ಕಾಂಗ್ರೆಸ್‌ ನ ‘ನಾ ನಾಯಕಿ’ ಸಮಾವೇಶಕ್ಕೆ ಬಂದವರಿಗೆ ಹಣ ನೀಡಲಾಗಿದೆ : ಬಿಜೆಪಿ ಆರೋಪ ; ವೀಡಿಯೊ ಟ್ವೀಟ್‌

ಬೆಂಗಳೂರು: ನಗರದ ಅರಮನೆ ಮೈದಾನದ ಮುಖ್ಯದ್ವಾರ ಬಳಿ ಇಂದು, ಭಾನುವಾರ ಕಾಂಗ್ರೆಸ್ ಆಯೋಜಿಸಿದ್ದ ‘ನಾ ನಾಯಕಿ’ ಸಮಾವೇಶದಲ್ಲಿ ಭಾಗವಹಿಸಲು ಬಂದವರಿಗೆ ಹಣ ನೀಡಲಾಗಿತ್ತು ಎಂದು ಬಿಜೆಪಿ ಆರೋಪಿಸಿದೆ. ಈ ಕುರಿತು ಟ್ವೀಟ್ ಮಾಡಿರುವ ಬಿಜೆಪಿ, ‘ಅಲ್ಲೇ ಡ್ರಾ ಅಲ್ಲೇ ಬಹುಮಾನ ಅಂದ್ರೆ ಇದೇನಾ? ‘ನಾಯಕಿ’ ಕಾರ್ಯಕ್ರಮಕ್ಕೂ 2000 ರೂ. ಕೊಟ್ಟೇ ಕರೆತರಲಾಗಿತ್ತು ! ಪ್ರಿಯಾಂಕಾ ಗಾಂಧಿ … Continued

ಬೆಂಗಳೂರು : ಔಟರ್ ರಿಂಗ್ ರೋಡ್‌ನಲ್ಲಿ 2 ಬೆಕ್ಕುಗಳೊಂದಿಗೆ ಬೈಕ್ ಸವಾರಿ | ವೀಡಿಯೊ ವೈರಲ್‌

ಬೆಂಗಳೂರು: ಜನನಿಬಿಡ ರಸ್ತೆಗಳ ನಗರವು ಸಾಮಾನ್ಯಕ್ಕಿಂತ ಸ್ವಲ್ಪ ವಿಭಿನ್ನವಾದ ಸುದ್ದಿಗಳನ್ನು ಮಾಡುತ್ತಿದೆ. ಬೆಂಗಳೂರು ನಗರದ ಪ್ರಮುಖ ರಸ್ತೆಯೊಂದರ ವೀಡಿಯೊವೊಂದು ಅಂತರ್ಜಾಲದ ಗಮನ ಸೆಳೆದಿದೆ. ಬೆಂಗಳೂರಿನ ಹೊರ ವರ್ತುಲ ರಸ್ತೆಯ ವೀಡಿಯೊ ವೈರಲ್ ಆಗಿದ್ದು, ಅದರಲ್ಲಿ ಎರಡು ಮುದ್ದಾದ ಬೆಕ್ಕುಗಳೊಂದಿಗೆ ಬೈಕ್ ಸವಾರ ಸವಾರಿ ಮಾಡುತ್ತಿರುವುದನ್ನು ತೋರಿಸುತ್ತದೆ. ಬೈಕ್‌ ಓಡುತ್ತಿರುವಾಗ ಬೆಕ್ಕುಗಳು ಸಮತೋಲನವನ್ನು ಕಾಯ್ದುಕೊಂಡಿದ್ದು, ಬೈಕ್‌ ವೇಗಕ್ಕೆ … Continued

ಭಾರತದ ಮೊದಲ ಸ್ವದೇಶಿ ಐಫೋನ್ ತಯಾರಕನಾಗುವ ಹೊಸ್ತಿಲಲ್ಲಿ ಟಾಟಾ ಗ್ರೂಪ್ : ವರದಿ

ನವದೆಹಲಿ: ಟಾಟಾ ಗ್ರೂಪ್ ಬೆಂಗಳೂರಿನ ಬಳಿಯಿರುವ ಐಫೋನ್ ತಯಾರಿಕಾ ಕಾರ್ಖಾನೆಯನ್ನು ಖರೀದಿಸಲು ತೈವಾನ್ ಮೂಲದ ವಿಸ್ಟ್ರಾನ್ ಕಾರ್ಪೊರೇಷನ್‌ನೊಂದಿಗೆ ಅಂತಿಮ ಹಂತದ ಮಾತುಕತೆ ನಡೆಸುತ್ತಿದೆ ಎಂದು ಬ್ಲೂಮ್‌ಬರ್ಗ್ ವರದಿ ಮಾಡಿದೆ. ಸೆಪ್ಟೆಂಬರ್ 9, 2022 ರಂದು, ಕಾರ್ಖಾನೆಯನ್ನು ಖರೀದಿಸಲು ಟಾಟಾ ಗ್ರೂಪ್ ವಿಸ್ಟ್ರಾನ್ ಕಾರ್ಪರೇಶನ್‌ನೊಂದಿಗೆ ಮಾತುಕತೆ ಪ್ರಾರಂಭಿಸಿದೆ ಎಂದು ವರದಿಗಳು ತಿಳಿಸಿವೆ. ಇತ್ತೀಚಿನ ವರದಿಯ ಪ್ರಕಾರ, ಏರ್‌ಲೈನ್‌ನಿಂದ … Continued

ಬೆಂಗಳೂರಿನಲ್ಲಿ ರಾಜ್ಯದ ಪ್ರಥಮ ವನ್ಯಜೀವಿ ವಿಧಿ ವಿಜ್ಞಾನಗಳ ಪ್ರಯೋಗಾಲಯ

ಬೆಂಗಳೂರು: ರಾಜ್ಯದ ಪ್ರಥಮ ವನ್ಯಜೀವಿ ವಿಧಿ ವಿಜ್ಞಾನಗಳ ಪ್ರಯೋಗಾಲಯ ಬೆಂಗಳೂರಿನಲ್ಲಿ ಸ್ಥಾಪನೆಯಾಗಲಿದೆ. ಮಾರ್ಚ್‌ನಿಂದ ಈ ಪ್ರಯೋಗಾಲಯ ಕಾರ್ಯಾರಂಭ ಮಾಡಲಿದ್ದು, ಇದಕ್ಕೆ ರಾಜ್ಯ ಸರ್ಕಾರ ₹2.7 ಕೋಟಿ ಅನುದಾನ ನೀಡಲು ಒಪ್ಪಿದೆ. ಕಳೆದ ಒಂದು ದಶಕದಿಂದ ಪ್ರಯೋಗಾಲಯ ಸ್ಥಾಪನೆಯ ಪ್ರಸ್ತಾವನೆ ಚರ್ಚೆಯಲ್ಲಿದ್ದು, ರಾಜ್ಯ ಸರ್ಕಾರ ಇತ್ತೀಚೆಗಷ್ಟೇ ಒಪ್ಪಿಗೆ ನೀಡಿದೆ. ವನ್ಯಜೀವಿಗಳ ಮೇಲಿನ ಅಪರಾಧಗಳ ಬಗ್ಗೆ ತನಿಖೆ ನಡೆಸಲು … Continued

ಬೆಂಗಳೂರು: ರೈಲ್ವೇ ಸ್ಟೇಷನ್‌ ಪ್ಲಾಸ್ಟಿಕ್‌ ಡ್ರಮ್‌ನಲ್ಲಿ ಯುವತಿಯ ಶವ ಪತ್ತೆ

ಬೆಂಗಳೂರು : ಯಶವಂತಪುರ ರೈಲ್ವೇ ನಿಲ್ದಾಣದಲ್ಲಿ ಪ್ಲಾಸ್ಟಿಕ್‌ ಡ್ರಮ್‌ ಒಂದರಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆಯಾಗಿದೆ. ದುರ್ವಾಸನೆ ಬರುತ್ತಿದ್ದ ಹಿನ್ನೆಲೆಯಲ್ಲಿ ಸ್ವಚ್ಛತಾ ಕೆಲಸ ಮಾಡುವ ಸಿಬ್ಬಂದಿ ಪೊಲೀಸರಿಗೆ ದೂರು ನೀಡಿದ ನಂತರ ಡ್ರಮ್‌ ಪರಿಶೀಲನೆ ಮಾಡಿದ ವೇಳೆ ಕೊಳೆತ ಸ್ಥಿತಿಯಲ್ಲಿರುವ ಯುವತಿ ದೇಹ ಪತ್ತೆಯಾಗಿದೆ. ಯಶವಂತಪುರ ರೈಲ್ವೇ ನಿಲ್ದಾಣದ ಗೂಡ್ಸ್ ಪ್ಲಾಟ್ ಫಾರ್ಮ್ … Continued

ಹಾಡಹಗಲೇ ಕಾಲೇಜಿನಲ್ಲಿ ವಿದ್ಯಾರ್ಥಿನಿಗೆ ಚಾಕುವಿನಿಂದ ಇರಿದು ಕೊಂದ ವಿದ್ಯಾರ್ಥಿ

ಬೆಂಗಳೂರು: ಹಾಡಹಗಲೇ ಕಾಲೇಜಿನ ಆವರಣದಲ್ಲೇ ವಿದ್ಯಾರ್ಥಿನಿಯೊಬ್ಬಳಿಗೆ ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಗರದ ರಾಜಾನುಕುಂಟೆ ಬಳಿ ಖಾಸಗಿ ಕಾಲೇಜಿನಲ್ಲಿ ನಡೆದಿದೆ. ನಂತರ ಕೊಲೆ ಮಾಡಿದ ವಿದ್ಯಾರ್ಥಿ ತಾನೂ ಇರಿದುಕೊಂಡಿದ್ದಾನೆ. ಮೃತ ವಿದ್ಯಾರ್ಥಿಯನ್ನು 19 ವರ್ಷದ ಲಯಸ್ಮಿತಾ ಎಂದು ಗುರುತಿಸಲಾಗಿದ್ದು, ಪ್ರೆಸಿಡೆನ್ಸಿ ವಿಶ್ವವಿದ್ಯಾಲಯದಲ್ಲಿ ಬಿಟೆಕ್ (B Tech) ಮೊದಲ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದಳು ಎಂದು … Continued

ವಿದೇಶಿ ಪ್ರಯಾಣಿಕರಿಗೆ 7 ದಿನ ಕ್ವಾರಂಟೈನ್

ಬೆಂಗಳೂರು: ಕೋವಿಡ್ ಮುನ್ನೆಚ್ಚರಿಕೆ ಕ್ರಮವಾಗಿ ಹೊರ ದೇಶಗಳಿಂದ ಬರುವ ಪ್ರಯಾಣಿಕರನ್ನು 7 ದಿನ ಕ್ವಾರಂಟೈನ್‌ಗೆ ಒಳಪಡಿಸಬೇಕು ಎಂದು ಆರೋಗ್ಯ ಇಲಾಖೆ ಸೂಚಿಸಿದೆ. ಜತೆಗೆ, ಕೋವಿಡ್ ಸ್ಯಾಂಪಲ್ಸ್ ತೆಗೆದುಕೊಂಡು ಜಿನೋಮ್ ಸೀಕ್ವೆನ್ಸಿಂಗ್‌ಗೆ ಕಳುಹಿಸಲು ಮುಂದಾಗಿದೆ. ಕೆಲವು ದೇಶಗಳಲ್ಲಿ ಕೋವಿಡ್‌ ಕ್ರಮಗಳು ಹೆಚ್ಚುತ್ತಿವೆ. ಈ ಹಿನ್ನೆಲೆಯಲ್ಲಿ ಸೋಂಕಿತರ ಸಂಪರ್ಕ ಪತ್ತೆಗೆ ಆದ್ಯತೆ ನೀಡಬೇಕು ಎಂದುತಿಳಿಸಲಾಗಿದೆ. ಚೀನಾ, ಹಾಂಗ್‌ಕಾಂಗ್, ಜಪಾನ್, … Continued

ಕೋವಿಡ್‌-19 ಮುನ್ನೆಚ್ಚರಿಕೆ : ಬಿಎಂಟಿಸಿ, ಮೆಟ್ರೋದಲ್ಲಿ ಮಾಸ್ಕ್‌ ಧರಿಸುವುದು ಕಡ್ಡಾಯ

ಬೆಂಗಳೂರು: ಚೀನಾ ಸೇರಿದಂತೆ ವಿವಿಧ ದೇಶಗಳಲ್ಲಿ ಕೋವಿಡ್‌ ಸೋಂಕು ಮತ್ತೆ ತೀವ್ರವಾಗುತ್ತಿರುವ ಹಿನ್ನೆಲೆಯಲ್ಲಿ ಬಿಎಂಟಿಸಿ ಬಸ್‌ಗಳಲ್ಲಿ ಪ್ರಯಾಣಿಕರಿಗೆ ಮಾಸ್ಕ್‌ ಧರಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ಈ ಸಂಬಂಧ ಸುತ್ತೋಲೆ ಹೊರಡಿಸಿರುವ ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕಿ ಕೆ.ಎಸ್‌.ಸತ್ಯವತಿ, ಮಾಸ್ಕ್‌ ಹಾಕಿಕೊಳ್ಳದ ಪ್ರಯಾಣಿಕರಿಗೆ ಚಾಲನಾ ಸಿಬ್ಬಂದಿ ಜಾಗೃತಿ ಮೂಡಿಸಬೇಕು. ಚಾಲನಾ ಸಿಬ್ಬಂದಿ ಸೇರಿದಂತೆ ಸಂಸ್ಥೆಯ ಸಿಬ್ಬಂದಿ ಹಾಗೂ ಅಧಿಕಾರಿಗಳು ಕಡ್ಡಾಯವಾಗಿ ಮಾಸ್ಕ್‌ … Continued

ಬೆಂಗಳೂರು: ಒಂದೇ ಕುಟುಂಬದ ಮೂವರು ಆತ್ಮಹತ್ಯೆ

ಬೆಂಗಳೂರು: ಮಹಾಲಕ್ಷ್ಮೀ ಲೇಔಟ್​​ನ ಮನೆಯೊಂದರಲ್ಲಿ ವಾಸವಾಗಿದ್ದ ತಾಯಿ, ಮಗಳು ಹಾಗೂ ಮಗ ಆತ್ಮಹತ್ಯೆ ಮಾಡಿಕೊಂಡಿದ್ದು ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಮಹಾಲಕ್ಷ್ಮಿ ಲೇಔಟ್​​​ನ ವೆಸ್ಟ್ ಆಪ್ ಕಾರ್ಡ್ ರಸ್ತೆಯಲ್ಲಿರುವ ಅಪಾರ್ಟ್​​ಮೆಂಟ್​​ನಲ್ಲಿ ಈ ಘಟನೆ ನಡೆದಿದ್ದು, ಯಶೋಧಾ(70), ಸುಮನ್(41), ನರೇಶ್ ಗುಪ್ತಾ(36) ಎಂಬ ತಾಯಿ, ಮಗಳು ಹಾಗೂ ಮಗ ಮೂವರು ಆತ್ಮಹತ್ಯೆಗೆ ಮಾಡಿಕೊಂಡವರು ಎಂದು ಗುರುತಿಸಲಾಗಿದೆ. ಮೇಲ್ನೋಟಕ್ಕೆ … Continued

ಡಿ ಕೆ ಶಿವಕುಮಾರ ಒಡೆತನದ ಶಿಕ್ಷಣ ಸಂಸ್ಥೆಗಳ ಮೇಲೆ ಸಿಬಿಐ ದಾಳಿ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಮಾಲೀಕತ್ವದ ಶಿಕ್ಷಣ ಸಂಸ್ಥೆಗಳ ಮೇಲೆ ಸಿಬಿಐ ದಾಳಿ ನಡೆದಿದೆ. ಡಿ.ಕೆ. ಶಿವಕುಮಾರ ಅವರು ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನದಲ್ಲಿ ಪಾಲ್ಗೊಂಡಿದ್ದಾರೆ. ಇತ್ತ ಬೆಂಗಳೂರಿನಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿರುವ ನ್ಯಾಶನಲ್‌ ಎಜುಕೇಶನ್‌ ಫೌಂಡೇಶನ್‌ ಮೇಲೆ ದಾಳಿ ನಡೆದಿದೆ. ಇಂದು, ಸೋಮವಾರ ಮಧ್ಯಾಹ್ನ ಎರಡು ಗಂಟೆ ಸುಮಾರಿಗೆ ದಾಳಿ ನಡೆದಿದೆ ಎನ್ನಲಾಗಿದೆ. ಸಿಬಿಐ … Continued