ಬೆಂಗಳೂರು ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ: ಮತ್ತಿಬ್ಬರು ಎನ್ ​​​ಐಎ ವಶಕ್ಕೆ

ಬೆಂಗಳೂರು: ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಮೂಲದ ಇಬ್ಬರನ್ನು ಎನ್‌ಐಎ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ. ಈ ಇಬ್ಬರು ವ್ಯಕ್ತಿಗಳು ರಾಮೇಶ್ವರಂ ಕೆಫೆಯಲ್ಲಿ ಬಾಂಬ್‌ ಇಟ್ಟ ವ್ಯಕ್ತಿಯ ಜೊತೆಗೆ ಸಂಪರ್ಕದಲ್ಲಿದ್ದರು ಎಂದು ವರದಿಯಾಗಿದ್ದು, ಶನಿವಾರ ಸಂಜೆ ಅವರನ್ನು ವಶಕ್ಕೆ ಪಡೆಯಲಾಗಿದೆ ಎನ್ನಲಾಗಿದೆ. ಬಾಂಬರ್ ಸುಳಿವು ಪತ್ತೆ ಹಚ್ಚಿದ ನಂತರ ಆತನ … Continued

ಬೆಂಗಳೂರು ರಾಮೇಶ್ವರಂ ಕೆಫೆ ಸ್ಫೋಟ : ಬಾಂಬ್‌ ಇಟ್ಟಿದ್ದ ಪ್ರಮುಖ ಆರೋಪಿಯ ಗುರುತು ಪತ್ತೆ ಮಾಡಿದ ಎನ್‌ ಐ ಎ ; ಈತ ಯಾರು? ಹಿನ್ನೆಲೆ ಏನು ?

ಬೆಂಗಳೂರು : ಪ್ರಮುಖ ಬೆಳವಣಿಗೆಯಲ್ಲಿ, ಮಾರ್ಚ್ 1 ರಂದು ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟದಲ್ಲಿ ಭಾಗಿಯಾಗಿರುವ ಆರೋಪಿಗಳ ಛಾಯಾಚಿತ್ರಗಳು ಮುನ್ನೆಲೆಗೆ ಬಂದಿವೆ. ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಗುರುತಿಸಲಾಗಿದೆ. ಇವರಿಬ್ಬರೂ ಶಿವಮೊಗ್ಗದ ಐಸಿಸ್ ಘಟಕದೊಂದಿಗೆ ಸಂಬಂಧ ಹೊಂದಿದ್ದು, ಈ ಹಿಂದೆಯೂ ಪ್ರಕರಣವೊಂದರಲ್ಲಿ ಭಾಗಿಯಾಗಿದ್ದಾರೆ. ಪ್ರಮುಖ ಆರೋಪಿಯನ್ನು ಶಿವಮೊಗ್ಗದ ತೀರ್ಥಹಳ್ಳಿ ನಿವಾಸಿ ಮುಸಾವಿರ್ ಹುಸೇನ್ ಶಾಜಿಬ್ ಎಂದು ಗುರುತಿಸಲಾಗಿದ್ದು, … Continued

ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧದ ಎಫ್‌ಐಆರ್‌ ಗೆ ತಡೆ ನೀಡಿದ ಹೈಕೋರ್ಟ್‌

ಬೆಂಗಳೂರು : ಇಲ್ಲಿನ ನಗರ್ತಪೇಟೆಯ ಮೊಬೈಲ್ ಅಂಗಡಿ ಮಾಲೀಕ ಮುಖೇಶ ಎಂಬಾತನ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿರುವುದನ್ನು ಖಂಡಿಸಿ ಪ್ರತಿಭಟನೆ ನಡೆಸಿ, ಸಾರ್ವಜನಿಕ ಶಾಂತಿ-ಸುವ್ಯವಸ್ಥೆಗೆ ಭಂಗ ತಂದ ಆರೋಪದಲ್ಲಿ ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ವಿರುದ್ಧ ದಾಖಲಿಸಲಾಗಿದ್ದ ಎಫ್‌ಐಆರ್‌ಗೆ ಹೈಕೋರ್ಟ್ ಶುಕ್ರವಾರ ತಡೆ ನೀಡಿದೆ. ಹಲಸೂರುಗೇಟ್ ಪೊಲೀಸ್ ಠಾಣೆಯಲ್ಲಿ ತಮ್ಮ ವಿರುದ್ಧ ದಾಖಲಾಗಿರುವ … Continued

ಬೆಂಗಳೂರು : ಒಂದೇ ಕುಟುಂಬದ ಮೂವರು ಆತ್ಮಹತ್ಯೆ

ಬೆಂಗಳೂರು: ಒಂದೇ ಕುಟುಂಬದ ಮೂವರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಜೆಪಿ ನಗರದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಬೆಂಗಳೂರಿನ ಜೆಪಿ ನಗರದ ಮೂರನೇ ಹಂತದಲ್ಲಿ ಈ ಘಟನೆ ನಡೆದಿದೆ. ಮೃತರನ್ನು ತಾಯಿ ಸುಕನ್ಯಾ (48), ಮಕ್ಕಳಾದ ನಿಖಿತ್, ನಿಶಿತ್ (28) ಎಂದು ಗುರುತಿಸಲಾಗಿದೆ. ಘಟನಾ ಸ್ಥಳಕ್ಕೆ ಜೆ‌.ಪಿ.ನಗರ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದಾರೆ. … Continued

ಹನುಮಾನ್ ಚಾಲೀಸಾ ಹಾಕಿದ್ದಕ್ಕೆ ಹಲ್ಲೆ ನಡೆದಿಲ್ಲ : ಸಚಿವ ದಿನೇಶ ಗುಂಡೂರಾವ್ ಸ್ಪಷ್ಟನೆ

ಬೆಂಗಳೂರು: ಬೆಂಗಳೂರಿನ ನಗರತಪೇಟೆಯಲ್ಲಿ ಲೌಡ್‌ ಸ್ಪೀಕರಿನಲ್ಲಿ ಹನುಮಾನ್ ಜಾಲೀಸಾ ಹಾಕಿದ್ದಕ್ಕೆ ಮೊಬೈಲ್ ಸ್ಪೇರ್ ಪಾರ್ಟ್ಸ್ ಅಂಗಡಿಯ ಮಾಲೀಕನ ಮೇಲೆ ಹಲ್ಲೆ ನಡೆಸಲಾಗಿದೆ ಎಂಬ ಪ್ರಕರಣದ ಬಗ್ಗೆ ಸಚಿವ ದಿನೇಶ ಗುಂಡೂರಾವ್ ಸ್ಪಷ್ಟನೆ ನೀಡಿದ್ದು, ಹನುಮಾನ್ ಚಾಲೀಸಾ ಹಾಕಿದ್ದಕ್ಕೆ ಹಲ್ಲೆ ನಡೆದದ್ದಲ್ಲ ಎಂದು ತಿಳಿಸಿದ್ದಾರೆ. ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಪ್ರಚೋದನೆಗೆ ಒಳಗಾಗದೆ ವಿವೇಚನೆಯಿಂದ ಯೋಚಿಸಿ. … Continued

ಬೆಂಗಳೂರಲ್ಲಿ ದಿನಕ್ಕೆ 500 ಮಿಲಿಯನ್ ಲೀಟರ್ ನೀರಿನ ಕೊರತೆ : ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬೆಂಗಳೂರು ನಗರದಲ್ಲಿ ಪ್ರತಿದಿನ 2,600 ಎಂಎಲ್‌ಡಿ ನೀರು (ಎಂಎಲ್‌ಡಿ) ಕೊರತೆ ಎದುರಾಗಿದ್ದು, ಪ್ರತಿದಿನ ಸಭೆ ನಡೆಸಿ ವಾರಕ್ಕೊಮ್ಮೆ ಕ್ರಿಯಾ ಯೋಜನೆ ರೂಪಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಹೇಳಿದ್ದಾರೆ. ಮುಖ್ಯಮಂತ್ರಿಗಳ ಪ್ರಕಾರ, ಬೆಂಗಳೂರಿನಲ್ಲಿ 14,000 ಬೋರ್‌ವೆಲ್‌ಗಳಿದ್ದು, ಅವುಗಳಲ್ಲಿ 6,900 ಬತ್ತಿ ಹೋಗಿವೆ. ಜಲಮೂಲಗಳು ಅತಿಕ್ರಮಿಸಲ್ಪಟ್ಟಿವೆ ಅಥವಾ ಸತ್ತಿವೆ. ಬೆಂಗಳೂರಿಗೆ 2,600 ಎಂಎಲ್‌ಡಿ … Continued

ಲೌಡ್ ಸ್ಪೀಕರಿನಲ್ಲಿ ಹನುಮಾನ ಚಾಲೀಸಾ ಹಾಕಿದ್ದಕ್ಕಾಗಿ ವ್ಯಕ್ತಿ ಮೇಲೆ ಹಲ್ಲೆ ಆರೋಪ : ಮೂವರ ಬಂಧನ | ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಬೆಂಗಳೂರು: ಅಂಗಡಿಯಲ್ಲಿ ಲೌಡ್ ಸ್ಪೀಕರ್ ಹಾಕಿದ್ದಕ್ಕಾಗಿ ಆಕ್ಷೇಪ ವ್ಯಕ್ತಪಡಿಸಿ ಯುವಕರ ಗುಂಪೊಂದು ಅಂಗಡಿ ಮಾಲೀಕನ ಮೇಲೆ ಹಲ್ಲೆ ನಡೆಸಿದ ಘಟನೆ ಬೆಂಗಳೂರಿನ ಕಬ್ಬನ್ ಪೇಟೆ ಸಿದ್ದನಗಲ್ಲಿ ಜುಮ್ಮಾ ಮಸೀದಿ ರಸ್ತೆಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಘಟನೆಯ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಈ ಸಂಬಂಧ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಭಾನುವಾರ ಸಂಜೆ … Continued

ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣದ ತನಿಖೆ ಸಿಐಡಿಗೆ

ಬೆಂಗಳೂರು: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ವಿರುದ್ಧ ದಾಖಲಾಗಿರುವ ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾಯಿಸಲಾಗಿದೆ. ಕರ್ನಾಟಕದ ಪೊಲೀಸ್ ಮಹಾನಿರ್ದೇಶಕರ ಕಚೇರಿಯು ಪ್ರಕರಣವನ್ನು ಸಿಐಡಿಗೆ ವರ್ಗಾಯಿಸಲು ಆದೇಶಿಸಿದೆ. ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ವಿರುದ್ಧ ಪೋಕ್ಸೊ ಪ್ರಕರಣ ದಾಖಲಿಸಲಾಗಿದೆ. ಕಳೆದ … Continued

ತಮ್ಮ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪಕ್ಕೆ ಯಡಿಯೂರಪ್ಪ ಮೊದಲ ಪ್ರತಿಕ್ರಿಯೆ…

ಬೆಂಗಳೂರು: ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತಮ್ಮ ವಿರುದ್ಧದ ಲೈಂಗಿಕ ದೌರ್ಜನ್ಯದ ಆರೋಪಕ್ಕೆ ಪ್ರತಿಕ್ರಿಯಿಸಿದ್ದು, ಇದೊಂದು ನಿರಾಧಾರ ಆರೋಪವಾಗಿದೆ ಎಂದು ತಳ್ಳಿಹಾಕಿದ್ದಾರೆ. ಹಾಗೂ ತನಿಖೆಗೆ ಸಹಕರಿಸಲು ಸಿದ್ಧ ಎಂದು ಹೇಳಿದ್ದಾರೆ. ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ತಾಯಿ ಮತ್ತು ಮಗಳು ಈ ಹಿಂದೆ ಅನೇಕ ಬಾರಿ ತಮ್ಮನ್ನು ಭೇಟಿ ಮಾಡುವ ಪ್ರಯತ್ನ ಮಾಡಿದ್ದರು. … Continued

ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ : ಯಡಿಯೂರಪ್ಪ ವಿರುದ್ಧ ಪ್ರಕರಣ ದಾಖಲು

ಬೆಂಗಳೂರು : 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಅಡಿ ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ವಿರುದ್ಧ ಪೋಕ್ಸೋ ಹಾಗೂ ಐಪಿಸಿ ಸೆಕ್ಷನ್‌ 354 (ಎ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ವರದಿಯಾಗಿದೆ. ಸಂತ್ರಸ್ತೆಯ ತಾಯಿ ಗುರುವಾರ ಸಂಜೆ ಯಡಿಯೂರಪ್ಪ ಅವರ ವಿರುದ್ಧ ದೂರು ನೀಡಿದ್ದು, ದೂರಿನನ್ವಯ ಸದಾಶಿವನಗರ ಪೊಲೀಸ್‌ ಠಾಣೆ … Continued