ಈ ಬೇಸಿಗೆಯಲ್ಲಿ ಕರ್ನಾಟಕದಲ್ಲಿ ರಣಬಿಸಿಲು ; ಕೆಲವೆಡೆ ಬಿಸಿಗಾಳಿ : ಹವಾಮಾನ ಇಲಾಖೆ

ಬೆಂಗಳೂರು : ಕರ್ನಾಟಕದ ಉತ್ತರ ಒಳನಾಡು, ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ ಮತ್ತಷ್ಟು ಹೆಚ್ಚಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಋತುವಿನಲ್ಲಿ ಸಾಮಾನ್ಯ ತಾಪಮಾನಕ್ಕಿಂತ ಹೆಚ್ಚಿನ ತಾಪಮಾನ ಕರ್ನಾಟಕದಲ್ಲಿ ದಾಖಲಾಗಿದೆ. ಹೆಚ್ಚಿನ ಉಷ್ಣತೆಯು ಬೇಸಿಗೆಯ ತಿಂಗಳುಗಳಾದ ಮಾರ್ಚ್ ಮತ್ತು ಮೇ ನಡುವೆ ಇರುತ್ತದೆ. ಎಲ್ಲಾ ಮೂರು ತಿಂಗಳ ಕಾಲ … Continued

ಪಾಕ್ ಪರ ಘೋಷಣೆ ಪ್ರಕರಣ: ಸಂಸದ ಸೈಯದ್ ನಾಸಿರ್ ಹುಸೇನಗೆ ಪ್ರಮಾಣವಚನ ಬೋಧಿಸದಂತೆ ಉಪರಾಷ್ಟ್ರಪತಿಗೆ ಪತ್ರ

ಬೆಂಗಳೂರು : ಕಳೆದ ವಾರ ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೈಯದ್ ನಾಸಿರ್ ಹುಸೇನ್ ಜಯಗಳಿಸಿದ ನಂತರ ವಿಧಾನಸಭೆಯೊಳಗೆ ಪಾಕಿಸ್ತಾನದ ಪರ ಘೋಷಣೆಗಳನ್ನು ಕೂಗಿದ ಮೂವರನ್ನು ಬಂಧಿಸಿದ ಕೆಲವು ದಿನಗಳ ನಂತರ, ಈ ಪ್ರಕರಣದಲ್ಲಿ ತನಿಖೆ ಪೂರ್ಣವಾಗುವವರೆಗೂ ಸೈಯದ್ ನಾಸಿರ್ ಹುಸೇನ್ ಅವರಿಗೆ ಪ್ರಮಾಣ ವಚನ ಬೋಧಿಸಬಾರದು ಎಂದು ನಿವೃತ್ತ ಐಎಎಸ್‌ ಹಾಗೂ ಐಪಿಎಸ್‌ ಅಧಿಕಾರಿಗಳು … Continued

ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟದ ಆರೋಪಿ ಫೋಟೋ ಬಿಡುಗಡೆ: ಸುಳಿವು ನೀಡಿದವರಿಗೆ 10 ಲಕ್ಷ ರೂ. ಬಹುಮಾನ ಘೋಷಣೆ

ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣದ ಆರೋಪಿಬಾಂಬರ್ ಫೋಟೋ ಬಿಡುಗಡೆ ಮಾಡಿರುವ ಎನ್ಐಎ (NIA) ಸುಳಿವು ನೀಡಿದವರಿಗೆ 10 ಲಕ್ಷ ರೂಪಾಯಿ ಬಹುಮಾನ ಘೋಷಿಸಿದೆ. ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟದ ತನಿಖೆಯನ್ನು ಎನ್ಐಎ(NIA)ಗೆ ಹಸ್ತಾಂತರಿಸಲಾಗಿದ್ದು, ಅದು ತನಿಖೆಯನ್ನು ಅಧಿಕೃತವಾಗಿ ಕೈಗೆತ್ತಿಕೊಂಡಿದೆ. ಇದೀಗ ರಾಮೇಶ್ವರಂ ಕೆಫೆಯಲ್ಲಿ ಬಾಂಬ್‌ ಇಟ್ಟ ಆರೋಪಿಯ​ ಫೋಟೋ ಬಿಡುಗಡೆ ಮಾಡಿ … Continued

ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್‌ ಘೋಷಣೆ ಪ್ರಕರಣ : ಮೂವರು ಆರೋಪಿಗಳ ಬಂಧನ

ಬೆಂಗಳೂರು : ರಾಜ್ಯಸಭೆಗೆ ನಡೆದ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದ ಕಾಂಗ್ರೆಸ್ ಅಭ್ಯರ್ಥಿ ನಾಸೀರ್ ಹುಸೇನ್ ಅವರ ಬೆಂಬಲಿಗರಿಂದ ವಿಧಾನಸೌಧದಲ್ಲಿ ನಡೆದ ಸಂಭ್ರಮಾಚರಣೆ ವೇಳೆ ಕೆಲವರು ಪಾಕಿಸ್ತಾನ್ ಜಿಂದಾಬಾದ್ ಎಂಬ ಘೋಷಣೆ ಕೂಗಿದ ಆರೋಪಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸೋಮವಾರ ಮೂವರನ್ನು ಬಂಧಿಸಿದ್ದಾರೆ ಎಂದು ವರದಿಯಾಗಿದೆ. ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಕೂಗಿದ್ದ ಆರೋಪಿತ ಪ್ರಕರಣದಲ್ಲಿ ಪೊಲೀಸರು … Continued

ಬೆಂಗಳೂರು ರಾಮೇಶ್ವರಂ ಕೆಫೆ ಬಾಂಬ್‌ ಸ್ಫೋಟ ಪ್ರಕರಣ ಎನ್‌ಐಎಗೆ ವರ್ಗಾವಣೆ

ಬೆಂಗಳೂರು : ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಸ್ಫೋಟದ ತನಿಖೆಯನ್ನು ಕೇಂದ್ರ ಗೃಹ ಸಚಿವಾಲಯ (MHA) ಸೋಮವಾರ ರಾಷ್ಟ್ರೀಯ ತನಿಖಾ ಸಂಸ್ಥೆಗೆ (NIA) ಹಸ್ತಾಂತರಿಸಿದೆ ಸೋಮವಾರ ಮಧ್ಯಾಹ್ನ ಎನ್‌ಐಎ ಅಧಿಕಾರಿಗಳು ಎಫ್‌ಐಆರ್‌ ದಾಖಲಿಸಿದ್ದಾರೆ ರಾಮೇಶ್ವರಂ ಕೆಫೆಯ ಬ್ರೂಕ್‌ಫೀಲ್ಡ್ ಔಟ್‌ಲೆಟ್‌ನಲ್ಲಿ ಶುಕ್ರವಾರ (ಮಾರ್ಚ್ 1) ಸಂಭವಿಸಿದ ಕಡಿಮೆ ತೀವ್ರತೆಯ ಸ್ಫೋಟದಲ್ಲಿ ಕನಿಷ್ಠ 10 ಜನರು ಗಾಯಗೊಂಡಿದ್ದಾರೆ. ಕೆಫೆಯಲ್ಲಿ … Continued

ಬೆಂಗಳೂರು : ಕೃಷಿ ಹೊಂಡದಲ್ಲಿ ಬಿದ್ದು ಒಂದೇ ಕುಟುಂಬದ ಮೂವರು ಸಾವು

ಬೆಂಗಳೂರು: ಬೆಂಗಳೂರು ಹೊರವಲಯದ ಹೊಸಕೋಟೆ ಬಳಿ ಕೃಷಿ ಹೊಂಡದಲ್ಲಿ ಮುಳುಗಿ ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಹೊಸಕೋಟೆ ತಾಲೂಕಿನ ಕರಿಬೀರನಹೊಸಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಊಟ ಮಾಡಿ ಕೈ ತೊಳೆಯಲು ಕೃಷಿ ಹೊಂಡಕ್ಕೆ ಹೋದ ವೇಳೆ ಅವರು ನೀರಿಗೆ ಬಿದ್ದು ಮುಳುಗಿ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ಮೃತರನ್ನು ಮರಿಯಪ್ಪ (70) ಮುನಿಯಮ್ಮ … Continued

ರಾಜ್ಯ ಸರ್ಕಾರಕ್ಕೆ ಜಾತಿ ಗಣತಿ ವರದಿ ಸಲ್ಲಿಕೆ; ವರದಿಯಲ್ಲಿರುವ ಪ್ರಮುಖ ಅಂಶಗಳು

ಬೆಂಗಳೂರು: ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ಜಾತಿ ಗಣತಿ (ಕರ್ನಾಟಕ ಸಾಮಾಜಿಕ ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ) ವರದಿಯು ರಾಜ್ಯ ಸರ್ಕಾರಕ್ಕೆ ಸಲ್ಲಿಕೆಯಾಗಿದೆ. ವೀರಶೈವ ಲಿಂಗಾಯತ ಹಾಗೂ ಒಕ್ಕಲಿಗ ಸಮುದಾಯದ ತೀವ್ರ ವಿರೋಧದ ನಡುವೆಯೂ ಶಾಶ್ವತ ಹಿಂದುಳಿದ ಆಯೋಗದ ಅಧ್ಯಕ್ಷರಾದ ಕೆ ಜಯಪ್ರಕಾಶ್ ಹೆಗ್ಡೆ ಅವರು ಕಾಂತರಾಜು ಸಮಿತಿ ದತ್ತಾಂಶದ ಆಧಾರದ ಮೇಲೆ ಸಿದ್ಧಪಡಿಸಲಾದ ವರದಿಯನ್ನು … Continued

ವೀಡಿಯೊ..| ರಾಜ್ಯಸಭೆ ಚುನಾವಣೆಯಲ್ಲಿ ನಾಸಿರ್‌ ಹುಸೇನ್‌ ಗೆಲುವಿನ ಸಂಭ್ರಮದ ವೇಳೆ ಬೆಂಬಲಿಗರಿಂದ ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆ ; ಬಿಜೆಪಿ ಆಕ್ರೋಶ

ಬೆಂಗಳೂರು : ಕರ್ನಾಟಕದ ನಾಲ್ಕು ಸ್ಥಾನಗಳಿಗೆ ಮಂಗಳವಾರ ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಮೂವರು ಅಭ್ಯರ್ಥಿಗಳು ಹಾಗೂ ಬಿಜೆಪಿಯ ಓರ್ವ ಅಭ್ಯರ್ಥಿ ಜಯಗಳಿಸಿದ್ದಾರೆ. ಕಾಂಗ್ರೆಸ್‌ ಅಭ್ಯರ್ಥಿ ನಾಸಿರ್‌ ಹುಸೇನ್‌ ಅವರು ಜಯಗಳಿಸಿದ ನಂತರ ವಿಧಾನಸೌಧದಲ್ಲಿ ಅವರ ಬೆಂಬಲಿಗರು ವಿಜಯೋತ್ಸವದ ವೇಳೆ ಪಾಕಿಸ್ತಾನ ಜಿಂದಾಬಾದ್‌ ಘೋಷಣೆ ಕೂಗಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ ರಾಜ್ಯಸಭೆಯ ನೂತನ ಸಂಸದರಾಗಿ ಆಯ್ಕೆಯಾದ ಕಾಂಗ್ರೆಸ್‌ನ … Continued

ವೀಡಿಯೊ…| ಪಾಲಕರೊಂದಿಗೆ ಬೆಂಗಳೂರು ರಸ್ತೆ ಬದಿಯ ಸ್ಟಾಲ್‌ನಲ್ಲಿ ಪುಸ್ತಕ ಪರಿಶೀಲಿಸಿದ ಬ್ರಿಟನ್‌ ಪ್ರಧಾನಿ ಪತ್ನಿ…!

ಬ್ರಿಟನ್‌ನ ಪ್ರಥಮ ಮಹಿಳೆ ಮತ್ತು ರಿಷಿ ಸುನಕ್ ಅವರ ಪತ್ನಿ ಅಕ್ಷತಾ ಮೂರ್ತಿ ಅವರು ಬೆಂಗಳೂರಿನ ರಾಘವೇಂದ್ರ ಮಠದ ರಸ್ತೆ ಬದಿಯ ಬುಕ್‌ಸ್ಟಾಲ್‌ನಲ್ಲಿ ಪುಸ್ತಕಗಳನ್ನು ಪರಿಶೀಲಿಸುತ್ತಿರುವ ವೀಡಿಯೊ ಆನ್‌ಲೈನ್‌ನಲ್ಲಿ ಹರಿದಾಡುತ್ತಿದೆ. ಆಕೆಯ ತಂದೆ-ತಾಯಿಗಳಾದ ಎನ್‌ಆರ್ ನಾರಾಯಣ ಮೂರ್ತಿ ಮತ್ತು ಸುಧಾ ಮೂರ್ತಿ ಮತ್ತು ಅವರ ಪುತ್ರಿಯರಾದ ಅನೌಷ್ಕಾ ಮತ್ತು ಕೃಷ್ಣಾ ಅವರ ಜೊತೆಗಿದ್ದರು. ಸಾಮಾಜಿಕ ಮಾಧ್ಯಮದಲ್ಲಿ … Continued

ವೀಡಿಯೊ..| ಕೊಳೆ ಬಟ್ಟೆ ಧರಿಸಿ ಬಂದಿದ್ದ ವ್ಯಕ್ತಿಗೆ ʼನಮ್ಮ ಮೆಟ್ರೋʼ ಮೆಟ್ರೋ ಒಳಗೆ ಬಿಡದ ಸಿಬ್ಬಂದಿ: ಸೇವೆಯಿಂದ ಉದ್ಯೋಗಿ ವಜಾ

ಬೆಂಗಳೂರು: ಮಾಸಲು ಹಾಗೂ ಕೊಳೆಯಾದ ಉಡುಪು ಧರಿಸಿ ಬಟ್ಟೆಗಳ ಗಂಟು ಹೊತ್ತು ‘ನಮ್ಮ ಮೆಟ್ರೋ’ ದಲ್ಲಿ ಪ್ರಯಾಣಿಸಲು ಬಂದಿದ್ದ ರೈತರೊಬ್ಬರಿಗೆ ಒಳ ಪ್ರವೇಶಿಸಲು ಭದ್ರತಾ ಸಿಬ್ಬಂದಿ ನಿರಾಕರಿಸಿದ ನಂತರ ವಿವಾದ ಸೃಷ್ಟಿಯಾಗಿದ್ದು, ಈಗ ಭದ್ರತಾ ಸಿಬ್ಬಂದಿ ವಿರುದ್ಧ ಬಿಎಂಆರ್‌ಸಿಎಲ್ ಕ್ರಮ ಕೈಗೊಂಡಿದೆ. ಪ್ರಯಾಣಿಕನನ್ನು ಅವಮಾನಿಸಿದ್ದ ಭದ್ರತಾ ಮೇಲ್ವಿಚಾರಕರನ್ನು ಸೇವೆಯಿಂದ ವಜಾಗೊಳಿಸಿರುವುದಾಗಿ ಬಿಎಂಆರ್‌ಸಿಎಲ್ ಸೋಮವಾರ ತಿಳಿಸಿದೆ. ಮಾಸಲು … Continued