ಸಿಎಂ ಹಾಗೂ ನನ್ನ ವಿರುದ್ಧ ಕೇರಳದಲ್ಲಿ ಅಘೋರಿಗಳ ಮೂಲಕ ಶತ್ರು ಭೈರವಿ ಯಾಗ ಮಾಡಲಾಗ್ತಿದೆ : ಡಿಕೆ ಶಿವಕುಮಾರ ಹೊಸ ಬಾಂಬ್…!

ಬೆಂಗಳೂರು: ರಾಜ್ಯದ ರಾಜಕೀಯ ಮುಖಂಡರೊಬ್ಬರು ನನ್ನ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕೇರಳದಲ್ಲಿ ಶತ್ರು ಭೈರವಿ ಯಾಗ ಮಾಡಿಸುತ್ತಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಗಂಭೀರ ಆರೋಪ ಮಾಡಿದ್ದಾರೆ. ದೆಹಲಿಯಿಂದ ವಾಪಸ್​ ಆದ ಬಳಿಕ ಸದಾಶಿವನಗರ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೇರಳದಲ್ಲಿ ನನ್ನ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ನಮ್ಮ ಸರ್ಕಾರದ ವಿರುದ್ಧ ದೊಡ್ಡ ಪೂಜೆ … Continued

ವೀಡಿಯೊ ಬಿಡುಗಡೆ ಮಾಡಿದ ಬೆನ್ನಲ್ಲೇ ಬೆಂಗಳೂರಿಗೆ ವಿಮಾನ ಟಿಕೆಟ್ ಬುಕ್ ಮಾಡಿದ ಪ್ರಜ್ವಲ್ ರೇವಣ್ಣ…!

ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯಾಗಿರುವ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಮೇ 31ರಂದು ಜರ್ಮನಿಯಿಂದ ಭಾರತಕ್ಕೆ ಬರಲು ವಿಮಾನದ ಟಿಕೆಟ್‌ ಬುಕ್‌ ಆಗಿದೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ. ವಿಶೇಷ ತನಿಖಾ ತಂಡದ (ಎಸ್‌ಐಟಿ) ಎದುರು ವಿಚಾರಣೆಗೆ ಮೇ 31ರಂದು ಹಾಜರಾಗುವುದಾಗಿ ತಿಳಿಸಲು ಅಜ್ಞಾತ ಸ್ಥಳದಿಂದ ವೀಡಿಯೊ ಬಿಡುಗಡೆ ಮಾಡಿದ್ದ ಪ್ರಜ್ವಲ್‌ ರೇವಣ್ಣ, … Continued

ಯಡಿಯೂರಪ್ಪ ವಿರುದ್ಧ ಪೋಕ್ಸೋ ದಾಖಲಿಸಿದ್ದ ಮಹಿಳೆ ಸಾವು

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ನಾಯಕ ಬಿ. ಎಸ್. ಯಡಿಯೂರಪ್ಪ ಅವರ ವಿರುದ್ಧ ಲೈಂಗಿಕ ದೌರ್ಜನ್ಯದ ದೂರು ದಾಖಲಿಸಿದ್ದ ಮಹಿಳೆ ಮೃತಪಟ್ಟಿದ್ದಾರೆ. 17 ವರ್ಷದ ತಮ್ಮ ಪುತ್ರಿ ಮೇಲೆ ಯಡಿಯೂರಪ್ಪ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ಮಹಿಳೆ ಬೆಂಗಳೂರಿನ ಸದಾಶಿವ ನಗರ ಠಾಣೆಗೆ ದೂರು ನೀಡಿದ್ದರು. ದೂರು ಆಧರಿಸಿ ಮಾರ್ಚ್‌ 14ರಂದು ಯಡಿಯೂರಪ್ಪ … Continued

ಬೆಂಗಳೂರು : ಮೋದಿ ವಿರುದ್ಧ ವಿಶೇಷ ನ್ಯಾಯಾಲಯದಲ್ಲಿ ಖಾಸಗಿ ದೂರು

ಬೆಂಗಳೂರು : ಮುಸ್ಲಿಮರನ್ನು ನುಸುಳುಕೋರರು ಎಂದು ಕರೆದಿದ್ದ ಹಾಗೂ “ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ, ಅದು ದೇಶದ ಜನರ ಸಂಪತ್ತನ್ನು ಮುಸ್ಲಿಮರಿಗೆ ಮರು ಹಂಚಿಕೆ ಮಾಡುತ್ತದೆ ” ಎಂದು ಪ್ರಚೋದನಾಕಾರಿ ಚುನಾವಣಾ ಭಾಷಣ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯದಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಖಾಸಗಿ ದೂರು ದಾಖಲಾಗಿದೆ. ಪ್ರಧಾನಿಯ ಭಾಷಣವು … Continued

ಬಿಜೆಪಿಯಿಂದ ಮಾಜಿ ಶಾಸಕ ರಘುಪತಿ ಭಟ್​ ಉಚ್ಚಾಟನೆ

ಬೆಂಗಳೂರು: ವಿಧಾನ ಪರಿಷತ್ ಚುನಾವಣೆಗೆ ನೈರುತ್ಯ ಪರವೀಧರರ ಕ್ಷೇತ್ರದಿಂದ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಮಾಜಿ ಶಾಸಕ ರಘುಪತಿ ಭಟ್ ಅವರನ್ನು ಬಿಜೆಪಿಯಿಂದ ಆರು ವರ್ಷಗಳ ಕಾಲ ಉಚ್ಚಾಟಿಸಲಾಗಿದೆ. ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷರಾದ ಲಿಂಗರಾಜ ಪಾಟೀಲ್ ಉಚ್ಚಾಟನೆ ಆದೇಶ ಹೊರಡಿಸಿದ್ದಾರೆ. ಬಿಜೆಪಿ(BJP) ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ನೈಋತ್ಯ ಪದವೀಧರ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ರಘುಪತಿ … Continued

ಬೆಂಗಳೂರು ರೇವ್ ಪಾರ್ಟಿ ಪ್ರಕರಣ: ತೆಲುಗು ನಟಿ ಸೇರಿ 86 ಮಂದಿ ಡ್ರಗ್ಸ್ ಸೇವನೆ ದೃಢ

ಬೆಂಗಳೂರು:  ಬೆಂಗಳೂರು ಹೊರ ವಲಯದ ಫಾರ್ಮ್‌ಹೌಸ್‌ನಲ್ಲಿ ನಡೆದ ರೇವ್ ಪಾರ್ಟಿಯಲ್ಲಿ ಭಾಗವಹಿಸಿದ್ದವರ ರಕ್ತದ ಮಾದರಿಗಳ ಫಲಿತಾಂಶ ಬಂದಿದ್ದು, ತೆಲುಗು ಚಿತ್ರರಂಗದ ನಟಿ ಸೇರಿದಂತೆ 86 ಮಂದಿ ಮಾದಕ ದ್ರವ್ಯ ಸೇವಿಸಿರುವುದು ದೃಢಪಟ್ಟಿದೆ ಎಂದು ಗುರುವಾರ ಪೊಲೀಸ್ ಮೂಲಗಳು ತಿಳಿಸಿವೆ. ಮೂಲಗಳ ಪ್ರಕಾರ ಜನ್ಮದಿನದ ಪಾರ್ಟಿ ನೆಪದಲ್ಲಿ ಆಯೋಜಿಸಲಾಗಿದ್ದ ರೇವ್ ಪಾರ್ಟಿಯಲ್ಲಿ ಒಟ್ಟು 103 ಮಂದಿ ಪಾಲ್ಗೊಂಡಿದ್ದರು. … Continued

ಬೆಂಗಳೂರಿನ ಮೂರು ಪ್ರತಿಷ್ಠಿತ ಹೋಟೆಲ್​ಗಳಿಗೆ ಬಾಂಬ್​ ಬೆದರಿಕೆ

ಬೆಂಗಳೂರು : ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಒಟೆರಾ ಹೋಟೆಲ್ ಸೇರಿದಂತೆ ಮೂರು ಪ್ರತಿಷ್ಠಿತ ಹೋಟೆಲ್‌ಗಳಿಗೆ ಬಾಂಬ್ ಬೆದರಿಕೆಯ ಇಮೇಲ್ ಕಳುಹಿಸಲಾಗಿದ್ದು, ಅಧಿಕಾರಿಗಳು ಶೋಧ ಕಾರ್ಯಾಚರಣೆ ಪ್ರಾರಂಭಿಸಿದ್ದಾರೆ. ಆಗ್ನೇಯ ಬೆಂಗಳೂರು ಡಿಸಿಪಿ ಪ್ರಕಾರ, ಪೊಲೀಸರು, ಬಾಂಬ್ ಸ್ಕ್ವಾಡ್ ಮತ್ತು ಸ್ನಿಫರ್ ಡಾಗ್‌ಗಳನ್ನು ಹೊಟೇಲ್‌ಗಳಿಗೆ ಕಳುಹಿಸಲಾಗಿದೆ. ಮಧ್ಯರಾತ್ರಿ 2 ಗಂಟೆಗೆ ಬಾಂಬ್​ ಸ್ಫೋಟಿಸುವುದಾಗಿ ಹೇಳಲಾಗಿದೆ. ಗುರುವಾರ ಬೆಳಗ್ಗೆ ಹೋಟೆಲ್ … Continued

ಬೆಂಗಳೂರು: ಮದುವೆ ಮನೆಯಲ್ಲಿ ಲಿಕ್ವಿಡ್ ನೈಟ್ರೋಜನ್ ಪಾನ್‌ ತಿಂದ ಬಾಲಕಿಯ ಹೊಟ್ಟೆಯಲ್ಲಿ ರಂಧ್ರ…!

ಬೆಂಗಳೂರು: ನಗರದ ಬಾಲಕಿಯೊಬ್ಬಳು ಸಮಾರಂಭದಲ್ಲಿ ನೀಡಿದ್ದ ಲಿಕ್ವಿಡ್ ನೈಟ್ರೋಜನ್ (ಬಾಯಲ್ಲಿ ಹಾಕಿದ ಕೂಡಲೇ ಹೊಗೆ ತರಿಸುವ) ತುಂಬಿದ ಪಾನ್ ಸೇವಿಸಿ ಹೊಟ್ಟೆಯಲ್ಲಿ ರಂಧ್ರವಾಗಿದೆ ಎಂದು ವರದಿಯಾಗಿದೆ. ಈ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಎಚ್‌ಎಸ್‌ಆರ್‌ ಲೇಔಟ್‌ನಲ್ಲಿ ನಡೆದಿದೆ. ಸಂಬಂಧಿಕರ ಮದುವೆಯ ಆರತಕ್ಷತೆ ಸಮಾರಂಭದಲ್ಲಿ 12 ವರ್ಷದ ಬಾಲಕಿಯೊಬ್ಬಳು ಲಿಕ್ವಿಡ್ ನೈಟ್ರೋಜನ್ ತುಂಬಿದ ಪಾನ್ ಸೇವಿಸಿದ್ದಳು. ಕೆಲ … Continued

ಬೈಲಹೊಂಗಲ ಶಾಸಕರ ಕಾರು ಅಪಘಾತ

ಬೆಂಗಳೂರು : ವಿಧಾನಸೌಧದ ಮುಂಭಾಗದಲ್ಲೇ ಬೈಲಹೊಂಗಲ ಶಾಸಕ ಮಹಂತೇಶ ಕೌಜಲಗಿ ಕಾರು ಅಪಘಾತವಾಗಿರುವ ಘಟನೆ ನಡೆದಿದೆ. ಶಾಸಕರ ಭವನದಿಂದ ಹೊರಟಿದ್ದ ಶಾಸಕ ಮಹಂತೇಶ್ ಕೌಜಲಗಿ ಅವರ ಕಾರು, ವಿಧಾನಸೌಧದಿಂದ‌ ಹೊರಕ್ಕೆ ಬರುತ್ತಿದ್ದಂತೆ ವಾಹನ ಢಿಕ್ಕಿ ಹೊಡೆದಿದೆ. ವಿಧಾನಸೌಧದ ಹತ್ತಿರ ಅತೀವೇಗವಾಗಿ ಬಂದ ಪೊಲೋ ಕಾರು ಶಾಸಕರ ಭವನದಿಂದ ಬಂದ ಮಹಾಂತೇಶ್‌ ಅವರ ಕಾರಿಗೆ ಗುದ್ದಿದೆ ಎನ್ನಲಾಗಿದೆ. … Continued

ಮಹಿಳೆ ಅಪಹರಣ ಪ್ರಕರಣ : ಶಾಸಕ ಎಚ್‌.ಡಿ. ರೇವಣ್ಣಗೆ ಜಾಮೀನು ಮಂಜೂರು

ಬೆಂಗಳೂರು: ಮಹಿಳೆ ಅಪಹರಣ ಪ್ರಕರಣದಲ್ಲಿ ಮಾಜಿ ಸಚಿವ ಜಹಾಗೂ ಜೆಡಿಎಸ್‌ ಶಾಸಕ ಎಚ್‌.ಡಿ ರೇವಣ್ಣ (HD Revanna) ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಇಂದು ಸೋಮವಾರ ಬೆಳಗ್ಗೆಯಿಂದ ಸಂಜೆಯವರೆಗೆ ಕೋರ್ಟ್‌ ಸುಧೀರ್ಘ ವಿಚಾರಣೆ ನಡೆಸಿ ವಾದ-ಪ್ರತಿವಾದಗಳನ್ನು ಆಲಿಸಿದ ನಂತರ ಜಾಮೀನು ಮಂಜೂರು ಮಾಡಿದೆ. ಶಾಸಕರು- ಸಂಸದರ ವಿರುದ್ಧದ ಕ್ರಿಮಿನಲ್‌ ಪ್ರಕರಣಗಳ ವಿಚಾರಣೆಯ … Continued