ಬೆಂಗಳೂರು: ನಟ ಚೇತನ್ ಚಂದ್ರ ಮೇಲೆ ಹಲ್ಲೆ

ಬೆಂಗಳೂರು: ಕನ್ನಡ ನಟ ಚೇತನ್ ಚಂದ್ರ (Chetan Chandra) ಅವರ ಮೇಲೆ ಹಲ್ಲೆ ಮಾಡಿದ ಘಟನೆ ನಗರದ ಕನಕಪುರ ರಸ್ತೆಯ ಕಗ್ಗಲಿಪುರದಲ್ಲಿ ಭಾನುವಾರ ನಡೆದಿದೆ ಎಂದು ವರದಿಯಾಗಿದೆ. ಕಾರಿನಲ್ಲಿದ್ದ ಬರುತ್ತಿದ್ದಾಗ ಕಾರನ್ನು ಅಡ್ಡಗಟ್ಟಿ ತನಗೆ ಮೇಲೆ ರಕ್ತ ಬರುವಂತೆ ಥಳಿಸಲಾಗಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ನಟ ಚೇತನ್ ಚಂದ್ರ ಅವರೇ ಮಾಹಿತಿ ಹಂಚಿಕೊಂಡಿದ್ದಾರೆ. ತನ್ನ ಮೇಲೆ … Continued

ಕೆಎಎಸ್ ಅಧಿಕಾರಿ ಪತ್ನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ; ಕಾರಣ ನಿಗೂಢ

ಬೆಂಗಳೂರು: ಕೆಎಎಸ್ ಅಧಿಕಾರಿ ಪತ್ನಿಯಾಗಿರುವ ಹೈಕೋರ್ಟ್‌ ವಕೀಲರಾದ ಚೈತ್ರಾಗೌಡ ಮೃತದೇಹ ಶನಿವಾರ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಆತ್ಮಹತ್ಯೆ ಮಾಡಿಕೊಂಡ ಶಂಕೆ ವ್ಯಕ್ತವಾಗಿದೆ. ಕೆಎಎಸ್ ಅಧಿಕಾರಿ ಶಿವಕುಮಾರ ಅವರ ಪತ್ನಿ ಚೈತ್ರಾಗೌಡ ಅವರು ಇಂದು, ಶನಿವಾರ ಸಂಜಯ ​ನಗರದಲ್ಲಿರುವ ತಮ್ಮ ನಿವಾಸದಲ್ಲಿ ಫ್ಯಾನ್​​ಗೆ ನೇಣುಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಮನೆಯಲ್ಲಿ ಯಾವುದೇ ಡೆತ್​​ನೋಟ್ ಪತ್ತೆಯಾಗಿಲ್ಲ. ಹೀಗಾಗಿ … Continued

ಎಚ್.ಡಿ ರೇವಣ್ಣ ಬೆಂಗಳೂರಿನಲ್ಲಿ ಆಸ್ಪತ್ರೆಗೆ ದಾಖಲು

ಬೆಂಗಳೂರು: ಮಹಿಳೆ ಕಿಡ್ನಾಪ್ ಪ್ರಕರಣದಲ್ಲಿ ಎ1 ಆರೋಪಿಯಾಗಿರುವ ಮಾಜಿ ಸಚಿವ ಎಚ್.ಡಿ ರೇವಣ್ಣ (HD Revanna) ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಅವರನ್ನು ವಿಕ್ಟೋರಿಯಾ ಆಸ್ಪತ್ರೆಯಲ್ಲಿ (Victoria Hospital) ದಾಖಲು ಮಾಡಲಾಗಿದೆ. ಮಹಿಳೆ ಕಿಡ್ನಾಪ್ ಪ್ರಕರಣದಲ್ಲಿ ಎಸ್‌ಐಟಿ ವಶದಲ್ಲಿರುವ ರೇವಣ್ಣ ಅವರಿಗೆ ಎದೆನೋವು ಹಾಗೂ ಹೊಟ್ಟೆ ಉರಿ ಹಾಗೂ ಹೆಚ್ಚಾದ ಹಿನ್ನೆಲೆಯಲ್ಲಿ … Continued

ಮೇ 7ರ ಚುನಾವಣೆ ಬಳಿಕ ಪ್ರಜ್ವಲ್ ರೇವಣ್ಣ ಭಾರತಕ್ಕೆ ?

ಬೆಂಗಳೂರು : ವಿದೇಶದಲ್ಲಿರುವ ಲೈಂಗಿಕ ದೌರ್ಜನ್ಯ ವೀಡಿಯೊದ ಪ್ರಕರಣ ಪ್ರಮುಖ ಆರೋಪಿ ಸಂಸದ ಪ್ರಜ್ವಲ್‌ ರೇವಣ್ಣ ಅವರು ಮೇ 7ರಂದು ರಾಜ್ಯದಲ್ಲಿ ಲೋಕಸಭೆ ಚುನಾವಣೆಯ ಎರಡನೇ ಹಂತದ ಮತದಾನ ಮುಗಿದ ನಂತರ ಭಾರತಕ್ಕೆ ವಾಪಸಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಕರ್ನಾಟಕದಲ್ಲಿ ಮೊದಲ ಹಂತದ ಚುನಾವಣೆ ಮುಗಿದ ದಿನವೇ, ಅಂದರೆ ಏಪ್ರಿಲ್ 26ರ ಮಧ್ಯರಾತ್ರಿಯೇ ಪ್ರಜ್ವಲ್‌ … Continued

ಮಹಿಳೆ ಅಪಹರಣ ಪ್ರಕರಣ: ಶಾಸಕ ಎಚ್. ಡಿ. ರೇವಣ್ಣ ಮೇ 8ರ ವರೆಗೆ ಎಸ್ ಐಟಿ ವಶಕ್ಕೆ

ಬೆಂಗಳೂರು : ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಮಾಜಿ ಸಚಿವ ಎಚ್‌.ಡಿ. ರೇವಣ್ಣ ಅವರನ್ನು ನ್ಯಾಯಾಲಯ ಮೇ ೮ರ ವರೆಗೆ ಸಿಐಡಿ ಎಸ್‌ಐಟಿ (ವಿಶೇಷ ತನಿಖಾ ತಂಡದ) ವಶಕ್ಕೆ ನೀಡಿದೆ. ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರ ಪುತ್ರ ಹಾಗೂ ಶಾಸಕ ರೇವಣ್ಣ ಅವರನ್ನು ಕೋರಮಂಗಲದಲ್ಲಿರುವ ಹದಿನೇಳನೇ ಎಸಿಎಂಎಂ ನ್ಯಾಯಾಲಯದ ನ್ಯಾಯಾಧೀಶ ರವೀಂದ್ರ ಕುಮಾರ ಎಂ … Continued

ನನ್ನ ವಿರುದ್ಧ ರಾಜಕೀಯ ಷಡ್ಯಂತ್ರ, ಸುಳ್ಳು ಪ್ರಕರಣ ದಾಖಲು : ಬಂಧನದ ನಂತರ ರೇವಣ್ಣ ಮೊದಲ ಪ್ರತಿಕ್ರಿಯೆ

ಬೆಂಗಳೂರು: ನನ್ನ ವಿರುದ್ಧ ಷಡ್ಯಂತ್ರ ನಡೆದಿದೆ. ಇವೆಲ್ಲ ರಾಜಕೀಯ ಪಿತೂರಿಯಿಂದ ಮಹಿಳೆ ಅಪಹರಣ ಪ್ರಕರಣದಲ್ಲಿ ಸಿಲುಕಿಸಲಾಗಿದೆ ಎಂದು ಮಾಜಿ ಸಚಿವ ಎಚ್‌.ಡಿ. ರೇವಣ್ಣ (HD Revannna) ಆರೋಪಿಸಿದ್ದಾರೆ. ಕೋರಮಂಗಲದಲ್ಲಿರುವ 17ನೇ ಎಸಿಎಂಎಂ ಕೋರ್ಟ್ ನ್ಯಾಯಾಧೀಶರ ನಿವಾಸಕ್ಕೆ ಎಸ್‌ಐಟಿ (SIT) ಅಧಿಕಾರಿಗಳು ಹಾಜರುಪಡಿಸಲು ಕರೆದೊಯ್ಯುವ ಮುನ್ನ ಬೌರಿಂಗ್ ಆಸ್ಪತ್ರೆಯಲ್ಲಿ ಭಾನುವಾರ ವೈದ್ಯಕೀಯ ತಪಾಸಣೆಗೆ ಒಳಗಾಗುವ ವೇಳೆ ಮಾಧ್ಯಮಗಳಿಗೆ … Continued

ವೀಡಿಯೊಗಳು..| ಬೆಂಗಳೂರಿನಲ್ಲಿ ಭಾರೀ ಮಳೆ : ತಾಪಮಾನ ದಿಢೀರ್‌ ಕುಸಿತ

ಬೆಂಗಳೂರು: ಬರೋಬ್ಬರಿ ಐದು ತಿಂಗಳ ಬಳಿಕ ಬೆಂಗಳೂರಿನಲ್ಲಿ ಮಳೆ ಸುರಿಯುತ್ತಿದ್ದು, ನಗರದ ಹಲವೆಡೆ ಗುಡುಗು ಸಹಿತ ಭಾರಿ ಮಳೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸಿಲಿಕಾನ್ ಸಿಟಿ ಬೆಂಗಳೂರಿಗೆ ವರುಣ ತಂಪೆರೆದಿದ್ದು, ಬಿಸಿಲಿನ ಬೇಗೆಯಿಂದ ಬಸವಳಿದಿದ್ದ ಜನ ನಿಟ್ಟುಸಿರು ಬಿಟ್ಟಿದ್ದಾರೆ. ಸುಮಾರು 40 ಡಿಗ್ರಿಗೆ ಏರಿದ್ದ ತಾಪಮಾನ ಮಳೆಯಾದ ಬಳಿಕ 24 ಡಿಗ್ರಿಗೆ ಕುಸಿದಿದೆ ಎಂದು ಹೇಳಲಾಗಿದೆ. … Continued

ಬೆಂಗಳೂರಿನ ಹಲವೆಡೆ ಜೋರಾಗಿ ಮಳೆ

ಬೆಂಗಳೂರು: ಬಿಸಿಲಿನಿಂದ ಕಂಗೆಟ್ಟ ರಾಜಧಾನಿ ಬೆಂಗಳೂರು ಜನತೆಗೆ ಮಳೆರಾಯ ಬುಧವಾರ ಕೊಂಚ ತಂಪೆರೆದಿದ್ದಾನೆ. ನಗರದ ಮೆಜೆಸ್ಟಿಕ್ ಸೇರಿದಂತೆ ಹಲವೆಡೆ ಮಳೆಯಾಗಿದ್ದು ಬಿಸಿಲಿನಿಂದ ಬೇಸತ್ತಿದ್ದ ಜನ ಕೊಂಚ ರಿಲೀಫ್ ಆಗಿದ್ದಾರೆ. ಸುಮಾರು 5 ತಿಂಗಳ ಬಳಿಕ ಬೆಂಗಳೂರಿನಲ್ಲಿ ಜೋರಾಗಿ ಮಳೆಯಾಗಿದೆ. ಗುರುವಾರ ಸಂಜೆ 6 ಗಂಟೆ ಸುಮಾರಿಗೆ ಆರಂಭವಾದ ಮಳೆಯು ತುಸು ಕಾಲ ಜೋರಾಗಿ ಸುರಿಯಿತು. ಆ … Continued

41.8 ಡಿಗ್ರಿ ತಲುಪಿದ ಬೆಂಗಳೂರು ತಾಪಮಾನ ; ರಾಜ್ಯದ ಈ ಜಿಲ್ಲೆಗಳಲ್ಲಿ ನಾಲ್ಕೈದು ದಿನ ಬಿಸಿಗಾಳಿ ಮುನ್ನೆಚ್ಚರಿಕೆ

ಬೆಂಗಳೂರು ; ಪ್ರಸಕ್ತ ವರ್ಷ ಬೆಂಗಳೂರು ಸೇರಿದಂತೆ ಕರ್ನಾಟಕದ ಬಹುತೇಕ ಜಿಲ್ಲಿಗಳಲ್ಲಿ ಗರಿಷ್ಠ ತಾಪಮಾನ ದಾಖಲಾಗುತ್ತಿದೆ. ಇದರಿಂದ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತಿದೆ. ಆರೋಗ್ಯ ಇಲಾಖೆ ಬಿಸಿಲಿನಲ್ಲಿ ಕೆಲಸಗಳಿಂದ ದೂರವಿರುವಂತೆ ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಈ ವರ್ಷದ ಗರಿಷ್ಠ 41.8 ಡಿಗ್ರಿ ಸೆಲ್ಶಿಯಸ್ ತಾಪಮಾನ ದಾಖಲಾಗಿದೆ. ಇದು ಬೆಂಗಳೂರಿನ ಇತಿಹಾಸದಲ್ಲಿ ದಾಖಲಾಗಿರುವ 3ನೇ ಗರಿಷ್ಠ ತಾಪಮಾನವಾಗಿದೆ. ಮಂಗಳವಾರ … Continued

ಆರೋಗ್ಯದಲ್ಲಿ ಏರುಪೇರು; ಮಾಜಿ ಸಿಎಂ ಎಸ್.ಎಂ.ಕೃಷ್ಣ ಆಸ್ಪತ್ರೆಗೆ ದಾಖಲು

ಬೆಂಗಳೂರು: ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್.ಎಂ.ಕೃಷ್ಣ (91) ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೆಂಗಳೂರಿನ ಏರ್‌ಪೋರ್ಟ್‌ ರಸ್ತೆಯಲ್ಲಿರುವ ಮಣಿಪಾಲ ಆಸ್ಪತ್ರೆಗೆ (Manipal Hospital) ಎಸ್‌.ಎಂ.ಕೃಷ್ಣ ಅವರನ್ನು ದಾಖಲಿಸಲಾಗಿದ್ದು, ಸದ್ಯ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ. ಉಸಿರಾಟದ ಸಮಸ್ಯೆ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹೇಳಲಾಗಿದೆ. ಉಸಿರಾಟದ … Continued