NO2 ಹೊರಸೂಸುವಿಕೆಯಲ್ಲಿ ನಾಟಕೀಯ ಏರಿಕೆ ಕಂಡ ದೆಹಲಿ, ಬೆಂಗಳೂರು, ಚೆನ್ನೈ, ಹೈದರಾಬಾದ್: ವರದಿ

ಬೆಂಗಳೂರು: ಗ್ರೀನ್‌ಪೀಸ್ ಇಂಡಿಯಾದ ಇತ್ತೀಚಿನ ವರದಿಯು ಅಧ್ಯಯನ ಮಾಡಿದ ಎಲ್ಲ ಎಂಟು ಭಾರತೀಯ ನಗರಗಳಲ್ಲಿ ಸಾರಜನಕ ಡೈಆಕ್ಸೈಡ್ (NO2) ಹೊರಸೂಸುವಿಕೆಯಲ್ಲಿ ನಾಟಕೀಯ ಹೆಚ್ಚಳ ದಾಖಲಿಸಿದೆ ಎಂದು ಹೇಳಿದೆ. ಈ ಪಟ್ಟಿಯಲ್ಲಿ ಮುಂಬೈ, ದೆಹಲಿ, ಕೋಲ್ಕತ್ತಾ, ಜೈಪುರ ಮತ್ತು ಲಕ್ನೋ ಮತ್ತು ದಕ್ಷಿಣ ರಾಜ್ಯಗಳಲ್ಲಿ ಹೈದರಾಬಾದ್, ಬೆಂಗಳೂರು ಮತ್ತು ಚೆನ್ನೈ ಸೇರಿವೆ. ವರದಿಯ ಪ್ರಕಾರ, ಹಿಂದಿನ ವರ್ಷದ … Continued

ಬೆಂಗಳೂರು, ಅಫ್ಜಲಪುರದಲ್ಲಿ ಕೋವಿಡ್‌ ರೋಗಿಗಳ ಸಾವು: ಆಮ್ಲಜನಕ ಕೊರತೆ ಕೂಗು

ಬೆಂಗಳೂರು: ಚಾಮರಾಜನಗರ ಜಿಲ್ಲೆಯ ದುರಂತ ಘಟನೆ ಬೆನ್ನಲ್ಲೇ ರಾಜ್ಯದಲ್ಲಿ ಮತ್ತೆ ಆಮ್ಲಜನಕದ ಕೊರತೆಯಿಂದ ಕೋವಿಡ್‌ ರೋಗಿಗಳು ಮೃತಪಟ್ಟ ಬಗ್ಗೆ ವರದಿಯಾಗಿದೆ. ಬೆಂಗಳೂರಿನ ಯಲಹಂಕದಲ್ಲಿರುವ ಆರ್ಕ್ ಆಸ್ಪತ್ರೆಯಲ್ಲಿ ಇಬ್ಬರು ಪ್ರಾಣ ಕಳೆದುಕೊಂಡಿದ್ದಾರೆ. ಆಸ್ಪತ್ರೆಯಲ್ಲಿ ಆಮ್ಲಜನಕದ ಕೊರತೆಯಿಂದಾಗಿ ಮೃತಪಟ್ಟಿದ್ದಾರೆ ಎಂದು ಮೃತರ ಸಂಬಂಧಿಕರು ಆರೋಪಿಸಿದ್ದಾರೆ. ಆದರೆ, ಆಸ್ಪತ್ರೆ ಆಡಳಿತ ಮಂಡಳಿ, ಕೋವಿಡ್ ಸೋಂಕಿನಿಂದ ಮೃತ ಪಟ್ಟಿದ್ದಾರೆ ಎಂದು ಹೇಳಿದೆ. … Continued

ಕೊರೊನಾ ಹೆಚ್ಚಳ : ಬೆಂಗಳೂರಲ್ಲಿ 6 ರಿಂದ 9ನೇ‌ ತರಗತಿ ಸ್ಥಗಿತಗೊಳಿಸಿ ಆದೇಶ

ಬೆಂಗಳೂರು ನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳನ್ನು ಪರಿಗಣಿಸಿ ಪ್ರಸ್ತುತ ನಡೆಯುತ್ತಿರುವ 6-9ನೇ‌ ಭೌತಿಕ ತರಗತಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸ್ಥಗಿತಗೊಳಿಸಲಾಗಿದೆ  ಎಂದು ಸಚಿವ ಸುರೇಶ್‌ಕುಮಾರ್ ಹೇಳಿದ್ದಾರೆ. ಮುಂದಿನ‌ ಆದೇಶದ ವರೆಗೆ ಭೌತಿಕ ತರಗತಿಗಳನ್ನು ನಿಲ್ಲಿಸಲಾಗುತ್ತದೆ ಎಂದು ತಿಳಿಸಿರುವ ಸಚಿವರು, ಈ ಸಂಬಂಧ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಗಿದೆ ಎಂದು ಹೇಳಿದ್ದಾರೆ, ಈ ವಯೋಮಾನದ ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಟಿಯಿಂದ‌ … Continued

ಎರಡನೇ ಕೊರೊನಾ ಅಲೆ: ಬೆಂಗಳೂರಲ್ಲಿ ವೃದ್ಧರಿಗಿಂತ ಯುವಕರಿಗೇ ಹೆಚ್ಚು ಸೋಂಕು..!

ಬೆಂಗಳೂರು: ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿ ರಾಜ್ಯದ ಸರಿಸುಮಾರು ಶೇ.೬೦ರಷ್ಟು ಪ್ರಕರಣಗಳು ಕಾಣಿಸಿಕೊಳ್ಳುತ್ತಿವೆ. ಮಾರ್ಚ್ ಮಧ್ಯದಲ್ಲಿ ಪ್ರಕರಣಗಳು ಹೆಚ್ಚಾಗಲು ಪ್ರಾರಂಭಿಸಿದಾಗಿನಿಂದ ನಗರದಲ್ಲಿ ಹೆಚ್ಚಾಗಿ ಯುವಕರು ಹಾಗೂ ಮಕ್ಕಳಲ್ಲಿ ಕೊರೊನಾ ವೈರಸ್‌ ಸೋಂಕು ಕಂಡುಬರುತ್ತಿರುವುದು ೨ನೇ ಅಲೆಯ ಕಳವಳಕಾರಿ ವಿಷಯವಾಗಿದೆ. ಈ ಕಾರಣಕ್ಕಾಗಿಯೇ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಪ್ರದಾನಿ ಮೋದಿ ಜೊತೆಗಿನ ವರ್ಚ್ಯುಲ್‌ ಸಭೆಯಲ್ಲಿ ಎಲ್ಲ ವಯಸ್ಸಿನವರಿಗೂ ಕೊರೊನಾ … Continued

ಬೆಂಗಳೂರಲ್ಲಿ ೧೪ ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು..!

ಬೆಂಗಳೂರು: ಬೆಂಗಳೂರು ನಗರದ ಶಾಲಾ ಮಕ್ಕಳಲ್ಲಿ ೧೪ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಬಿಬಿಎಂಪಿ ನಾಲ್ಕು ಶಾಲೆಗಳ ೧೪ ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ಇದು ಆಡಳಿತಕ್ಕೆ ತಲೆನೋವು ತಂದಿದೆ. ಹತ್ತು ವರ್ಷದೊಳಗಿನ ಮಕ್ಕಳಿಗೆ ಸೋಂಕು ಹರಡುತ್ತಿದೆ ಎಂಬ ತಜ್ಞರ ಎಚ್ಚರಿಕೆ ಹಿನ್ನಲೆಯಲ್ಲಿ ಬಿಬಿಎಂಪಿ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಿಗೆ ಕೊರೊನಾ ತಪಾಸಣೆ ನಡೆಸಲಾಗಿತ್ತು. ಜೋಗುಪಾಳ್ಯ ವಾರ್ಡ್‍ನಲ್ಲಿರುವ ಬಿಬಿಎಂಪಿಯ ಒಂದೇ … Continued

ಕರ್ನಾಟಕದಲ್ಲಿ ಎರಡೂವರೆ ಸಾವಿರ ದಾಟಿದ ಏಕದಿನದ ಕೊರೊನಾ ಸೋಂಕು…! ಬೆಂಗಳೂರಲ್ಲಿ ಎಚ್ಚರಿಕೆ ಗಂಟೆ…!!

ಬೆಂಗಳೂರು: ರಾಜ್ಯದಲ್ಲಿ ಕೊರೊನಾ 2ನೇ ಅಲೆ ಶುರುವಾಗಿದ್ದು ಕಳೆದ 24 ಗಂಟೆಯಲ್ಲಿ (ಗುರುವಾರ) 2,523 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ರಾಜ್ಯದಲ್ಲಿ ಕೊರೊನಾ ಸೋಂಕಿನಿಂದ 10 ಮಂದಿ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 9,78,478ಕ್ಕೆ ಏರಿಕೆಯಾಗಿದೆ. ಹಾಗೂ ಒಟ್ಟು ಸಾವಿನ ಸಂಖ್ಯೆ 12,471ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ಬೆಂಗಳೂರಿನಲ್ಲಿಯೇ … Continued

ಕೊರೊನಾ ಸೋಂಕು ಹೆಚ್ಚಳ: ಬೆಂಗಳೂರಲ್ಲಿ ಸೋಂಕಿತರ ಕೈಗೆ ಮತ್ತೆ ಸೀಲ್‌…!

ಬೆಂಗಳೂರು: ರಾಜ್ಯದಲ್ಲಿ ಕೊರೊನಾ 2ನೇ ಅಲೆ ಆರಂಭವಾಗಿದ್ದು, ಬೆಂಗಳೂರಿನಲ್ಲಿ ಅತೀ ಹೆಚ್ಚು ಪ್ರಕರಣಗಳು ದಾಖಲಾಗುತ್ತಿವೆ. ಹೀಗಾಗಿ ಸೋಂಕು ದೃಢಪಟ್ಟಿರುವ ಎಲ್ಲರಿಗೂ ಸೀಲ್ ಹಾಕಲಾಗುವುದು ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ಹೇಳಿದ್ದಾರೆ. ಬಿಬಿಎಂಪಿ ವ್ಯಾಪ್ತಿಯಲ್ಲಿ‌ ಹೆಚ್ಚುತ್ತಿರುವ ಕೋವಿಡ್ ಹರಡುವಿಕೆಯನ್ನ ತಡೆಗಟ್ಟಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಅಧಿಕಾರಿಗಳ ಜೊತೆ ಸಚಿವರು ಸಮಾಲೋಚನಾ ಸಭೆ ನಡೆಸಿದ ಬಳಿಕ ಮಾತನಾಡಿದಅವರು, ’20 … Continued

ಹೊರ ರಾಜ್ಯದಿಂದ ಬೆಂಗಳೂರಿಗೆ ಬರುವವರಿಗೆ ಏಪ್ರಿಲ್‌ 1ರಿಂದ ಕೊರೊನಾ ನೆಗೆಟಿವ್‌ ವರದಿ ಕಡ್ಡಾಯ

ಬೆಂಗಳೂರು: ಕೊವಿಡ್‌ -19 ಪ್ರಕರಣಗಳ ಎರಡನೇ ಅಲೆ ಮುಂಜಾಗ್ರತೆಗಾಗಿ ಏಪ್ರಿಲ್ 1 ರಿಂದ ಭಾರತದ ಯಾವುದೇ ರಾಜ್ಯದಿಂದ ಕರ್ನಾಟಕ ರಾಜಧಾನಿ ಬೆಂಗಳೂರಿಗೆ ಪ್ರಯಾಣಿಸುವ ಎಲ್ಲಾ ಪ್ರಯಾಣಿಕರು ಆರ್‌ಟಿ-ಪಿಸಿಆರ್ ಪರೀಕ್ಷೆಗಳಿಗೆ ಒಳಗಾಗಬೇಕು ಮತ್ತು ಕೊರೊನಾ ನೆಗೆಟಿವ್‌ ವರದಿಗಳನ್ನು ತೋರಿಸಬೇಕು ಎಂದು ರಾಜ್ಯ ಆರೋಗ್ಯ ಖಾತೆ ಸಚಿವ ಡಾ.ಕೆ.ಸುಧಾಕರ ಗುರುವಾರ ಹೇಳಿದ್ದಾರೆ. ಬೆಂಗಳೂರು ನಗರ ಪ್ರವೇಶಿಸುವ ಮೊದಲು ವರದಿ … Continued

ನಾನು ಬೆಂಗಳೂರು ಬಿಟ್ಟು ಹೋಗಿಲ್ಲ, ನನಗೆ ಬೆದರಿಕೆಯಿದೆ: ಹಿತೇಶಾ ಚಂದ್ರಾಣಿ

ಬೆಂಗಳೂರು: ಜೊಮಾಟೊ ಡೆಲಿವರಿ ಬಾಯ್ ಕಾಮರಾಜ್ ತಮ್ಮ ಮುಖಕ್ಕೆ ಹೊಡೆದಿದ್ದಾರೆ ಎಂದು ಆರೋಪಿಸಿರುವ ಹಿತೇಶಾ ಚಂದ್ರಾಣಿ ಇದೇ ಮೊದಲ ಬಾರಿಗೆ ಈ ಬಗ್ಗೆ ಮಾತನಾಡಿದ್ದು, ಪೊಲೀಸ್ ತನಿಖೆಯನ್ನು ತಪ್ಪಿಸಲು ತಾನು ಬೆಂಗಳೂರಿನಿಂದ ಹೊರನಡೆದಿದ್ದೇನೆ ಎಂಬ ವರದಿಯನ್ನು ಅವರು ನಿರಾಕರಿಸಿದ್ದಾರೆ. ಹಾಗೂ ನಾನು ಬೆಂಗಳೂರು ಬಿಟ್ಟು ಹೋಗಿಲ್ಲ ಎಂದು ಹೇಳಿದ್ದಾರೆ. ಘಟನೆ ಸಂಭವಿಸಿದಾಗಿನಿಂದ, ನನಗೆ ಕಿರುಕುಳ, ನಿಂದನೆ … Continued

ಕೊರೊನಾ ಸೋಂಕಿತರು: ಬೆಂಗಳೂರು ನಗರ ಜಿಲ್ಲೆ ದೇಶದಲ್ಲಿ ೫ನೇ ನಂಬರ್‌..!

ಬೆಂಗಳೂರಿನಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ದೇಶದಲ್ಲಿ ಅತಿ ಹೆಚ್ಚು ಕೊವಿಡ್‌-೧೯ ಸೋಂಕಿತರಿರುವ ಜಿಲ್ಲೆಗಳಲ್ಲಿ ಬೆಂಗಳೂರು ನಗರ ಜಿಲ್ಲೆ ೫ನೇ ಸ್ಥಾನ ಪಡೆದಿರುವುದು ಎಚ್ಚರಿಕೆ ವಹಿಸಬೇಕು ಎಂಬುದರ ಮುನೂಚನೆಯಾಗಿದೆ. ಬೆಂಗಳೂರು ನಗರ ಜಿಲ್ಲೆಯಲ್ಲಿ ಒಟ್ಟು 6,107 ಸಕ್ರಿಯ ಸೋಂಕಿತರಿದ್ದಾರೆ. 18,474 ಸಕ್ರಿಯ ಸೋಂಕಿತರಿರುವ ಪುಣೆ ಮೊದಲ ಸ್ಥಾನದಲ್ಲಿದೆ. 12,724 ಸಕ್ರಿಯ ಸೋಂಕಿತರಿರುವ ನಾಗಪುರ ಎರಡನೇ ಸ್ಥಾನ, … Continued