ರೇಣುಕಾಸ್ವಾಮಿ ಕೊಲೆ ಪ್ರಕರಣ : ನಟ ದರ್ಶನ್‌, ಪವಿತ್ರಾ ಗೌಡ ಸೇರಿ ಆರೋಪಿಗಳು 6 ದಿನ ಪೊಲೀಸ್‌ ಕಸ್ಟಡಿಗೆ

ಬೆಂಗಳೂರು : ಬೆಂಗಳೂರಿನಲ್ಲಿ ಚಿತ್ರದುರ್ಗದ ರೇಣುಕಾಸ್ವಾಮಿ ಅವರ ಕೊಲೆ ಪ್ರಕರಣದಲ್ಲಿ ಆರೋಪಿಗಳಾಗಿರುವ ನಟ ದರ್ಶನ್‌, ಅವರ ಗೆಳತಿ ಪವಿತ್ರ ಗೌಡ ಸೇರಿ 13 ಜನರನ್ನು ಬೆಂಗಳೂರಿನ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯವು ಮಂಗಳವಾರ ಆರು ದಿನಗಳ ಕಾಲ ಪೊಲೀಸ್‌ ಕಸ್ಟಡಿಗೆ ನೀಡಿದೆ. ಎಲ್ಲಾ ಆರೋಪಿಗಳನ್ನು ಕಾಮಾಕ್ಷಿ ಪಾಳ್ಯ ಠಾಣೆಯ ಪೊಲೀಸರು ಬೆಂಗಳೂರಿನ 24ನೇ ಹೆಚ್ಚುವರಿ ಮೆಟ್ರೊಪಾಲಿಟನ್‌ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯದ … Continued

ರೇಣುಕಾ ಸ್ವಾಮಿ ಕೊಲೆ ಪ್ರಕರಣ : ನಟ ದರ್ಶನ್‌ ಬಂಧನದ ಬೆನ್ನಲ್ಲೇ ಸ್ನೇಹಿತೆ ನಟಿ ಪವಿತ್ರಾ ಗೌಡ ಪೊಲೀಸ್‌ ವಶಕ್ಕೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಎಂಬ ಯುವಕನನ್ನು ಕೊಲೆ ಮಾಡಿದ ಆರೋಪದಲ್ಲಿ ಸ್ಯಾಂಡಲ್‌ವುಡ್‌ ಖ್ಯಾತ ನಟ, ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ (Actor Darshan) ಅವರನ್ನು ಪೊಲೀಸರು ಬಂಧಿಸಿದ ಬೆನ್ನಲ್ಲೇ ನಟ ದರ್ಶನ್‌ ಗೆಳತಿ ನಟಿ ಪವಿತ್ರ ಗೌಡ (Pavithra Gowda) ಅವರನ್ನೂ ಪೊಲೀಸರು ವಶಪಡಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ. ರೇಣುಕಾಸ್ವಾಮಿ ಹತ್ಯೆಯ ಹಿಂದೆ ಒಳಸಂಚು ರೂಪಿಸಿದ ಆರೋಪದಲ್ಲಿ ಪೊಲೀಸರು … Continued

ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಂಧನ

ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಸ್ಯಾಂಡಲ್ ವುಡ್ ಸ್ಟಾರ್ ನಟ ದರ್ಶನ್ ಸೇರಿ 10 ಮಂದಿಯನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಇಂದು, ಮಂಗಳವಾರ ಬೆಳಗ್ಗೆ ಮೈಸೂರಿನ ತೋಟದ ಮನೆಯಲ್ಲಿ ದರ್ಶನ್‌ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಕಾಮಾಕ್ಷಿಪಾಳ್ಯದಲ್ಲಿ ನಡೆದ ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಎನ್ನುವವರ ಕೊಲೆ ಪ್ರಕರಣದಲ್ಲಿ ಆರೋಪಿಯನ್ನಾಗಿಸಿ ನಟ ದರ್ಶನ್‌ … Continued

ಪರಿಷತ್​ ಪದವೀಧರ-ಶಿಕ್ಷಕರ ಕ್ಷೇತ್ರಗಳ ಚುನಾವಣೆ:: 3ರಲ್ಲಿ ಕಾಂಗ್ರೆಸ್, 3ರಲ್ಲಿ ಬಿಜೆಪಿ-ಜೆಡಿಎಸ್​ ಮೈತ್ರಿಗೆ ಗೆಲುವು ; ಕಾಂಗ್ರೆಸ್ಸಿಗೆ ಲಾಭ, ಬಿಜೆಪಿಗೆ ನಷ್ಟ

ಬೆಂಗಳೂರು : ಮೂರು ಶಿಕ್ಷಕರ ಕ್ಷೇತ್ರ ಹಾಗೂ ಮೂರು ಪದವೀಧರ ಕ್ಷೇತ್ರಗಳು ಸೇರಿದಂತೆ ಒಟ್ಟು ವಿಧಾನ ಪರಿಷತ್‌ ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌ ೩ ಹಾಗೂ ಬಿಜೆಪಿ-ಜೆಡಿಎಸ್‌ ಮೈತ್ರಿ ಮೂರು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ಬೆಂಗಳೂರು ವ್ಯಾಪ್ತಿಯ ಒಂದು ಪದವೀಧರ ಮತ್ತು ಒಂದು ಶಿಕ್ಷಕರ ಕ್ಷೇತ್ರವನ್ನು ಬಿಜೆಪಿ ಕಳೆದುಕೊಂಡು ಬಿಜೆಪಿ ಹಿನ್ನಡೆ ಅನುಭವಿಸಿದೆ. ಇಲ್ಲಿ ಕಾಂಗ್ರೆಸ್ … Continued

ಬಿಜೆಪಿ ವಿರುದ್ಧ ಸುಳ್ಳು ಜಾಹೀರಾತು​ ಆರೋಪ; ರಾಹುಲ್​ ಗಾಂಧಿಗೆ ಜಾಮೀನು

ಬೆಂಗಳೂರು: 2022ರಲ್ಲಿ ಬಿಜೆಪಿ ಸರ್ಕಾರದ ವಿರುದ್ಧ 40% ಕಮಿಷನ್​ ಆರೋಪ ಮಾಡಿ ಜಾಹೀರಾತು ಪ್ರಕಟಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಕಳೆದ ವರ್ಷ ವಿಧಾನಸಭಾ ಚುನಾವಣೆಯ ಮುನ್ನ ಜಾಹೀರಾತಿನಲ್ಲಿ ರಾಜ್ಯದ ಬಿಜೆಪಿ ಸರ್ಕಾರವು ತನ್ನ 2019-2023 ರ ಆಡಳಿತದಲ್ಲಿ ಎಲ್ಲ ಸಾರ್ವಜನಿಕ ಕೆಲಸ … Continued

ಮುಂದಿನ ನಾಲ್ಕೈದು ದಿನ ಕರ್ನಾಟಕದ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು: ಮುಂದಿನ ನಾಲ್ಕೈದು ದಿನಗಳ ಕಾಲ ರಾಜ್ಯದ 17 ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ವಿಜಯಪುರ ಬಳ್ಳಾರಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ಗ್ರಾಮಾಂತರ, ಬೆಂಗಳೂರು … Continued

ಬೆಂಗಳೂರಿನಲ್ಲಿ 133 ವರ್ಷಗಳ ಬಳಿಕ ಸುರಿದ ದಾಖಲೆ ಮಳೆ..!

ಬೆಂಗಳೂರು: ಬೆಂಗಳೂರಿನಲ್ಲಿ ಭಾನುವಾರ 11.1 ಸೆಂಮೀ ಮಳೆಯಾಗಿದ್ದು, ಜೂನ್‌ ತಿಂಗಳಲ್ಲಿ ಒಂದೇ ದಿನ ಸುರಿದ ಈ ಭಾರೀ ಮಳೆ 133 ವರ್ಷಗಳ ದಾಖಲೆಯನ್ನು ಮುರಿದಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಜೂನ್ 2 ರಂದು ಸರಿದ ಮಳೆ ಕಳೆದ 133 ವರ್ಷಗಳಲ್ಲಿ ಜೂನ್‌ನಲ್ಲಿ ಒಂದೇ ದಿನದಲ್ಲಿ ಸುರಿದ ಅತಿ ಹೆಚ್ಚು ಮಳೆಯಾಗಿದೆ ಎಂದು ಬೆಂಗಳೂರಿನ … Continued

ಬೆಂಗಳೂರಲ್ಲಿ ರೇವ್ ಪಾರ್ಟಿ ಪ್ರಕರಣ: ತೆಲುಗು ನಟಿ ಹೇಮಾ ಅರೆಸ್ಟ್

ಬೆಂಗಳೂರು: ರೇವ್ ಪಾರ್ಟಿಯಲ್ಲಿ (Rave Party) ಮಾದಕ ವಸ್ತು ಸೇವಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲುಗು ನಟಿ ಹೇಮಾ (Telugu actress Hema) ಅವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಸೋಮವಾರ ಚಾಮರಾಜಪೇಟೆ ಬಳಿ ಇರುವ ಸಿಸಿಬಿ ಕಚೇರಿಗೆ ನಟಿ ಹೇಮಾ ಹಾಜರಾಗಿದ್ದು, ಈ ವೇಳೆ ಅವರನ್ನು ಸಿಸಿಬಿ ತನಿಖಾಧಿಕಾರಿಗಳು ಬಂಧಿಸಿದ್ದಾರೆ. ರೇವ್‌ ಪಾರ್ಟಿಯಲ್ಲಿ ಡ್ರಗ್ಸ್ ಸೇವನೆಗೆ ಸಂಬಂಧಿಸಿದಂತೆ … Continued

ಬೆಂಗಳೂರಲ್ಲಿ ಬಿರುಗಾಳಿ ಸಹಿತ ಧಾರಾಕಾರ ಮಳೆ ; ನಮ್ಮ ಮೆಟ್ರೋ ಹಳಿ ಮೇಲೆ ಬಿದ್ದ ಮರ

ಬೆಂಗಳೂರು: ಬೆಂಗಳೂರು ನಗರದಲ್ಲಿ ಭಾನುವಾರ ಸಂಜೆ ಧಾರಾಕಾರವಾಗಿ ಮಳೆಯಾಗಿದ್ದು, ರಸ್ತೆಗಳು ಜಲಾವೃತವಾಗಿವೆ. ಭಾನುವಾರ ನಗರದಲ್ಲಿ ಭರ್ಜರಿಯಾಗಿಯೇ ಮಳೆಯಾಗಿದೆ. ಬಿರುಗಾಳಿ ಸಹಿತ ಮಳೆಯಾಗಿದ್ದು, ಹಲವೆಡೆ ಜಲಾವೃತವಾಗಿದೆ. ಮೆಟ್ರೋ ಹಳಿ ಮೇಲೆ ಮರ ಬಿದ್ದು ಇಂದಿರಾನಗರ ಮಾರ್ಗದಲ್ಲಿ ಸಂಚಾರ ಸ್ಥಗಿತವಾಗಿದೆ. ಬೆಂಗಳೂರಿನ ಮೆಜೆಸ್ಟಿಕ್, ಕೆ.ಆರ್.ಮಾರ್ಕೆಟ್ , ಕಾರ್ಪೊರೇಷನ್, ವಿಧಾನಸೌಧ, ಟೌನ್‌ ಹಾಲ್, ಶಿವಾಜಿನಗರ, ರಾಜಾಜಿನಗರ, ಮಲ್ಲೇಶ್ವರಂ, ಯಶವಂತಪುರ, ಶಾಂತಿನಗರ, … Continued

ಬೆಂಗಳೂರು : ವಿಮಾನ ಇಳಿಯುತ್ತಿದ್ದಂತೆ ಪ್ರಜ್ವಲ್ ರೇವಣ್ಣರನ್ನು ವಶಕ್ಕೆ ಪಡೆದ ಎಸ್‌ಐಟಿ ಅಧಿಕಾರಿಗಳು

ಬೆಂಗಳೂರು: ಅಶ್ಲೀಲ ವಿಡಿಯೋ ಬಹಿರಂಗಗೊಂಡ ಬೆನ್ನಲ್ಲೇ ವಿದೇಶಕ್ಕೆ ಪರಾರಿಯಾಗಿದ್ದ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಜರ್ಮನಿಯ ಮ್ಯೂನಿಕ್ ನಿಂದ ಬೆಂಗಳೂರಿಗೆ ಆಗಮಿಸಿದ್ದು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎಸ್ಐಟಿ ಅಧಿಕಾರಿಗಳು ಅವರನ್ನು ಬಂಧಿಸಿದ್ದಾರೆ. ಕೆಲ ದಿನಗಳ ಹಿಂದೆ ಪ್ರಜ್ವಲ್ ರೇವಣ್ಣ ಅವರು ವೀಡಿಯೊ ಬಿಡುಗಡೆ ಮಾಡಿ ತಾನು ಮೇ 31ರಂದು ಬೆಂಗಳೂರಿಗೆ ಆಗಮಿಸುವುದಾಗಿ ಹೇಳಿದ್ದರು. ಅಲ್ಲದೆ … Continued