35 ಸಾವಿರಕ್ಕೂ ಹೆಚ್ಚು ಹಾವು, ಪ್ರಾಣಿ-ಪಕ್ಷಿಗಳನ್ನು ರಕ್ಷಿಸಿದ್ದ ಸ್ನೇಕ್ ಲೋಕೇಶ ನಿಧನ

ಬೆಂಗಳೂರು: ನೆಲಮಂಗಲದ ಸ್ನೇಕ್ ಲೋಕೇಶ ಎಂದು ಹೆಸರುವಾಸಿಯಾಗಿದ್ದ ಉರಗ ರಕ್ಷಕ, ಲೋಕೇಶ ಅವರು ಹಾವು ಕಡಿತಕ್ಕೊಳಗಾಗಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಇಂದು, ಮಂಗಳವಾರ ಬೆಳಗ್ಗೆ ಸ್ನೇಕ್ ಲೋಕೇಶ ಅವರು ನಿಧನರಾಗಿದ್ದಾರೆ. ನೆಲಮಂಗಲ ತಾಲೂಕಿನ ಡಾಬಸ್ ಪೇಟೆಯಲ್ಲಿ ಜುಲೈ 17ರಂದು ಬರಿಗೈಯಲ್ಲಿ ನಾಗರ ಹಾವನ್ನು ಹಿಡಿಯುವಾಗ‌ ಲೋಕೇಶ ಅವರ ಬೆರಳಿಗೆ ವಿಷಪೂರಿತ ನಾಗರಹಾವು … Continued

ಬೆಂಗಳೂರು: ಒಂದೇ ಕುಟುಂಬದ ಮೂವರು ಆತ್ಮಹತ್ಯೆ

ಬೆಂಗಳೂರು: ರಾಜಧಾನಿಯಲ್ಲಿ ಒಂದೇ ಕುಟುಂಬದ ಮೂವರ ಶವ ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೃತರನ್ನು ಕೋಣನಕುಂಟೆಯ ಚುಂಚನಕಟ್ಟೆ ಎಸ್​​ಬಿಐ ಲೇಔಟ್ ನ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಮಹೇಶ್, ಜ್ಯೋತಿ ಹಾಗೂ ಮಗ ನಂದೀಶ್ ಗೌಡ ಎಂದು ಗುರುತಿಸಲಾಗಿದೆ. ಮಾರಣಾಂತಿಕ ರೋಗ ಎಂದು ತಿಳಿದು ಇಡೀ ಕುಟುಂಬವೇ ಆತ್ಮಹತ್ಯೆಗೆ ಶರಣಾಗಿದೆ ಎಂದು ಹೇಳಲಾಗಿದೆ. ಬಿಬಿಎಂಪಿ ಗುತ್ತಿಗೆ ನೌಕರನಾಗಿ … Continued

ಪತಿ ಕಿರುಕುಳ: ಪ್ರಧಾನಿ ಮೋದಿಗೆ ವೀಡಿಯೋ ಸಂದೇಶ ಕಳುಹಿಸಿ ಆತ್ಮಹತ್ಯೆಗೆ ಯತ್ನಿಸಿದ ಮಾಜಿ ಉಪ ಮೇಯರ್

ಬೆಂಗಳೂರು: ಮಾಜಿ ಉಪ ಮೇಯರ್‌ ಶಹತಾಜ್ ಬೇಗಂ ತಮ್ಮ ಪತಿ ಹಾಗೂ ಪೊಲೀಸರು ಕಿರುಕುಳ ನೀಡುತ್ತಿದ್ದಾರೆಂದು ಆರೋಪಿಸಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ವೀಡಿಯೊ ಸಂದೇಶ ಕಳುಹಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಕುತ್ತಿಗೆಗೆ ಸೀರೆಯಿಂದ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಫೇಸ್ಬುಕ್‌ನಲ್ಲಿ ಅವರು ವೀಡಿಯೋ ಅಪ್ಲೋಡ್ ಮಾಡಿದ್ದಾರೆ. ಮೋದಿಯವರೇ ಒಂದೋ ನನಗೆ ರಕ್ಷಣೆ ನೀಡಿ, … Continued

ಖ್ಯಾತ ಸುಗಮ ಸಂಗೀತ ಗಾಯಕ ಶಿವಮೊಗ್ಗ ಸುಬ್ಬಣ್ಣ ನಿಧನ

ಬೆಂಗಳೂರು: ಕನ್ನಡ ಸಿನೆಮಾಕ್ಕೆ ಮೊದಲ ರಾಷ್ಟ್ರಪ್ರಶಸ್ತಿ ತಂದುಕೊಟ್ಟ ಖ್ಯಾತ ಸುಗಮ ಸಂಗೀತ ಗಾಯಕ ಶಿವಮೊಗ್ಗ ಸುಬ್ಬಣ್ಣ (83) ಗುರುವಾರ ರಾತ್ರಿ ನಿಧನರಾಗಿದ್ದಾರೆ. ಅವರನ್ನು ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಗೆ ದಾಖಲಿಸಲಾಗಿತ್ತು, ಆದರೆ ಚಿಕಿತ್ಸೆಗೆ ಸ್ಪಂದಿಸದೆ ನಿಧನರಾಗಿದ್ದಾರೆ ಎಂದು ಹೇಳಲಾಗಿದೆ. ಮಗಳು ‘ದಿ ಹಿಂದೂ’ ದಿನ ಪತ್ರಿಕೆಯ ಸ್ಥಾನಿಕ ಸಂಪಾದಕಿ ಭಾಗೇಶ್ರಿ, ಮಗ ಶ್ರೀರಂಗ, … Continued

ಕರುಳ ಕುಡಿಯನ್ನು ಸಾಯಿಸಿ ತಾನೂ ಆತ್ಮಹತ್ಯೆಗೆ ಶರಣಾದ ದಂತ ವೈದ್ಯೆ

ಬೆಂಗಳೂರು: ದಂತ ವೈದ್ಯೆಯೊಬ್ಬಳು ತನ್ನ ಹತ್ತು ವರ್ಷದ ಮಗಳನ್ನು ಸಾಯಿಸಿ ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬನಶಂಕರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ದಂತ ವೈದ್ಯೆ ಸೈಮಾ (36) ತನ್ನ ಹತ್ತು ವರ್ಷದ ಮಗಳು ಆರಾಧನಾಳನ್ನು ಸಾಯಿಸಿ ಆತ್ಮಹತ್ಯೆ ಮಾಡಿಕೊಂಡಿರುವವಳು ಎಂದು ಗುರುತಿಸಲಾಗಿದೆ. ಜನಶಂಕರಿ 2ನೆ ಹಂತ, ಸೇವಾಶ್ರಮ ಆಸ್ಪತ್ರೆ ಸಮೀಪ ಸೈಮಾ ಅವರ … Continued

ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಯಾದ ಖ್ಯಾತ ಹಾಸ್ಯನಟ ಟೆನ್ನಿಸ್ ಕೃಷ್ಣ

ಬೆಂಗಳೂರು: ಮುಂಬರುವ ರಾಜ್ಯ ವಿಧಾನಸಭೆ ಚುನಾವಣೆಗಾಗಿ ಎಲ್ಲ ಪಕ್ಷಗಳು ತಯಾರಿ ಆರಂಭಿಸಿವೆ. ಈಗ ಕನ್ನಡ ಚಿತ್ರರಂಗದ ಖ್ಯಾತ ಹಾಸ್ಯ ನಟ ಟೆನ್ನಿಸ್ ಕೃಷ್ಣ ಅವರು ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ನಗರದ ಖಾಸಗಿ ಹೊಟೇಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಹಾಗೂ ಇನ್ನಿತರ ಹಿರಿಯ ಮುಖಂಡರ ಸಮ್ಮುಖದಲ್ಲಿ ನಟ ಟೆನ್ನಿಸ್ … Continued

ಬೆಂಗಳೂರಿನಲ್ಲಿ ಇಥಿಯೋಪಿಯದಿಂದ ಬಂದ ವ್ಯಕ್ತಿಯಲ್ಲಿ ಶಂಕಿತ ಮಂಕಿಪಾಕ್ಸ್‌ ಪತ್ತೆ

ಬೆಂಗಳೂರು: ಶಂಕಿತ ಮಂಕಿಪಾಕ್ಸ್ ಪ್ರಕರಣ ರಾಜಧಾನಿ ಬೆಂಗಳೂರಿಗೂ ಕಾಲಿಟ್ಟಿದೆ. ಮಂಕಿಪಾಕ್ಸ್ ಗುಣಲಕ್ಷಣಗಳಿರುವ ವಿದೇಶಿ ಪ್ರಜೆಯನ್ನು ಆರೋಗ್ಯ ಇಲಾಖೆ ಪತ್ತೆ ಮಾಡಿದೆ. ಆಫ್ರಿಕಾ ಮೂಲದ ವ್ಯಕ್ತಿಯಲ್ಲಿ ಮಂಕಿಪಾಕ್ಸ್ ಗುಣಲಕ್ಷಣಗಳು ಪತ್ತೆಯಾಗಿರುವುದರಿಂದ ಶಂಕಿತ ರೋಗಿಯನ್ನು ಕೂಡಲೇ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ನಿಗಾ ವಹಿಸಲಾಗಿದೆ. ಜುಲೈ 4ರಂದು ಇಥಿಯೋಪಿಯಾದಿಂದ ಬೆಂಗಳೂರಿಗೆ ಬಂದಿದ್ದ ಈ ವ್ಯಕ್ತಿಗೆ ಗುಣಲಕ್ಷಣಗಳು ಕಂಡು … Continued

ಉತ್ತರ ಕನ್ನಡಕ್ಕೆ ಬೇಕು ಸುಪರ್‌ಸ್ಪೆಶಾಲಿಟಿ ಆಸ್ಪತ್ರೆ : ನಾಳೆ ಬೆಂಗಳೂರಲ್ಲಿ ಹಕ್ಕೊತ್ತಾಯ

ಬೆಂಗಳೂರು: ಉತ್ತರ ಕನ್ನಡ ಜಿಲ್ಲೆಯಲ್ಲಿ ಒಂದು ಸುಸಜ್ಜಿತ ಆಸ್ಪತ್ರೆ ನಿರ್ಮಾಣ ಆಗಬೇಕು ಎಂದು ಒತ್ತಾಯಿಸಿ ಸರ್ಕಾರದ ಗಮನ ಸೆಳೆಯಲು ಬೆಂಗಳೂರಿನಲ್ಲಿ ವಾಸವಾಗಿರುವ ಉತ್ತರ ಕನ್ನಡ ಜಿಲ್ಲೆಯ ನಾಗರಿಕರ ವೇದಿಕೆ ವತಿಯಿಂದ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಜುಲೈ 30ರಂದು ಶನಿವಾರ ಬೆಳಿಗ್ಗೆ 9 ಗಂಟೆಗೆ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಎಲ್ಲರೂ ಸೇರಿ WeNeedSuperSpecialityHospitalInUttaraKannada” ಎಂಬ ಘೋಷ ವಾಕ್ಯದೊಂದಿಗೆ ಉತ್ತರ … Continued

ಬೆಂಗಳೂರು: 2.68 ಕೋಟಿ ರೂ. ಮೌಲ್ಯದ ರಕ್ತ ಚಂದನ ವಶ

ಬೆಂಗಳೂರು: ಇಲ್ಲಿನ ಬ್ಯಾಟರಾಯನಪುರ ಠಾಣೆ ಪೊಲೀಸರು ಐದು ಮಂದಿಯನ್ನು ಬಂಧಿಸಿ ಅವರಿಂದ 2.68 ಕೋಟಿ ರೂ. ಮೌಲ್ಯದರಕ್ತಚಂದನದ ತುಂಡುಗಳು ಮತ್ತು ಎರಡು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿಗಳನ್ನು ವಿನೋದ, ಲಕ್ಷ್ಮಯ್ಯ, ಸಂಜಯ್, ರಾಜು, ಕೃಷ್ಣ ಎಂದು ಗುರುತಿಸಲಾಗಿದ್ದು, ಅವರಿಂದ ಒಟ್ಟು 1693 ಕೆಜಿ ತೂಕದ ರಕ್ತಚಂದನದ ತುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ಸ್ಯಾಟಲೈಟ್ ಬಸ್ ನಿಲ್ದಾಣದ ಬಳಿಯ … Continued

ತಂದೆಯ ಅಚಾತುರ್ಯಕ್ಕೆ ಪುಟ್ಟ ಮಗು ಸಾವು: ವಾಹನ ರಿವರ್ಸ್‌ ತೆಗೆದುಕೊಳ್ಳುವಾಗ ಆಟವಾಡುತ್ತಿದ್ದ ಮಗುವಿನ ಮೇಲೆ ಹರಿದ ವಾಹನ

ಬೆಂಗಳೂರು: ಇಟ್ಟಿಗೆ ತುಂಬಿದ್ದ ವಾಹನವನ್ನು ಹಿಂದಕ್ಕೆ ತೆಗೆಯುವಾಗ ಆಟವಾಡುತ್ತಿದ್ದ ಪುಟ್ಟ ಮಗುವಿನ ಮೇಲೆ ಹರಿದು ಕಂದಮ್ಮ ಸಾವಿಗೀಡಾದ ಘಟನೆ ಬೆಂಗಳೂರು ಹೊರವಲಯ ಕಾಮನಹಳ್ಳಿ ಸಮೀಪದ ಗೋಣಿಘಟ್ಟಪುರದಲ್ಲಿ ನಡೆದಿದೆ. ಒಂದೂವರೆ ವರ್ಷದ ಮನಿಶಾ ದೇವಿ ಮೃತ ಮಗು ಎಂದು ಗುರುತಿಸಲಾಗಿದೆ. ಮಗುವಿನ ತಂದೆ ಬಾಲಕೃಷ್ಣ ಅವರೇ ವಾಹನವನ್ನು ಹಿಂದಕ್ಕೆ ಚಲಾಯಿಸುತ್ತಿರುವಾಗ ಈ ದುರ್ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ. … Continued