ಬೆಂಗಳೂರು | ಇಬ್ಬರು ಪುಟ್ಟ ಮಕ್ಕಳ ಉಸಿರುಗಟ್ಟಿಸಿ ಕೊಲೆ ; ಆತ್ಮಹತ್ಯೆಗೆ ಯತ್ನಿಸಿದ ತಾಯಿ…! ಆರೋಪ-ಪ್ರತ್ಯಾರೋಪ

ಬೆಂಗಳೂರು: ಇಬ್ಬರು ಪುಟ್ಟ ಮಕ್ಕಳನ್ನು ಉಸಿರುಗಟ್ಟಿಸಿ ಸಾಯಿಸಲಾಗಿದೆ. ತಾಯಿ ಆತ್ಮಹತ್ಯೆಗೆ ಯತ್ನಿಸಿದ ಆಘಾತಕಾರಿ ಘಟನೆ ನಗರದ ಸುಬ್ರಮಣ್ಯಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಮೃತ ಮಕ್ಕಳನ್ನು ಶುಭಂ ಸಾಹು (7), ಶಿಯಾ ಸಾಹು (3) ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೆ ಯತ್ನಿಸಿದ ತಾಯಿಯನ್ನು ಮಮತಾ ಸಾಹು ಎಂದು ಗುರುತಿಸಲಾಗಿದೆ. ಜಾರ್ಖಂಡ ಮೂಲದ ಮಮತಾ ದಂಪತಿ … Continued

ಲೋಕಾಯುಕ್ತ ದಾಳಿ: ಟೌನ್​ ಪ್ಲಾನಿಂಗ್ ನಿರ್ದೇಶಕರ ಮನೆಯಲ್ಲಿ ಸಿಕ್ಕ ಕೆಜಿಗಟ್ಟಲೆ ಚಿನ್ನ-ಬೆಳ್ಳಿ ನೋಡಿ ದಂಗುಬಡಿದ ಅಧಿಕಾರಿಗಳು…!

ಬೆಂಗಳೂರು: ಇಂದು, ಗುರುವಾರ ಬೆಳಿಗ್ಗೆ ಬೆಂಗಳೂರು ರಾಜ್ಯದ 4 ಸ್ಥಳಗಳ 25 ಕಡೆ ದಾಳಿ ಲೋಕಾಯುಕ್ತ ಅಧಿಕಾರಿಗಳು (Lokayukta Raid) ನಡೆಸಿದ್ದಾರೆ. ಭ್ರಷ್ಟಾಚಾರದ ಆರೋಪವಿದ್ದ ಅಧಿಕಾರಿಗಳ ಮನೆ ಹಾಗೂ ಕಚೇರಿಗಳಿಗೆ ದಾಳಿ ನಡೆಸಲಾಗಿದೆ. ಬೆಂಗಳೂರಿನಲ್ಲಿ ಟೌನ್​ ಪ್ಲಾನಿಂಗ್ ನಿರ್ದೇಶಕ ತಿಪ್ಪೇಸ್ವಾಮಿ ಮನೆ ಮೇಲೆ ದಾಳಿ ನಡೆಸಿದ ವೇಳೆ ಕಂಡುಬಂದ ಅಕ್ರಮ ಆಸ್ತಿಪಾಸ್ತಿ ಕಂಡು ಅಧಿಕಾರಿಗಳೇ ದಂಗಾಗಿದ್ದಾರೆ. … Continued

ಮಾಜಿ ಸಚಿವ ಮನೋಹರ ತಹಶೀಲ್ದಾರ ನಿಧನ

ಬೆಂಗಳೂರು: ಮಾಜಿ ಸಚಿವ ಮನೋಹರ ತಹಶೀಲ್ದಾರ (78) ಇಂದು, ಗುರುವಾರ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಚಾಮರಾಜ ಪೇಟೆಯಲ್ಲಿರುವ ಶಂಕರ ಆಸ್ಪತ್ರೆಯಲ್ಲಿಅವರು ನಿಧನರಾಗಿದ್ದಾರೆ. 2015ರಲ್ಲಿ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಅಬಕಾರಿ ಸಚಿವರಾಗಿದ್ದ ಮನೋಹರ ತಹಶೀಲ್ದಾರ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ಸಿಗದ ಕಾರಣ ಕಾಂಗ್ರೆಸ್ ತೊರೆದು ಜೆಡಿಎಸ್ ಸೇರ್ಪಡೆಯಾಗಿದ್ದರು. ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ತೊರೆದು … Continued

ಬೆಂಗಳೂರು: ಕಾರಿನಲ್ಲಿ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಉದ್ಯಮಿ ಶವ ಪತ್ತೆ

ಬೆಂಗಳೂರು: ಕಾರಿನಲ್ಲಿ ಸಂಪೂರ್ಣವಾಗಿ ಸುಟ್ಟು ಹೋಗಿರುವಂತಹ ಸ್ಥಿತಿಯಲ್ಲಿ ಉದ್ಯಮಿಯೊಬ್ಬರ ಮೃತದೇಹ ಹತ್ತೆಯಾಗಿರುವ ಘಟನೆ ಮುದ್ದಿನಪಾಳ್ಯದ ವಿಶ್ವೇಶ್ವರಯ್ಯ ಬಡಾವಣೆಯಲ್ಲಿ ನಡೆದಿದೆ. ವಾಹನವೊಂದು ಹೊತ್ತಿ ಉರಿದಿರುವ ಬಗ್ಗೆ ಪೊಲೀಸರಿಗೆ ತುರ್ತು ಕರೆ ಬಂದಿದೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದು, ಆದರೆ ಕಾರಿನೊಳಗಿದ್ದ ಸಿ ಪ್ರದೀಪ ಎಂಬುವರು ಉಸಿರುಗಟ್ಟಿ ಅದಾಗಲೇ ಮೃತಪಟ್ಟಿದ್ದರು ಎಂದು ಹೇಳಲಾಗಿದೆ. … Continued

ಮೊಬೈಲ್‌ ರಿಪೇರಿ ಮಾಡಿಸಿಕೊಡು ಎಂದು ಹಠ ಮಾಡಿದ್ದಕ್ಕೆ ಮಗನನ್ನೇ ಕ್ರಿಕೆಟ್‌ ಬ್ಯಾಟಿನಿಂದ ಹೊಡೆದು ಕೊಂದ ತಂದೆ..!

ಬೆಂಗಳೂರು: ಹೊಸ ಮೊಬೈಲ್ ಕೊಡಿಸು ಇಲ್ಲವೇ ಮನೆಯಲ್ಲಿದ್ದ ಹಳೆಯ ಮೊಬೈಲ್ ರಿಪೇರಿ ಮಾಡಿಸಿಕೊಂಡು ಎಂದು ಹಠ ಮಾಡಿದ 14 ವರ್ಷದ ಮಗನನ್ನು ತಂದೆಯೇ ಹತ್ಯೆಗೈದ ಘಟನೆ ಬೆಂಗಳೂರಿನಲ್ಲಿ ಶುಕ್ರವಾರ ನಡೆದಿದೆ ಎಂದು ವರದಿಯಾಗಿದೆ. ತಂದೆ ರವಿಕುಮಾರ (44) ಎಂಬಾತ ತನ್ನ ಪುತ್ರ ಹಾಗೂ 9 ನೇ ತರಗತಿಯ ವಿದ್ಯಾರ್ಥಿ ತೇಜಸ್‌ನನ್ನು ಕ್ರಿಕೆಟ್ ಬ್ಯಾಟ್‌ನಿಂದ ಹೊಡೆದಿದ್ದಾನೆ ಮತ್ತು … Continued

ದೇಗುಲದ ಹಣ ದೇಗುಲಕ್ಕೇ ಬಳಕೆ: ಸರ್ಕಾರದಿಂದ ದೇವಸ್ಥಾನದಲ್ಲಿ ಬೋರ್ಡ್‌ ಅಳವಡಿಕೆ

ಬೆಂಗಳೂರು: “ಈ ದೇವಸ್ಥಾನದ (Hindu Temple) ಹಣವನ್ನು ಈ ದೇವಸ್ಥಾನದ ಅಭಿವೃದ್ಧಿಗೇ ಬಳಸುತ್ತೇವೆ. ಅನ್ಯ ಉದ್ದೇಶಕ್ಕೆ ಬಳಸುವುದಿಲ್ಲ” ಎಂದು ದೇವಸ್ಥಾನಕ್ಕೆ ಬರುವ ಭಕ್ತರಿಗೆ ಎದ್ದು ಕಾಣುವಂತೆ ದೇವಸ್ಥಾನದಲ್ಲಿ ಬೋರ್ಡ್‌ ಹಾಕಲು ಮುಜರಾಯಿ ಇಲಾಖೆ (Muzrai Department) ಮುಂದಾಗಿದೆ. ಮುಜರಾಯಿ ದೇವಸ್ಥಾನದಲ್ಲಿ ಭಕ್ತರು ಸಲ್ಲಿಸುವ ಕಾಣಿಕೆಯ ಹಣವನ್ನು ಅನ್ಯ ಧರ್ಮದ ಪವಿತ್ರ ಸ್ಥಳಗಳಿಗೆ ಬಳಕೆ ಮಡಲಾಗುತ್ತಿದೆ ಎಂಬ … Continued

ಬೆಂಗಳೂರು | ವಿದ್ಯಾರ್ಥಿಯ ಹಲ್ಲು ಮುರಿದ ಶಿಕ್ಷಕಿ : ಪ್ರಕರಣ ದಾಖಲು

ಬೆಂಗಳೂರು: ಶಾಲಾ ಕೊಠಡಿಯಲ್ಲಿ ಸಹಪಾಠಿಗಳ ಜತೆ ಆಟವಾಡುತ್ತಾ ನೀರು ಚೆಲ್ಲಿ ಗಲೀಜು ಮಾಡಿದ ಕಾರಣಕ್ಕೆ ಕೋಪಗೊಂಡ ಶಿಕ್ಷಕಿಯೊಬ್ಬರನ್ನು ವಿದ್ಯಾರ್ಥಿಯನ್ನು ಥಳಿಸಿದ್ದರಿಂದ ಆತನ ಹಲ್ಲು ಮುರಿದ ಆರೋಪ ಕೇಳಿ ಬಂದಿದ್ದು, ಈಗ ಪ್ರಕರಣ ಪೊಲೀಸ್‌ ಠಾಣೆಯ ಮೆಟ್ಟಿಲೇರಿದೆ ಎಂದು ವರದಿಯಾಗಿದೆ. ಬೆಂಗಳೂರಿನ ಜಯನಗರ ನಾಲ್ಕನೇ ಬ್ಲಾಕ್‌ ನಿವಾಸಿಯಾಗಿರುವ ವಿದ್ಯಾರ್ಥಿ ಖಾಸಗಿ ಶಾಲೆಯಲ್ಲಿ ಆರನೇ ತರಗತಿ ಓದುತ್ತಿದ್ದು, ಆತ … Continued

ಸರ್ಕಾರಿ ಕಚೇರಿ, ಆವರಣಗಳಲ್ಲಿ ಧೂಮಪಾನ, ತಂಬಾಕು ಸೇವನೆ ನಿಷೇಧ

 ಬೆಂಗಳೂರು: ಸರ್ಕಾರಿ ಕಚೇರಿಗಳಲ್ಲಿ ಹಾಗೂ ಕಚೇರಿ ಆವರಣಗಳಲ್ಲಿ ಧೂಮಪಾನ ಇತರೆ ತಂಬಾಕು ಉತ್ಪನ್ನಗಳ ಸೇವನೆ ನಿಷೇಧಿಸಿ ರಾಜ್ಯ ಸರ್ಕಾರ ಗುರುವಾರ ಆದೇಶ ಹೊರಡಿಸಿದೆ. ಈ ಕುರಿತು ರಾಜ್ಯ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಗೆಜೆಟ್ ಅಧಿಸೂಚನೆ ಹೊರಡಿಸಿದ್ದಾರೆ. ಧೂಮಪಾನ ಹಾಗೂ ತಂಬಾಕಿನ ಇತರ ಉತ್ಪನ್ನಗಳ ಸೇವನೆಯು ಆರೋಗ್ಯಕ್ಕೆ ಮಾರಕವಾಗಿದ್ದು, ಸಾರ್ವಜನಿಕ … Continued

ಬೆಂಗಳೂರಿನ ರಾಯರ ಮಠಕ್ಕೆ ಬ್ರಿಟನ್‌ ಮಾಜಿ ಪ್ರಧಾನಿ ರಿಷಿ ಸುನಕ್ ದಂಪತಿ ಭೇಟಿ ; ವಿಶೇಷ ಪೂಜೆ

ಬೆಂಗಳೂರು: ಬ್ರಿಟನ್ ಮಾಜಿ ಪ್ರಧಾನಿ ರಿಷಿ ಸುನಕ್ ಮತ್ತು ಪತ್ನಿ ಅಕ್ಷತಾ ಮೂರ್ತಿ ದಂಪತಿ ಭಾರತ ಪ್ರವಾಸದಲ್ಲಿದ್ದು, ಬೆಂಗಳೂರಿನ ಜಯನಗರದ ಶ್ರೀ ರಾಘವೇಂದ್ರ ಸ್ವಾಮಿ ಮಠಕ್ಕೆ ಮಂಗಳವಾರ ಭೇಟಿ ನೀಡಿ ಗುರುರಾಯರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಜಯನಗರದ 5ನೇ ಬಡಾವಣೆಯ ನಂಜನಗೂಡು ಶ್ರೀ ರಾಘವೇಂದ್ರ ಮಠಕ್ಕೆ ಮಾವ ಹಾಗೂ ಇನ್ಫೋಸಿಸ್‌ ಸಂಸ್ಥಾಪಕ ಎನ್‌.ಆರ್‌. ನಾರಾಯಣ ಮೂರ್ತಿ, … Continued

ವೀಡಿಯೊ..| ಬೆಂಗಳೂರು ; ಬೆಟ್ ಗೆಲ್ಲಲು ಪಟಾಕಿ ಮೇಲೆ ಕುಳಿತ ವ್ಯಕ್ತಿ : ಅದು ಸ್ಫೋಟಗೊಂಡು ಸಾವು

ಬೆಂಗಳೂರು : ಬೆಂಗಳೂರಿನಲ್ಲಿ ದೀಪಾವಳಿಯ ರಾತ್ರಿ ಸ್ನೇಹಿತರೊಂದಿಗೆ ಬೆಟ್ಟಿಂಗ್ ಚಾಲೆಂಜ್‌ ನಲ್ಲಿ ಪಟಾಕಿ ಪೆಟ್ಟಿಗೆಯ ಮೇಲೆ ಕುಳಿತ ವ್ಯಕ್ತಿಯೊಬ್ಬರು ತಮ್ಮ ಪ್ರಾಣವನ್ನು ಕಳೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. 32 ವರ್ಷದ ವ್ಯಕ್ತಿಯೊಬ್ಬರು ದೀಪಾವಳಿ ಸಂದರ್ಭದಲ್ಲಿ ಪಟಾಕಿಯ ಪೆಟ್ಟಿಗೆಯ ಮೇಲೆ ಕುಳಿತುಕೊಂಡಿದ್ದರಿಂದ ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮದ್ಯದ … Continued