ಬೆಂಗಳೂರು: ವಿದ್ಯಾರ್ಥಿ ಭವನದಲ್ಲಿ ಮಸಾಲೆ ದೋಸೆ, ಫಿಲ್ಟರ್​​ ಕಾಫಿ ಸವಿದ ಸ್ಟಾರ್​​ಬಕ್ಸ್​​ ಸಹ ಸಂಸ್ಥಾಪಕ ಜೆವ್​ ಸೀಗಲ್​

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ನಡೆಯುತ್ತಿರುವ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಭಾಗವಹಿಸಲು ಬಂದಿದ್ದ ಸ್ಟಾರ್‌ಬಕ್ಸ್ ಸಹ-ಸಂಸ್ಥಾಪಕ (Starbucks co founder) ಜೆವ್ ಸೀಗಲ್ ನಿನ್ನೆ, ಗುರುವಾರ ಸಂಜೆ ಬೆಂಗಳೂರಿನ ಪ್ರಸಿದ್ಧ ವಿದ್ಯಾರ್ಥಿ ಭವನ ಹೊಟೇಲ್‌ಗೆ ಹೋಗಿ ಮಸಾಲೆ ದೋಸೆ ತಿಂದಿದ್ದಾರೆ ಹಾಗೂ ಫಿಲ್ಟರ್ ಕಾಫಿ ಸವಿದಿದ್ದಾರೆ. ವಿಶ್ವದ ಅತಿದೊಡ್ಡ ಕಾಫಿ ಸರಪಳಿ ಸಂಸ್ಥೆಯಾದ ಸ್ಟಾರ್‌ಬಕ್ಸ್‌ನ ಸಹ-ಸಂಸ್ಥಾಪಕರು ನಿನ್ನೆ … Continued

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಅಭಿನಂದನೆ: ನವೆಂಬರ್ 6ರಂದು ಸರ್ವೋದಯ ಸಮಾವೇಶ

ಬೆಂಗಳೂರು:ಎಐಸಿಸಿ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಆಯ್ಕೆಯಾದ ಹಿನ್ನೆಲೆಯಲ್ಲಿ ಕೆಪಿಸಿಸಿ ವತಿಯಿಂದ ನವೆಂಬರ್ 6 ರಂದು ಬೃಹತ್ ಅಭಿನಂದನಾ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಬೆಂಗಳೂರು ನಗರದ ಅರಮನೆ ಮೈದಾನದಲ್ಲಿ ಸಮಾವೇಶ ನಡೆಯಲಿದ್ದು, ಕಾರ್ಯಕ್ರಮಕ್ಕೆ ಸರ್ವೋದಯ ಸಮಾವೇಶ ಎಂದು ಹೆಸರು ನೀಡಲಾಗಿದೆ. ಈ ಕುರಿತಾಗಿ ಕೆಪಿಸಿಸಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್, ಮಲ್ಲಿಕಾರ್ಜುನ … Continued

ಕನ್ನಡ ರಾಜ್ಯೋತ್ಸವದಂದು 150 ಕಿಮೀ ದೂರ ಪುನೀತ್‌ ಸವಾರಿ

ಬೆಂಗಳೂರು : ಕನ್ನಡ ರಾಜ್ಯೋತ್ಸವ ದಿನವಾದ ನವೆಂಬರ್‌ 1ರಂದು ಕರ್ನಾಟಕದ ಕಣ್ಮಣಿ ಪುನೀತ್‌ ರಾಜಕುಮಾರ ಅವರ ಸ್ಮರಣಾರ್ಥ “ಪುನೀತ ಸವಾರಿ ” ಹೆಸರಿನಲ್ಲಿ ೧೫೦ ಕಿಮೀ ಸೈಕಲ್‌ ಯಾತ್ರೆ ಬೆಂಗಳೂರಿನಿಂದ ನಡೆಯಿತು. ಬೆಂಗಳೂರಿನಿಂದ ಪ್ರವಾಸಿ ತಾಣ ನಂದಿ ಬೆಟ್ಟಕ್ಕೆ ೧೫೦ ಕಿಮೀ ದೂರದ ವರೆಗೆ “ಪುನೀತ ಸವಾರಿ ” ಎಂಬ ಹೆಸರಿನಲ್ಲಿ ಸೈಕಲ್ ಸವಾರಿ ನಡೆಸಲಾಯಿತು. … Continued

ಬೆಂಗಳೂರು: ಪುಲ್ವಾಮಾ ಭಯೋತ್ಪಾದಕ ದಾಳಿ ಸಂಭ್ರಮಿಸಿದ ಎಂಜಿನಿಯರಿಂಗ್ ವಿದ್ಯಾರ್ಥಿಗೆ 5 ವರ್ಷ ಜೈಲು ಶಿಕ್ಷೆ ವಿಧಿಸಿದ ಎನ್‌ಐಎ ವಿಶೇಷ ಕೋರ್ಟ್‌

ಬೆಂಗಳೂರು: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಉಗ್ರರ ದಾಳಿಯಿಂದ 40 ಸಿಆರ್‌ಪಿಎಫ್‌ ಸಿಬ್ಬಂದಿ ಹುತಾತ್ಮರಾಗಿದ್ದಕ್ಕೆ ಸಂಬಂಧಿಸಿದಂತೆ ಫೇಸ್‌ಬುಕ್‌ನಲ್ಲಿ ಸಂಭ್ರಮಿಸಿದ್ದ ಬೆಂಗಳೂರಿನ ಕಾಚರಕನಹಳ್ಳಿಯ ಎಂಜಿನಿಯರಿಂಗ್‌ ವಿದ್ಯಾರ್ಥಿ ಫೈಜ್‌ ರಶೀದ್‌ಗೆ ಬೆಂಗಳೂರಿನ ರಾಷ್ಟ್ರೀಯ ತನಿಖಾ ಸಂಸ್ಥೆಯ (ಎನ್‌ಐಎ) ವಿಶೇಷ ನ್ಯಾಯಾಲಯವು ಐದು ವರ್ಷ ಜೈಲು ಶಿಕ್ಷೆ ಹಾಗೂ 25 ಸಾವಿರ ರೂಪಾಯಿ ದಂಡ ವಿಧಿಸಿದೆ. ಬೆಂಗಳೂರಿನ ಕಚರ್ಕನಹಳ್ಳಿ ಪ್ರದೇಶದ … Continued

ಅಕ್ಟೋಬರ್‌ 27ರಂದು ಜೆಡಿಎಸ್ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ

ಬೆಂಗಳೂರು: ಜೆಡಿಎಸ್‍ನ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಅಕ್ಟೋಬರ್‌ 27ರಂದು ನಡೆಯಲಿದೆ.  ಅಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ಮರು ಆಯ್ಕೆಯಾಗುವುದನ್ನು ನಿರೀಕ್ಷಿಸಲಾಗಿದೆ. ನಗರದ ಪಕ್ಷದ ಕಚೇರಿ ಜೆ.ಪಿ.ಭವನದಲ್ಲಿ ಸಂಜೆ 4:30ಕ್ಕೆ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ನಡೆಯಲಿದ್ದು, ಶಾಸಕರು, ಸಂಸದರು, ಕರ್ನಾಟಕ, ಕೇರಳ, ಬಿಹಾರ, ಅಂಧ್ರಪ್ರದೇಶ ಸೇರಿದಂತೆ 12 ರಾಜ್ಯಗಳ ರಾಜ್ಯಾಧ್ಯಕ್ಷರು, … Continued

ಚೀನಿಯರ ಸಾಲದ ಆಪ್ ಪ್ರಕರಣ: ಬೆಂಗಳೂರಿನ ಐದು ಸ್ಥಳಗಳಲ್ಲಿ ಶೋಧ ನಡೆಸುತ್ತಿರುವ ಇ.ಡಿ.

ಬೆಂಗಳೂರು: ಚೀನಾದ ಸಾಲದ ಆ್ಯಪ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಕ್ಟೋಬರ್ 19 ರಂದು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯ (ಪಿಎಂಎಲ್‌ಎ) ನಿಬಂಧನೆಗಳ ಅಡಿಯಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಬೆಂಗಳೂರಿನ ಐದು ಸ್ಥಳಗಳ ಮೇಲೆ ದಾಳಿ ನಡೆಸಿದೆ. ಬೆಂಗಳೂರು ನಗರದ ಸೈಬರ್ ಕ್ರೈಂ ಪೊಲೀಸ್ ಠಾಣೆಯು ಸುಲಿಗೆಯಲ್ಲಿ ತೊಡಗಿರುವ ಹಲವಾರು ಸಂಸ್ಥೆಗಳು ಮತ್ತು ವ್ಯಕ್ತಿಗಳ ವಿರುದ್ಧ … Continued

ಬಲವಂತದಿಂದ ಮತಾಂತರಕ್ಕೆ ಯತ್ನ ಆರೋಪ : ಮಾಜಿ ಕಾರ್ಪೊರೇಟರ್‌ ಸೇರಿ ಮೂವರ ಬಂಧನ

ಬೆಂಗಳೂರು: ಮಂಡ್ಯ ಜಿಲ್ಲೆಯ ಯುವಕನೊಬ್ಬನನ್ನು ಕರೆದೊಯ್ದು ಬಲವಂತದಂದ ಖತ್ನಾ ಮಾಡಿಸಿ ಇಸ್ಲಾಂ ಧರ್ಮಕ್ಕೆ ಮತಾಂತರಗೊಳಿಸಲು ಯತ್ನಿಸಲಾಗಿದೆ ಎಂಬ ಆಪಾದಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಬನಶಂಕರಿ ಠಾಣೆ ಪೊಲೀಸರು ಮಾಜಿ ಕಾರ್ಪೊರೇಟರ್‌ ಸೇರಿದಂತೆ ಮೂವರನ್ನು ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಮಂಡ್ಯ ಜಿಲ್ಲೆ ಮದ್ದೂರು ತಾಲೂಕು ನಿವಾಸಿ ಶ್ರೀಧರ ಎಂಬವರನ್ನು ಬಲವಂತವಾಗಿ ಮತಾಂತರ ಮಾಡಲು ಯತ್ನಿಸಿರುವ ಬಗ್ಗೆ ಹುಬ್ಬಳ್ಳಿಯ ನವನಗರ … Continued

ಉದ್ಯಾನವನಕ್ಕೆ ಮೀಸಲಿಟ್ಟ ಜಮೀನು ಡಿನೋಟಿಫೈ ಮಾಡಿದ ಆರೋಪ: ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು

ಬೆಂಗಳೂರು: ಬೆಂಗಳೂರಿನ ಜಯನಗರದಲ್ಲಿ ಉದ್ಯಾನವನಕ್ಕೆ ಮೀಸಲಿಟ್ಟಿದ್ದ ಕೋಟ್ಯಂತರ ರೂಪಾಯಿ ಬೆಲೆಬಾಳುವ ಸುಮಾರು ಮೂರು ಎಕರೆ ಭೂಮಿಯನ್ನು ಬಿಲ್ಡರ್‌ ಒಬ್ಬರಿಗೆ ಡಿನೋಟಿಫೈ ಮಾಡಿಕೊಟ್ಟಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಶ್ಯಾಮ್‌ ಭಟ್‌ ವಿರುದ್ಧ ಬುಧವಾರ ಲೋಕಾಯುಕ್ತದಲ್ಲಿ ದೂರು ದಾಖಲಿಸಲಾಗಿದೆ ಎಂದು ಬಾರ್‌ & ಬೆಂಚ್‌ ವರದಿ … Continued

ಸಂಗೀತ ನಿರ್ದೇಶಕ ಹಂಸಲೇಖ ಆಸ್ಪತ್ರೆಗೆ ದಾಖಲು

ಬೆಂಗಳೂರು: ಕನ್ನಡದ ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಅವರಿಗೆ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಬೆಂಗಳೂರಿನ ರಾಜಾಜಿ ನಗರ ಫಸ್ಟ್ ಬ್ಲಾಕ್ ನಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ. ಹಂಸಲೇಖ ಅವರಿಗೆ ವೈದ್ಯರು ಚಿಕಿತ್ಸೆ ನೀಡುತ್ತಿದ್ದು, ಆತಂಕ ಪಡುವ ಅವಶ್ಯಕತೆ ಇಲ್ಲ ಎಂದು ತಿಳಿಸಿದ್ದಾರೆ ಎನ್ನಲಾಗಿದೆ. ಮಾಹಿತಿಯ ಪ್ರಕಾರ ಹಂಸಲೇಖ ಅವರು ಗ್ಯಾಸ್ಟ್ರಿಕ್ … Continued

ಕನ್ನಡದ ಹಿರಿಯನಟ ಲೋಹಿತಾಶ್ವ ಆರೋಗ್ಯ ಸ್ಥಿತಿ ಗಂಭೀರ: ಆಸ್ಪತ್ರೆಗೆ ದಾಖಲು

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಲೋಹಿತಾಶ್ವ ಅವರ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಸಾಗರ್ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ. ಲೋಹಿತಾಶ್ವ ಅವರಿಗೆ ತೀವ್ರ ಎದೆನೋವು ಕಾಣಿಸಿಕೊಂಡಿದೆ ಎಂದು ಹೇಳಲಾಗಿದ್ದು, ಅವರನ್ನು ತಕ್ಷಣವೇ ಬೆಂಗಳೂರಿನ ಕುಮಾರಸ್ವಾಮಿ ಲೇಔಟ್‌ನ ಸಾಗರ್ ಅಪೋಲೋ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅವರು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಟ … Continued