ಬೆಂಗಳೂರಿನಲ್ಲಿ 5 ಝೀಕಾ ವೈರಸ್ ಪ್ರಕರಣಗಳು ಪತ್ತೆ

ಬೆಂಗಳೂರು : ಬೆಂಗಳೂರಿನಲ್ಲಿ ಜಿಗಣಿಯೊಂದರಲ್ಲೇ 5 ಝೀಕಾ ವೈರಸ್ ಸೋಂಕು ಪ್ರಕರಣಗಳು ವರದಿಯಾಗಿದ್ದು, ಈ ಹಿನ್ನೆಲೆಯಲ್ಲಿ ಜಿಗಣಿ ಪ್ರದೇಶವನ್ನು ಕಂಟೋನ್ಮೆಂಟ್ ವಲಯ ಎಂದು ಘೋಷಿಸಲಾಗಿದೆ. ಐವರು ಸೋಂಕಿತರ ಮೇಲೆ ಆರೋಗ್ಯ ಇಲಾಖೆ ನಿಗಾ ಇಟ್ಟಿದೆ. ಝೀಕಾ ವೈರಸ್ ಸೋಂಕಿತರ ಕುಟುಂಬಸ್ತರ ರಕ್ತದ ಮಾದರಿ ಸಂಗ್ರಹಿಸಲಾಗಿದ್ದು, ವೈದ್ಯಕೀಯ ಪರೀಕ್ಷೆಗಾಗಿ ಲ್ಯಾಬ್ ಗೆ ಕಳುಹಿಸಲಾಗಿದೆ. ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ … Continued

ಬೆಂಗಳೂರು | ನಡು ರಸ್ತೆಯಲ್ಲಿ ಸ್ಟಂಟ್ ; ಬೇಸತ್ತು 2 ಸ್ಕೂಟರ್‌ಗಳನ್ನು ಫ್ಲೈಓವರ್‌ನಿಂದ ಕೆಳಕ್ಕೆ ಎಸೆದ ಜನ : ದೃಶ್ಯ ಕ್ಯಾಮರಾದಲ್ಲಿ ಸೆರೆ

ಬೆಂಗಳೂರು: ರೀಲ್‌ಗಳನ್ನು ಮಾಡುವ ಭರಾಟೆ ದೇಶದ ಯುವಕರನ್ನು ಆವರಿಸಿದೆ. ಅವರು ಸಾಮಾಜಿಕ ಮಾಧ್ಯಮದಲ್ಲಿ ಪ್ರಸಿದ್ಧರಾಗಲು ಇನ್ಸ್ಟಾಗ್ರಾಂ (Instagram)ರೀಲ್‌ಗಳಿಗಾಗಿ ವೀಡಿಯೊಗಳನ್ನು ಚಿತ್ರೀಕರಿಸಲು ಯಾವುದೇ ಹಂತಕ್ಕೆ ಹೋಗಿ ಅಪಾಯ ತಂದುಕೊಂಡ ಅನೇಕ ಉದಾಹರಣೆಗಳಿವೆ. ಸಾಮಾಜಿಕ ಮಾಧ್ಯಮಗಳಲ್ಲಿ ಕೆಲವು ಲೈಕ್‌ಗಳು ಮತ್ತು ಫಾಲೋವರ್ಸ್‌ಗಳಿಗಾಗಿ ತಮ್ಮ ಜೀವವನ್ನು ಅಪಾಯಕ್ಕೆ ಒಡ್ಡುತ್ತಾರೆ, ಅಲ್ಲದೆ ಇತರರ ಜೀವವನ್ನೂ ಅಪಾಯಕ್ಕೆ ಒಡ್ಡುತ್ತಾರೆ. ಇದೇ ಇಂಥಹದ್ದೇ ವಿದ್ಯಮಾನವೊಂದರಲ್ಲಿ … Continued

ಮಾತು ನಂಬಿ ಆನ್‌ಲೈನ್‌ನಲ್ಲಿ ಹೂಡಿಕೆ ಮಾಡಿ 1.53 ಕೋಟಿ ರೂ. ಕಳೆದುಕೊಂಡ ದಂಪತಿ: ಪೊಲೀಸರ ಕಾರ್ಯದಿಂದ ಹೆಚ್ಚಿನ ಹಣ ವಸೂಲಿ ; ನಡೆದದ್ದು ಹೇಗೆ..?

ಬೆಂಗಳೂರು : ಬೆಂಗಳೂರಿನ ಟೆಕ್ ಉದ್ಯಮ ದಂಪತಿ ಆನ್‌ಲೈನ್ ಟ್ರೇಡಿಂಗ್ ಹಗರಣದಲ್ಲಿ ಕಳೆದುಕೊಂಡಿದ್ದ ಹಣದ ಹೆಚ್ಚಿನ ಭಾಗವನ್ನು ಯಶಸ್ವಿಯಾಗಿ ಮರುಪಡೆದುಕೊಂಡಿದ್ದಾರೆ. ಸ್ಥಳೀಯ ಪೊಲೀಸರ ತ್ವರಿತ ಕಾರ್ಯಾಚರಣೆಯಿಂದ ಇದು ಸಾಧ್ಯವಾಗಿದೆ. ಬೆಂಗಳೂರು ಪೂರ್ವ ವಿಭಾಗದ ಸೈಬರ್ ಕ್ರೈಂ ಪೊಲೀಸರ ಕ್ಷಿಪ್ರ ಕಾರ್ಯಾಚರಣೆಯಿಂದಾಗಿ ಬೆಂಗಳೂರಿನ ದಂಪತಿ ಆನ್‌ಲೈನ್ ಹೂಡಿಕೆ ಮಾಡಲು ವಂಚಕರಿಂದ ಕಳೆದುಕೊಂಡಿದ್ದ 1.53 ಕೋಟಿ ರೂ.ಗಳಲ್ಲಿ 1.4 … Continued

ರಾಜ್ಯದಲ್ಲಿ ಮತ್ತೊಬ್ಬ ಪೊಲೀಸ್ ಅಧಿಕಾರಿ ಆತ್ಮಹತ್ಯೆ ; ಬೆಂಗಳೂರು ಸಿಸಿಬಿ ಇನ್ಸ್‌ಪೆಕ್ಟರ್‌ ಬಿಡದಿ ಬಳಿ ನೇಣಿಗೆ ಶರಣು

ಬೆಂಗಳೂರು: ಯಾದಗಿರಿ ಪಿಎಸ್ಐ ಪರಶುರಾಮ ಸಾವು ಪ್ರಕರಣದ ಬಹಳ ಸುದ್ದಿಯಾಗಿ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿಗೆ ವಹಿಸಿದ ಬೆನ್ನಲ್ಲೇ ಸಿಸಿಬಿ ಪೊಲೀಸ್ ಇನ್ಸ್​​ಪೆಕ್ಟರ್ ಒಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿರುವ ವರದಿಯಾಗಿದೆ. ಬೆಂಗಳೂರು ಸಿಸಿಬಿ ಪೊಲೀಸ್ ಇನ್ಸ್​​ಪೆಕ್ಟರ್​ ತಿಮ್ಮೇಗೌಡ ಎಂಬವರ ಶವ  ರಾಮನಗರ ಜಿಲ್ಲೆಯ ಬಿಡದಿ ಸಮೀಪದ ಕುಂಬಳಗೋಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮರಕ್ಕೆ … Continued

ಬೆಂಗಳೂರಲ್ಲಿ ಆಘಾತಕಾರಿ ಘಟನೆ ; ಬೆಳಗಿನ ವಾಕಿಂಗ್‌ ಗೆ ಹೊರಟಿದ್ದ ಮಹಿಳೆ ತಬ್ಬಿಹಿಡಿದು ಕಿರುಕುಳ ನೀಡಿದ ದುಷ್ಕರ್ಮಿ | ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಬೆಂಗಳೂರು : ಬೆಳಗಿನ ವಾಕಿಂಗ್‌ಗೆ ತೆರಳಿದ್ದ ಮಹಿಳೆಯೊಬ್ಬರಿಗೆ ಅಪರಿಚಿತ ವ್ಯಕ್ತಿಯೊಬ್ಬ ಕಿರುಕುಳ ನೀಡಿದ ಘಟನೆ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಆಗಸ್ಟ್ 2 ರಂದು ಬೆಳಗ್ಗೆ ಸುಮಾರು 5 ಗಂಟೆಗೆ ಈ ಘಟನೆ ನಡೆದಿದೆ ಎಂದು ಹೇಳಲಾಗಿದ್ದು, ಘಟನೆಯ ವೀಡಿಯೊ ವೈರಲ್‌ ಆಗಿದೆ. ವೀಡಿಯೊದಲ್ಲಿ ಮಹಿಳೆ ಮನೆಯೊಂದರ ಹೊರಗೆ ನಿಂತಿರುವುದನ್ನು ತೋರಿಸುತ್ತದೆ, ಆಗ ವ್ಯಕ್ತಿಯೊಬ್ಬ ಹಿಂದಿನಿಂದ ಆಕೆಯ … Continued

ಪಶ್ಚಿಮಘಟ್ಟದಲ್ಲಿ ಒತ್ತುವರಿ ತೆರವಿಗೆ ಕಾರ್ಯಪಡೆ ರಚನೆ ; ಇಂದಿನಿಂದ (ಆ.5) ಕಾರ್ಯಾಚರಣೆ ; ಮೊದಲು ಅಕ್ರಮ ರೆಸಾರ್ಟ್‌, ಹೋಂ ಸ್ಟೇಗಳ ತೆರವು

ಬೆಂಗಳೂರು: ರಾಜ್ಯದ ಪಶ್ಚಿಮಘಟ್ಟದಲ್ಲಿ ಒತ್ತುವರಿ ತೆರವು ಸಂಬಂಧ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಅರಣ್ಯ ಕಾರ್ಯಪಡೆ ಮುಖ್ಯಸ್ಥರ ನೇತೃತ್ವದಲ್ಲಿ ಕಾರ್ಯಪಡೆ ರಚಿಸಲಾಗಿದೆ. ಸೋಮವಾರದಿಂದ (ಆಗಸ್ಟ್‌ 5) ಒತ್ತುವರಿ ಕಾರ್ಯಾಚರಣೆ ಆರಂಭವಾಗಲಿದ್ದು, ಮೊದಲಿಗೆ ಅಕ್ರಮ ರೆಸಾರ್ಟ್‌, ಹೋಂ ಸ್ಟೇ ತೆರವಿಗೆ ಸೂಚಿಸಲಾಗಿದೆ. ಈ ಬಗ್ಗೆ ಪ್ರಕಣೆ ನೀಡಿರುವ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರು, ಮೊದಲು … Continued

ಸಿಎಂ ಸಿದ್ದರಾಮಯ್ಯ ವಿರುದ್ಧ ವಿಧಾನಸೌಧದ ಎದುರು ಧರಣಿ ಕುಳಿತ ಸಂಸದ ಕೋಟ ಶ್ರೀನಿವಾಸ ಪೂಜಾರಿ

ಬೆಂಗಳೂರು : ಭೋವಿ ನಿಗಮದ ಅವ್ಯವಹಾರ ಆರೋಪಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ವಿರುದ್ಧ ಮಾಡಿರುವ ಆರೋಪಗಳನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿ ಬಿಜೆಪಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಬೆಂಗಳೂರಿನಲ್ಲಿ ಇಂದು (ಸೋಮವಾರ) ವಿಧಾನಸೌಧದ ಮಹಾತ್ಮ ಗಾಂಧಿ ಪ್ರತಿಮೆ ಎದುರು ಧರಣಿ ನಡೆಸಿದರು. ತಮ್ಮ ವಿರುದ್ಧದ ಆರೋಪಗಳನ್ನು ಹಿಂಪಡೆಯಬೇಕು ಅಥವಾ ಪ್ರಕರಣವನ್ನು ಕೇಂದ್ರೀಯ ತನಿಖಾ ದಳಕ್ಕೆ … Continued

ಬೆಂಗಳೂರು-ಮಂಗಳೂರು ನಡುವೆ ಸಂಚರಿಸುವ ಎಲ್ಲ ರೈಲುಗಳು ಆಗಸ್ಟ್‌ 4ರ ವರೆಗೆ ರದ್ದು

ಮಂಗಳೂರು: ಎಡಕುಮೇರಿ ಹಾಗೂ ಕಡಗರವಳ್ಳಿ ನಡುವೆ ಸಂಭವಿಸಿದ ಭೂಕುಸಿತ ಹಿನ್ನೆಲೆಯಲ್ಲಿ ಆಗಸ್ಟ್‌ 4 ರವರೆಗೆ ಕರಾವಳಿಯಿಂದ ಬೆಂಗಳೂರಿಗೆ ತೆರಳುವ ಹಾಗೂ ಆಗಮಿಸುವ ರೈಲುಗಳನ್ನು ರದ್ದುಗೊಳಿಸಲಾಗಿದೆ. ಆಗಸ್ಟ್‌ 4ರವರೆಗೆ 14 ರೈಲುಗಳ ಸಂಚಾರ ರದ್ದು ಮಾಡಲಾಗಿದೆ. ಬೆಂಗಳೂರು – ಕಣ್ಣೂರು ಎಕ್ಸ್‌ಪ್ರೆಸ್‌ ರೈಲನ್ನು ಜುಲೈ 29 ರಿಂದ ಆಗಸ್ಟ್‌ 3 ರವರೆಗೆ, ಕಣ್ಣೂರು – ಬೆಂಗಳೂರು ಎಕ್ಸ್‌ಪ್ರೆಸ್‌ … Continued

ಮಾಧ್ಯಮಗಳ ಜೊತೆ ಮಾತನಾಡುವಾಗ ಎಚ್‌ ಡಿ ಕುಮಾರಸ್ವಾಮಿಗೆ ಮೂಗಿನಲ್ಲಿ ರಕ್ತಸ್ರಾವ : ತಕ್ಷಣವೇ ಆಸ್ಪತ್ರೆಗೆ ದಾಖಲು

 ಬೆಂಗಳೂರು: ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಭಾನುವಾರ ಇಲ್ಲಿ ನಡೆದ ಬಿಜೆಪಿ ಮತ್ತು ಜೆಡಿಎಸ್ ಮುಖಂಡರ ಸಮನ್ವಯ ಸಮಿತಿ ಸಭೆಯ ಬಳಿಕ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡುವಾಗ ಅವರ ಮೂಗಿನಿಂದ ರಕ್ತಸ್ರಾವ ಉಂಟಾಗಿದೆ. ತಕ್ಷಣವೇ ಕೇಂದ್ರ ಸಚಿವರನ್ನು ಇಲ್ಲಿನ ಜಯನಗರ ಬಡಾವಣೆಯಲ್ಲಿರುವ ಅಪೋಲೋ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅವರ ಪುತ್ರ ನಿಖಿಲ್ … Continued

ಪುನೀತ್ ಕೆರೆಹಳ್ಳಿಗೆ 14 ದಿನ ನ್ಯಾಯಾಂಗ ಬಂಧನ

ಬೆಂಗಳೂರು: ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಹಾಗೂ ಶಾಂತಿ ಸುವ್ಯವಸ್ಥೆಗೆ ಭಂಗ ತಂದ ಆರೋಪದ ಮೇಲೆ ಬಂಧನಕ್ಕೊಳಗಾಗಿದ್ದ ಹಿಂದೂ ಕಾರ್ಯಕರ್ತ ಪುನೀತ್ ಕೆರೆಹಳ್ಳಿಗೆ (Puneeth Kerehalli) 14 ದಿನ ನ್ಯಾಯಾಂಗ ಬಂಧನಕ್ಕೆ 5ನೇ ಎಸಿಎಂಎಂ ಕೋರ್ಟ್ ಆದೇಶಿಸಿದೆ. ಶನಿವಾರ ಕಾಟನ್ ಪೇಟೆ ಪೊಲೀಸರ ವಿಚಾರಣೆ ವೇಳೆ ಹೊಟ್ಟೆ ನೋವಿನಿಂದ ಏಕಾಏಕಿ ಕುಸಿದು ಬಿದ್ದಿದ್ದ ಪುನೀತ್‌ ಕೆರೆಹಳ್ಳಿ ಅವರನ್ನು … Continued