ಪುನೀತ್ ಕೆರೆಹಳ್ಳಿಗೆ 14 ದಿನ ನ್ಯಾಯಾಂಗ ಬಂಧನ

ಬೆಂಗಳೂರು: ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಹಾಗೂ ಶಾಂತಿ ಸುವ್ಯವಸ್ಥೆಗೆ ಭಂಗ ತಂದ ಆರೋಪದ ಮೇಲೆ ಬಂಧನಕ್ಕೊಳಗಾಗಿದ್ದ ಹಿಂದೂ ಕಾರ್ಯಕರ್ತ ಪುನೀತ್ ಕೆರೆಹಳ್ಳಿಗೆ (Puneeth Kerehalli) 14 ದಿನ ನ್ಯಾಯಾಂಗ ಬಂಧನಕ್ಕೆ 5ನೇ ಎಸಿಎಂಎಂ ಕೋರ್ಟ್ ಆದೇಶಿಸಿದೆ. ಶನಿವಾರ ಕಾಟನ್ ಪೇಟೆ ಪೊಲೀಸರ ವಿಚಾರಣೆ ವೇಳೆ ಹೊಟ್ಟೆ ನೋವಿನಿಂದ ಏಕಾಏಕಿ ಕುಸಿದು ಬಿದ್ದಿದ್ದ ಪುನೀತ್‌ ಕೆರೆಹಳ್ಳಿ ಅವರನ್ನು … Continued

ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ರಚನೆಗೆ ಸಚಿವ ಸಂಪುಟ ಅಸ್ತು…

ಬೆಂಗಳೂರು : ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳನ್ನು ಒಟ್ಟುಗೂಡಿಸಿ ‘ಗ್ರೇಟರ್‌ ಬೆಂಗಳೂರು ಪ್ರಾಧಿಕಾರ’ ರಚನೆ ಮಾಡಲು ಹಾಗೂ ಅದರಡಿ ನಗರ ಪಾಲಿಕೆಗಳನ್ನು ರಚಿಸಲು ಅವಕಾಶ ಕಲ್ಪಿಸುವ ‘ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ವಿಧೇಯಕ-2024ಕ್ಕೆ’ ಸೋಮವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ. ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ(BBMP), ಬೆಂಗಳೂರು ಮಹಾನಗರ ಪ್ರದೇಶಾಭಿವೃದ್ಧಿ ಪ್ರಾಧಿಕಾರ … Continued

ವಾಲ್ಮೀಕಿ ನಿಗಮ ಹಗರಣಕ್ಕೆ ಟ್ವಿಸ್ಟ್‌ : ಈಗ ಇ.ಡಿ ಅಧಿಕಾರಿಗಳ ವಿರುದ್ಧವೇ ಪ್ರಕರಣ ದಾಖಲು… !

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಸಚಿವ ಬಿ.ನಾಗೇಂದ್ರ ಹಾಗೂ ಇತರ ಕೆಲವರನ್ನು ಹೆಸರಿಸುವಂತೆ ಒತ್ತಡ ಹಾಕಿದ್ದಾರೆ ಎಂದು ಆರೋಪಿಸಿ ಜಾರಿ ನಿರ್ದೇಶನಾಲಯದ ಇಬ್ಬರು ಅಧಿಕಾರಿಗಳ ವಿರುದ್ಧ ರಾಜ್ಯದ ಹಿರಿಯ ಅಧಿಕಾರಿಯೊಬ್ಬರು ಪ್ರಕರಣ ದಾಖಲಿಸಿದ್ದಾರೆ. ಜಾರಿ ನಿರ್ದೇನಾಲಯ ಇಬ್ಬರು ಅಧಿಕಾರಿಗಳಾದ ಮಿತ್ತಲ್ ಹಾಗೂ ಕಣ್ಣನ್ ವಿರುದ್ಧ ನಗರದ ವಿಲ್ಸನ್ ಗಾರ್ಡನ್ ಠಾಣೆಯಲ್ಲಿ … Continued

ಹಿರಿಯ ಪತ್ರಕರ್ತ ಶಶಿಧರ ಭಟ್ಟರಿಗೆ ಅನಾರೋಗ್ಯ : ಚಿಕಿತ್ಸಾ ವೆಚ್ಚ ಸರ್ಕಾರ ಭರಿಸಲಿದೆ ಎಂದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಹಿರಿಯ ಪತ್ರಕರ್ತರಾದ ಶಶಿಧರ ಭಟ್ ಅವರು ಅನಾರೋಗ್ಯದಿಂದ ಆಸ್ಪತ್ರೆ ದಾಖಲಾಗಿದ್ದು, ಅವ ಆಸ್ಪತ್ರೆ ಪೂರ್ತಿ ಖರ್ಚನ್ನು ಸರ್ಕಾರವೇ ಭರಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಶಶಿಧರ ಭಟ್ ಅವರು ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದು, ಮೈಸೂರಿನ‌ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವಿಷಯ ತಿಳಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಶಿಧರ್‌ ಭಟ್‌ ಅವರ ಆರೋಗ್ಯ … Continued

ಬೆಂಗಳೂರಲ್ಲಿ ದಕ್ಷಿಣ ಭಾರತದ ಮೊದಲ ರೋಡ್-ಕಮ್-ರೈಲು ಮಾರ್ಗದ ಡಬ್ಬಲ್‌ ಡೆಕ್ಕರ್‌ ಫ್ಲೈ ಓವರ್‌ ಲೋಕಾರ್ಪಣೆ

ಬೆಂಗಳೂರು : ಬೆಂಗಳೂರಿನ ರಾಗಿಗುಡ್ಡದಲ್ಲಿ ದಕ್ಷಿಣ ಭಾರತದ ಅತಿ ಎತ್ತರದ ರೋಡ್-ಕಮ್-ರೈಲು ಮೇಲ್ಸೇತುವೆಯನ್ನು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ ಲೋಕಾರ್ಪಣೆ ಮಾಡಿದರು. 449 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡ ಡಬ್ಬಲ್‌ ಡೆಕ್ಕರ್‌ ಫ್ಲೈ ಓವರ್‌ ನ್ನು ನಿರ್ಮಾಣ ಮಾಡಲಾಗಿದ್ದು, ಇದು ರಾಗಿಗುಡ್ಡದಿಂದ ಸಿಲ್ಕ್ ಬೋರ್ಡ್‌ವರೆಗೆ ನಿರ್ಮಾಣವಾಗಿದೆ. ಡಬ್ಬಲ್ ಡೆಕ್ಕರ್‌ ಮೊದಲ ಫ್ಲೈ ಓವರ್‌ ಎರಡೂ ಬದಿಗಳಲ್ಲಿ ಎರಡು … Continued

ಬೆಂಗಳೂರು: ಪಂಚೆ ಹಾಕ್ಕೊಂಡು ಬಂದಿದ್ದಕ್ಕೆ ಮಾಲ್‌ ನಲ್ಲಿ ಒಳಗೆ ಬಿಡದ ಸಿಬ್ಬಂದಿ..!

ಬೆಂಗಳೂರು: ಬೆಂಗಳೂರು ನಗರದ ಮಾಲ್‌ ಒಂದರಲ್ಲಿ ರೈತನಿಗೆ ಅವಮಾನ ಮಾಡಿದ ಗಂಭೀರ ಆರೋಪ ಕೇಳಿ ಬಂದಿದೆ. ಪಂಚೆ ಹಾಕೊಂಡು ಬಂದಿದ್ದಕ್ಕೆ ರೈತನನ್ನು ಒಳಗೆ ಬಿಟ್ಟಿಲ್ಲ ಎಂಬ ಆರೋಪ ಕೇಳಿಬಂದಿದೆ. ಹಾವೇರಿ ಮೂಲದ ನಾಗರಾಜ ಎಂಬವರು ಮಂಗಳವಾರ (ಜುಲೈ 16) ನಗರದ ಮಾಗಡಿ ರಸ್ತೆಯಲ್ಲಿರುವ ಜಿಟಿ ಮಾಲ್ ಗೆ ತಂದೆ ಕರೆದುಕೊಂಡು ಹೋಗಿದ್ದರು. ನಾಗರಾಜ ಸಿನೆಮಾ ತೋರಿಸಲು … Continued

ಕೆಎಸ್‌ಆರ್‌ಟಿಸಿಯಿಂದ ಜೋಗ ಜಲಪಾತ, ಸೋಮನಾಥಪುರ ಮಾರ್ಗಗಳಲ್ಲಿ ಪ್ಯಾಕೇಜ್‌ ಟೂರ್‌…

ಬೆಂಗಳೂರು: ಕೆಎಸ್‌ಆರ್‌ಟಿಸಿ ಜೋಗ ಟೂರ್‌ ಪ್ಯಾಕೇಜ್‌ ಹಾಗೂ ಸೋಮನಾಥಪುರ ಟೂರ್‌ ಪ್ಯಾಕೇಜ್‌ ಮತ್ತು ರೂಪಿಸಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬೆಂಗಳೂರು ಕೇಂದ್ರೀಯ ವಿಭಾಗದ ವತಿಯಿಂದ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ “ಬೆಂಗಳೂರು –ಜೋಗ ಜಲಪಾತ” ವಯಾ ಶಿವಮೊಗ್ಗ, ಸಾಗರ ಮಾರ್ಗವಾಗಿ ನಾನ್‌ ಎಸಿ ಸ್ಲೀಪರ್‌ ವಾಹನದೊಂದಿಗೆ ವಾರಾಂತ್ಯದ ದಿನಗಳಲ್ಲಿ (ಶುಕ್ರವಾರ ಮತ್ತು ಶನಿವಾರ) ಪ್ಯಾಕೇಜ್ … Continued

ಕಾಪಿರೈಟ್ ಉಲ್ಲಂಘನೆ; ನಟ ರಕ್ಷಿತ್ ವಿರುದ್ಧ ಪ್ರಕರಣ ದಾಖಲು

ಬೆಂಗಳೂರು : ಕಾಪಿರೈಟ್ ಉಲ್ಲಂಘನೆ ಆರೋಪದಡಿ ಖ್ಯಾತ ನಟ ರಕ್ಷಿತ್ ಶೆಟ್ಟಿ ವಿರುದ್ಧ ಯಶವಂತಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಎರಡು ಚಿತ್ರದ ಹಾಡುಗಳನ್ನು ಅನುಮತಿ ಇಲ್ಲದೆ ಬಳಕೆ ಆರೋಪದಡಿಯಲ್ಲಿ ರಕ್ಷಿತ್ ಶೆಟ್ಟಿ ಅವರಿಗೆ ಸಂಕಷ್ಟ ಎದುರಾಗಿದೆ. ಎಂಆರ್‌ಟಿ ಮ್ಯೂಸಿಕ್‌ನ ಪಾಲುದಾರಿಕೆ ಹೊಂದಿರುವ ನವೀನಕುಮಾರ ಎಂಬವರು ’ಬ್ಯಾಚುಲರ್ ಪಾರ್ಟಿ ಸಿನಿಮಾದಲ್ಲಿನ ‘ನ್ಯಾಯ ಎಲ್ಲಿದೆ..’ ಹಾಗೂ ‘ಗಾಳಿಮಾತು … Continued

ರಾಷ್ಟ್ರೀಯ ವೈದ್ಯಕೀಯ ಆಯೋಗದ ಮುಖ್ಯಸ್ಥರಾಗಿ ಕನ್ನಡಿಗ ಡಾ.ಬಿ.ಎನ್.ಗಂಗಾಧರ ನೇಮಕ

ನವದೆಹಲಿ: ವೈದ್ಯಕೀಯ ಮೌಲ್ಯಮಾಪನ ಮತ್ತು ರೇಟಿಂಗ್ ಮಂಡಳಿಯ ಅಧ್ಯಕ್ಷ ಹಾಗೂ ನಿಮ್ಹಾನ್ಸ್‌ ಮಾಜಿ ನಿರ್ದೇಶಕರಾಗಿದ್ದ ಕನ್ನಡಿಗ ಡಾ ಬಿ.ಎನ್. ಗಂಗಾಧರ ಅವರನ್ನು ರಾಷ್ಟ್ರೀಯ ವೈದ್ಯಕೀಯ ಆಯೋಗದ (National Medical Commission) ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಕ್ಯಾಬಿನೆಟ್ ನೇಮಕಾತಿ ಸಮಿತಿಯು (ACC) ಎನ್‌ಎಂಸಿ (NMC) ಮತ್ತು ಸ್ವಾಯತ್ತ ಮಂಡಳಿಗಳ ಹುದ್ದೆಗಳಿಗೆ ವಿವಿಧ ವ್ಯಕ್ತಿಗಳನ್ನು ನೇಮಿಸಿದೆ. ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ … Continued

ಲೈಂಗಿಕ ದೌರ್ಜನ್ಯದ ಪ್ರಕರಣ : ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡರಿಗೆ ಜಾಮೀನು ಮಂಜೂರು

ಬೆಂಗಳೂರು : ಲೈಂಗಿಕ ದೌರ್ಜನ್ಯದ ಪ್ರಕರಣದಲ್ಲಿ ವಕೀಲ ಹಾಗೂ ಬಿಜೆಪಿ ಮುಖಂಡ ದೇವರಾಜೇಗೌಡರಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಜಾಮೀನು ಕೋರಿ ದೇವರಾಜೇಗೌಡ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಜಿ.ಉಮಾ ಅವರಿದ್ದ ನ್ಯಾಯಪೀಠ ಜಾಮೀನು ನೀಡಿ ಆದೇಶಿಸಿದೆ. ಸಾಕ್ಷ್ಯಗಳ ನಾಶ ಮಾಡಬಾರದು, ನ್ಯಾಯಾಲಯದ ವ್ಯಾಪ್ತಿಯಿಂದ ಹೊರ ಹೋಗಬಾರದು ಮತ್ತು ಇಬ್ಬರು ಶ್ಯೂರಿಟಿ ನೀಡಬೇಕು ಎಂಬುದಾಗಿ … Continued