ದಿನದ ಕೆಲಸ ಅಂದೇ ಮುಗಿಸಲು ಒತ್ತಡ ಹಾಕಿದ್ದಕ್ಕೆ ಸಹೋದ್ಯೋಗಿಗಳಿಂದಲೇ ಆಡಿಟರ್ ಗೆ ಥಳಿಸಲು ಸುಪಾರಿ ; ಥಳಿತದ ವೀಡಿಯೊ ವೈರಲ್ ಬಳಿಕ ಐವರ ಬಂಧನ

ಬೆಂಗಳೂರು : ಖಾಸಗಿ ಸಂಸ್ಥೆಯೊಂದರಲ್ಲಿ ಆಡಿಟರ್ ಆಗಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರನ್ನು ಬೆಂಗಳೂರು ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಬಂಧಿತ ಐವರಲ್ಲಿ ಇಬ್ಬರು ಆಡಿಟರ್ ಅವರ ಸಹೋದ್ಯೋಗಿಗಳಾಗಿದ್ದಾರೆ. ಈ ಇಬ್ಬರು ಆಡಿಟರ್ ಅವರನ್ನು ಥಳಿಸಲು ಗೂಂಡಾಗಳನ್ನು ನೇಮಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಆ ದಿನದ ಕೆಲಸಗಳನ್ನು ಅಂದೇ ಮುಗಿಸಿ, … Continued

ಬೆಂಗಳೂರು ನಗರ್ತ ಪೇಟೆ ಹಲ್ಲೆ ಪ್ರಕರಣ: ದೂರು ನೀಡಿದ್ದ ಮೊಬೈಲ್‌ ಮಳಿಗೆ ಮಾಲೀಕನ ವಿರುದ್ಧವೂ ಈಗ ಎಫ್‌ಐಆರ್‌

ಬೆಂಗಳೂರು: ರಾಜಕೀಯ ತಿರುವು ಪಡೆದು ಚರ್ಚೆಗೆ ಗ್ರಾಸವಾಗಿದ್ದ ಬೆಂಗಳೂರಿನ ನಗರ್ತಪೇಟೆಯ ಮೊಬೈಲ್‌ ಮಳಿಗೆ ಮಾಲೀಕನ ಮೇಲೆ ನಡೆಸಿದ್ದ ಹಲ್ಲೆ ಪ್ರಕರಣದಲ್ಲಿ ಈಗ ಹಲ್ಲೆಗೊಳಗಾಗಿದ್ದ ಮುಖೇಶ ಎಂಬವರ ವಿರುದ್ಧವೂ ಹಲಸೂರು ಗೇಟ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ನಗರ್ತಪೇಟೆಯ ಮೊಬೈಲ್‌ ಮಳಿಗೆ ಮಾಲೀಕ ಮುಖೇಶ ಧ್ವನಿವರ್ಧಕ ಶಬ್ದ ಕಡಿಮೆ ಮಾಡದ್ದಕ್ಕೆ ಆಕ್ಷೇಪಿಸಿ ನಾಲ್ವರು ಆತನ ಅಂಗಡಿಗೆ ನುಗ್ಗಿ ಮೇಲೆ … Continued

ಸುಮಲತಾ ಅಂಬರೀಶ ಬಿಜೆಪಿ ಸೇರ್ಪಡೆಗೆ ದಿನಾಂಕ ಫಿಕ್ಸ್

ಬೆಂಗಳೂರು : ಕಳೆದ ಬಾರಿ ಲೋಕಸಭೆ ಚುನಾವಣೆಯಲ್ಲಿ ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಭರ್ಜರಿ ಗೆಲುವು ಸಾಧಿಸಿದ್ದ ನಟಿ ಸುಮಲತಾ ಅಂಬರೀಶ ಈ ಬಾರಿ ಬಿಜೆಪಿ ಬೆಂಬಲಿಸಲು ನಿರ್ಧರಿಸಿ ಕಣದಿಂದ ಹಿಂದೆ ಸರಿದಿದ್ದಾರೆ. ಬುಧವಾರ (ಏಪ್ರಿಲ್‌ 3)ರಂದು ಕಣದಿಂದ ಹಿಂದೆ ಸರಿಯುವುದಾಗಿ ಹಾಗೂ ಬಿಜೆಪಿ ಬೆಂಬಲಿಸುವುದಾಗಿ ಘೋಷಿಸಿದ್ದರು. ಈಗ ಬಿಜೆಪಿ ಸೇರುವ ದಿನಾಂಕ ಘೋಷಣೆ ಮಾಡಿದ್ದು, … Continued

ಖ್ಯಾತ ನಟ ಪ್ರಕಾಶ ಹೆಗ್ಗೋಡು ನಿಧನ

ಬೆಂಗಳೂರು: ಖ್ಯಾತ ನಟ, ರಂಗಕರ್ಮಿ ಪ್ರಕಾಶ ಹೆಗ್ಗೋಡು ಅನಾರೋಗ್ಯದಿಂದ ಶನಿವಾರ (ಮಾರ್ಚ್‌ 30) ನಿಧನರಾಗಿದ್ದಾರೆ. ಅವರಿಗೆ 58 ವರ್ಷ ವಯಸ್ಸಾಗಿತ್ತು. ಕೆಲವು ದಿನಗಳ ಹಿಂದೆ ಅನಾರೋಗ್ಯಕ್ಕೆ ಒಳಗಾಗಿದ್ದ ಅವರು ಮಂಗಳೂರಿನ ಪ್ರತಿಷ್ಠಿತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ನಿಧನರಾಗಿದ್ದಾರೆ ಎಂದು ವರದಿಯಾಗಿದೆ. ಯೇಸುಪ್ರಕಾಶ್‌ ಕಲ್ಲುಕೊಪ್ಪ ಎಂದೂ ಗುರುತಿಸ್ಪಡುತ್ತಿದ್ದ ಪ್ರಕಾಶ ಹೆಗ್ಗೋಡು ಶಿವಮೊಗ್ಗ … Continued

ಬೆಂಗಳೂರು ರಾಮೇಶ್ವರಂ ಕೆಫೆ ಸ್ಫೋಟ: ಇಬ್ಬರು ಆರೋಪಿಗಳ ಮಾಹಿತಿ ನೀಡಿದವರಿಗೆ ತಲಾ ₹10 ಲಕ್ಷ ಬಹುಮಾನ ಘೋಚಿಸಿದ ಎನ್‌ ಐ ಎ

ಬೆಂಗಳೂರು: ಬೆಂಗಳೂರು ರಾಮೇಶ್ವರಂ ಕೆಫೆ ಬಾಂಬ್‌ ಸ್ಫೋಟ ಪ್ರಕರಣದಲ್ಲಿ ಸುಧಾರಿತ ಸ್ಫೋಟಕ (ಐಇಡಿ) ಅಳವಡಿಸಿದ ಶಂಕಿತ ಮುಸಾವಿರ್ ಹುಸೇನ್ ಶಾಜಿಬ್ ಮತ್ತು ಪ್ರಕರಣದಲ್ಲಿ ಸಂಚು ರೂಪಿಸಿದ ಅಬ್ದುಲ್ ಮಥೀನ್ ಅಹ್ಮದ್ ತಾಹಾ ಎಂಬ ಶಂಕಿತ ಆರೋಪಿಗಳ ಮಾಹಿತಿಗಾಗಿ ಎನ್‌ಐಎ ಬಹುಮಾನ ಘೋಷಿಸಿದೆ. ಬೆಂಗಳೂರು ಕೆಫೆ ಸ್ಫೋಟ ಪ್ರಕರಣದ ಇಬ್ಬರು ಶಂಕಿತರ ಬಗ್ಗೆ ಮಾಹಿತಿ ನೀಡಿದವರಿಗೆ ತಲಾ … Continued

ಬೆಂಗಳೂರು ರಾಮೇಶ್ವರಂ ಕೆಫೆ ಬಾಂಬ್​ ಬ್ಲಾಸ್ಟ್​ ಪ್ರಕರಣ : ಪ್ರಮುಖ ಆರೋಪಿ ಬಂಧನ

ನವದೆಹಲಿ : ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದ ಪ್ರಮುಖ ಸಂಚುಕೋರನನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಬಂಧಿಸಿದೆ ಎಂದು ಗುರುವಾರ ಎನ್‌ಐಎ ಪ್ರಕಟಣೆ ತಿಳಿಸಿದೆ. ಕರ್ನಾಟಕದ 12, ತಮಿಳುನಾಡಿನ 5 ಮತ್ತು ಉತ್ತರ ಪ್ರದೇಶದ 1 ಸೇರಿದಂತೆ 18 ಸ್ಥಳಗಳಲ್ಲಿ ಎನ್‌ಐಎ ತಂಡಗಳು ದಾಳಿ ನಡೆಸಿದ ನಂತರ ಮುಝಮ್ಮಿಲ್ ಷರೀಫ್‌ ಎಂಬಾತನನ್ನು ಬುಧವಾರ ಈ … Continued

ಎಸ್ ಎಸ್ ಎಲ್ ಸಿ ಪರೀಕ್ಷೆ ವಿದ್ಯಾರ್ಥಿಗಳ ಮಾರಾಮಾರಿ : ಚಾಕು ಇರಿತ

ಬೆಂಗಳೂರು : ಎಸ್ ಎಸ್ ಎಲ್ ಸಿ ಪರೀಕ್ಷೆ ಸಂದರ್ಭದಲ್ಲಿ ವಿದ್ಯಾರ್ಥಿಗಳ ನಡುವೆ ಮಾರಾಮಾರಿ ನಡೆದು, ಮೂವರು ವಿದ್ಯಾರ್ಥಿಗಳಿಗೆ ಚಾಕು ಇರಿದ ಘಟನೆ ಬೆಂಗಳೂರಿನ ರಾಗಿಗುಡ್ಡ ಬಳಿ ನಡೆದಿದೆ ಎಂದು ವರದಿಯಾಗಿದೆ. ಮಾರ್ಚ್‌ 27ರಂದು ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯಲು ಬಂದ ವೇಳೆ ಈ ಘಟನೆ ನಡೆದಿದೆ ಎನ್ನಲಾಗಿದೆ. ಬೇರೆ ಬೇರೆ ಕಡೆಗಳಿಂದ … Continued

ರಾಜ್ಯದಲ್ಲಿ ತಾಪಮಾನ ಏರಿಕೆ : ಮಾರ್ಗಸೂಚಿ ಬಿಡುಗಡೆ ಮಾಡಿದ ಆರೋಗ್ಯ ಇಲಾಖೆ

ಬೆಂಗಳೂರು : ಕರ್ನಾಟಕದಲ್ಲಿ ತಾಪಮಾನ ಏರುತ್ತ ಸಾಗಿದೆ. ಕೆಲವು ಜಿಲ್ಲೆಗಳಲ್ಲಿ ಮಳೆ ಬಂದಿದ್ದರೂ ಧಗೆ ಕಡಿಮೆಯಾಗಿಲ್ಲ. ಹೀಗಾಗಿ ಏರುತ್ತಿರುವ ತಾಪಮಾನದಿಂದ ಎಚ್ಚರ ವಹಿಸುವಂತೆ ಆರೋಗ್ಯ ಇಲಾಖೆ (Health Department) ಮಾರ್ಗಸೂಚಿ ಬಿಡುಗಡೆ ಮಾಡಿದೆ. ಮುಂದಿನ ನಾಲ್ಕೈದು ದಿನ ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಿಗೆ ತಾಪಮಾನ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಬಹುತೇಕ ಎಲ್ಲ … Continued

ಕೆಎಸ್​ಆರ್​ಟಿಸಿ ಬಸ್​ನಲ್ಲಿ ಅಜ್ಜಿ ಮೊಮ್ಮಗಳಿಗೆ ಉಚಿತ ಟಿಕೆಟ್ : ಆದ್ರೆ ನಾಲ್ಕು ಪಕ್ಷಿಗಳಿಗೆ 444 ರೂ. ಟಿಕೆಟ್…!

ಮೈಸೂರು : ಕೆಎಸ್​ಆರ್​ಟಿಸಿ ಬಸ್​ನಲ್ಲಿ ಅಪರೂಪದ ಘಟನೆಯೊಂದು ವರದಿಯಾಗಿದೆ. ಬೆಂಗಳೂರಿನಿಂದ ಮೈಸೂರಿಗೆ ಬಸ್​ನಲ್ಲಿ ಹೊರಟ್ಟಿದ ಅಜ್ಜಿ ಮೊಮ್ಮಗಳಿಗೆ ಉಚಿತ ಟಿಕೆಟ್ ನೀಡಿದ ಕಂಡಕ್ಟರ್ ಆದರೆ ಅವರು ತಮ್ಮೊಂದಿಗೆ ಒಯ್ದಿದ್ದ ನಾಲ್ಕು ಪಕ್ಷಿಗಳಿಗೆ ಬರೋಬ್ಬರಿ 444 ರೂ. ಮೌಲ್ಯದ ಟಿಕೆಟ್‌ ಅನ್ನು ಕೊಟ್ಟಿದ್ದಾರೆ…! ಬುಧವಾರ (ಮಾರ್ಚ್‌ 27) ಬೆಳಗ್ಗೆ 8 ಗಂಟೆಗೆ ಅಜ್ಜಿ ಮೊಮ್ಮಗಳು ಉಚಿತ ಬಸ್ … Continued

ಬೆಂಗಳೂರು ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ : ಬೆಂಗಳೂರು, ತೀರ್ಥಹಳ್ಳಿ, ಚೆನ್ನೈ ಸೇರಿದಂತೆ ಅನೇಕ ಕಡೆ ಎನ್‌ಐಎ ದಾಳಿ

ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಬುಧವಾರ ಬೆಂಗಳೂರು, ತೀರ್ಥಹಳ್ಳಿ ಹಾಗೂ ಚೆನ್ನೈನ ಅನೇಕ ಭಾಗಗಳಲ್ಲಿ ದಾಳಿ ನಡೆಸಿದೆ. ಎನ್‌ಐಎ ಅಧಿಕಾರಿಗಳು ಬೆಳ್ಳಂಬೆಳಿಗ್ಗೆ ತೀರ್ಥಹಳ್ಳಿ ಪಟ್ಟಣದ ಐದಕ್ಕೂ ಹೆಚ್ಚು ಸ್ಥಳಗಳಲ್ಲಿ ಶೋಧ ಕಾರ್ಯ ನಡೆಸಿದ್ದಾರೆ. ರಾಮೇಶ್ವರಂ ಕೆಫೆ ಸ್ಫೋಟದ ಶಂಕಿತ ಆರೋಪಿ ತೀರ್ಥಹಳ್ಳಿ ಮೂಲದವನು ಎಂದು … Continued