇಕ ಕಡೆ ಎನ್‌ಐಎ ದಾಳಿ

ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಬುಧವಾರ ಬೆಂಗಳೂರು, ತೀರ್ಥಹಳ್ಳಿ ಹಾಗೂ ಚೆನ್ನೈನ ಅನೇಕ ಭಾಗಗಳಲ್ಲಿ ದಾಳಿ ನಡೆಸಿದೆ. ಎನ್‌ಐಎ ಅಧಿಕಾರಿಗಳು ಬೆಳ್ಳಂಬೆಳಿಗ್ಗೆ ತೀರ್ಥಹಳ್ಳಿ ಪಟ್ಟಣದ ಐದಕ್ಕೂ ಹೆಚ್ಚು ಸ್ಥಳಗಳಲ್ಲಿ ಶೋಧ ಕಾರ್ಯ ನಡೆಸಿದ್ದಾರೆ. ರಾಮೇಶ್ವರಂ ಕೆಫೆ ಸ್ಫೋಟದ ಶಂಕಿತ ಆರೋಪಿ ತೀರ್ಥಹಳ್ಳಿ ಮೂಲದವನು ಎಂದು … Continued

ಬೆಂಗಳೂರು ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ: ಮತ್ತಿಬ್ಬರು ಎನ್ ​​​ಐಎ ವಶಕ್ಕೆ

ಬೆಂಗಳೂರು: ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಮೂಲದ ಇಬ್ಬರನ್ನು ಎನ್‌ಐಎ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ. ಈ ಇಬ್ಬರು ವ್ಯಕ್ತಿಗಳು ರಾಮೇಶ್ವರಂ ಕೆಫೆಯಲ್ಲಿ ಬಾಂಬ್‌ ಇಟ್ಟ ವ್ಯಕ್ತಿಯ ಜೊತೆಗೆ ಸಂಪರ್ಕದಲ್ಲಿದ್ದರು ಎಂದು ವರದಿಯಾಗಿದ್ದು, ಶನಿವಾರ ಸಂಜೆ ಅವರನ್ನು ವಶಕ್ಕೆ ಪಡೆಯಲಾಗಿದೆ ಎನ್ನಲಾಗಿದೆ. ಬಾಂಬರ್ ಸುಳಿವು ಪತ್ತೆ ಹಚ್ಚಿದ ನಂತರ ಆತನ … Continued

ಬೆಂಗಳೂರು ರಾಮೇಶ್ವರಂ ಕೆಫೆ ಸ್ಫೋಟ : ಬಾಂಬ್‌ ಇಟ್ಟಿದ್ದ ಪ್ರಮುಖ ಆರೋಪಿಯ ಗುರುತು ಪತ್ತೆ ಮಾಡಿದ ಎನ್‌ ಐ ಎ ; ಈತ ಯಾರು? ಹಿನ್ನೆಲೆ ಏನು ?

ಬೆಂಗಳೂರು : ಪ್ರಮುಖ ಬೆಳವಣಿಗೆಯಲ್ಲಿ, ಮಾರ್ಚ್ 1 ರಂದು ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟದಲ್ಲಿ ಭಾಗಿಯಾಗಿರುವ ಆರೋಪಿಗಳ ಛಾಯಾಚಿತ್ರಗಳು ಮುನ್ನೆಲೆಗೆ ಬಂದಿವೆ. ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಗುರುತಿಸಲಾಗಿದೆ. ಇವರಿಬ್ಬರೂ ಶಿವಮೊಗ್ಗದ ಐಸಿಸ್ ಘಟಕದೊಂದಿಗೆ ಸಂಬಂಧ ಹೊಂದಿದ್ದು, ಈ ಹಿಂದೆಯೂ ಪ್ರಕರಣವೊಂದರಲ್ಲಿ ಭಾಗಿಯಾಗಿದ್ದಾರೆ. ಪ್ರಮುಖ ಆರೋಪಿಯನ್ನು ಶಿವಮೊಗ್ಗದ ತೀರ್ಥಹಳ್ಳಿ ನಿವಾಸಿ ಮುಸಾವಿರ್ ಹುಸೇನ್ ಶಾಜಿಬ್ ಎಂದು ಗುರುತಿಸಲಾಗಿದ್ದು, … Continued

ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧದ ಎಫ್‌ಐಆರ್‌ ಗೆ ತಡೆ ನೀಡಿದ ಹೈಕೋರ್ಟ್‌

ಬೆಂಗಳೂರು : ಇಲ್ಲಿನ ನಗರ್ತಪೇಟೆಯ ಮೊಬೈಲ್ ಅಂಗಡಿ ಮಾಲೀಕ ಮುಖೇಶ ಎಂಬಾತನ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿರುವುದನ್ನು ಖಂಡಿಸಿ ಪ್ರತಿಭಟನೆ ನಡೆಸಿ, ಸಾರ್ವಜನಿಕ ಶಾಂತಿ-ಸುವ್ಯವಸ್ಥೆಗೆ ಭಂಗ ತಂದ ಆರೋಪದಲ್ಲಿ ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ವಿರುದ್ಧ ದಾಖಲಿಸಲಾಗಿದ್ದ ಎಫ್‌ಐಆರ್‌ಗೆ ಹೈಕೋರ್ಟ್ ಶುಕ್ರವಾರ ತಡೆ ನೀಡಿದೆ. ಹಲಸೂರುಗೇಟ್ ಪೊಲೀಸ್ ಠಾಣೆಯಲ್ಲಿ ತಮ್ಮ ವಿರುದ್ಧ ದಾಖಲಾಗಿರುವ … Continued

ಬೆಂಗಳೂರು : ಒಂದೇ ಕುಟುಂಬದ ಮೂವರು ಆತ್ಮಹತ್ಯೆ

ಬೆಂಗಳೂರು: ಒಂದೇ ಕುಟುಂಬದ ಮೂವರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಜೆಪಿ ನಗರದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಬೆಂಗಳೂರಿನ ಜೆಪಿ ನಗರದ ಮೂರನೇ ಹಂತದಲ್ಲಿ ಈ ಘಟನೆ ನಡೆದಿದೆ. ಮೃತರನ್ನು ತಾಯಿ ಸುಕನ್ಯಾ (48), ಮಕ್ಕಳಾದ ನಿಖಿತ್, ನಿಶಿತ್ (28) ಎಂದು ಗುರುತಿಸಲಾಗಿದೆ. ಘಟನಾ ಸ್ಥಳಕ್ಕೆ ಜೆ‌.ಪಿ.ನಗರ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದಾರೆ. … Continued

ಹನುಮಾನ್ ಚಾಲೀಸಾ ಹಾಕಿದ್ದಕ್ಕೆ ಹಲ್ಲೆ ನಡೆದಿಲ್ಲ : ಸಚಿವ ದಿನೇಶ ಗುಂಡೂರಾವ್ ಸ್ಪಷ್ಟನೆ

ಬೆಂಗಳೂರು: ಬೆಂಗಳೂರಿನ ನಗರತಪೇಟೆಯಲ್ಲಿ ಲೌಡ್‌ ಸ್ಪೀಕರಿನಲ್ಲಿ ಹನುಮಾನ್ ಜಾಲೀಸಾ ಹಾಕಿದ್ದಕ್ಕೆ ಮೊಬೈಲ್ ಸ್ಪೇರ್ ಪಾರ್ಟ್ಸ್ ಅಂಗಡಿಯ ಮಾಲೀಕನ ಮೇಲೆ ಹಲ್ಲೆ ನಡೆಸಲಾಗಿದೆ ಎಂಬ ಪ್ರಕರಣದ ಬಗ್ಗೆ ಸಚಿವ ದಿನೇಶ ಗುಂಡೂರಾವ್ ಸ್ಪಷ್ಟನೆ ನೀಡಿದ್ದು, ಹನುಮಾನ್ ಚಾಲೀಸಾ ಹಾಕಿದ್ದಕ್ಕೆ ಹಲ್ಲೆ ನಡೆದದ್ದಲ್ಲ ಎಂದು ತಿಳಿಸಿದ್ದಾರೆ. ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಪ್ರಚೋದನೆಗೆ ಒಳಗಾಗದೆ ವಿವೇಚನೆಯಿಂದ ಯೋಚಿಸಿ. … Continued