ಬೆಂಗಳೂರಿನಲ್ಲಿ ಮತ್ತೊಂದು ಚಿರತೆ ಪ್ರತ್ಯಕ್ಷ

ಬೆಂಗಳೂರು : ಬೆಂಗಳೂರು ಭಾರಿ ಅತಂಕಕ್ಕೆ ಕಾರಣವಾಗಿದ್ದ ಚಿರತೆ ಸಾವಿಗೀಡಾದ ಬೆನ್ನಲ್ಲೇ ಇದೀಗ ಮತ್ತೊಂದು ಚಿರತೆ ಪ್ರತ್ಯಕ್ಷವಾಗಿದೆ. ಆಗ್ನೇಯ ಬೆಂಗಳೂರಿನ ನೈಸ್ ರಸ್ತೆಯ ಚಿಕ್ಕತೋಗೂರಿನ ಲಕ್ಷ್ಮಿ ದೇವಿ ದೇವಸ್ಥಾನದ ಬಳಿಯ ಮನೆಯ ಪಕ್ಕದಲ್ಲಿ ಮತ್ತೊಂದು ಚಿರತೆ ಕಾಣಿಸಿಕೊಂಡಿದೆ ಎಂದು ವರದಿಯಾಗಿದೆ. ಶನಿವಾರ (ನವೆಂಬರ್ 4) ರ ಸಂಜೆ 7:40ರ ಸುಮಾರಿಗೆ ಚಿರತೆ ಮನೆ ಕಂಪೌಂಡ್​​ ಒಳಗೆ … Continued

ಬೆಂಗಳೂರು : ಗಣಿ ಮತ್ತು ಭೂವಿಜ್ಞಾನ ಇಲಾಖೆ ಮಹಿಳಾ ಅಧಿಕಾರಿಯ ಭೀಕರ ಹತ್ಯೆ

ಬೆಂಗಳೂರು: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಮಹಿಳಾ ಅಧಿಕಾರಿಯನ್ನು ದುಷ್ಕರ್ಮಿಗಳು ಚಾಕುವಿನಿಂದ ಇರಿದು ಭೀಕರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರು ಸುಬ್ರಮಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಡೆಪ್ಯೂಟಿ ಡೈರೆಕ್ಟರ್ ಪ್ರತಿಮಾ(37) ಎಂಬವರು ಕೊಲೆಯಾದ ಅಧಿಕಾರಿ. ಇವರು ಬೆಂಗಳೂರಿನ ಗ್ರಾಮಾಂತರ ಭೂಗರ್ಭ ಶಾಸ್ತ್ರ ವಿಭಾಗದ ಹಿರಿಯ ಅಧಿಕಾರಿಯಾಗಿ … Continued

ನವೆಂಬರ್‌ 24ರೊಳಗೆ ಜಾತಿ ಗಣತಿ ವರದಿ ಸಲ್ಲಿಕೆ: ಜಯಪ್ರಕಾಶ ಹೆಗ್ಡೆ

ಬೆಂಗಳೂರು: ಜಾತಿ ಗಣತಿ ವರದಿಯನ್ನು ನವೆಂಬರ್ 24 ರೊಳಗೆ ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಶನಿವಾರ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷ ನ್ನಾಗಿ ತಮ್ಮ ಅವಧಿ ನವೆಂಬರ್ 24ಕ್ಕೆ ಮುಗಿಯಲಿದೆ. ಅದಕ್ಕೂ ಮೊದಲೇ ಸರ್ಕಾರಕ್ಕೆ ಹಿಂದಿನ ಕಾಂತರಾಜು ಆಯೋಗದ ವರದಿಯನ್ನು … Continued

ಬೆಂಗಳೂರು: ಸೆರೆ ಹಿಡಿಯುವಾಗ ಗುಂಡೇಟಿನಿಂದ ಗಾಯಗೊಂಡಿದ್ದ ಚಿರತೆ ಸಾವು

ಬೆಂಗಳೂರು: ಬೊಮ್ಮಸಂದ್ರ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಆತಂಕ ಮೂಡಿಸಿದ್ದ ಚಿರತೆಯನ್ನು ಎರಡು ದಿನಗಳ ತೀವ್ರ ಪ್ರಯತ್ನದ ಬಳಿಕ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿ ಸೆರೆ ಹಿಡಿದು ತಕ್ಷಣವೇ ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ಸಾಗಿಸಲಾಯಿತು. ದುರದೃಷ್ಟವಶಾತ್, ಅರಣ್ಯ ಇಲಾಖೆಯ ಅಧಿಕಾರಿಯೊಬ್ಬರು ಹಾರಿಸಿದ ಗುಂಡಿನಿಂದ ಉಂಟಾದ ಗಾಯಗಳಿಂದಾಗಿ ನಂತರ ಅದು ಮೃತಪಟ್ಟಿದೆ ಎಂದು ವರದಿಯಾಗಿದೆ. ಚಿರತೆ ಸೆರೆಗೆ ಅರಣ್ಯ … Continued

ಬೆಂಗಳೂರಲ್ಲಿ ಆತಂಕ ಮೂಡಿಸಿದ್ದ ಚಿರತೆ ಕೊನೆಗೂ ಸೆರೆ ; ಜನರು ನಿರಾಳ

ಬೆಂಗಳೂರು: ಬೆಂಗಳೂರಿನ ಜನರ ನಿದ್ದೆಗೆಡಿಸಿದ್ದ ಚಿರತೆ ಬುಧವಾರ ಕೊನೆಗೂ ಸೆರೆ ಸಿಕ್ಕಿದೆ. ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಬಳಿಯ ಸಿಂಗಸಂದ್ರದ ಎಇಸಿಎಸ್ ಲೇಔಟ್‌ನಲ್ಲಿ ಕಾಣಿಸಿಕೊಂಡಿದ್ದ ಚಿರತೆ ಮೂರು ದಿನಗಳ ನಂತರ ಬುಧವಾರ ಅರಣ್ಯ ಇಲಾಖೆಯ ಬಲೆಗೆ ಬಿದ್ದಿದೆ. ಅಕ್ಟೋಬರ್ 27 ರಂದು ರಾತ್ರಿ ಚಿರತೆ ಅಪಾರ್ಟ್‌ಮೆಂಟ್ ಸಮುಚ್ಚಯದ ಬಳಿ ತಿರುಗಾಡುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಅಂದಿನಿಂದ ಚಿರತೆ … Continued

ಬೆಂಗಳೂರಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ : ಓಡಿಸಿಕೊಂಡು ಹೋದ ಬೀದಿನಾಯಿಗಳು | ವೀಡಿಯೊ

ಬೆಂಗಳೂರು : ಬೆಂಗಳೂರಿನ ವೈಟ್‌ಫೀಲ್ಡ್‌ನಲ್ಲಿರುವ ಎಂಎಸ್ ಧೋನಿ ಇಂಟರ್‌ನ್ಯಾಶನಲ್ ಸ್ಕೂಲ್ ಬಳಿ ಭಾನುವಾರ ಚಿರತೆ ಕಾಣಿಸಿಕೊಂಡ ನಂತರ ನಿವಾಸಿಗಳಿಗೆ ಮನೆಯೊಳಗೆ ಇರುವಂತೆ ಸೂಚಿಸಲಾಗಿದೆ. ಶಾಲೆಯು ಪೋಷಕರಿಗೆ ಇಮೇಲ್ ಕಳುಹಿಸಿದೆ, ತಮ್ಮ ಮಕ್ಕಳಿಗೆ ಎಲ್ಲಾ ಸುರಕ್ಷತಾ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವಂತೆ ವಿನಂತಿಸಿದೆ. ಸಿಂಗಸಂದ್ರದ ಸುತ್ತಮುತ್ತಲ ಪ್ರದೇಶದಲ್ಲಿ ಚಿರತೆ ಕಾಣಿಸಿಕೊಂಡಿರುವುದು ನಮ್ಮ ಗಮನಕ್ಕೆ ಬಂದಿದೆ, ಆದರೆ ಇತ್ತೀಚಿನ ನವೀಕರಣದ ಪ್ರಕಾರ, … Continued

ಹುಲಿ ಉಗುರು ಪ್ರಕರಣ : ಬಿಗ್‌ಬಾಸ್‌ ಸ್ಪರ್ಧಿ ವರ್ತೂರು ಸಂತೋಷಗೆ ಜಾಮೀನು

ಬೆಂಗಳೂರು : ಹುಲಿ ಉಗುರನ್ನೊಳಗೊಂಡ ಆಭರಣ ಧರಿಸಿದ್ದ ಪ್ರಕರಣದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಯಿಂದ ಭಾನುವಾರ ತಡರಾತ್ರಿ ಬಂಧನಕ್ಕೊಳಗಾಗಿದ್ದ ಬಿಗ್‌ಬಾಸ್‌ ರಿಯಾಲಿಟಿ ಶೋ ಸ್ಪರ್ಧಿ ವರ್ತೂರು ಸಂತೋಷಗೆ ಜಾಮೀನು ದೊರಕಿದೆ. 2ನೇ ಎಸಿಜೆಎಂ ಕೋರ್ಟ್ ಜಾಮೀನು ನೀಡಿದ್ದು, 4 ಸಾವಿರ ರೂಪಾಯಿ ನಗದು ಭದ್ರತೆ ಅಥವಾ ಒಬ್ಬರ ಶ್ಯೂರಿಟಿ ನೀಡುವಂತೆ ಷರತ್ತು ವಿಧಿಸಿ ನ್ಯಾಯಾಲಯ ಜಾಮೀನು ನೀಡಿದೆ. … Continued

ಹುಲಿ ಉಗುರು ಪ್ರಕರಣ : ನಟ ದರ್ಶನ್, ಜಗ್ಗೇಶ, ರಾಕ್ ಲೈನ್ ವೆಂಕಟೇಶ ನಿವಾಸದಲ್ಲಿ ಅರಣ್ಯ ಅಧಿಕಾರಿಗಳಿಂದ ಪರಿಶೀಲನೆ

ಬೆಂಗಳೂರು : ಹುಲಿ ಉಗುರು ಪೆಂಡೆಂಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಹಾಗೂ ಸಂಸದ ಜಗ್ಗೇಶ, ಚಾಲೇಂಜಿಂಗ್ ಸ್ಟಾರ್ ದರ್ಶನ್, ನಿರ್ಮಾಪಕ ರಾಕ್ ಲೈನ್ ವೆಂಕಟೇಶ ನಿವಾಸಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ವರದಿಯಾಗಿದೆ. ದೂರಿನ ಹಿನ್ನೆಲೆಯಲ್ಲಿ ಅರಣ್ಯಾಧಿಕಾರಿಗಳು ನಟ ದರ್ಶನ್​, ರಾಜ್ಯಸಭಾ ಸದಸ್ಯ ಜಗ್ಗೇಶ, ರಾಕ್​ಲೈನ್ ವೆಂಕಟೇಶ್ ಮನೆಗೆ ಭೇಟಿ ನೀಡಿ ಪರಿಶೀಲನೆ … Continued

ಹುಲಿ ಉಗುರು ಪ್ರಕರಣ; ನಟ ಜಗ್ಗೇಶ ವಿರುದ್ಧ ದೂರು ದಾಖಲು

ಬೆಂಗಳೂರು : ಉಗುರು ಧರಿಸಿದ್ದಕ್ಕೆ ಬಿಗ್​ ಬಾಸ್​ ಸ್ಪರ್ಧಿ ವರ್ತೂರು ಸಂತೋಷ ಬಂಧನದ ಬೆನ್ನಲ್ಲೇ ಹುಲಿ ಉಗುರಿನ ಬಗ್ಗೆ ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ ನಟ ಹಾಗೂ ರಾಜ್ಯಸಭಾ ಸದಸ್ಯ ಜಗ್ಗೇಶ ಅವರಿಗೂ ಸಂಕಷ್ಟ ಎದುರಾಗಿದೆ. ಅವರ ವಿರುದ್ಧ ಅರಣ್ಯ ಇಲಾಖೆ ಅಧಿಕಾರಿಗಳ ಬಳಿ ದೂರು ದಾಖಲಾಗಿದೆ ಎಂದು ವರದಿಯಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಜಗ್ಗೇಶ ಅವರು ಹುಲಿ … Continued

ಕರ್ನಾಟಕ ಸೇರಿ ನಾಲ್ಕು ರಾಜ್ಯಗಳ 55 ಸ್ಥಳಗಳ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ: 102 ಕೋಟಿ ರೂ.ಮೌಲ್ಯದ ಆಸ್ತಿ ಜಪ್ತಿ

ಬೆಂಗಳೂರು: ಆದಾಯ ತೆರಿಗೆ ಇಲಾಖೆ (Income Tax departmen) ನಗದು, ಚಿನ್ನ, ವಜ್ರಾಭರಣ, ಐಷಾರಾಮಿ ವಾಚ್‌ಗಳು ಸೇರಿದಂತೆ 102 ಕೋಟಿ ರೂ.ಗಳಿಗೂ ಅಧಿಕ ಮೌಲ್ಯದ ಆಸ್ತಿಯನ್ನು ವಶಪಡಿಸಿಕೊಂಡಿದೆ. ಕರ್ನಾಟಕ ಮತ್ತು ಇತರ ಹಲವಾರು ರಾಜ್ಯಗಳಲ್ಲಿ ಸರ್ಕಾರಿ ಗುತ್ತಿಗೆದಾರರು ಮತ್ತು ರಿಯಲ್ ಎಸ್ಟೇಟ್ ಡೆವಲಪರ್‌ಗಳ ಮೇಲೆ ನಡೆಸಿದ ಸರಣಿ ದಾಳಿಗಳ ನಂತರ ಇದನ್ನು ವಶಪಡಿಸಿಕೊಳ್ಳಲಾಗಿದೆ. ಅಕ್ಟೋಬರ್ 12ರಂದು … Continued