ಕುಮಟಾ: ಸರ್ಕಾರಿ ಪ್ರಾಥಮಿಕ ಶಾಲಾ ಗ್ರೇಡ್ 2 ದೈಹಿಕ ಶಿಕ್ಷಣ ಶಿಕ್ಷಕರ ಸಂಘಟನೆ ರಾಜ್ಯಾಧ್ಯಕ್ಷರಾಗಿ ರವೀಂದ್ರ ಭಟ್ಟ ಸೂರಿ ಆಯ್ಕೆ

ಕುಮಟಾ: ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲಾ ಗ್ರೇಡ್ 2 ದೈಹಿಕ ಶಿಕ್ಷಣ ಶಿಕ್ಷಕರ ಸಂಘಟನೆ ರಚನೆಯಾಗಿದ್ದು ರಾಜ್ಯಾಧ್ಯಕ್ಷರಾಗಿ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಹೊಲನಗದ್ದೆ ಪ್ರಾಥಮಿಕ ಶಾಲೆಯ ದೈಹಿಕ  ಶಿಕ್ಷಣ ಶಿಕ್ಷಕ ರವೀಂದ್ರ ಭಟ್ಟ ಸೂರಿ ಒಮ್ಮತದ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದಾರೆ. ಇಂದು, ಭಾನುವಾರ ಬೆಂಗಳೂರಿನ ಐಸಾಕ್ ನ್ಯೂಟನ್ ಹೈಸ್ಕೂಲ್ ಸಭಾಂಗಣದಲ್ಲಿ … Continued

ಬೆಂಗಳೂರು ರಾಜಕಾಲುವೆ ಅತಿಕ್ರಮ ತೆರವು ಕಾರ್ಯಾಚರಣೆಯಲ್ಲಿ ಭೇದಭಾವ ಮಾಡುವ ಪ್ರಶ್ನೆಯೇ ಇಲ್ಲ: ಸಿಎಂ ಬೊಮ್ಮಾಯಿ

ಬೆಂಗಳೂರು: ರಾಜಕಾಲುವೆ ಒತ್ತುವರಿ ತೆರವುಗೊಳಿಸುವ ಕಾರ್ಯಾಚರಣೆಯಲ್ಲಿ ಭೇದಭಾವ ಮಾಡುವ ಪ್ರಶ್ನೆಯೇ ಇಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಇಂದು ಸೋಮವಾರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರಾಜಕಾಲುವೆ ಮೇಲೆ ಕಟ್ಟಡ ಹಾಗೂ ಮನೆ ಕಟ್ಟಿದವರ ಮೇಲೆ ಹಾಗೂ ಕಾಲುವೆ ನೀರನ್ನು ಹರಿದು ಹೋಗಲು ತೊಂದರೆ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಇದರಲ್ಲಿ ಭೇದಿ-ಬಾವ … Continued

ಇಂದಿನಿಂದ ವಿಧಾನಮಂಡಲ ಅಧಿವೇಶನ ಆರಂಭ

ಬೆಂಗಳೂರು: ಇಂದಿನಿಂದ (ಸೆಪ್ಟಂಬರ್‌ 12) ವಿಧಾನಮಂಡಲದ ಅಧಿವೇಶನ ಆರಂಭವಾಗಲಿದ್ದು, ಸೆಪ್ಟಂಬರ್‌ 23 ರವರೆಗೆ ನಡೆಯಲಿದೆ. ಮೊದಲ ದಿನದಿಂದಲೇ ಅಧಿವೇಶನ ಕಾವೇರುವ ಸಾಧ್ಯತೆಯಿದೆ. ಕೆಲವು ಮಸೂದೆಗಳನ್ನು ಮಂಡಿಸಿ ಅಂಗೀಕಾರ ಪಡೆದುಕೊಳ್ಳಲು ಆಡಳಿತ ಪಕ್ಷ ಮುಂದಾಗಲಿದೆ. ಸುಗ್ರೀವಾಜ್ಞೆ ಮೂಲಕ ಜಾರಿಗೆ ತಂದಿರುವ ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ಮಸೂದೆ, ಬೆಂಗಳೂರು ಸಂಚಾರ ದಟ್ಟಣೆ ನಿರ್ವಹಣೆಗೆ ಪ್ರತ್ಯೇಕ ಪ್ರಾಧಿಕಾರ … Continued

ಪ್ರವಾಹಕ್ಕೆ ಸಿಲುಕಿದ ಕರ್ನಾಟಕ, ಕೇರಳ: ಬೆಂಗಳೂರಲ್ಲಿ ಜನಜೀವನವೇ ತಲ್ಲಣ; ಮತ್ತೆ ಭಾರೀ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ನವದೆಹಲಿ: ಭಾರತ ಹವಾಮಾನ ಇಲಾಖೆ (IMD) ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶದಲ್ಲಿ ಸೆಪ್ಟೆಂಬರ್ 8 ಮತ್ತು 9 ರಂದು ಭಾರಿ ಮಳೆ, ಗುಡುಗು ಮತ್ತು ಸಿಡಿಲಿನ ಮುನ್ಸೂಚನೆ ನೀಡಿದೆ. ಏತನ್ಮಧ್ಯೆ, ಕೇರಳ, ಲಕ್ಷದ್ವೀಪ, ತೆಲಂಗಾಣ ಮತ್ತು ಕರಾವಳಿ ಆಂಧ್ರಪ್ರದೇಶ ಸೆಪ್ಟೆಂಬರ್ 6, 7 ಮತ್ತು 9 ರಂದು ‘ಅತಿಯಾದ ಭಾರೀ ಮಳೆ’ಗೆ ಸಾಕ್ಷಿಯಾಗಲಿದೆ ಎಂದು ಮುನ್ಸೂಚನೆ ನೀಡಿದೆ. … Continued

ಆಮ್‌ ಆದ್ಮಿ ಪಕ್ಷಕ್ಕೆ ಸೇರ್ಪಡೆಯಾದ ಕಾಂಗ್ರೆಸ್‌ ಮಾಜಿ ರಾಷ್ಟ್ರೀಯ ವಕ್ತಾರ ಬ್ರಿಜೇಶ್‌ ಕಾಳಪ್ಪ

ಬೆಂಗಳೂರು: ಕಾಂಗ್ರೆಸ್‌ ಪಕ್ಷದ ಮಾಜಿ ರಾಷ್ಟ್ರೀಯ ವಕ್ತಾರ ಹಾಗೂ ಸುಪ್ರೀಂಕೋರ್ಟ್‌ ಹಿರಿಯ ವಕೀಲ ಬ್ರಿಜೇಶ್‌ ಕಾಳಪ್ಪ ಅವರು ಆಮ್‌ ಆದ್ಮಿ ಪಾರ್ಟಿಗೆ ಸೋಮವಾರ ಸೇರ್ಪಡೆಯಾದರು. ಬೆಂಗಳೂರಿನ ಹೊಟೇಲ್‌ ಪರಾಗ್‌ನಲ್ಲಿ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಎಎಪಿಯ ಕರ್ನಾಟಕ ಉಸ್ತುವಾರಿ ದಿಲೀಪ್‌ ಪಾಂಡೆ ಅವರು ಬ್ರಿಜೇಶ್‌ ಕಾಳಪ್ಪ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು. ಪಕ್ಷದ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ … Continued

ನೇತ್ರ ದಾನದ ಬಗ್ಗೆ ಅರಿವು ಮೂಡಿಸಲು ಸೈಕಲ್ ಜಾಥಾ

ಬೆಂಗಳೂರು : ಗೋ ಗ್ರೀನ್ ಮತ್ತು ಡಾಕ್ಟರ್ ಅಗರವಾಲ್ ಕಣ್ಣಿನ ಆಸ್ಪತ್ರೆ ಸಹಯೋಗದೊಂದಿಗೆ ಇಂದು, ಭಾನುವಾರ “ನೇತ್ರ ದಾನ – ಮಹಾ ದಾನ ” ಎಂಬ ಘೋಷ ವಾಕ್ಯದೊಂದಿಗೆ ನೇತ್ರ ದಾನದ ಬಗ್ಗೆ ಜನಲ್ಲಿ ಅರಿವು ಮೂಡಿಸಲು ಬೆಂಗಳೂರಿನ ಬನಶಂಕರಿಯಲ್ಲಿ ಸೈಕಲ್ ಜಾಥಾ ನಡೆಸಲಾಯಿತು . ಜಾಥಾದಲ್ಲಿ ನೂರಾರು ಸೈಕಲ್ ಪಟುಗಳು ಭಾಗವಹಿಸಿದ್ದರು. ಸೈಕಲ್‌ ಜಾಥಾಕ್ಕೆ … Continued

ಬೆಂಗಳೂರು: ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶ ಉತ್ಸವಕ್ಕೆ ಅವಕಾಶವಿಲ್ಲ, ಯಥಾಸ್ಥಿತಿಗೆ ಹೈಕೋರ್ಟ್ ಆದೇಶ

ಬೆಂಗಳೂರು: ಚಾಮರಾಜಪೇಟೆ ಮೈದಾನ ಮಾಲೀಕತ್ವಕ್ಕೆ ಸಂಬಂಧಿಸಿ BBMP ಆದೇಶದ ವಿರುದ್ಧ ವಕ್ಫ್ ಬೋರ್ಡ್ ಹೈಕೋರ್ಟ್(High Court) ಮೆಟ್ಟಿಲೇರಿತ್ತು. ಈ ಸಂಬಂಧ ವಿಚಾರಣೆ ನಡೆಸಿದ ಹೈಕೋರ್ಟ್ ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಯಥಾಸ್ಥಿತಿ ಕಾಪಾಡುವಂತೆ ಇಂದು(ಆಗಸ್ಟ್‌ 25)  ಮಧ್ಯಂತರ ಆದೇಶ ನೀಡಿದೆ. ಈ ಹಿನ್ನೆಲೆಯಲ್ಲಿ ಗಣೇಶ ಪ್ರತಿಷ್ಠಾಪಿಸಲು ಆವಕಾಶವಿಲ್ಲ. ಬಕ್ರೀದ್ ಹಾಗೂ ರಂಜಾನ್ ಪ್ರಾರ್ಥನೆಗೆ ಯಥಾಪ್ರಕಾರ ಅವಕಾಶವಿದೆ. ಚಾಮರಾಜಪೇಟೆ … Continued

ಲೇಖಕಿ, ನಿವೃತ್ತ ಆಕಾಶವಾಣಿ ನಿರ್ದೇಶಕಿ ಜ್ಯೋತ್ಸ್ನಾ ಕಾಮತ್‌ ಇನ್ನಿಲ್ಲ

ಕುಮಟಾ: ಸಂಶೋಧಕಿ ಹಾಗೂ ಲೇಖಕಿ ಜ್ಯೋತ್ಸ್ನಾ ಕಾಮತ್ (86) ಬೆಂಗಳೂರಿನಲ್ಲಿ ಬುಧವಾರ ನಿಧನರಾಗಿದ್ದಾರೆ. ಮಲ್ಲೇಶ್ವರದ ನಿವಾಸದಲ್ಲಿ ಮಧ್ಯಾಹ್ನ 3 ಗಂಟೆಗೆ ನಿಧನರಾಗಿದ್ದಾರೆ. ಮೃತರು ಮಗ ವಿಕಾಸ್ ಕಾಮತ್, ಸೊಸೆ ಕಿಮ್ ಕಾಮತ್ ಹಾಗೂ ಮೊಮ್ಮಗಳು ಮೀನಾ ಕಾಮತ್ ಹಾಗೂ ಅಪಾರ ಬಂಧು-ಬಳಗದವರನ್ನು ಅಗಲಿದ್ದಾರೆ. ಜ್ಯೋತ್ಸ್ನಾ ಕಾಮತ್‌ ಅವರು ಉತ್ತರ ಕನ್ನಡ ಜಿಲ್ಲೆಯ ಕುಮಟಾದಲ್ಲಿ 1937ರಲ್ಲಿ ಜನಿಸಿದ್ದರು. … Continued

35 ಸಾವಿರಕ್ಕೂ ಹೆಚ್ಚು ಹಾವು, ಪ್ರಾಣಿ-ಪಕ್ಷಿಗಳನ್ನು ರಕ್ಷಿಸಿದ್ದ ಸ್ನೇಕ್ ಲೋಕೇಶ ನಿಧನ

ಬೆಂಗಳೂರು: ನೆಲಮಂಗಲದ ಸ್ನೇಕ್ ಲೋಕೇಶ ಎಂದು ಹೆಸರುವಾಸಿಯಾಗಿದ್ದ ಉರಗ ರಕ್ಷಕ, ಲೋಕೇಶ ಅವರು ಹಾವು ಕಡಿತಕ್ಕೊಳಗಾಗಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಇಂದು, ಮಂಗಳವಾರ ಬೆಳಗ್ಗೆ ಸ್ನೇಕ್ ಲೋಕೇಶ ಅವರು ನಿಧನರಾಗಿದ್ದಾರೆ. ನೆಲಮಂಗಲ ತಾಲೂಕಿನ ಡಾಬಸ್ ಪೇಟೆಯಲ್ಲಿ ಜುಲೈ 17ರಂದು ಬರಿಗೈಯಲ್ಲಿ ನಾಗರ ಹಾವನ್ನು ಹಿಡಿಯುವಾಗ‌ ಲೋಕೇಶ ಅವರ ಬೆರಳಿಗೆ ವಿಷಪೂರಿತ ನಾಗರಹಾವು … Continued

ಬೆಂಗಳೂರು: ಒಂದೇ ಕುಟುಂಬದ ಮೂವರು ಆತ್ಮಹತ್ಯೆ

ಬೆಂಗಳೂರು: ರಾಜಧಾನಿಯಲ್ಲಿ ಒಂದೇ ಕುಟುಂಬದ ಮೂವರ ಶವ ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೃತರನ್ನು ಕೋಣನಕುಂಟೆಯ ಚುಂಚನಕಟ್ಟೆ ಎಸ್​​ಬಿಐ ಲೇಔಟ್ ನ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಮಹೇಶ್, ಜ್ಯೋತಿ ಹಾಗೂ ಮಗ ನಂದೀಶ್ ಗೌಡ ಎಂದು ಗುರುತಿಸಲಾಗಿದೆ. ಮಾರಣಾಂತಿಕ ರೋಗ ಎಂದು ತಿಳಿದು ಇಡೀ ಕುಟುಂಬವೇ ಆತ್ಮಹತ್ಯೆಗೆ ಶರಣಾಗಿದೆ ಎಂದು ಹೇಳಲಾಗಿದೆ. ಬಿಬಿಎಂಪಿ ಗುತ್ತಿಗೆ ನೌಕರನಾಗಿ … Continued