ದೀಪಾವಳಿಗೆ ಕೇವಲ 2 ಗಂಟೆ ಮಾತ್ರ ಪಟಾಕಿ ಸಿಡಿಸಲು ಅವಕಾಶ

ಬೆಂಗಳೂರು: ಈ ಬಾರಿ ದೀಪಾವಳಿ ಹಬ್ಬದಲ್ಲಿ ರಾತ್ರಿ 8 ಗಂಟೆಯಿಂದ 10 ಗಂಟೆವರೆಗೆ ಮಾತ್ರ ಪಟಾಕಿ ಸಿಡಿಸಲು ರಾಜ್ಯ ಸರ್ಕಾರ ಅವಕಾಶ ಕಲ್ಪಿಸಿದೆ. ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಈಶ್ವರ ಖಂಡ್ರೆ, ರಾತ್ರಿ 8ರಿಂದ 10 ಗಂಟೆಯವರೆಗೆ ಮಾತ್ರ ಪಟಾಕಿ ಸಿಡಿಸಬಹುದು. ಈ ಕುರಿತು ಸುಪ್ರೀಂಕೋರ್ಟ್ ನಿರ್ದೇಶನವಿದ್ದು, ಹಸಿರು ಪಟಾಕಿ ಮಾತ್ರ ಸಿಡಿಸಲು ಅವಕಾಶವಿದೆ ಎಂದು … Continued

ನಟ ಕಿಚ್ಚ ಸುದೀಪ ತಾಯಿ ನಿಧನ

ಬೆಂಗಳೂರು : ಸ್ಯಾಂಡಲ್‌ವುಡ್ ನಟ, ಬಿಗ್ ಬಾಸ್ ಕನ್ನಡ ಆವೃತ್ತಿಯ ನಿರೂಪಕ ನಟ ಕಿಚ್ಚ ಸುದೀಪ ಅವರ ತಾಯಿ ಅವರು ಇಂದು ಭಾನುವಾರ ನಿಧನರಾಗಿದ್ದಾರೆ. ಬೆಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ಭಾನುವಾರ ಬೆಳಿಗ್ಗೆ ನಿಧನರಾಗಿದ್ದಾರೆ. ಸುದೀಪ ತಾಯಿ ಸರೋಜಾ ಅವರನ್ನು ಅನಾರೋಗ್ಯ ಕಾರಣದಿಂದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರು ಚಿಕಿತ್ಸೆಗೆ ಸ್ಪಂದಿಸದೇ … Continued

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿ ಶಿಂಧೆ ನೇತೃತ್ವದ ಶಿವಸೇನೆಗೆ ಸೇರ್ಪಡೆ…

ಜಲ್ನಾ: 2017ರಲ್ಲಿ ರಾಷ್ಟ್ರದಾದ್ಯಂತ ಭಾರಿ ಸುದ್ದಿ ಮಾಡಿದ್ದ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿ ಶ್ರೀಕಾಂತ ಪಂಗರ್ಕರ್ ಅವರು ವಿಧಾನಸಭೆ ಚುನಾವಣೆಗೆ ಮುನ್ನ ಜಲ್ನಾದಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಪಕ್ಷವನ್ನು ಸೇರಿದ್ದಾರೆ ಎಂದು ಹಲವಾರು ಮಾಧ್ಯಮಗಳು ವರದಿ ಮಾಡಿವೆ. ಗೌರಿ ಲಂಕೇಶ್ ಅವರನ್ನು 2017ರ ಸೆಪ್ಟೆಂಬರ್ 5ರಂದು ಕರ್ನಾಟಕದ ರಾಜಧಾನಿ … Continued

ವಂಚನೆ ಪ್ರಕರಣದಲ್ಲಿ ಪ್ರಹ್ಲಾದ ಜೋಶಿ ಪಾತ್ರ ಏನೂ ಇಲ್ಲ : ದೂರುದಾರೆ ಸ್ಪಷ್ಟನೆ

ಹುಬ್ಬಳ್ಳಿ: ಬಿಜೆಪಿ ಟಿಕೆಟ್‌ ಕೊಡಿಸುವುದಾಗಿ ವಂಚನೆ ಪ್ರಕರಣದಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಪಾತ್ರ ಏನೂ ಇಲ್ಲ, ಅವರಿಗೂ ಇದಕ್ಕೂ ಯಾವುದೇ ಸಂಬಂಧ ಇಲ್ಲ ಎಂದು ದೂರುದಾರೆ ಸುನೀತಾ ಚವ್ಹಾಣ ಸ್ಪಷ್ಟಪಡಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರಹ್ಲಾದ ಜೋಶಿ ಅವರು ಬಹಳ ಒಳ್ಳೆಯವರು. ಈ ಪ್ರಕರಣದಲ್ಲಿ ಅವರ ಪಾತ್ರವೇನೂ ಇಲ್ಲ. ವಿನಾಕಾರಣ ಪ್ರಹ್ಲಾದ ಜೋಶಿ … Continued

ಮಾಜಿ ಸಿಎಂ ಎಸ್‌.ಎಂ.ಕೃಷ್ಣ ಆಸ್ಪತ್ರೆಗೆ ದಾಖಲು

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್.​​ಎಂ. ಕೃಷ್ಣ (S M Krishna) ಅವರ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರು ವಯೋಸಹಜ ತೊಡಕಿನ ಹಿನ್ನೆಲೆಯಲ್ಲಿ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನಲಾಗಿದೆ. ಮಣಿಪಾಲ ಆಸ್ಪತ್ರೆಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ. 92 ವರ್ಷದ ಎಸ್​.ಎಂ.​​ ಕೃಷ್ಣ ಅವರಿಗೆ ಮಣಿಪಾಲ​ ಆಸ್ಪತ್ರೆಯಲ್ಲಿ … Continued

ಬೆಂಗಳೂರು : ಅಂಚೆ ಮೂಲಕ ತರಿಸಿಕೊಂಡಿದ್ದ ₹21 ಕೋಟಿ ಮೌಲ್ಯದ ಡ್ರಗ್ಸ್‌ ಜಪ್ತಿ…!

ಬೆಂಗಳೂರು : ವಿದೇಶಗಳಿಂದ ಭಾರತೀಯ ಅಂಚೆ ಮೂಲಕ ನಗರಕ್ಕೆ ತರಿಸಿಕೊಂಡಿದ್ದ ₹21.17 ಕೋಟಿ ಮೌಲ್ಯದ ವಿವಿಧ ರೀತಿಯ ನಿಷೇಧಿತ ಮಾದಕ ವಸ್ತುಗಳನ್ನು ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳದ ಅಧಿಕಾರಿಗಳು ಮತ್ತು ಕಸ್ಟಮ್ಸ್‌ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಚಾಮರಾಜಪೇಟೆ ಫಾರಿನ್‌ ಫೋಸ್ಟ್‌ ಆಫೀಸ್‌ಗೆ ಯು.ಎಸ್‌., ಯು.ಕೆ., ಬೆಲ್ಜಿಯಂ, ಥೈಲ್ಯಾಂಡ್‌, ನೆದರ್‌ ಲ್ಯಾಂಡ್ ಸೇರಿದಂತೆ ವಿವಿಧ ದೇಶಗಳಿಂದ … Continued

ಮೈಸೂರಿನ ಮುಡಾ ಕಚೇರಿ ಮೇಲೆ ಇ.ಡಿ. ದಾಳಿ ; ಸಿಎಂ ಸಿದ್ದರಾಮಯ್ಯಗೆ ಶುರುವಾಯ್ತಾ ಸಂಕಷ್ಟ..?

ಮೈಸೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಇದೀಗ ಮೈಸೂರಿನ ಮುಡಾ ಕಚೇರಿ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು (ಇ.ಡಿ.) ಅಧಿಕಾರಿಗಳು ದಾಳಿ ನಡೆಸಿದ್ದು, ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ. ಸುಮಾರು 20 ಮಂದಿ ಇ.ಡಿ. ಅಧಿಕಾರಿಗಳು ಗುರುವಾರ ಮುಡಾ ಕಚೇರಿ ಆರಂಭದ ಹೊತ್ತಿಗೆ ದಾಳಿ ನಡೆಸಿದ್ದು, ಈ ವೇಳೆ ಹಲವು ದಾಖಲೆಗಳ ಪರಿಶೀಲನೆ … Continued

ಬೆಂಗಳೂರು ಲಾಡ್ಜ್​ನಲ್ಲಿ ತೀರ್ಥಹಳ್ಳಿ‌ ತಹಶೀಲ್ದಾರ್ ಶವವಾಗಿ ಪತ್ತೆ

ಬೆಂಗಳೂರು : ತೀರ್ಥಹಳ್ಳಿ ತಹಶೀಲ್ದಾರ ಅವರು ಬೆಂಗಳೂರಿನ ಲಾಡ್ಜ್​ವೊಂದರಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ಅವರು ಹೃದಯಾಘಾತದಿಂದ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ತೀರ್ಥಹಳ್ಳಿ ತಹಶೀಲ್ದಾರ ಜಕ್ಕಣ್ಣ ಗೌಡರ್ (54) ಅವರು ನ್ಯಾಯಾಲಯದ ಕೆಲಸದ ನಿಮಿತ್ತ ಬೆಂಗಳೂರಿಗೆ ತೆರಳಿದ್ದ ಜಕ್ಕಣ್ಣ ಗಾಂಧಿನಗರ ಬಳಿಯ ಲಾಡ್ಜ್​ ಒಂದರಲ್ಲಿ ತಂಗಿದ್ದರು ಎಂದು ಹೇಳಲಾಗಿದೆ. ಬುಧವಾರ ಮಧ್ಯಾಹ್ನದಿಂದ ಕುಟುಂಬದವರು ಹಾಗೂ ಅಧಿಕಾರಿಗಳ … Continued

ವಿಪರೀತ ಮಳೆ: ನಾಳೆ (ಅ.16) ಬೆಂಗಳೂರಿನ ಶಾಲಾ-ಕಾಲೇಜುಗಳಿಗೂ ರಜೆ ಘೋಷಣೆ

ಬೆಂಗಳೂರು : ಬೆಂಗಳೂರಿನಲ್ಲಿ ಮಂಗಳವಾರ ದಿನವಿಡೀ ಭಾರಿ ಮಳೆ ಸುರಿದಿದ್ದು, ಹವಾಮಾನ ಇಲಾಖೆಯ ಪ್ರಕಾರ ಮಳೆ ಬುಧವಾರ (ಅಕ್ಟೋಬರ್ 16) ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಬೆಂಗಳೂರಿನ ಎಲ್ಲ ಶಾಲಾ ಕಾಲೇಜುಗಳಿಗೆ ಬುಧವಾರ ರಜೆ ಘೋಷಣೆ ಮಾಡಲಾಗಿದೆ ಎಂದು ವರದಿಯಾಗಿದೆ, ಬುಧವಾರ ಬೆಂಗಳೂರಿನಲ್ಲಿ ಧಾರಾಕಾರ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ. ಮಂಗಳವಾರ ಬೆಂಗಳೂರಿನಲ್ಲಿ … Continued

ಒಂದೇ ಕುಟುಂಬದ ನಾಲ್ವರು ಸಾವಿಗೆ ಶರಣು

ಬೆಂಗಳೂರು: ಪತಿ, ಪತ್ನಿ ಸೇರಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಯಲಹಂಕ ತಾಲೂಕಿನ ಸಿಂಗನಾಯಕನಹಳ್ಳಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ತಂದೆ, ತಾಯಿ ಮತ್ತು ಇಬ್ಬರು ಮಕ್ಕಳು ಆತ್ಮಹತ್ಯೆಗೆ ಶರಣಾದವರು. ಮೃತರನ್ನು ಪತಿ ಅವಿನಾಶ (33), ಪತ್ನಿ ಮಮತಾ (30), ಮಕ್ಕಳಾದ ಆಧೀಯ(5) ಮತ್ತು ಅನಯಾ (3) ಎಂದು ಗುರುತಿಸಲಾಗಿದೆ. ಅವಿನಾಶ್ ಕ್ಯಾಬ್ ಡ್ರೈವರ್ … Continued