ಚಿನ್ನ ಕಳ್ಳಸಾಗಣೆ ಪ್ರಕರಣ : ರನ್ಯಾ ವಿರುದ್ಧ ಕೋಫೆಪೋಸಾ ಪ್ರಕರಣ

ಬೆಂಗಳೂರು: ಚಿನ್ನಾಭರಣ ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಕನ್ನಡದ ನಟಿ ರನ್ಯಾ ರಾವ್ (Ranya Rao) ವಿರುದ್ಧ ವಿದೇಶಿ ವಿನಿಮಯ ಸಂರಕ್ಷಣೆ ಮತ್ತು ಕಳ್ಳಸಾಗಣೆ ಚಟುವಟಿಕೆ ತಡೆ ಕಾಯ್ದೆ (COFEPOSA ACT) 1974 ಅನ್ವಯ ದೂರು ದಾಖಲಿಸಲಾಗಿದೆ. ಪ್ರಕರಣದ ತನಿಖೆ ನಡೆಸುತ್ತಿರುವ ಕಂದಾಯ ಗುಪ್ತಚರ ನಿರ್ದೇಶನಾಲಯದ (DRI) ಶಿಫಾರಸಿನ ಮೇರೆಗೆ ನಟಿ ಮತ್ತು ಇತರ ಆರೋಪಿಗಳ … Continued

ಪಹಲ್ಗಾಮ್‌ ಭಯೋತ್ಪಾದಕ ದಾಳಿ : ತಾಯ್ನಾಡಿಗೆ ಬಂದ ಕನ್ನಡಿಗರ ಮೃತದೇಹ

ಬೆಂಗಳೂರು: ಕಾಶ್ಮೀರದ ಪಹಲ್ಗಾಮ್‌ನಲ್ಲಿ ಭಯೋತ್ಪಾದಕರ ಗುಂಡಿಗೆ ಸಾವಿಗೀಡಾದ ಕರ್ನಾಟಕದ ಮೂವರು ಪ್ರವಾಸಿಗರಲ್ಲಿ ಇಬ್ಬರ ಮೃತದೇಹಗಳು ಗುರುವಾರ ಬೆಳಿಗ್ಗೆ ಬೆಂಗಳೂರು ತಲುಪಿವೆ. ಬೆಂಗಳೂರಿನ ಭರತ ಭೂಷಣ ಮತ್ತು ಶಿವಮೊಗ್ಗದ ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ ರಾವ್ ಅವರ ಮೃತದೇಹಗಳನ್ನು ಹೊತ್ತ ವಿಮಾನವು ಬೆಳಗಿನ ಜಾವ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದೆ. ಸಂತ್ರಸ್ತರ ಕುಟುಂಬಗಳ ಸದಸ್ಯರು ಸಹ … Continued

ಹಲ್ಗಾಮ್​ ಭಯೋತ್ಪಾದಕ ದಾಳಿಯಲ್ಲಿ ಕರ್ನಾಟಕದ ಮೂವರು ಸಾವು

ಬೆಂಗಳೂರು: ಜಮ್ಮು ಕಾಶ್ಮೀರದ ಪಹಲ್ಗಾಮ್​ನಲ್ಲಿ ಮಂಗಳವಾರ ನಡೆದ ಉಗ್ರರ ದಾಳಿಯಲ್ಲಿ ಕರ್ನಾಟಕದ ಮತ್ತೊಬ್ಬ ನಿವಾಸಿ ಸಾವಿಗೀಡಾಗಿದ್ದು, ಒಟ್ಟು ಮೂವರು ಮೃತಪಟ್ಟಿದ್ದಾರೆ. ಆಂಧ್ರಮೂಲದ ಬೆಂಗಳೂರಿನ ನಿವಾಸಿ ಮಧುಸೂದನ ಸೋಮಿಶೆಟ್ಟಿ ಅವರು ಪಹ್ಲಗಾಮ್‌ ಉಗ್ರರ ದಾಳಿಯಲ್ಲಿ ಮೃತಪಟ್ಟಿದ್ದಾರೆ. ಈ ಪೈಶಾಚಿಕ ದಾಳಿಯಲ್ಲಿ ಶಿವಮೊಗ್ಗದ ಮಂಜುನಾಥ ರಾವ್ ಹಾಗೂ ಬೆಂಗಳೂರಿನ ಮತ್ತಿಕೆರೆಯ ಪ್ರದೇಶದ ಭರತ ಭೂಷಣ (41) ಎಂಬ ಮೃತಪಟ್ಟಿದ್ದಾರೆ … Continued

ಬೆಂಗಳೂರು ರಸ್ತೆ ಜಗಳ ಪ್ರಕರಣಕ್ಕೆ ಟ್ವಿಸ್ಟ್ : ಐಎಎಫ್ ಅಧಿಕಾರಿಯ ವಿರುದ್ಧ ಕೊಲೆ ಯತ್ನದ ಪ್ರಕರಣ ದಾಖಲು

ಬೆಂಗಳೂರು : ಸಾಮಾಜಿಕ ಮಾಧ್ಯಮ ವೀಡಿಯೊದಲ್ಲಿ ವ್ಯಕ್ತಿಯೊಬ್ಬ ತನ್ನ ಮೇಲೆ ಹಲ್ಲೆ ನಡೆಸಿ, ನಿಂದಿಸಿದ್ದಾನೆಂದು ಹೇಳಿಕೊಂಡಿದ್ದ ಭಾರತೀಯ ವಾಯುಪಡೆಯ ಅಧಿಕಾರಿ ಶಿಲಾದಿತ್ಯ ಬೋಸ್ ವಿರುದ್ಧ, ಬೆಂಗಳೂರಿನ ರಸ್ತೆ ಜಗಳದ ಪ್ರಕರಣದಲ್ಲಿ ‘ಕೊಲೆ ಯತ್ನ’ ಮತ್ತು ಕನ್ನಡ ಮಾತನಾಡದ ಕಾರಣ ಬೈಕ್‌ ಸವಾರ ತನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಸುಳ್ಳು ಹೇಳಿದ ಆರೋಪದ ಮೇಲೆ ಪ್ರಕರಣ … Continued

ಕನ್ನಡಿಗನಿಂದ ಹಲ್ಲೆ ಎಂಬ ವಿಂಗ್ ಕಮಾಂಡರ್‌ ಆರೋಪಕ್ಕೆ ಟ್ವಿಸ್ಟ್‌ ; ಬೈಕ್ ಸವಾರನ ಮೇಲೆ ಆತ ಹಲ್ಲೆ ಮಾಡಿದ್ದ ವೀಡಿಯೊ ವೈರಲ್‌…!

ಬೆಂಗಳೂರು : ಬೆಂಗಳೂರಿನಲ್ಲಿ ಐಎಎಫ್ ಅಧಿಕಾರಿ ಮೇಲೆ ಕನ್ನಡಿಗ ಹಲ್ಲೆ ಮಾಡಿದ್ದ ಎಂದು ಆರೋಪಿಸಲಾದ ಪ್ರಕರಣಕ್ಕೆ ದೊಡ್ಡ ಟ್ವಿಸ್ಟ್ ಸಿಕ್ಕಿದ್ದು, ಬೈಕ್‌ ಸವಾರನ ಮೇಲೆ ವಿಂಗ್‌ ಕಮಾಂಡರ್‌ ಮಾರಣಾಂತಿಕ ಹಲ್ಲೆ ಮಾಡಿರುವ ವೀಡಿಯೊ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ವಿಂಗ್ ಕಮಾಂಡರ್ ಶಿಲಾದಿತ್ಯ ಬೋಸ್ ಬೈಕ್ ಸವಾರನ ಮೇಲೆ ಮನಸೋ ಇಚ್ಛೆ ಹಲ್ಲೆ ಮಾಡಿದ್ದು … Continued

ನಿವೃತ್ತ ಪೊಲೀಸ್‌ ಮಹಾನಿರ್ದೇಶಕ ಓಂ ಪ್ರಕಾಶ ಹತ್ಯೆ ಪ್ರಕರಣ : ಪತ್ನಿ-ಪುತ್ರಿ ವಿರುದ್ಧ ದೂರು ದಾಖಲು, ಪತ್ನಿಯ ಬಂಧನ

ಬೆಂಗಳೂರು : ನಿವೃತ್ತ ಪೊಲೀಸ್‌ ಮಹಾನಿರ್ದೇಶಕ ಓಂ ಪ್ರಕಾಶ ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪತ್ನಿ ಮತ್ತು ಪುತ್ರಿಯ ಮೇಲೆ ಎಫ್‌ಐಆರ್‌ ದಾಖಲಾಗಿದ್ದು, ನಂತರ ಪತ್ನಿ ಪಲ್ಲವಿಯನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ. ಓಂ ಪ್ರಕಾಶ ಅವರ ಪುತ್ರ ಕಾರ್ತಿಕೇಶ ನೀಡಿದ ದೂರಿನ ಮೇರೆಗೆ ತಾಯಿ ಪಲ್ಲವಿ, ಸಹೋದರಿ ಕೃತಿ ವಿರುದ್ಧ ಹೆಚ್‌ಎಸ್‌ಆರ್‌ ಲೇಔಟ್‌ ಠಾಣೆಯಲ್ಲಿ ಬಿಎನ್‌ಎಸ್‌ … Continued

ಮಾಜಿ ಪೊಲೀಸ್‌ ಮುಖ್ಯಸ್ಥ ಓಂ ಪ್ರಕಾಶ ಕೊಲೆ ಪ್ರಕರಣ : ತನಿಖಾಧಿಕಾರಿಗಳ ಎದುರು ಕೊಲೆಯ ವಿವರ ಬಾಯ್ಬಿಟ್ಟ ಪತ್ನಿ…!?

ಬೆಂಗಳೂರು : ಭಾನುವಾರ ಬೆಂಗಳೂರಿನ ಎಚ್‌ಎಸ್‌ ಆರ್‌ ಲೇಔಟ್‌ನ ತಮ್ಮ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದ ಕರ್ನಾಟಕದ ಮಾಜಿ ಪೊಲೀಸ್ ಮುಖ್ಯಸ್ಥ ಓಂ ಪ್ರಕಾಶ, ಅಂದು ಮಧ್ಯಾಹ್ನ ತಮ್ಮ ಪತ್ನಿಯೊಂದಿಗೆ ಜಗಳವಾಡಿದ್ದರು. ಅದು ವಿಕೋಪಕ್ಕೆ ಹೋಗಿ ಈ ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ. ಈ ಜಗಳದಲ್ಲಿ, ಅವರು ಓಂ ಪ್ರಕಾಶ ಅವರ ಮೇಲೆ ಮೆಣಸಿನ ಪುಡಿ ಎಸೆದು, … Continued

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಿಲ್ಲಿಸಿದ್ದ ಇಂಡಿಗೋ ವಿಮಾನಕ್ಕೆ ಡಿಕ್ಕಿ ಹೊಡೆದ ಟೆಂಪೋ ಟ್ರಾವೆಲರ್…!

ಬೆಂಗಳೂರು: ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಿಂತಿದ್ದ ಇಂಡಿಗೋ ವಿಮಾನಕ್ಕೆ ಟೆಂಪೋ ಟ್ರಾವೆಲರ್ ಡಿಕ್ಕಿ ಹೊಡೆದಿದ್ದು, ಅದರ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಚಾಲಕನ ನಿರ್ಲಕ್ಷ್ಯದಿಂದಾಗಿ ಟೆಂಪೋ ಟ್ರಾವೆಲರ್ ವಿಮಾನಕ್ಕೆ ಡಿಕ್ಕಿ ಹೊಡೆದಿದ್ದು, ತನಿಖೆ ನಡೆಯುತ್ತಿದೆ ಎಂದು ಇಂಡಿಗೋ ಹೇಳಿಕೆ ತಿಳಿಸಿದೆ. ಶುಕ್ರವಾರ ಮಧ್ಯಾಹ್ನ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಬೆಂಗಳೂರು ವಿಮಾನ ನಿಲ್ದಾಣದ ವಕ್ತಾರರು ತಿಳಿಸಿದ್ದಾರೆ. … Continued

ರಾಮನಗರ | ಮಾಜಿ ಡಾನ್ ಮುತ್ತಪ್ಪ ರೈ ಪುತ್ರನ ಮೇಲೆ ಗುಂಡಿನ ದಾಳಿ

ಬೆಂಗಳೂರು: ಮೃತ ಭೂಗತ ಲೋಕದ ಮುತ್ತಪ್ಪ ರೈ ಅವರ ಪುತ್ರ ರಿಕಿ ರೈ ಶುಕ್ರವಾರ ತಡರಾತ್ರಿ ನಡೆದ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾರೆ. ರಿಕಿ ರಾಮನಗರದ ಬಿಡದಿಯಲ್ಲಿರುವ ತಮ್ಮ ಫಾರ್ಮ್‌ಹೌಸ್‌ನಿಂದ ಬೆಂಗಳೂರಿನ ಕಡೆಗೆ ತನ್ನ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ಈ ಘಟನೆ ಬೆಳಗಿನ ಶುಕ್ರವಾರ ತಡರಾತರಿ 12:30 ರ ಸುಮಾರಿಗೆ ಸಂಭವಿಸಿದೆ ಎಂದು ಹೇಳಲಾಗಿದೆ. ದಾಳಿಯ ಸಮಯದಲ್ಲಿ, ಅವರ … Continued

ಫೇಸ್‌ಬುಕ್‌ನಲ್ಲಿ ವೀಡಿಯೊ ಮಾಡಿ ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ

ಬೆಂಗಳೂರು: ಬೆಂಗಳೂರಿನ ನಾಗವಾರದಲ್ಲಿ ಬಿಜೆಪಿ ಕಾರ್ಯಕರ್ತ ವಿನಯ ಸೋಮಯ್ಯ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಮಾಸುವ ಮುನ್ನವೇ ರಾಜ್ಯದಲ್ಲಿ ಮತ್ತೊಬ್ಬ ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ. ಬೆಂಗಳೂರು ಹೊರವಲಯದ ಆನೇಕಲ್‌ನಲ್ಲಿ ಪ್ರವೀಣ ಗೌಡ ಎಂಬವರು ಫೇಸ್ ಬುಕ್ ವೀಡಿಯೊ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆನೇಕಲ್‌ನ ಎಸ್‌ವಿಎಂ ಸ್ಕೂಲ್ ಬಳಿ ಬಿಜೆಪಿ ಕಾರ್ಯಕರ್ತ ಪ್ರವೀಣ ಗೌಡ … Continued