ವೀಡಿಯೊ..| ಬೆಂಗಳೂರು : ರಸ್ತೆ ಜಗಳ ; ಕಾರಿನ ಬಾನೆಟ್ ಮೇಲೆ ವ್ಯಕ್ತಿಯನ್ನು ಎಳೆದೊಯ್ದ ಎಸ್‌ಯುವಿ ಚಾಲಕ…!

ಬೆಂಗಳೂರು: ರಾಜಧಾನಿಯ ಅತ್ಯಂತ ಜನನಿಬಿಡ ಪ್ರದೇಶಗಳಲ್ಲಿ ಒಂದಾದ ಹಳೆ ವಿಮಾನ ನಿಲ್ದಾಣ ರಸ್ತೆಯಲ್ಲಿ (Old Airport Road) ಬೆಚ್ಚಿಬೀಳಿಸುವಂತಹ ‘ರೋಡ್ ರೇಜ್’ (Road Rage) ಘಟನೆಯೊಂದು ನಡೆದಿದೆ. ಕಾರಿನ ಬಾನೆಟ್ ಮೇಲೆ ವ್ಯಕ್ತಿಯೊಬ್ಬರು ಇದ್ದಾಗಲೇ ಚಾಲಕ ಅತಿ ವೇಗವಾಗಿ ವಾಹನ ಚಲಾಯಿಸಿಕೊಂಡು ಹೋಗಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಹಳೆ ವಿಮಾನ ನಿಲ್ದಾಣ … Continued

ಬೆಂಗಳೂರು: ಸ್ಕೂಟರ್ ಮೇಲೆ ಶಾಲಾ ಬಸ್ ಹರಿದು ಇಬ್ಬರು ಪುಟಾಣಿಗಳು ಸಾವು

ಬೆಂಗಳೂರು : ಬೈಕ್ ಮೇಲೆ ಖಾಸಗಿ ಬಸ್ ಹರಿದು ಇಬ್ಬರು ಪುಟ್ಟ ಮಕ್ಕಳು ಮೃತಪಟ್ಟ ಘಟನೆ ಬೆಂಗಳೂರಿನ ಥಣಿಸಂದ್ರ ಬಳಿ ಬುಧವಾರ ನಡೆದಿದೆ ಎಂದು ವರದಿಯಾಗಿದೆ. ಮೃತ ಮಕ್ಕಳನ್ನು ವರ್ಷಾ (2 ವರ್ಷ) ಹಾಗೂ ಬಾನು (4 ವರ್ಷ) ಬುಧವಾರ ಬೆಳಿಗ್ಗೆ ಸಿಎಆರ್ ಹೆಡ್ ಕಾನ್ಸ್ಟೇಬಲ್ ನಾಗನಗೌಡ ಮಾಲಿಪಾಟೀಲ ಎಂಬವರು ಮ್ಮ ಸ್ಕೂಟರ್‌ನಲ್ಲಿ ತನ್ನ ಮಗಳಾದ … Continued

ವಿಧಾನಸೌಧದ ಸಚಿವರ ಕಚೇರಿಯಲ್ಲಿ ಚಿನ್ನಾಭರಣ, ನಗದು ಇದ್ದ ಬ್ಯಾಗ್ ಕಳ್ಳತನ

ಬೆಂಗಳೂರು : ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ ಅವರ ವಿಧಾನಸೌಧದಲ್ಲಿ ಕಚೇರಿಯಲ್ಲಿ ಕಳ್ಳತನ ನಡೆದಿದೆ ಎಂದು ವರದಿಯಾಗಿದೆ. ಕಚೇರಿಯಲ್ಲಿ 300 ಗ್ರಾಂ ಚಿನ್ನಾಭರಣ ಹಾಗೂ 1.50 ಲಕ್ಷ ರೂಪಾಯಿ ನಗದು ಇದ್ದ ಕೈಚೀಲ ಕಳವಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಡಿ ಗ್ರೂಪ್ ನೌಕರನನ್ನು ವಿಧಾನಸೌಧ ಪೊಲೀಸರು ಬಂಧಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ನವೀನ ಎಂಬವರು ಕೆಲಸದ ನಿಮಿತ್ತ … Continued

ಬೆಂಗಳೂರಿನಲ್ಲಿ ಅಡಗಿಕೊಂಡಿದ್ದ 24 ಕೊಲೆ ಪ್ರಕರಣಗಳಲ್ಲಿ ಬೇಕಾಗಿದ್ದ ಬಿಹಾರದ ತಂದೆ-ಮಗನ ಬಂಧನ….

ಪಾಟ್ನಾ: ಸುಮಾರು 40ಕ್ಕೂ ಹೆಚ್ಚು ಕ್ರಿಮಿನಲ್ ಪ್ರಕರಣಗಳಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಬಿಹಾರದ ಕುಖ್ಯಾತ ಅಪರಾಧಿಗಳಾದ ಮನೋಜ ಸಿಂಗ್ ಮತ್ತು ಆತನ ಪುತ್ರ ಮಾಣಿಕ್ ಸಿಂಗ್‌ನನ್ನು ಬಿಹಾರ ವಿಶೇಷ ಕಾರ್ಯಪಡೆ (STF) ಕೆಲ ದಿನಗಳ ಹಿಂದೆ ಬೆಂಗಳೂರಿನಲ್ಲಿ ಬಂಧಿಸಿದೆ. ಈ ಕಾರ್ಯಾಚರಣೆಗೆ ಬೆಂಗಳೂರಿನ ರಾಜ್ಯ ಗುಪ್ತಚರ ವಿಭಾಗದ ಪೊಲೀಸರು ಸಾಥ್ ನೀಡಿದ್ದಾರೆ. ಬಂಧಿತರಿಂದ ಎಂಟು ಡಾಂಗಲ್‌ಗಳು, ಒಂಬತ್ತು … Continued

ಬೆಂಗಳೂರು ವಿಮಾನ ನಿಲ್ದಾಣದಲ್ಲಿ 3 ಕೋಟಿ. ರೂ ಮೌಲ್ಯದ ಗಾಂಜಾ ಪತ್ತೆ ; ಮೂವರ ಬಂಧನ

ಬೆಂಗಳೂರು : ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಯಲ್ಲಿ ವಿದೇಶದಿಂದ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 2.97 ಕೋಟಿ ರೂ. ಮೌಲ್ಯದ ಹೈಡ್ರೋಪೋನಿಕ್ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ. ಈ ಸಂಬಂಧ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಮೂವರು ಆರೋಪಿಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಥಾಯ್ಲೆಂಡ್‌ ಹಾಗೂ ಮಲೇಶಿಯಾದಿಂದ ಆಗಮಿಸಿದ್ದ ಮೂವರು ಪ್ರಯಾಣಿಕರ ಲಗೇಜ್ ಬ್ಯಾಗ್‌ಗಳನ್ನು ವಲಸೆ … Continued

ಬೆಂಗಳೂರು | ನೆಲಮಂಗಲದ ಬಳಿ ಹೊತ್ತಿ ಉರಿದ ಖಾಸಗಿ ಬಸ್‌

ಬೆಂಗಳೂರು: ತುಮಕೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಖಾಸಗಿ ಬಸ್ಸೊಂದು ಸಂಪೂರ್ಣವಾಗಿ ಸುಟ್ಟು ಕರಕಲಾದ ಘಟನೆ ಶುಕ್ರವಾರ ಬೆಳಗಿನ ಜಾವ ನೆಲಮಂಗಲದ ಬಳಿ ಸಂಭವಿಸಿದೆ ಎಂದು ವರದಿಯಾಗಿದೆ. ಬೆಂಗಳೂರಿನಿಂದ ಕಲಬುರಗಿಗೆ ತೆರಳುತ್ತಿದ್ದ ಖಾಸಗಿ ಬಸ್, ನೆಲಮಂಗಲ ತಾಲೂಕಿನ ಹನುಮಂತಪುರ ಗೇಟ್ ಸಮೀಪ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ ಎಂದು … Continued

ಬೆಂಗಳೂರು : ಕದಿಯಲು ಹೋಗಿ ಸಿಕ್ಕಿಬಿದ್ದ ನಂತ್ರ ತಾನು ಕಳ್ಳತನಕ್ಕೆ ಯತ್ನಿಸಿದ ಮನೆಯವರ ವಿರುದ್ಧವೇ ದೂರು ನೀಡಿದ ಕಳ್ಳ…!

ಬೆಂಗಳೂರು: ಬೆಂಗಳೂರು ಬೀದಿಗಳಲ್ಲಿ ಪ್ರತಿದಿನ ಒಂದಲ್ಲ ಒಂದು ವಿಚಿತ್ರ ಘಟನೆಗಳು ವರದಿಯಾಗುತ್ತಲೇ ಇರುತ್ತವೆ. ಆದರೆ, ಮನೆಯೊಂದಕ್ಕೆ ಕನ್ನ ಹಾಕಲು ಹೋದ ಕಳ್ಳನೊಬ್ಬ, ಸಾರ್ವಜನಿಕರಿಂದ ಏಟು ತಿಂದ ಮೇಲೆ ಸ್ವತಃ ಪೊಲೀಸರ ಬಳಿ ಹೋಗಿ ದೂರು ನೀಡಿದ್ದಾನೆ ಎಂದು ವರದಿಯಾಗಿದೆ.  ವಿಚಿತ್ರವೆಂದರೆ ತಾನು ದರೋಡೆಗೆ ಯತ್ನಿಸುವಾಗ ತನ್ನ ಮೇಲೆ ಹಲ್ಲೆ ನಡೆದಿದೆ ಎಂದು ಆರೋಪಿಸಿ ತಾನು ಕಳ್ಳತನಕ್ಕೆ … Continued

ಬೆಂಗಳೂರಿನಲ್ಲಿರು ಅಕ್ರಮ ವಲಸಿಗರ ವಿರುದ್ಧ ಕೈಗೊಂಡಿರುವ ಕ್ರಮದ ಬಗ್ಗೆ ವರದಿ ಸಲ್ಲಿಸಿ ಎಂದ ಹೈಕೋರ್ಟ್‌

ಬೆಂಗಳೂರು : ಅಕ್ರಮ ವಲಸಿಗರಿಂದ ದೇಶದ ಭದ್ರತೆಗೆ ಅಪಾಯವಿದೆ ಎಂದು ಮೌಖಿಕವಾಗಿ ಬುಧವಾರ ಕಳವಳ ವ್ಯಕ್ತಪಡಿಸಿರುವ  ಹೈಕೋರ್ಟ್‌, ಅಕ್ರಮ ವಲಸಿಗರ ಸಂಬಂಧ ಯಾವ ಕ್ರಮಕೈಗೊಳ್ಳಲಾಗಿದೆ ಎಂಬುದರ ಕುರಿತು ಮುಂದಿನ ವಿಚಾರಣೆಯ ವೇಳೆಗೆ ರಾಜ್ಯ ಸರ್ಕಾರವು ವರದಿ ಸಲ್ಲಿಸಬೇಕು ಎಂದು ನಿರ್ದೇಶಿಸಿದೆ. ಬಾಂಗ್ಲಾ ಅಕ್ರಮ ವಲಸಿಗರಿಗೆ ಸಂಬಂಧಿಸಿದಂತೆ ಹೋರಾಟ ಮಾಡಿರುವುದಕ್ಕೆ ಬೆಂಗಳೂರಿನ ಸೋಲದೇವನಹಳ್ಳಿ ಠಾಣೆಯಲ್ಲಿ ದಾಖಲಾಗಿರುವ ಎರಡು … Continued

ಇಂಧನ ನಿಯಂತ್ರಣ ಸ್ವಿಚ್ ಸಮಸ್ಯೆ ; ಲಂಡನ್‌-ಬೆಂಗಳೂರು ವಿಮಾನ ಹಾರಾಟ ಸ್ಥಗಿತ

ಬೆಂಗಳೂರು: ಲಂಡನ್‌ನಿಂದ ಬೆಂಗಳೂರಿಗೆ ಪ್ರಯಾಣಿಸಬೇಕಾಗಿದ್ದ ಏರ್ ಇಂಡಿಯಾದ ಬೋಯಿಂಗ್ 787-8 ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ, ಮುನ್ನೆಚ್ಚರಿಕಾ ಕ್ರಮವಾಗಿ ವಿಮಾನದ ಹಾರಾಟವನ್ನು ಸ್ಥಗಿತಗೊಳಿಸಿ (Grounded) ತಪಾಸಣೆಗೆ ಒಳಪಡಿಸಲಾಗಿದೆ. ಸೋಮವಾರ ಲಂಡನ್‌ನಿಂದ ಬೆಂಗಳೂರಿಗೆ ಹೊರಡಬೇಕಿದ್ದ AI 132 ವಿಮಾನದ ‘ಫ್ಯುಯೆಲ್ ಕಂಟ್ರೋಲ್ ಸ್ವಿಚ್’ನಲ್ಲಿ (ಇಂಧನ ನಿಯಂತ್ರಣ ಸ್ವಿಚ್) ದೋಷವಿರಬಹುದು ಎಂದು ಪೈಲಟ್ ವರದಿ ಮಾಡಿದ್ದರು. ವಿಮಾನ … Continued

ಬೆಂಗಳೂರು | ಹಾಡಹಗಲೇ ಯುವಕನನ್ನು ಅಡ್ಡಗಟ್ಟಿ 31 ಲಕ್ಷ ರೂ. ದರೋಡೆ ; ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ (Bengaluru) ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಹಾಡಹಾಗಲೇ ಸಿನಿಮೀಯ ರೀತಿಯಲ್ಲಿ ವ್ಯಕ್ತಿಯೊಬ್ಬರಿಂದ 31 ಲಕ್ಷ ರುಪಾಯಿಗೂ ಹೆಚ್ಚು ಹಣವನ್ನು ದೋಚಲಾಗಿದೆ. ಬೆಂಗಳೂರಿನ ಬನ್ನೇರುಘಟ್ಟ ಪ್ರದೇಶದಲ್ಲಿ ಭಾನುವಾರ (ಫೆಬ್ರವರಿ 1) ಈ ಘಟನೆ ನಡೆದಿದೆ ಎಂದು ಹೇಳಲಾಗಿದ್ದು, ಸಿಸಿಟಿವಿಯಲ್ಲಿ ಸೆರೆಯಾಗಿದೆ. ಬೈಕಿನಲ್ಲಿ ತೆರಳುತ್ತಿದ್ದ ವ್ಯಕ್ತಿಯನ್ನು ಅಡ್ಡಗಟ್ಟಿದ ದುಷ್ಕರ್ಮಿಗಳ ಗ್ಯಾಂಗ್, ಬರೋಬ್ಬರಿ … Continued