ಬೆಂಗಳೂರು: ಯುವತಿ ಮೇಲೆ ಆ್ಯಸಿಡ್ ದಾಳಿ ನಡೆಸಿ ಪರಾರಿಯಾದ ಪಾಗಲ್ ಪ್ರೇಮಿ

ಬೆಂಗಳೂರು: ಯುವತಿಯೊಬ್ಬಳ ಮೇಲೆ ಪಾಗಲ್ ಪ್ರೇಮಿಯೊಬ್ಬ ‌ ಆ್ಯಸಿಡ್ ಎರಚಿ ಪರಾರಿಯಾದ ಘಟನೆ ಕಾಮಾಕ್ಷಿಪಾಳ್ಯ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಗಾಯಗೊಂಡಿರುವ ಯುವತಿ‌ಯನ್ನು ಆಸ್ಪತ್ರೆಗೆ‌ ದಾಖಲಿಸಲಾಗಿದೆ. 23 ವರ್ಷದ ಯುವತಿ ಕೆಲಸಕ್ಕೆ ಹೋಗಲು ಬಸ್‌ಗೆ ನಿಂತಿದ್ದಾಗ ಪಾಗಲ್ ಪ್ರೇಮಿ ನಾಗೇಶ್ ಆ್ಯಸಿಡ್ ಎರಚಿ ವಿಕೃತಿ ಮೆರೆದಿದ್ದಾನೆ. ಸುಂಕದಕಟ್ಟೆಯ ಮುತ್ತೂಟ್ ಫಿನ್ ಕಾರ್ಪ್ ಬಳಿ ಈ ಘಟನೆ ನಡೆದಿದೆ. … Continued

ಬಳ್ಳಾರಿ: ಡ್ರಾಮಾ ಜ್ಯೂನಿಯರ್ ನೋಡಲು ಮನೆ ಬಿಟ್ಟು ಬೆಂಗಳೂರಿಗೆ ಬಂದ 4 ಮಕ್ಕಳು

ಬಳ್ಳಾರಿ: ಖಾಸಗಿ ಮನೋರಂಜನಾ ವಾಹಿನಿಯಲ್ಲಿ ಬರುವ ‘ಡ್ರಾಮಾ ಜ್ಯೂನಿಯರ್’ ರಿಯಾಲಿಟಿ ಶೋ ನೋಡಲು ಮನೆ ಬಿಟ್ಟು ಬೆಂಗಳೂರಿನತ್ತ ಮಕ್ಕಳು ಬಂದ ಘಟನೆ ಬಳ್ಳಾರಿಯಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಬೇಸಿಗೆ ರಜೆ ನೀಡಿದ ಹಿನ್ನೆಲೆಯಲ್ಲಿ ಬಳ್ಳಾರಿಯ ಚಂದ್ರಶೇಕರ ಹಾಗೂ ವೀರೇಶ ಎಂಬವರ ನಾಲ್ಕು ಹೆಣ್ಣು ಮಕ್ಕಳು ಮನೆಯಲ್ಲಿ ಆಟವಾಡುತ್ತಿದ್ದರು. ಆಟ ಆಡುವುದು ಬಿಟ್ಟು ಓದಿನ ಕಡೆ ಗಮನ … Continued

ಬೆಂಗಳೂರು: ಎಸ್‌ಪಿ ಶೋಭಾ ಕಟಾವ್ಕರ್ ಮನೆಯಲ್ಲಿ ಶವವಾಗಿ ಪತ್ತೆ

ಬೆಂಗಳೂರು: ಇತ್ತೀಚಿಗಷ್ಟೇ ಎಸ್‌ಪಿಯಾಗಿ ಮುಂಬಡ್ತಿ ಪಡೆದು ವರ್ಗಾವಣೆಗೊಂಡಿದ್ದ ಶೋಭಾ ಕಟಾವ್ಕರ್(53) ತಮ್ಮ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಹೃದಯಾಘಾತವಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.ಮನೆಯ ಸದಸ್ಯರೆಲ್ಲರೂ ಹಾಸನಕ್ಕೆ ತೆರಳಿದ್ದರು. ಪುಟ್ಟೇನಹಳ್ಳಿಯ ನಿವಾಸದಲ್ಲಿ ಶೋಭಾ ಒಬ್ಬರೇ ಇದ್ದರು. ಅವರ ಪುತ್ರ ಇಂದು ಸಂಜೆ ಕಟಾವ್ಕರ್‌ಗೆ ಕರೆ ಮಾಡಿದಾಗ ಅವರು ಫೋನ್ ಸ್ವೀಕರಿಸಿರಲಿಲ್ಲ, ಹೀಗಾಗಿ ಮನೆಯ ಸೆಕ್ಯುರಿಟಿಗೆ ಕರೆ ಮಾಡಿ ವಿಚಾರಿಸಲು … Continued

ಹಣಕಾಸು ವ್ಯವಹಾರದಲ್ಲಿ ಲೆಕ್ಕ ತಪ್ಪಿದಕ್ಕೆ ಹಾಡಹಗಲೇ ಮಗನಿಗೆ ಬೆಂಕಿ ಹಚ್ಚಿದ ತಂದೆ…!

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲೊಂದು ಅತ್ಯಂತ ಅಮಾನುಷ ಘಟನೆ ನಡೆದಿದ್ದು, ತಂದೆಯೇ ಮಗನಿಗೆ ಬೆಂಕಿ ಹಚ್ಚಿದ್ದಾನೆ…! ಹಣಕಾಸು ಲೆಕ್ಕದಲ್ಲಿ ವ್ಯತ್ಯಾಸ ಬಂದಿದೆ ಎಂಬ ಕಾರಣಕ್ಕೆ ಸಿಟ್ಟಿನ ಭರದಲ್ಲಿ ವಿವೇಕವನ್ನೇ ಕಳೆದುಕೊಂಡ ತಂದೆ ತನ್ನ ಮಗನಿಗೇ ಬೆಂಕಿ ಹಚ್ಚಿದ್ದು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮಗ ಅರ್ಪಿತ್(25) ಮೃತಪಟ್ಟಿದ್ದಾನೆ. ಬೆಂಗಳೂರಿನ ಆಜಾದ್ ನಗರದಲ್ಲಿ ಈ ಘಟನೆ ನಡೆದಿದ್ದು, ಈ ಭೀಕರ … Continued

ಬೆಂಗಳೂರು: ಸ್ನೇಹ ಸೇತು 2022′ ಕಾರ್ಯಕ್ರಮ ಉದ್ಘಾಟನೆ

ಬೆಂಗಳೂರು: ಬೆಂಗಳೂರಿನ ಪ್ರತಿಷ್ಠಿತ ಉತ್ತರ ಕನ್ನಡ ಸಂಘದ ‘ಸ್ನೇಹ ಸೇತು 2022’ ಕಾರ್ಯಕ್ರಮ ಸಂಘದ ಸ್ವಂತ ಕಟ್ಟಡ ‘ಉತ್ತರ ಕನ್ನಡ ಭವನ’ದಲ್ಲಿ ನಡೆಯಿತು. ಮುಖ್ಯ ಅತಿಥಿಗಳಾದ ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷರಾದ ಡಾ. ಜಿ ಎಲ್ ಹೆಗಡೆ ‘ಸದಸ್ಯತ್ವ ಅಭಿಯಾನ ಕಾರ್ಯಕ್ರಮ’ ಉದ್ಘಾಟಿಸಿದರು. ಶ್ರೀ ಚೌಡೇಶ್ವರಿ ದೇವಸ್ಥಾನದ ವ್ಯವಸ್ಥಾಪಕ ಧರ್ಮದರ್ಶಿ ಶ್ರೀ ಅನಂತರಾಮ ದಂಪತಿ ಕಾರ್ಯಕ್ರಮದಲ್ಲಿ … Continued

ತಮಿಳುನಾಡು ಸಚಿವರ ಮಗಳು ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್​; ಪ್ರಿಯಕರನ ಮದುವೆಯಾಗಿ ಪೊಲೀಸರಿಂದ ರಕ್ಷಣೆ ಕೋರಿದ ಯವತಿ

ಬೆಂಗಳೂರು: ತಮಿಳುನಾಡು ಸಚಿವರ ಪುತ್ರಿಯ ಅಪಹರಣ ಪ್ರಕರಣಕ್ಕೆ ತಿರುವು  ಸಿಕ್ಕಿದ್ದು, ಪುತ್ರಿ ಮತ್ತು ಪ್ರಿಯಕರ ಬೆಂಗಳೂರಿನಲ್ಲಿ ಪ್ರತ್ಯಕ್ಷವಾಗಿ ತಮಗೆ ರಕ್ಷಣೆ ನೀಡುವಂತೆ ಪೊಲೀಸರ ಮೊರೆ ಹೋಗಿದ್ದಾರೆ. ತಮಿಳುನಾಡು ಸರ್ಕಾರದ ಮುಜರಾಯಿ ಸಚಿವ ಶೇಖರ್ ಬಾಬು ಪುತ್ರಿ ಜಯಕಲ್ಯಾಣಿ ಸತೀಶ್ ಕುಮಾರ್ ಎಂಬವರನ್ನು ಪ್ರೀತಿಸುತ್ತಿದ್ದರು. ಈ ವಿಚಾರವಾಗಿ ತಮಿಳುನಾಡಿನಲ್ಲಿ ವಿರೋಧ ವ್ಯಕ್ತವಾಗಿತ್ತು. ಈ ವಿರೋಧದ ನಡುವೆ ಜಯಕಲ್ಯಾಣಿ … Continued

ವಿವಿಧ ಪ್ರಕರಣಗಳಲ್ಲಿ ಬೇಕಾಗಿದ್ದ ಆರೋಪಿ ಕಾಲಿಗೆ ಗುಂಡೇಟು, ಬಂಧನ

ಬೆಂಗಳೂರು: ಪೊಲೀಸರಿಗೆ ಸವಾಲೆಸೆದು ತಲೆ ಮರೆಸಿಕೊಂಡಿದ್ದ ಕುಖ್ಯಾತ ರೌಡಿ ಕಾಲಿಗೆ ಗುಂಡು ಹಾರಿಸಿ ಆತನನ್ನು ಸೆರೆ ಹಿಡಿಯುವಲ್ಲಿ ಹನುಮಂತನಗರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ರೌಡಿಶೀಟರ್ ರಾಹುಲ್ ಅಲಿಯಾಸ್ ಸ್ಟಾರ್ (22) ಪೊಲೀಸರ ಗುಂಡೇಟಿನಿಂದ ಗಾಯಗೊಂಡು ಈಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಈತನ ವಿರುದ್ಧ 4 ಕೊಲೆಯತ್ನ ಪ್ರಕರಣ ಸೇರಿದಂತೆ ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ 21 … Continued

ಪರಿಷತ್‌ ಚುನಾವಣೆ: ಚಿತ್ರದುರ್ಗ, ಚಿಕ್ಕಮಗಳೂರು, ಬೆಂಗಳೂರಿನಲ್ಲಿ ಬಿಜೆಪಿ ಗೆಲುವು, ಕೆಜಿಎಫ್‌ ಬಾಬು ಸೋಲು

ಪರಿಷತ್‌ ಚುನಾವಣೆ: ಚಿತ್ರದುರ್ಗ, ಚಿಕ್ಕಮಗಳೂರು, ಬೆಂಗಳೂರಿನಲ್ಲಿ ಬಿಜೆಪಿ ಗೆಲುವು, ಕೆಜಿಎಫ್‌ ಬಾಬು ಸೋಲು ಬೆಂಗಳೂರು: ರಾಜ್ಯದಲ್ಲಿ ಡಿಸೆಂಬರ್ 10ರಂದು ನಡೆದಿದ್ದ ವಿಧಾನ ಪರಿಷತ್ ಚುನಾವಣೆಯಲ್ಲಿ ಚಿತ್ರದುರ್ಗ, ಚಿಕ್ಕಮಗಳೂರು, ಬೆಂಗಳೂರು ನಗರದಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಚಿತ್ರದುರ್ಗದಲ್ಲಿ ಬಿಜೆಪಿ ಅಭ್ಯರ್ಥಿ ಕೆ.ಎಸ್.ನವೀನ್ ಅವರು ಕಾಂಗ್ರೆಸ್ ಅಭ್ಯರ್ಥಿ ಸೋಮಶೇಖರ್ ವಿರುದ್ಧ ನವೀನ್ ಗೆಲುವಿನ ನಗೆ ಬೀರಿದ್ದಾರೆ. ಸತತ … Continued

ಇಂದ್ರಜಿತ್‌ ಲಂಕೇಶ್‌ ದೂರು: ತನಿಖೆಗೆ ಮೈಸೂರು ಪೊಲೀಸ್‌ ಆಯುಕ್ತರಿಗೆ ಗೃಹ ಸಚಿವರ ಸೂಚನೆ

ಬೆಂಗಳೂರು: ನಿರ್ದೇಶಕ ಇಂದ್ರಜಿತ್‌ ಲಂಕೇಶ್‌ ನೀಡಿದ ದೂರನ್ನು ಆಧರಿಸಿ ತನಿಖೆ ಸೂಚಿಸಿದ್ದು, ಮೈಸೂರು ಪೊಲೀಸ್‌ ಆಯುಕ್ತರಿಗೆ ಈ ಕುರಿತು ಮಾಹಿತಿ ನೀಡಿದ್ದೇನೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದ್ರಜಿತ್ ಲಂಕೇಶ್ ನನಗೆ ಮನವಿ ಪತ್ರ ನೀಡಿದ್ದಾರೆ. ಮನವಿ ಪತ್ರದ ಆಧಾರದ ಮೇಲೆ ತನಿಖೆ ಮಾಡುವಂತೆ ಮೈಸೂರು ಪೊಲೀಸ್ … Continued

ಕರ್ನಾಟಕ ಯೂತ್ ಕಾಂಗ್ರೆಸ್ ಅಧ್ಯಕ್ಷ ಸೇರಿದಂತೆ 17 ಜನರ ವಿರುದ್ಧ ಎಫ್‍ಐಆರ್

ಬೆಂಗಳೂರು: ಬೆಂಗಳೂರು ನಗರದ ಸಂಜಯನಗರ ಪೊಲೀಸ್ ಠಾಣೆಯಲ್ಲಿ ಕರ್ನಾಟಕ ಯೂತ್ ಕಾಂಗ್ರೆಸ್ ಅಧ್ಯಕ್ಷ ರಕ್ಷಾ ರಾಮಯ್ಯ ಸೇರಿದಂತೆ 17 ಜನರ ವಿರುದ್ಧ ಎಫ್‍ಐಆರ್ ದಾಖಲಾಗಿದೆ. ಕರ್ನಾಟಕ ಪ್ರದೇಶ ಯೂತ್ ಕಾಂಗ್ರೆಸ್ ಅಧ್ಯಕ್ಷ ರಕ್ಷಾರಾಮಯ್ಯ ಸೇರಿ ಒಟ್ಟು 17 ಮಂದಿ ವಿರುದ್ಧ ಎನ್.ಡಿ.ಎಂ.ಎ ಆಕ್ಟ್ ಅಡಿಯಲ್ಲಿ ಕೇಸ್ ದಾಖಲಾಗಿದೆ. ನಗರದಲ್ಲಿ ಜುಲೈ 12 ರಂದು ಬೆಲೆ ಏರಿಕೆ … Continued