ಬೆಂಗಳೂರು: ಆರ್‌ಎಸ್‌ಎಸ್ ಪ್ರಮುಖ ಮದನದಾಸ ದೇವಿ ನಿಧನ

ಬೆಂಗಳೂರು: ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್‌ಎಸ್‌ಎಸ್‌) ಹಿರಿಯ ಮುಖಂಡ ಮದನದಾಸ ದೇವಿ (81) ಅವರು ಸೋಮವಾರ (ಜುಲೈ 24) ಬೆಳಿಗ್ಗೆ ನಿಧನರಾದರು. ಮೂಲತಃ ಮಹಾರಾಷ್ಟ್ರದವರಾದ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಚಿಕಿತ್ಸೆಗಾಗಿ ಬೆಂಗಳೂರಿನಲ್ಲಿ ನೆಲೆಸಿದ್ದ ಅವರು ಮುಂಜಾನೆ 5 ಗಂಟೆಗೆ ರಾಜರಾಜೇಶ್ವರಿ ನಗರದ  ರಾಷ್ಟೋತ್ಥಾನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಪಾರ್ಥೀವ ಶರೀರವನ್ನು ಆರ್‌ಎಸ್‌ಎಸ್‌ ಸ್ಥಳೀಯ ಪ್ರಧಾನ ಕಚೇರಿ … Continued

ಬೆಂಗಳೂರು : ಶಂಕಿತ ಉಗ್ರನ ಮನೆಯಲ್ಲಿ ನಾಲ್ಕು ಗ್ರೆನೇಡ್​ ಪತ್ತೆ

ಬೆಂಗಳೂರು : ಬೆಂಗಳೂರನ್ನು ಟಾರ್ಗೆಟ್‌ ಮಾಡಿ ಸ್ಫೋಟಿಸಲು ಸಂಚು ರೂಪಿಸಿದ್ದ ಶಂಕಿತ ಉಗ್ರರನ್ನು ಕೇಂದ್ರ ಅಪರಾಧ ವಿಭಾಗ (ಸಿಸಿಬಿ)ದ ಪೊಲೀಸರು ಬಂಧಿಸಿದ್ದು, ಆರೋಪಿಗಳ ಪೈಕಿ ಓರ್ವನ ಮನೆಯಲ್ಲಿ ನಾಲ್ಕು ಗ್ರೆನೇಡ್ ಪತ್ತೆಯಾಗಿದೆ. ಬೆಂಗಳೂರಿನ ಕೊಡಿಗೇಹಳ್ಳಿಯಲ್ಲಿರುವ ಬಂಧಿತ ಆರೋಪಿ ಜಾಹೀದ್ ತಬ್ರೇಜ್ ಮನೆಯಲ್ಲಿ ಗ್ರೆನೇಡ್ ಇಟ್ಟಿರುವುದನ್ನು​ ಸಿಸಿಬಿ ಪೊಲೀಸರು ಪತ್ತೆ ಮಾಡಿದ್ದಾರೆ. ಈ ಪ್ರಕರಣದ ಪ್ರಮುಖ ಆರೋಪಿ … Continued

ಆಸ್ಪತ್ರೆಯಿಂದ ಬಸನಗೌಡ ಪಾಟೀಲ ಯತ್ನಾಳ ಡಿಸ್ಚಾರ್ಜ್‌

ಬೆಂಗಳೂರು : ವಿಧಾನಸಭೆಯಲ್ಲಿ ಬುಧವಾರ ನಡೆದ ಧರಣಿ – ಗಲಾಟೆ ವೇಳೆ ಅಸ್ವಸ್ಥರಾಗಿದ್ದ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗಿದ್ದಾರೆ. ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, ನಾನು ಸಂಪೂರ್ಣ ಗುಣಮುಖನಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದೇನೆ. ಇನ್ನೆರಡು ದಿನಗಳಲ್ಲಿ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುತ್ತೇನೆ. ತಮ್ಮೆಲ್ಲರ ಹಾರೈಕೆಗಳಿಗೆ ಧನ್ಯವಾದಗಳು ಎಂದು ಬರೆದಿದ್ದಾರೆ. ವಿಧಾನಸಭೆಯಲ್ಲಿ … Continued

ಬೆಂಗಳೂರು : ಸ್ಫೋಟಕ್ಕೆ ಸಂಚು ರೂಪಿಸಿದ್ದ ಐವರು ಶಂಕಿತ ಉಗ್ರರ ಬಂಧನ

ಬೆಂಗಳೂರು : ದೇಶದ್ರೋಹಿ ಚಟುವಟಿಕೆಗಳಲ್ಲಿ ಭಾಗಿಯಾಗಿರುವ ಶಂಕೆಯ ಮೇಲೆ ಐವರು ಶಂಕಿತ ಭಯೋತ್ಪಾದಕರನ್ನು ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ಬೆಂಗಳೂರಿನಲ್ಲಿ ಬಂಧಿಸಿದೆ. ಬಂಧಿತರನ್ನು ಜುನೈದ್, ಸೊಹೈಲ್, ಉಮರ್, ಮುದಾಸಿರ್ ಮತ್ತು ಜಾಹಿದ್ ಎಂದು ಗುರುತಿಸಲಾಗಿದೆ. ಅವರ ಬಳಿಯಿದ್ದ ಮೊಬೈಲ್‌ ಫೋನ್‌ಗಳ ಜೊತೆಗೆ ಹಲವಾರು ಸ್ಫೋಟಕ ಸಾಮಗ್ರಿಗಳು ಮತ್ತು ಇತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಹೆಚ್ಚಿನ ತನಿಖೆ ನಡೆಯುತ್ತಿದ್ದು, … Continued

ವಿಪಕ್ಷಗಳ ಮೈತ್ರಿಕೂಟಕ್ಕೆ ʼಇಂಡಿಯಾʼ ಎಂಬ ಹೆಸರು ಪ್ರಸ್ತಾಪಿಸಿದ ರಾಹುಲ್‌ ಗಾಂಧಿ : ಅನುಮೋದಿಸಿದ ಮಮತಾ ಬ್ಯಾನರ್ಜಿ, ಸ್ಟಾಲಿನ್‌

ಬೆಂಗಳೂರು : ಮಂಗಳವಾರ (ಜುಲೈ 18) ಬೆಂಗಳೂರಿನಲ್ಲಿ 26 ಪಕ್ಷಗಳ ವಿರೋಧ ಪಕ್ಷದ ಮೈತ್ರಿಕೂಟಕ್ಕೆ “ಇಂಡಿಯಾ” ಎಂದು ಹೆಸರಿಸಲಾಯಿತು, ಇದನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಸ್ತಾಪಿಸಿದರು ಎಂದು ಮೂಲಗಳು ತಿಳಿಸಿವೆ. ಹೆಸರನ್ನು ಆಯ್ಕೆ ಮಾಡುವ ಚರ್ಚೆಯಲ್ಲಿ ಇಂಡಿಯಾ ಎಂದು ಕರೆಯೋಣ, ಇದು ಭಾರತ ಮತ್ತು ಬಿಜೆಪಿ ನಡುವಿನ ಹೋರಾಟವಾಗಿದೆ ಎಂದು ರಾಹುಲ್ ಗಾಂಧಿ‌ ಅವರು … Continued

ಸಿ.ಎ. ಅಂತಿಮ ಪರೀಕ್ಷೆಯಲ್ಲಿ ರಶ್ಮಿ ಭಟ್ ಉತ್ತೀರ್ಣ

ಬೆಂಗಳೂರು : ಬೆಂಗಳೂರಿನ ರಶ್ಮಿ ಎಲ್. ಭಟ್ ಅವರು ಇತ್ತೀಚಿಗೆ ನಡೆದ ಸಿ. ಎ. ಅಂತಿಮ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ. ರಶ್ಮಿ ಅವರು ಹಾಲಿ ಬೆಂಗಳೂರು ನಿವಾಸಿಗಳಾದ ಮೂಲತಃ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ತಲಗೋಡು ಮೂಲದ ಲಂಬೋದರ ಭಟ್ ಹಾಗು ವೀಣಾ ಭಟ್ ದಂಪತಿ ಪುತ್ರಿಯಾಗಿದ್ದಾರೆ. ಕಠಿಣ ಅಭ್ಯಾಸ ಮತ್ತು ದೇವರ ಆಶೀರ್ವಾದ ತಮ್ಮ … Continued

ಆನ್‌ಲೈನ್ ನಲ್ಲಿ ಸಾಲ : ಕಿರುಕುಳ ತಡೆಯಲಾರದೆ ವಿದ್ಯಾರ್ಥಿ ಆತ್ಮಹತ್ಯೆ

ಬೆಂಗಳೂರು : ಚೀನಾ ಆ್ಯಪ್ ಮೂಲಕ ಆನ್ಲೈನ್ ನಲ್ಲಿ ಸಾಲ ಪಡೆದಿದ್ದ ಇಂಜಿನಿಯರಿಂಗ್‌ ವಿದ್ಯಾರ್ಥಿಯೊಬ್ಬ ಸಾಲ ನೀಡಿದವರ ಕಿರುಕುಳ ತಡೆಯಲಾರದೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದ ವರದಿಯಾಗಿದೆ. ಬೆಂಗಳೂರು ನಗರದ ಹೆಚ್​ಎಂಟಿ ಕ್ವಾರ್ಟರ್ಸ್​ನಲ್ಲಿ ಈ ಘಟನೆ ನಡೆದಿದ್ದು ತೇಜಸ್ (೨೧) ಎಂಬಾತ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ. ಈತ ಯಲಹಂಕದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಮೆಕಾನಿಕಲ್ ಇಂಜಿನಿಯರಿಂಗ್ … Continued

ವಿಶ್ವ ಹಿಂದು ಪರಿಷತ್‌ ಪ್ರಮುಖ ಕೇಶವ ಹೆಗಡೆ ನಿಧನ

ಶಿರಸಿ: ವಿಶ್ವ ಹಿಂದು ಪರಿಷತ್ತಿನ ಹಿರಿಯ ಮುಖಂಡ, ದಕ್ಷಿಣ ಮಧ್ಯ ಕ್ಷೇತ್ರೀಯ ಸಂಘಟನಾ ಕಾರ್ಯದರ್ಶಿ ಕೇಶವ ಹೆಗಡೆ (63) ಬುಧವಾರ ಬೆಂಗಳೂರಿನಲ್ಲಿ ಹೃದಯಾಘಾತದಿಂದ ನಿಧನರಾದರು. ಶಂಕರಪುರದಲ್ಲಿರುವ ವಿಶ್ವ ಹಿಂದು ಪರಿಷತ್ ಕಾರ್ಯಾಲಯದಲ್ಲಿದ್ದ ಕೇಶವ ಹೆಗಡೆ ಅವರಿಗೆ ಮಧ್ಯಾಹ್ನ 2 ಗಂಟೆ ಸುಮಾರಿಗೆ ಹೃದಯಾಘಾತವಾಗಿತ್ತು. ಅವರನ್ನು ತಕ್ಷಣವೇ ಸಮೀಪದ ರಂಗದೊರೈ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಆ ವೇಳೆಗಾಗಲೇ … Continued

ನೂತನ ಶಾಸಕರಿಗೆ ಇಂದಿನಿಂದ ಮೂರು ದಿನ ತರಬೇತಿ

ಬೆಂಗಳೂರು: ರಾಜ್ಯದ 16ನೇ ವಿಧಾನಸಭೆಗೆ ನೂತನವಾಗಿ ಆಯ್ಕೆಯಾಗಿರುವ ಸದಸ್ಯರಿಗೆ ಬೆಂಗಳೂರಿನ (Bengaluru) ನೆಲಮಂಗಲದ ಸಮೀಪ ಇರುವ ಧರ್ಮಸ್ಥಳ ಕ್ಷೇಮವನದಲ್ಲಿ ಇಂದಿನಿಂದ (ಜೂನ್‌ 26 ರಿಂದ 28) ವರೆಗೆ ಮೂರು ದಿನಗಳ ಕಾಲ ತರಬೇತಿ ಶಿಬಿರ ಆಯೋಜಿಸಲಾಗಿದೆ. ಬೆಂಗಳೂರಿನ ನೆಲಮಂಗಲದಲ್ಲಿರುವ ಧರ್ಮಸ್ಥಳ ಕ್ಷೇಮವನದಲ್ಲಿ ಶಾಸಕರಿಗೆ ತರಬೇತಿ ಶಿಬಿರ ಆಯೋಜಿಸಲಾಗಿದೆ. ಈ ಬಾರಿ ವಿಧಾನಸಭೆಗೆ ಮೊದಲಬಾರಿ ಆಯ್ಕೆಯಾಗಿರುವ ಸುಮಾರು … Continued

ಪಾದದ ಮೂಳೆ ಮುರಿದುಕೊಂಡ ನಟ-ರಾಜ್ಯಸಭಾ ಸದಸ್ಯ ಜಗ್ಗೇಶ

ಬೆಂಗಳೂರು: ಕನ್ನಡ ನಟ ಜಗ್ಗೇಶ ( Actor Jaggesh ) ಅವರು ಈಗ ಎಡ ಕಾಲಿನ ಪಾದದ ಮೂಳೆ ಮುರಿದುಕೊಂಡಿದ್ದಾರೆ. ಈಗ ಅವರು ಸಂಪೂರ್ಣ ವಿಶ್ರಾಂತಿಯಲ್ಲಿ ಇದ್ದಾರೆ. ಈ ಕುರಿತು ಟ್ವೀಟ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ನಡೆಯುವಾಗ ಸಣ್ಣ ಅಚಾತುರ್ಯವಾಗಿ ಪಾದದ ಮೂಳೆ ಮುರಿತವಾಗಿದೆ. ನಡಿಗೆಗೆ 6 ವಾರದ ದಿಗ್ಭಂಧನ ಎಂದು ತಿಳಿಸಿದ್ದಾರೆ. ಅವರು … Continued