ನಾನು ಈಗಲೂ ಜೆಡಿಎಸ್ ರಾಜ್ಯಾಧ್ಯಕ್ಷ, ಅಮಾನತು ಪ್ರಶ್ನಿಸಿ ಕೋರ್ಟಿಗೆ ಹೋಗ್ತೇನೆ: ಸಿಎಂ ಇಬ್ರಾಹಿಂ

ಬೆಂಗಳೂರು: ಜೆಡಿಎಸ್ ಪಕ್ಷದ ಅಮಾನತುಗೊಂಡಿರುವ ನಾಯಕ ಸಿ.ಎಂ.ಇಬ್ರಾಹಿಂ ಅವರು ತಾವು ಈಗಲೂ ಜೆಡಿಎಸ್ ಪಕ್ಷದ ಕರ್ನಾಟಕ ರಾಜ್ಯಾಧ್ಯಕ್ಷರಾಗಿದ್ದು, ತಮ್ಮ ಅಮಾನತು ನಿರ್ಧಾರದ ವಿರುದ್ಧ ಕೋರ್ಟ್ ಮೊರೆ ಹೋಗುವುದಾಗಿ ಸೋಮವಾರ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿ ಉಳಿಯುತ್ತಾರೆಯೇ ಎಂಬುದು ಡಿಸೆಂಬರ್ 9 ರಂದು ಗೊತ್ತಾಗಲಿದೆ ಎಂದು … Continued

ವಿದ್ಯುತ್‌ ತಂತಿ ತುಳಿದು ತಾಯಿ-ಮಗು ಸಾವಿನ ಪ್ರಕರಣ : ಮೃತರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ, ಇಬ್ಬರು ಅಧಿಕಾರಿಗಳ ಅಮಾನತು

ಬೆಂಗಳೂರು : ಕಾಡುಗುಡಿ ಪೊಲೀಸ್ ಠಾಣಾ ವ್ಯಾಪ್ತಿಯ ಹೋಪ್ ಫಾರ್ಮ್ ಬಳಿ ವಿದ್ಯುತ್ ತಂತಿ ತುಳಿದ ಪರಿಣಾಮ ಮಹಿಳೆ ಮತ್ತು ಮಗು ಮೃತಪಟ್ಟಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬೆಸ್ಕಾಂನ ಎಇ ಹಾಗೂ ಎಇಇ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ ಎಂದು ಇಂಧನ ಖಾತೆ ಸಚಿವ ಕೆ.ಜೆ. ಜಾರ್ಜ್‌ ಹೇಳಿದ್ದಾರೆ. ರಸ್ತೆ ಬದಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ತುಳಿದು … Continued

ಬೆಂಗಳೂರು: ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ತಾಯಿ-9 ತಿಂಗಳ ಮಗು ಸಾವು

ಬೆಂಗಳೂರು: ಬೆಂಗಳೂರಿನ ಹೋಪ್ ಫಾರ್ಮ್ ಬಳಿಯ ಪಾದಾಚಾರಿ ಮಾರ್ಗದಲ್ಲಿ ಆಕಸ್ಮಿಕವಾಗಿ ವಿದ್ಯುತ್ ತಂತಿ ಸ್ಪರ್ಶಿಸಿ 23 ವರ್ಷದ ಮಹಿಳೆ ಮತ್ತು ಆಕೆಯ ಒಂಬತ್ತು ತಿಂಗಳ ಮಗಳು ದಾರುಣವಾಗಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಮೃತರನ್ನು ಎಕೆಜಿ ಕಾಲೋನಿ ನಿವಾಸಿಗಳಾದ ಸೌಂದರ್ಯ ಮತ್ತು ಸುವೀಕ್ಷಾ ಎಂದು ಗುರುತಿಸಲಾಗಿದೆ. ಭಾನುವಾರ ಮುಂಜಾನೆ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. … Continued

ಮಹಿಳೆ ಮೇಲೆ ನಾಯಿ ದಾಳಿ ಪ್ರಕರಣ ; ವಿಚಾರಣೆಗೆ ಹಾಜರಾದ ನಟ ದರ್ಶನ್

ಬೆಂಗಳೂರು: ಮಹಿಳೆಯೊಬ್ಬರಿಗೆ ದರ್ಶನ ಮನೆಯ ಸಾಕು ನಾಯಿ ಕಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ನ.15 ರಂದು ಬುಧವಾರ ನಟ ದರ್ಶನ್​ ಅವರು ರಾಜರಾಜೇಶ್ವರಿ​ ನಗರ ಪೊಲೀಸ್ ಠಾಣೆಗೆ ಹಾಜರಾಗಿದ್ದಾರೆ. ಮಹಿಳೆ ಮೇಲೆ ದರ್ಶನ್ ಮನೆಯ ಸಾಕು ನಾಯಿ ದಾಳಿ ನಡೆಸಿತ್ತು. ಈ ಘಟನೆಗೆ ಸಂಬಂಧಿಸಿದಂತೆ ಮಹಿಳೆ ದರ್ಶನ ವಿರುದ್ಧವೂ ದೂರು ದಾಖಲಿಸಿದ್ದರು. ಮಹಿಳೆ ನೀಡಿದ ದೂರಿನ ಮೇರೆಗೆ … Continued

ನಿಗಮ, ಮಂಡಳಿ ನೇಮಕಾತಿ ಪರೀಕ್ಷೆ : ಅಭ್ಯರ್ಥಿಗಳಿಗೆ ವಸ್ತ್ರಸಂಹಿತೆ ನಿಗದಿಪಡಿಸಿ ಕೆಇಎ ಆದೇಶ

ಬೆಂಗಳೂರು: ರಾಜ್ಯದಲ್ಲಿ ನವೆಂಬರ್ 18 ಮತ್ತು 19 ರಂದು ನಡೆಯಲಿರುವ ವಿವಿಧ ನಿಗಮ ಮತ್ತು ಮಂಡಳಿಗಳ ನೇಮಕಾತಿ ಪರೀಕ್ಷೆಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವಸ್ತ್ರಸಂಹಿತೆಯನ್ನು ಜಾರಿಗೊಳಿಸಿ ಆದೇಶ ಹೊರಡಿಸಿದೆ. ಎಲೆಕ್ಟ್ರಾನಿಕ್ ಸಾಧನಗಳು, ಮೊಬೈಲ್ ಫೋನ್‌ಗಳು, ಪೆನ್ ಡ್ರೈವ್‌ಗಳು, ಇಯರ್‌ಫೋನ್‌ಗಳು, ಮೈಕ್ರೊಫೋನ್‌ಗಳು, ಬ್ಲೂಟೂತ್ ಸಾಧನಗಳು ಮತ್ತು ಕೈಗಡಿಯಾರಗಳನ್ನು ಒಳಗೊಂಡಿರುವ ನಿಷೇಧಿತ ವಸ್ತುಗಳ ಪಟ್ಟಿಯನ್ನು ಕೆಇಎ ಬಿಡುಗಡೆ ಮಾಡಿದೆ. … Continued

ಬೆಂಗಳೂರಲ್ಲಿರುವ ಅಜ್ಜಿ ಮನೆಗೆ ಬಂದ ನ್ಯೂಜಿಲೆಂಡ್‌ ಸ್ಟಾರ್‌ ಬ್ಯಾಟರ್‌ ರಚಿನ್ ರವೀಂದ್ರ : ಮೊಮ್ಮಗನಿಗೆ ದೃಷ್ಟಿ ತೆಗೆದ ಅಜ್ಜಿ | ವೀಡಿಯೊ ವೀಕ್ಷಿಸಿ

ಕ್ರಿಕೆಟ್ ವಿಶ್ವಕಪ್ 2023 ಅಭಿಯಾನವು ಮುಂದುವರೆದಂತೆ ನ್ಯೂಜಿಲೆಂಡ್ ಬ್ಯಾಟರ್ ರಚಿನ್ ರವೀಂದ್ರ ಅವರ ಜನಪ್ರಿಯತೆ ಗಗನಕ್ಕೇರಿದೆ. ಕಿವೀಸ್ ಪಂದ್ಯಾವಳಿಯ ಸೆಮಿ-ಫೈನಲ್‌ನಲ್ಲಿ ಸ್ಥಾನವನ್ನು ಭದ್ರಪಡಿಸುತ್ತಿದ್ದಂತೆ, ರವೀಂದ್ರ ಅವರು ಬೆಂಗಳೂರಿನಲ್ಲಿರುವ ತಮ್ಮ ಅಜ್ಜ-ಅಜ್ಜಿಯನ್ನು ಭೇಟಿ ಮಾಡಿದರು. ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡಿರುವ ವೀಡಿಯೊದಲ್ಲಿ, ರವೀಂದ್ರ ಅವರ ಅಜ್ಜಿ ಬ್ಯಾಟರ್‌ಗಾಗಿ ‘ದೃಷ್ಟಿ ತೆಗೆಯುವ’ ಆಚರಣೆಯನ್ನು ಮಾಡುತ್ತಿರುವಂತೆ ತೋರುತ್ತಿದೆ, ಕ್ರಿಕೆಟ್‌ನ ಯುವ ತಾರೆ … Continued

ಬೆಂಗಳೂರಿನ 15 ಕಡೆ ಅಕ್ರಮ ಬಾಂಗ್ಲಾ ವಲಸಿಗರ ಮೇಲೆ ಎನ್‌ಐಎ ದಾಳಿ

ನವದೆಹಲಿ/ಬೆಂಗಳೂರು: ಮಾನವ ಕಳ್ಳ ಸಾಗಣೆ ಆರೋಪದ ಮೇಲೆ ರಾಷ್ಟ್ರೀಯ ತನಿಖಾ ದಳ(NIA) ಕರ್ನಾಟಕ ಸೇರಿದಂತೆ ದೇಶದ 10 ರಾಜ್ಯಗಳ ವಿವಿಧ ಕಡೆಗಳಲ್ಲಿ ಬುಧವಾರ ಬೆಳ್ಳಂಬೆಳಗ್ಗೆ ದಾಳಿ ನಡೆಸಿದೆ. ಕರ್ನಾಟಕ, ತಮಿಳುನಾಡು, ತೆಲಂಗಾಣ, ತ್ರಿಪುರಾ, ಅಸ್ಸಾಂ, ಪಶ್ಚಿಮ ಬಂಗಾಳ, ಹರಿಯಾಣ, ಪುದುಚೇರಿ, ರಾಜಸ್ಥಾನ, ಜಮ್ಮು ಮತ್ತು ಕಾಶ್ಮೀರ ರಾಜ್ಯಗಳಲ್ಲಿ ಮಾನವ ಕಳ್ಳಸಾಗಣೆ ಪ್ರಕರಣದಲ್ಲಿ ಎನ್‌ಐಎ ಶೋಧ ನಡೆಸಿದೆ. … Continued

ಬೆಂಗಳೂರು : ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಲಿವ್​ ಇನ್ ರಿಲೇಷನ್ ಶಿಪ್ ನಲ್ಲಿದ್ದ ಪ್ರೇಮಿಗಳು

ಬೆಂಗಳೂರು: ಲಿವ್-ಇನ್ ನಲ್ಲಿ ಒಟ್ಟಿಗೆ ವಾಸಿಸುತ್ತಿದ್ದ ಇಬ್ಬರು ಮೈ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊತ್ತನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪಶ್ಚಿಮ ಬಂಗಾಳದ 20 ವರ್ಷದಖಾಸಗಿ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿನಿ (ವಿವಾಹಿತೆ) ಹಾಗೂ ಆಕೆಯ 29 ವರ್ಷದ ಲಿವ್-ಇನ್ ಪಾಲುದಾರ ಭಾನುವಾರ ಸರ್ವಿಸ್ ಅಪಾರ್ಟ್‌ಮೆಂಟ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು … Continued

ಪ್ರತಿಮಾ ಕೊಲೆ ಪ್ರಕರಣ: ಆರೋಪಿ ಕಿರಣ್ ನವೆಂಬರ್ 15 ರವರೆಗೆ ಪೊಲೀಸ್ ಕಸ್ಟಡಿಗೆ

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗಣಿ ಮತ್ತು ಭೂ ವಿಜ್ಞಾನ ಅಧಿಕಾರಿ ಪ್ರತಿಮಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿಂತೆ ಆರೋಪಿ ಕಿರಣನನ್ನು ಬೆಂಗಳೂರಿನ 2ನೇ ಎಸಿಎಂಎಂ (ACMM) ಕೋರ್ಟ್‌ ಮುಂದೆ ಹಾಜರುಪಡಿಸಲಾಗಿದ್ದು, ಕೋರ್ಟ್‌ ಆರೋಪಿಯನ್ನು ನವೆಂಬರ್ 15ರ ವರೆಗೆ ಪೊಲೀಸ್ ಕಸ್ಟಡಿ ನೀಡಿ ಆದೇಶಿಸಿದೆ. ಪ್ರತಿಮಾ ಅವರ ಮಾಜಿ ಕಾರು ಚಾಲಕ ಕಿರಣನನ್ನು ಬೆಂಗಳೂರು ಪೊಲೀಸರು ಬಂಧಿಸಿ … Continued

ಗಣಿ-ಭೂ ವಿಜ್ಞಾನ ಇಲಾಖೆ ಮಹಿಳಾ ಅಧಿಕಾರಿ ಕೊಲೆ ಪ್ರಕರಣ : ಮಾಜಿ ಕಾರು ಚಾಲಕ ವಶಕ್ಕೆ

ಬೆಂಗಳೂರು: ಸಾಕಷ್ಟು ಚರ್ಚೆಗೆ ಕಾರಣವಾಗಿರುವ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಹಿರಿಯ ಅಧಿಕಾರಿ ಪ್ರತಿಮಾ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿಂತೆ ಬೆಂಗಳೂರು ಪೊಲೀಸರು ಓರ್ವ ಶಂಕಿತ ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದು, ಆತ ಪ್ರತಿಮಾ ಅವರ ಮಾಜಿ ಕಾರು ಚಾಲಕ ಎನ್ನಲಾಗಿದೆ. ಬಂಧಿತ ವ್ಯಕ್ತಿಯನ್ನು ಪ್ರತಿಮಾ ಅವರ ಮಾಜಿ ಕಾರು ಚಾಲಕ ಕಿರಣ ಎಂದು ಹೇಳಲಾಗಿದ್ದು, … Continued