4 ವರ್ಷದ ಮಗನ ಕೊಲೆ ಆರೋಪಿ ಬೆಂಗಳೂರು ಸಿಇಒ ಸಿಕ್ಕಿಬಿದ್ದಿದ್ದು ಹೇಗೆ..? ಈ ಸುಚನಾ ಸೇಠ್ ಯಾರು…? ಕೊಲೆ ಮಾಡಲು ಕಾರಣ ಏನು..?

 ನವದೆಹಲಿ : ಬೆಂಗಳೂರು ಮೂಲದ ಎಐ ಸ್ಟಾರ್ಟ್‌ಅಪ್‌ನ ಸಿಇಒ ಸುಚನಾ ಸೇಠ್ ಅವಳನ್ನು ಗೋವಾದ ಸರ್ವಿಸ್ ಅಪಾರ್ಟ್‌ಮೆಂಟ್‌ನಲ್ಲಿ ತನ್ನ ನಾಲ್ಕು ವರ್ಷದ ಮಗನನ್ನು ಹತ್ಯೆ ಮಾಡಿದ ಆರೋಪದ ಮೇಲೆ ಬಂಧಿಸಲಾಗಿದೆ. ಮಗುವಿನ ದೇಹವನ್ನು ಬ್ಯಾಗ್‌ನಲ್ಲಿ ತುಂಬಿಕೊಂಡು ಗೋವಾದಿಂದ ಕ್ಯಾಬ್‌ನಲ್ಲಿ ಬೆಂಗಳೂರಿಗೆ ಹೋಗಲು ಪ್ರಯತ್ನಿಸುತ್ತಿದ್ದಾಗ ಚಿತ್ರದುರ್ಗದ ಬಳಿ ಆಕೆ ಸಿಕ್ಕಿಬಿದ್ದಿದ್ದಾಳೆ. ಸುಚನಾ ಸೇಠ್ ಶನಿವಾರ ಉತ್ತರ ಗೋವಾದ … Continued

ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಿತ್ತು ಎಂಬ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ ಹೇಳಿಕೆಗೆ ಆಕ್ರೋಶ

ಬೆಳಗಾವಿ/ಬೆಂಗಳೂರು  : ಸ್ವಾತಂತ್ರ್ಯ ಪೂರ್ವದಲ್ಲಿ ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಿತ್ತು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ ವಿವಾದಾತ್ಮಕ ಹೇಳಿಕೆ ಭಾರಿ ಚರ್ಚೆಗೆ ಗ್ರಾಸವಾಗಿದೆ. ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಕಾರದಗಾ ಗ್ರಾಮದಲ್ಲಿ ಜನವರಿ 7ರಂದು ನಡೆದ 6ನೇ ಕನ್ನಡ ಸಮ್ಮೇಳನದಲ್ಲಿ ಪಾಲ್ಗೊಂಡಿದ್ದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ ಅವರು ಮಾತಿನ ಭರದಲ್ಲಿ ಸ್ವಾತಂತ್ರ್ಯ ಪೂರ್ವದಲ್ಲಿ ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಿತ್ತು … Continued

ಕೋಮುಗಲಭೆಗೆ ಯತ್ನ ಆರೋಪ : ಪುನೀತ್ ಕೆರೆಹಳ್ಳಿ ವಿರುದ್ಧ ದೂರು ನೀಡಿದ ಕಾಂಗ್ರೆಸ್

ಬೆಂಗಳೂರು : ಸಾಮಾಜಿಕ ಜಾಲತಾಣದಲ್ಲಿ ಕೋಮುಗಲಭೆಗೆ ಯತ್ನಿಸಿದ್ದಾರೆ ಎಂದು ಆರೋಪಿಸಿ ಪುನೀತ ಕೆರೆಹಳ್ಳಿ ವಿರುದ್ಧ ಬೆಂಗಳೂರು ಕೇಂದ್ರ ಜಿಲ್ಲಾ ಕಾಂಗ್ರೆಸ್ ಸಮಿತಿಯ ಹಿಂದುಳಿದ ವರ್ಗಗಳ ವಿಭಾಗದಿಂದ ಸೈಬರ್ ಕ್ರೈಂಗೆ ದೂರು ನೀಡಲಾಗಿದೆ. ರಾಷ್ಟ್ರ ರಕ್ಷಣಾ ಪಡೆ ವಾಟ್ಸಾಪ್ ಗ್ರೂಪ್​ನಲ್ಲಿ ಸಂದೇಶ ರವಾನಿಸುವ ಮೂಲಕ ಕೋಮುಗಲಭೆ ಸೃಷ್ಟಿಸುವ ಪ್ರಯತ್ನ ನಡೆದಿದೆ ಎಂದು ಆರೋಪಿಸಿರುವ ಕಾಂಗ್ರೆಸ್‌ ಪುನೀತ್​ ಕೆರೆಹಳ್ಳಿ … Continued

ಬೆಂಗಳೂರು: ಮನೆಯಲ್ಲೇ ಗುಂಡು ಹಾರಿಸಿಕೊಂಡು ವಿದ್ಯಾರ್ಥಿ ಆತ್ಮಹತ್ಯೆ

ಬೆಂಗಳೂರು: ಬೆಂಗಳೂರಿನ ಭವಾನಿನಗರದಲ್ಲಿ 19 ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ತನ್ನ ಮನೆಯಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತ ವಿದ್ಯಾರ್ಥಿಯನ್ನು ಬೆಂಗಳೂರಿನ ಖಾಸಗಿ ಕಾಲೇಜಿನಲ್ಲಿ ಪ್ರಥಮ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿ ವಿಶು ಉತ್ತಪ್ಪ ಎಂದು ಗುರುತಿಸಲಾಗಿದೆ. ಬೆಂಗಳೂರಿನ ಕಂಪನಿಯೊಂದರಲ್ಲಿ ಭದ್ರತಾ ಅಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ತಮ್ಮಯ್ಯ ಅವರ ಪುತ್ರ ವಿಶು ಉತ್ತಪ್ಪ ಮನೆಯಲ್ಲಿ ಯಾರೂ ಇಲ್ಲದ … Continued

ಬಿಜೆಪಿ ಶಾಸಕ ಸುನಿಲಕುಮಾರ ಪೊಲೀಸ್ ವಶಕ್ಕೆ

ಬೆಂಗಳೂರು: ‘ಅಯೋಧ್ಯೆ ರಾಮಮಂದಿರದ ಕರಸೇವಕ ನಾನು. ನನ್ನನ್ನೂ ಬಂಧಿಸಿ’ ಎಂದು ಆಗ್ರಹಿಸಿ ನಗರದ ಸದಾಶಿವನಗರ ಪೊಲೀಸ್ ಠಾಣೆ ಎದುರು ಗುರುವಾರ ಬೆಳಿಗ್ಗೆ ಏಕಾಂಗಿಯಾಗಿ ಪ್ರತಿಭಟನೆ ನಡೆಸಿದ ಶಾಸಕ ಹಾಗೂ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ.ಸುನಿಲಕುಮಾರ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹುಬ್ಬಳ್ಳಿಯಲ್ಲಿ ಬಂಧನ ಮಾಡಿರುವ ಕರಸೇವಕರ ಬಿಡುಗಡೆಗೆ ಆಗ್ರಹಿಸಿ ಬಿಜೆಪಿ (BJP) ನಿತ್ಯ ಪ್ರತಿಭಟನೆ … Continued

ನಾವು ರಾಮ ಮಂದಿರದ ಪರವಾಗಿದ್ದೇವೆ, ನಾನೂ ರಾಮ ಭಜನೆಗೆ ಹೋಗ್ತಿದ್ದೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಅಯೋಧ್ಯೆ ರಾಮ ಮಂದಿರಕ್ಕೆ ನಮ್ಮ ಸಂಪೂರ್ಣ ಬೆಂಬಲವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಅಯೋಧ್ಯೆ ರಾಮಮಂದಿರ ಉದ್ಘಾಟನೆ ವಿಚಾರವನ್ನು ಬಿಜೆಪಿ ರಾಜಕೀಯ ಲಾಭಕ್ಕೆ ಬಳಸಿಕೊಳ್ಳುತ್ತಿದೆ ಎಂದು ಕೆಲ ವಿಪಕ್ಷದ ನಾಯಕರು ಆರೋಪಿಸಿರುವ ಬೆನ್ನಲ್ಲೇ ಅಯೋಧ್ಯೆ ರಾಮ ಮಂದಿರದ ನಿರ್ಮಾಣ ಹಾಗೂ ಉದ್ಘಾಟನೆಗೆ ನಮ್ಮ ಯಾವುದೇ ವಿರೋಧವಿಲ್ಲ, ನಾವು ರಾಮಮಂದಿರದ ಪರವಾಗಿದ್ದೇವೆ ಎಂದು ಹೇಳಿದ್ದಾರೆ. … Continued

ನಾಮಫಲಕಗಳಲ್ಲಿ ಶೇ.60 ಕನ್ನಡ ಭಾಷೆ ಬಳಕೆ ಕಡ್ಡಾಯ ; ಫೆಬ್ರವರಿ 28 ಗಡುವು ಕೊಟ್ಟ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ ಕಾಯ್ದೆಗೆ ತಿದ್ದುಪಡಿ ತಂದು 2024ರ ಫೆಬ್ರವರಿ 28ರೊಳಗೆ ವಾಣಿಜ್ಯ ಮಳಿಗೆಗಳ ನಾಮ ಫಲಕದಲ್ಲಿ ಶೇ. 60 ಕನ್ನಡ ಭಾಷೆಯಲ್ಲಿ ಇರಬೇಕೆಂದು ಗಡುವು ನೀಡಲಾಗುವುದು. ಅಲ್ಲಿವರೆಗೆ ಎಲ್ಲರೂ ಶಾಂತಿಯುತವಾಗಿ ಕಾನೂನು ಸುವ್ಯವಸ್ಥೆ ಕಾಪಾಡುವ ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ. ಅಂಗಡಿ ಮುಂಗಟ್ಟುಗಳಲ್ಲಿ ಕನ್ನಡ ನಾಮಫಲಕ … Continued

ವೀಡಿಯೊ…| ಹಿಂಸಾಚಾರಕ್ಕೆ ತಿರುಗಿದ ಕರವೇ ಪ್ರತಿಭಟನೆ : ಅಧ್ಯಕ್ಷ ನಾರಾಯಣ ಗೌಡ ಸೇರಿ ಹಲವು ಕಾರ್ಯಕರ್ತರು ವಶಕ್ಕೆ

ಬೆಂಗಳೂರು: ಕನ್ನಡ ನಾಮಫಲಕ ಕಡ್ಡಾಯಗೊಳಿಸುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ನಡೆಸುತ್ತಿದ್ದ ಪ್ರತಿಭಟನಾ ರ್ಯಾಲಿ ಬುಧವಾರ ಹಿಂಸಾಚಾರಕ್ಕೆ ತಿರುಗಿದೆ. ಕರವೇ ಅಧ್ಯಕ್ಷ ನಾರಾಯಣ ಗೌಡ ಸೇರಿ ಹಲವು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬುಧವಾರ ಬೆಳಿಗ್ಗೆ 11 ಗಂಟೆಗೆ ಕರವೇ ಕಾರ್ಯಕರ್ತರು ದೇವನಹಳ್ಳಿಯ ಸಾದಹಳ್ಳಿ ಟೋಲ್​ನಿಂದ ಬೆಂಗಳೂರು ಕಬ್ಬನ್ ಪಾರ್ಕ್​ವರೆಗೆ ರ‍್ಯಾಲಿ ಶುರು ಮಾಡಿದ್ದರು. … Continued

ರಾಜ್ಯ ಬಿಜೆಪಿ ನೂತನ ಪದಾಧಿಕಾರಿಗಳ ಪಟ್ಟಿ ಬಿಡುಗಡೆ ; ಯಾರಿಗೆ ಯಾವ ಹುದ್ದೆ..? ಇಲ್ಲಿದೆ ಪಟ್ಟಿ….

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಪಕ್ಷದ ರಾಜ್ಯ ಘಕಟಕಕ್ಕೆ ನೂತನ ಪದಾಧಿಕಾರಿಗಳು ಮತ್ತು ವಿವಿಧ ಮೋರ್ಚಾಗಳಿಗೆ ಅಧ್ಯಕ್ಷರನ್ನು ನೇಮಕ ಮಾಡಿದ್ದು, ಶನಿವಾರ ಅದನ್ನು ಬಿಡುಗಡೆ ಮಾಡಲಾಗಿದೆ. 10 ಮಂದಿ ಉಪಾಧ್ಯಕ್ಷರು, ನಾಲ್ವರು ರಾಜ್ಯ ಪ್ರಧಾನ ಕಾರ್ಯದರ್ಶಿಗಳು, 10 ಮಂದಿ ರಾಜ್ಯ ಕಾರ್ಯದರ್ಶಿಗಳು ಮತ್ತು ವಿವಿಧ ಮೋರ್ಚಾಗಳಿಗೆ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಬಿಜೆಪಿ ರಾಜ್ಯ … Continued

ಬೆಂಗಳೂರು : ಶಾಲಾ ಮಕ್ಕಳಿಂದ ಶೌಚಾಲಯ ಸ್ವಚ್ಛತೆ ; ಮುಖ್ಯ ಶಿಕ್ಷಕಿ ಅಮಾನತು

ಬೆಂಗಳೂರು: ರಾಜಧಾನಿ ಬೆಂಗಳೂರಿನ ಸರ್ಕಾರಿ ಶಾಲೆಯಲ್ಲಿ ಶಾಲಾ ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿಸಿದ ಘಟನೆ ಬೆಳಕಿಗೆ ಬಂದಿದೆ. ಬೆಂಗಳೂರಿನ ಪೀಣ್ಯ ಬಳಿಯಿರುವ ಅಂದ್ರಹಳ್ಳಿ ಸರ್ಕಾರಿ ಶಾಲೆಯಲ್ಲಿ ಈ ಘಟನೆ ನಡೆದಿದ್ದು, ಘಟನೆಯ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಘಟನೆಯ ನಂತರ, ವಿದ್ಯಾರ್ಥಿಗಳ ಪೋಷಕರು ಶಾಲೆಗೆ ಆಗಮಿಸಿ ಶಿಕ್ಷಕರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ ಎಂದು ವರದಿಯಾಗಿದೆ. … Continued