ಸಚಿವ ರಾಮಲಿಂಗಾ ರೆಡ್ಡಿ ಸಂಧಾನ ಯಶಸ್ವಿ; ಲಾರಿ ಮುಷ್ಕರ ವಾಪಸ್‌

ಬೆಂಗಳೂರು: ರಾಜ್ಯದಲ್ಲಿ ಡೀಸೆಲ್ ಬೆಲೆ, ಟೋಲ್‌ ದರ ಹೆಚ್ಚಳ ವಿರೋಧಿಸಿ 3 ದಿನಗಳಿಂದ ಲಾರಿ ಮಾಲೀಕರ ಸಂಘ ನಡೆಸುತ್ತಿದ್ದ ಅನಿರ್ದಿಷ್ಟಾವಧಿ ಲಾರಿ ಮುಷ್ಕರ ಅಂತ್ಯವಾಗಿದೆ. ಏ. 14ರ ಮಧ್ಯರಾತ್ರಿಯಿಂದ ರಾಜ್ಯದಲ್ಲಿ ಮುಷ್ಕರ ನಡೆಸುತ್ತಿದ್ದ ಲಾರಿ ಮಾಲೀಕರೊಂದಿಗೆ ಸಚಿವ ರಾಮಲಿಂಗಾ ರೆಡ್ಡಿ ಗುರುವಾರ (ಏ. 17) ನಡೆಸಿದ ಮಾತುಕತೆ ಯಶಸ್ವಿಯಾಗಿದೆ. ಲಾರಿ ಮಾಲೀಕರ ಬೇಡಿಕೆ ಈಡೇರಿಸಲು ಮುಂದಾಗುವುದಾಗಿ … Continued

ಬೆಂಗಳೂರು | ಪುನರ್ವಸತಿ ಕೇಂದ್ರದಲ್ಲಿ ರೋಗಿಗೆ ದೊಣ್ಣೆಯಿಂದ ಅಮಾನುಷವಾಗಿ ಹಲ್ಲೆ : ವೀಡಿಯೊ ವೈರಲ್‌

ಬೆಂಗಳೂರು : ಬೆಂಗಳೂರಿನ ಬಳಿಯ ಪುನರ್ವಸತಿ ಕೇಂದ್ರವೊಂದರಲ್ಲಿ ರೋಗಿಯ ಮೇಲೆ ಕ್ರೂರವಾಗಿ ಹಲ್ಲೆ ನಡೆಸಲಾಗಿದೆ ಎಂದು ವರದಿಯಾಗಿದ್ದು, ಅದರ ಆಘಾತಕಾರಿ ವೀಡಿಯೊವೊಂದು ಹೊರಹೊಮ್ಮಿದೆ. ಸಿಸಿಟಿವಿ ದೃಶ್ಯಗಳಲ್ಲಿ ನಾಲ್ವರು ಇತರರ ಸಮ್ಮುಖದಲ್ಲಿ ವ್ಯಕ್ತಿಯೊಬ್ಬ ಕೋಣೆಯೊಳಗೆ ಕೋಲಿನಿಂದ ರೋಗಿಯನ್ನು ಹೊಡೆಯುತ್ತಿರುವುದನ್ನು ತೋರಿಸಲಾಗಿದೆ. ರೋಗಿಯನ್ನು ಇಬ್ಬರು ಎಳೆದೊಯ್ದಿರುವುದು ಸಹ ಕಂಡುಬಂದಿದೆ. ಬೆಂಗಳೂರಿನಿಂದ ಸುಮಾರು 30 ಕಿಲೋಮೀಟರ್ ದೂರದಲ್ಲಿರುವ ನೆಲಮಂಗಲದಲ್ಲಿರುವ ಖಾಸಗಿ … Continued

ಹಿರಿಯ ಪತ್ರಕರ್ತ ಶ್ಯಾಮಸುಂದರ ನಿಧನ

ಬೆಂಗಳೂರು : ಹಿರಿಯ ಪತ್ರಕರ್ತ ಎಸ್.ಕೆ. ಶ್ಯಾಮಸುಂದರ (೭೨) ಸೋಮವಾರ ರಾತ್ರಿ ನಿಧನರಾಗಿದ್ದಾರೆ. ಕೆಲ ದಿನಗಳ ಹಿಂದೆ ಅನಾರೋಗ್ಯಕ್ಕೆ ತುತ್ತಾಗಿದ್ದ ಅವರನ್ನು ವಿದ್ಯಾಪೀಠ ಸರ್ಕಲ್‌ನಲ್ಲಿರುವ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಸೋಮವಾರ ರಾತ್ರಿ ಚಿಕಿತ್ಸೆ ಫಲಿಸದೆ ಅವರು ಮೃತಪಟ್ಟಿದ್ದಾರೆ. ಕನ್ನಡ ಪತ್ರಿಕೋದ್ಯಮದಲ್ಲಿ ಸುಮಾರು 39 ವರ್ಷಗಳಿಗೂ ಹೆಚ್ಚಿನ ಅನುಭವ ಹೊಂದಿದ್ದರು. ಈ ಅವಧಿಯಲ್ಲಿ ಅವರು ವಿಶೇಷವಾಗಿ ಡಿಜಿಟಲ್ … Continued

ಮೈ ಜುಂ ಎನ್ನುವ ವೀಡಿಯೊ…| ಬೆಂಗಳೂರಲ್ಲಿ ಲಾರಿ ಹಿಂದಿಕ್ಕಲು ಹೋಗಿ ಮೂರ್ನಾಲ್ಕು ಪಲ್ಟಿ ಹೊಡೆದ ನೀರಿನ ಟ್ಯಾಂಕರ್…!

ಬೆಂಗಳೂರಿನಲ್ಲಿ ಟ್ರಕ್ ಅನ್ನು ಹಿಂದಿಕ್ಕಲು ಹೋಗಿ ನೀರಿನ ಟ್ಯಾಂಕರ್ ನಿಯಂತ್ರಣ ತಪ್ಪಿ ರಸ್ತೆಗೆ ಪಲ್ಟಿಯಾಗಿದೆ. ರಸ್ತೆಯ ಅಂಚಿನಿಂದ ಎಡಕ್ಕೆ ತಿರುಗುವಾಗ ಟ್ರಕ್ ಚಾಲಕ ವಾಹನದ ನಿಯಂತ್ರಣ ಕಳೆದುಕೊಂಡ ನಂತರ ಟ್ರಕ್‌ ಪಲ್ಟಿಯಾಗಿದ್ದು, ಐದಾರು ಸಲ ಪಲ್ಟಿಯಾಗಿ ಬಿದ್ದಿದೆ. ಎನ್‌ಡಿಟಿವಿ (NDTV) ವರದಿಯ ಪ್ರಕಾರ, ಸೋಮವಾರ ಮಧ್ಯಾಹ್ನ ದೊಮ್ಮಸಂದ್ರ ಬಳಿ ಈ ಘಟನೆ ಸಂಭವಿಸಿದೆ. ನೀರಿನ ಟ್ಯಾಂಕರ್ … Continued

ಬೆಂಗಳೂರು: 5ನೇ ಮಹಡಿಯಿಂದ ಜಿಗಿದು ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆ

ಬೆಂಗಳೂರು : ಪರೀಕ್ಷೆಯ ಭಯದಿಂದ 21 ವರ್ಷದ ದಂತ ವೈದ್ಯಕೀಯ ವಿದ್ಯಾರ್ಥಿನಿ ಅಪಾರ್ಟ್‌ಮೆಂಟ್​​ನ 5ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ (death) ಮಾಡಿಕೊಂಡ ಘಟನೆ ನಗರದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಈ ದುರ್ಘಟನೆ ಹೆಬ್ಬಾಳದ ಸುಮಂಗಲಿ ಸೇವಾಶ್ರಮ ರಸ್ತೆಯಲ್ಲಿ ನಡೆದಿದ್ದು, ದಂತ ವೈದ್ಯಕೀಯ ವಿದ್ಯಾರ್ಥಿನಿ ಅಪಾರ್ಟ್‌ಮೆಂಟ್​​ನ 5ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ದಂತ ವೈದ್ಯಕೀಯ … Continued

ಕನ್ನಡದ ಹಿರಿಯ ನಟ ಬ್ಯಾಂಕ್‌ ಜನಾರ್ಧನ ನಿಧನ

ಬೆಂಗಳೂರು: 500 ಕ್ಕೂ ಹೆಚ್ಚು ಕನ್ನಡ ಸಿನಿಮಾಗಳಲ್ಲಿ ಜನರನ್ನು ನಕ್ಕು-ನಲಿಸಿದ ಹಾಸ್ಯ ನಟ ಬ್ಯಾಂಕ್‌ ಜನಾರ್ಧನ  (76) ನಿಧನರಾಗಿದ್ದಾರೆ. ಮಧ್ಯರಾತ್ರಿ 2:30ರ ಸುಮಾರಿಗೆ ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ನಟ ಬ್ಯಾಂಕ್‌ ಜನಾರ್ಧನ್‌ ನಿಧನರಾಗಿದ್ದಾರೆ. ಸುಲ್ತಾನ್‌ ಪಾಳ್ಯದ ನಿವಾಸದಲ್ಲಿರುವ ಅವರ ನಿವಾಸದಲ್ಲಿ ಪಾರ್ಥೀವ ಶರೀರ ಇಡಲಾಗಿದ್ದು, ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಮಧ್ಯಾಹ್ನ 3 – 4 … Continued

ಬೆಂಗಳೂರು ಲೈಂಗಿಕ ದೌರ್ಜನ್ಯ ಪ್ರಕರಣ | 3 ರಾಜ್ಯಗಳು, 700 ಸಿಸಿಟಿವಿ ದೃಶ್ಯಾವಳಿ ಪರಿಶೀಲನೆ : ಕೇರಳದಲ್ಲಿ ಆರೋಪಿ ಬಂಧನ

ಬೆಂಗಳೂರು : ಈ ವಾರದ ಆರಂಭದಲ್ಲಿ ಬೆಂಗಳೂರಿನಲ್ಲಿ ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಹೊತ್ತಿರುವ ವ್ಯಕ್ತಿಯನ್ನು ಕೊನೆಗೂ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಪೊಲೀಸರು 700 ಸಿಸಿಟಿವಿಗಳ ದೃಶ್ಯಾವಳಿಗಳನ್ನು ಸ್ಕ್ಯಾನ್ ಮಾಡಿದ ನಂತರ ಅಂತಿಮವಾಗಿ ಕೇರಳದ ದೂರದ ಹಳ್ಳಿಯಲ್ಲಿ ಆತನನ್ನು ಭಾನುವಾರ ಕೇರಳದ ನಡುವನ್ನೂರ್ ಪಟ್ಟಣದ ಬಳಿ ಸೆರೆಹಿಡಿದಿದ್ದಾರೆ. ಪೊಲೀಸರು 10 ದಿನಗಳ ಕಾಲ ನಡೆಸಿದ … Continued

ಕರ್ನಾಟಕ ಜಾತಿಗಣತಿ ವರದಿಯಲ್ಲಿ ಹಿಂದುಳಿದ ವರ್ಗಗಳ ಮೀಸಲಾತಿ 51% ಹೆಚ್ಚಳಕ್ಕೆ ಶಿಫಾರಸು..?

ಬೆಂಗಳೂರು : ಜಾತಿಗಣತಿ ಆಯೋಗವು ರಾಜ್ಯದಲ್ಲಿ ಇತರ ಹಿಂದುಳಿದ ವರ್ಗಗಳಿಗೆ (ಒಬಿಸಿ) ಮೀಸಲಾತಿ ಕೋಟಾವನ್ನು ಪ್ರಸ್ತುತ ಶೇ. 32 ರಿಂದ ಶೇ. 51 ಕ್ಕೆ ಹೆಚ್ಚಿಸಲು ಶಿಫಾರಸು ಮಾಡಿದೆ ಎಂದು ಹೇಳಲಾಗಿದೆ. ಶುಕ್ರವಾರ ಜಾತಿಗಣತಿ ವರದಿ ಕ್ಯಾಬಿನೆಟ್‌ನಲ್ಲಿ ಮಂಡನೆಯಾಗಿದೆ. ವರದಿಯಲ್ಲಿ ಏನಿದೆ ಎಂಬುದನ್ನು ಸರ್ಕಾರ ಬಿಡುಗಡೆ ಮಾಡಿಲ್ಲ. ಏಪ್ರಿಲ್ 17ರ ಕ್ಯಾಬಿನೆಟ್‌ನಲ್ಲಿ ವರದಿ ಅಂಗೀಕಾರದ ಬಳಿಕ … Continued

ಕರ್ನಾಟಕದಲ್ಲಿ ದೇಶದ ಮೊದಲ ಸೈಬರ್ ಕಮಾಂಡ್ ಸೆಂಟರ್ ಆರಂಭ

ಬೆಂಗಳೂರು : ಸೈಬರ್ ಕಮಾಂಡ್ ಸೆಂಟರ್ ತನಿಖಾ ಘಟಕಕ್ಕೆ ರಾಜ್ಯ ಸರ್ಕಾರ ಚಾಲನೆ ನೀಡಿದೆ. ಆ ಮೂಲಕ ದೇಶದಲ್ಲಿಯೇ ಮೊತ್ತ ಮೊದಲ ಸೈಬರ್ ಕಮಾಂಡ್ ಸೆಂಟರ್ ಹೊಂದಿರುವ ರಾಜ್ಯವೆಂಬ ಹೆಗ್ಗಳಿಕೆಗೆ ಕರ್ನಾಟಕ ಪಾತ್ರವಾಗಿದೆ. ರಾಜ್ಯದಲ್ಲಿ ಹೆಚ್ಚುತ್ತಿರುವ ಸೈಬರ್ ಅಪರಾಧ ಕೃತ್ಯಗಳ ವಿರುದ್ಧ ಸೈಬರ್ ಕಮಾಂಡ್ ಸೆಂಟರ್ ತನಿಖಾ ಘಟಕವು ಕಾರ್ಯಾಚರಣೆ ನಡೆಸಲಿದ್ದು, ಸೈಬರ್ ಭದ್ರತೆ, ಸೈಬರ್ … Continued

ಶಿವಮೊಗ್ಗ ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಮಂಜುನಾಥ ಗೌಡ ನಿವಾಸದ ಮೇಲೆ ಇ.ಡಿ. ದಾಳಿ

ಶಿವಮೊಗ್ಗ/ಬೆಂಗಳೂರು : ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ (DCC Bank Shivamogga) ಮೇಲೆ ಜಾರಿ ನಿರ್ದೇಶನಾಲಯ (ED0 ದಾಳಿ ಮಾಡಿ ದಾಖಲೆಗಳನ್ನು ಪರಿಶೀಲಿಸುತ್ತಿದೆ. ಶಿವಮೊಗ್ಗ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಮಂಜುನಾಥ ಗೌಡ ನಿವಾಸ ಸೇರಿದಂತೆ ಬೆಂಗಳೂರು ಸೇರಿದಂತೆ 8 ಕಡೆ ಇಡಿ ದಾಳಿ ನಡೆಸಿದೆ. ಬ್ಯಾಂಕ್‌ಗೆ ನಕಲಿ ಚಿನ್ನ ಅಡವಿಟ್ಟು 62 ಕೋಟಿ ಸಾಲ … Continued