ಅತ್ಯಾಚಾರ ಆರೋಪ: ಮಾಜಿ ಸಚಿವ ವಿನಯ ಕುಲಕರ್ಣಿ ವಿರುದ್ಧ ಎಫ್‌ಐಆ‌ರ್

ಬೆಂಗಳೂರು : ಸಾಮಾಜಿಕ ಕಾರ್ಯಕರ್ತೆ ಮೇಲೆ ಅತ್ಯಾಚಾರ ನಡೆಸಿದ್ದಾರೆ ಎಂದು ಆರೋಪಿತ ದೂರು ಆಧರಿಸಿ ಧಾರವಾಡ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕ, ಮಾಜಿ ಸಚಿವ ವಿನಯ ಕುಲಕರ್ಣಿ ವಿರುದ್ಧ ಎಫ್‌ಐಆ‌ರ್ ದಾಖಲಾಗಿದೆ ಎಂದು ವರದಿಯಾಗಿದೆ. 34 ವರ್ಷದ ಮಹಿಳೆಯೊಬ್ಬರು ಅತ್ಯಾಚಾರ, ಅಪಹರಣ ಮತ್ತು ಕ್ರಿಮಿನಲ್ ಬೆದರಿಕೆ ಆರೋಪ ಮಾಡಿದ್ದು, ಮಹಿಳೆ ನೀಡಿದ ದೂರಿನ ಮೇರೆಗೆ ಧಾರವಾಡದ … Continued

ವೀಡಿಯೊ | ಬೆಂಗಳೂರು : ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದಲ್ಲಿ ಪ್ರವಾಸಿಗರಿದ್ದ ಸಫಾರಿ ಬಸ್ಸಿಗೆ ಜಿಗಿದು ಒಳಗೆ ನುಸುಳಲು ಯತ್ನಿಸಿದ ಚಿರತೆ ; ವೀಕ್ಷಿಸಿ

ಬೆಂಗಳೂರು : ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವೀಡಿಯೊದಲ್ಲಿ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದಲ್ಲಿ ಚಿರತೆಯೊಂದು ಮಿನಿ ಸಫಾರಿ ಟೂರಿಸ್ಟ್ ಬಸ್ಸಿಗೆ ಜಿಗಿದು ಕಿಟಕಿ ಹಿಡಿದುಕೊಳ್ಳುವ ಮೂಲಕ ಪ್ರವಾಸಿಗರನ್ನು ದಿಗ್ಭ್ರಮೆಗೊಳಿಸಿತು. ವರದಿಗಳ ಪ್ರಕಾರ, ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದ ಸಫಾರಿ ಬಸ್‌ ಚಾಲಕ ಪ್ರವಾಸಿಗರು ಸುತ್ತಮುತ್ತಲಿನ ವನ್ಯಜೀವಿಗಳನ್ನು ವೀಕ್ಷಿಸಲು ನಿಲ್ಲಿಸಿದಾಗ ಈ ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ. ಸಫಾರಿ ಬಸ್‌ … Continued

ಉದ್ಯೋಗಾಕಾಂಕ್ಷಿಗಳಿಗೆ ಗುಡ್‌ ನ್ಯೂಸ್‌ ; ಕಾಲಮಿತಿಯಲ್ಲಿ 34,863 ಖಾಲಿ ಹುದ್ದೆಗಳ ಭರ್ತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು: ರಾಜ್ಯದಲ್ಲಿನ ವಿವಿಧ ಇಲಾಖೆಗಳಲ್ಲಿನ 34,863 ಖಾಲಿ ಹುದ್ದೆಗಳನ್ನು (Government Jobs) ಕಾಲಮಿತಿಯೊಳಗೆ ಭರ್ತಿ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಸರ್ಕಾರದ ಹಂತದಲ್ಲಿ ವಿವಿಧ ಇಲಾಖೆಗಳ ನೇಮಕಾತಿಗಳ ಬಗ್ಗೆ ಪ್ರಗತಿ ಪರಿಶೀಲನೆ ನಡೆಸಿದ ಅವರು, ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ 34,863 ಹುದ್ದೆಗಳನ್ನು ತುಂಬಲು ಕಾಲ ಮಿತಿಯನ್ನು ನಿಗದಿಪಡಿಸಿಕೊಂಡು ನೇಮಕಾತಿ … Continued

ಬೆಂಗಳೂರು: ಓರ್ವ ಪಾಕಿಸ್ತಾನಿ ಪ್ರಜೆ ಸೇರಿ ಅಕ್ರಮವಾಗಿ ನೆಲೆಸಿದ್ದ ನಾಲ್ವರು ವಿದೇಶಿಗರ ಬಂಧನ

ಬೆಂಗಳೂರು: ಓರ್ವ ಪಾಕಿಸ್ತಾನಿ ಪ್ರಜೆ ಸೇರಿ ನಾಲ್ವರು ವಿದೇಶಿ ಪ್ರಜೆಗಳನ್ನು ಬೆಂಗಳೂರಿನ ಜಿಗಣಿ ಪೊಲಿಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಜಿಗಣಿಯಲ್ಲಿ ಅಕ್ರಮವಾಗಿ ನಾಲ್ವರು ವಾಸವಾಗಿದ್ದರು. ಪಾಕಿಸ್ತಾನಿ, ಬಾಂಗ್ಲಾದೇಶ ಮೂಲದ ಪ್ರಜೆಗಳು ಅಕ್ರಮವಾಗಿ ನೆಲೆಸಿರುವ ಬಗ್ಗೆ ಕೇಂದ್ರ ಗುಪ್ತಚರ ಇಲಾಖೆ ನೀಡಿದ ಮಾಹಿತಿ ಆಧರಿಸಿ ರಾತ್ರಿ ಕಾರ್ಯಾಚರಣೆ ನಡೆಸಿದ ಜಿಗಣಿ … Continued

ಬೆಂಗಳೂರು: ತಾಜ್ ವೆಸ್ಟ್ ಎಂಡ್ ಹೊಟೇಲ್ ಗೆ ಬಾಂಬ್ ಬೆದರಿಕೆ

ಬೆಂಗಳೂರು: ಬೆಂಗಳೂರಿನ ತಾಜ್ ವೆಸ್ಟ್ ಎಂಡ್ ಹೋಟೆಲ್‌ಗೆ ಶನಿವಾರ ಬೆಳಿಗ್ಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದೆ ಎಂದು ವರದಿಯಾಗಿದೆ. ಇದನ್ನು ಗಮನಿಸಿದ ನಂತರ ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಲಾಯಿತು. ಪೊಲೀಸರು ತಕ್ಷಣವೇ ಸ್ನಿಫರ್ ಡಾಗ್ಸ್ ಮತ್ತು ಬಾಂಬ್ ಸ್ಕ್ವಾಡ್ ಸಮೇತ ಸ್ಥಳಕ್ಕೆ ಆಗಮಿಸಿದರು. “ತಾಜ್ ವೆಸ್ಟ್ ಎಂಡ್ ಹೋಟೆಲ್ ಸಿಬ್ಬಂದಿಗೆ ಬಾಂಬ್ ಬೆದರಿಕೆ ಇ-ಮೇಲ್ … Continued

ಶಾಸಕ ಮುನಿರತ್ನ ಮನೆ ಮೇಲೆ ಎಸ್ ಐಟಿ ದಾಳಿ

ಬೆಂಗಳೂರು : ನ್ಯಾಯಾಂಗ ಬಂಧನದಲ್ಲಿರುವ ಬಿಜೆಪಿ ಶಾಸಕ ಮುನಿರತ್ನ ಮನೆ ಮೇಲೆ ವಿಶೇಷ ತನಿಖಾ ತಂಡ(SIT)ದ ಅಧಿಕಾರಿಗಳು ಶನಿವಾರ ಬೆಳಗ್ಗೆ ದಾಳಿ ನಡೆಸಿದ್ದಾರೆ ಎಂದು ವರದಿಯಾಗಿದೆ. ಬೆಂಗಳೂರಿನ ವೈಯಾಲಿಕಾವಲ್ ಅವರ ನಿವಾಸದ ಮೇಲೆ ಎಸ್​ಐಟಿ ಎಸಿಪಿ ಕವಿತಾ ನೇತೃತ್ವದಲ್ಲಿ ದಾಳಿ ನಡೆಸಿದ ಅಧಿಕಾರಿಗಳ ತಂಡ ದಾಖಲೆಗಳ ಪರಿಶೀಲನೆ ನಡೆಸಿದೆ. ಒಟ್ಟು 15 ಕಡೆಗಳಲ್ಲಿ ಎಸ್​ಐಟಿ ಅಧಿಕಾರಿಗಳು … Continued

ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ ಎಫ್‌ಐಆರ್‌ ದಾಖಲಿಸಲು ಕೋರ್ಟ್‌ ಆದೇಶ

ಬೆಂಗಳೂರು: ಈಗ ರದ್ದಾದ ಚುನಾವಣಾ ಬಾಂಡ್‌ಗಳ ಮೂಲಕ ಸುಲಿಗೆ ಮಾಡಿದ ಆರೋಪದ ಮೇಲೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ ಎಫ್‌ಐಆರ್ ದಾಖಲಿಸಲು ಬೆಂಗಳೂರು ನ್ಯಾಯಾಲಯ ಆದೇಶಿಸಿದೆ. ಚುನಾವಣಾ ಬಾಂಡ್‌ಗಳ ಮೂಲಕ ಸುಲಿಗೆ ನಡೆಸಲಾಗಿದೆ ಎಂದು ಆರೋಪಿಸಿ ನಿರ್ಮಲಾ ಸೀತಾರಾಮನ್ ಮತ್ತು ಇತರರ ವಿರುದ್ಧ ಜನಾಧಿಕಾರ ಸಂಘರ್ಷ ಸಂಘಟನೆಯ ಆದರ್ಶ ಅಯ್ಯರ್ ಎಂಬವರು ದೂರು … Continued

ಮುಡಾ ಹಗರಣ | ಪಕ್ಷಕ್ಕೆ ಮುಜುಗರ ತಪ್ಪಿಸಲು ಸಿದ್ದರಾಮಯ್ಯ ರಾಜೀನಾಮೆ ಕೊಡುವುದು ಸೂಕ್ತ : ಕಾಂಗ್ರೆಸ್‌ ನಾಯಕನಿಂದಲೇ ಒತ್ತಾಯ

ಬೆಂಗಳೂರು: ಮುಡಾ ಹಗರಣದಲ್ಲಿ ಲೋಕಾಯುಕ್ತ ತನಿಖೆಗೆ ಜನಪ್ರತಿನಿಧಿಗಳ ನ್ಯಾಯಾಲಯ ಆದೇಶಿರುವ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಪ್ರತಿಪಕ್ಷಗಳು ಆಗ್ರಹಿಸುವೆ. ಈಗ ಆಡಳಿತ ಪಕ್ಷವಾದ ಕಾಂಗ್ರೆಸ್‌ ನಾಯಕನಿಂದಲೇ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂಬ ಒತ್ತಾಯ ಕೇಳಿಬಂದಿದೆ. ಹೈಕೋರ್ಟ್ ಹಾಗೂ ಜನಪ್ರತಿನಿಧಿಗಳ ಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡುವುದು ಉತ್ತಮ ಎಂದು … Continued

ಬೆಂಗಳೂರು ಕೊಲೆ | ಮಹಾಲಕ್ಷ್ಮಿ ಕೊಲೆ ಆರೋಪಿಯ ಡೆತ್‌ನೋಟ್‌ ಪತ್ತೆ; ಬರ್ಬರ ಕೃತ್ಯದ ಉಲ್ಲೇಖ

ಬೆಂಗಳೂರು: ವೈಯಾಲಿಕಾವಲ್‌ನಲ್ಲಿ ಯುವತಿಯನ್ನು ಬರ್ಬರವಾಗಿ ಕೊಂದು ದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಫ್ರಿಜ್‌ನಲ್ಲಿಟ್ಟು ಒಡಿಶಾಗೆ ಪರಾರಿಯಾಗಿದ್ದ ಕೊಲೆ ಆರೋಪಿ ಆತ್ಮಹತ್ಯೆ ಮಾಡಿಕೊಂಡಿದ್ದು, ಡೆತ್‌ ನೋಟ್‌ ಸಹ ಪತ್ತೆಯಾಗಿದೆ. ಕೊಲೆ ಆರೋಪ ಹೊತ್ತಿರುವ ಮುಕ್ತಿ ರಂಜನ್ ರಾಯ್ (31) ಒಡಿಶಾದಲ್ಲಿ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಒಡಿಶಾ ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆತ … Continued

ಮುಡಾ ಪ್ರಕರಣ | ಸಿದ್ದರಾಮಯ್ಯಗೆ ಹಿನ್ನಡೆ ; ರಾಜ್ಯಪಾಲರ ಪ್ರಾಸಿಕ್ಯೂಷನ್‌ ಆದೇಶ ಎತ್ತಿಹಿಡಿದ ಹೈಕೋರ್ಟ್‌ : ಸಿದ್ದರಾಮಯ್ಯ ಅರ್ಜಿ ವಜಾ

ಬೆಂಗಳೂರು : ಮುಡಾ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲ ಥಾವರಚಂದ ಗೆಹ್ಲೋಟ್‌ ಅವರು ತಮ್ಮ ವಿರುದ್ಧ ಅಭಿಯೋಜನಾ (ಪ್ರಾಸಿಕ್ಯೂಷನ್) ಮಂಜೂರಾತಿ ನೀಡಿರುವುದನ್ನು ಪ್ರಶ್ನಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್‌ ಮಂಗಳವಾರ ವಜಾ ಮಾಡಿದೆ. ಹೀಗಾಗಿ ಮೊದಲ ಹಂತದ ಕಾನೂನು ಹೋರಾಟದಲ್ಲಿ ಸಿದ್ದರಾಮಯ್ಯ ಅವರಿಗೆ ತೀವ್ರ ಹಿನ್ನಡೆಯಾದಂತಾಗಿದೆ. ರಾಜ್ಯಪಾಲರ ಆದೇಶ ರದ್ದತಿಗೆ ಕೋರಿ … Continued