ಬೆಂಗಳೂರು: ಒಂದೇ ಕುಟುಂಬದ ಮೂವರು ಆತ್ಮಹತ್ಯೆ

ಬೆಂಗಳೂರು: ಮಹಾಲಕ್ಷ್ಮೀ ಲೇಔಟ್​​ನ ಮನೆಯೊಂದರಲ್ಲಿ ವಾಸವಾಗಿದ್ದ ತಾಯಿ, ಮಗಳು ಹಾಗೂ ಮಗ ಆತ್ಮಹತ್ಯೆ ಮಾಡಿಕೊಂಡಿದ್ದು ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಮಹಾಲಕ್ಷ್ಮಿ ಲೇಔಟ್​​​ನ ವೆಸ್ಟ್ ಆಪ್ ಕಾರ್ಡ್ ರಸ್ತೆಯಲ್ಲಿರುವ ಅಪಾರ್ಟ್​​ಮೆಂಟ್​​ನಲ್ಲಿ ಈ ಘಟನೆ ನಡೆದಿದ್ದು, ಯಶೋಧಾ(70), ಸುಮನ್(41), ನರೇಶ್ ಗುಪ್ತಾ(36) ಎಂಬ ತಾಯಿ, ಮಗಳು ಹಾಗೂ ಮಗ ಮೂವರು ಆತ್ಮಹತ್ಯೆಗೆ ಮಾಡಿಕೊಂಡವರು ಎಂದು ಗುರುತಿಸಲಾಗಿದೆ. ಮೇಲ್ನೋಟಕ್ಕೆ … Continued

ಡಿ ಕೆ ಶಿವಕುಮಾರ ಒಡೆತನದ ಶಿಕ್ಷಣ ಸಂಸ್ಥೆಗಳ ಮೇಲೆ ಸಿಬಿಐ ದಾಳಿ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಮಾಲೀಕತ್ವದ ಶಿಕ್ಷಣ ಸಂಸ್ಥೆಗಳ ಮೇಲೆ ಸಿಬಿಐ ದಾಳಿ ನಡೆದಿದೆ. ಡಿ.ಕೆ. ಶಿವಕುಮಾರ ಅವರು ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನದಲ್ಲಿ ಪಾಲ್ಗೊಂಡಿದ್ದಾರೆ. ಇತ್ತ ಬೆಂಗಳೂರಿನಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿರುವ ನ್ಯಾಶನಲ್‌ ಎಜುಕೇಶನ್‌ ಫೌಂಡೇಶನ್‌ ಮೇಲೆ ದಾಳಿ ನಡೆದಿದೆ. ಇಂದು, ಸೋಮವಾರ ಮಧ್ಯಾಹ್ನ ಎರಡು ಗಂಟೆ ಸುಮಾರಿಗೆ ದಾಳಿ ನಡೆದಿದೆ ಎನ್ನಲಾಗಿದೆ. ಸಿಬಿಐ … Continued

ರಾತ್ರಿ ಮನೆ ಬಳಿ ನಡೆದುಕೊಂಡು ಹೋಗುತ್ತಿದ್ದ ದಂಪತಿ ಬಳಿ ಹಣ ವಸೂಲಿ ಆರೋಪ, ಇಬ್ಬರು ಪೊಲೀಸರ ಅಮಾನತು

ಬೆಂಗಳೂರು ; ಬೆಂಗಳೂರಿನಲ್ಲಿ ತಡರಾತ್ರಿ ಮನೆಗೆ ತೆರಳುತ್ತಿದ್ದ ದಂಪತಿಯಿಂದ ಹಣ ವಸೂಲಿ ಮಾಡಿದ ಆರೋಪದ ಮೇಲೆ ಇಬ್ಬರು ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ಬೆಂಗಳೂರು ಪೊಲೀಸರಿಗೆ ಟ್ಯಾಗ್ ಮಾಡಿ ಕಾರ್ತಿಕ ಪತ್ರಿ ಟ್ವಿಟ್ಟರ್‌ನಲ್ಲಿ ತಮ್ಮ ಸಂಕಟವನ್ನು ಹಂಚಿಕೊಂಡ ನಂತರ ಇಡೀ ಘಟನೆ ಮುನ್ನೆಲೆಗೆ ಬಂದಿತು, ಪೊಲೀಸರು ತಕ್ಷಣ ಪ್ರತಿಕ್ರಿಯಿಸಿದರು, ಇಬ್ಬರು ಪೊಲೀಸರನ್ನು ಗುರುತಿಸಿ ಅಮಾನತುಗೊಳಿಸಲಾಗಿದೆ ಎಂದು ವರದಿಯಾಗಿದೆ. … Continued

ಮಂಡೌಸ್ ಚಂಡಮಾರುತ : ಬೆಂಗಳೂರು ಸೇರಿದಂತೆ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ನಾಳೆಯಿಂದ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ಕಂಡುಬಂದ ‘ಮಂಡೌಸ್’ ಚಂಡಮಾರುತದ ಪರಿಣಾಮಗಳು ಮುಂದಿನ ಕೆಲವು ದಿನಗಳ ಕಾಲ ಕರ್ನಾಟಕದಲ್ಲೂ ಕಂಡುಬರುವ ಸಾಧ್ಯತೆಯಿದೆ ಎಂದು ಭಾರತ ಹವಾಮಾನ ಇಲಾಖೆ (IMD) ಹೇಳಿದೆ. ಹವಾಮಾನ ಇಲಾಖೆಯ ಪ್ರಕಾರ, ಬೆಂಗಳೂರು ಗ್ರಾಮಾಂತರ ಮತ್ತು ನಗರ ಜಿಲ್ಲೆಗಳನ್ನು ಒಳಗೊಂಡು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಡಿಸೆಂಬರ್ 9ರಿಂದ ಡಿಸೆಂಬರ್‌ 12ರ ವರೆಗೆ ಗುಡುಗು ಮತ್ತು ಬಿರುಗಾಳಿಯೊಂದಿಗೆ … Continued

ಕನ್ನಡದ ಹಿರಿಯ ನಟ ಮನದೀಪ ರಾಯ್‌ಗೆ ಹೃದಯಾಘಾತ: ಆಸ್ಪತ್ರೆಗೆ ದಾಖಲು

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ಪೋಷಕ ನಟ ಮನದೀಪ​ ರಾಯ್​ ಅವರಿಗೆ ಹೃದಯಾಘಾತವಾಗಿದ್ದು, ಅವರನ್ನು ಬೆಂಗಳೂರಿನ ಶೇಷಾದ್ರಿಪುರದಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಿಗೆ ಮೂರು ದಿನಗಳ ಹಿಂದೆ ಹೃದಯಾಘಾತ ಸಂಭವಿಸಿದ್ದು, ಸದ್ಯ ಅವರಿಗೆ ಚಿಕಿತ್ಸೆ ಮುಂದುವರಿಸಲಾಗಿದೆ. 500ಕ್ಕೂ ಅಧಿಕ ಸಿನಿಮಾಗಳಲ್ಲಿ ಪೋಷಕ ಪಾತ್ರಗಳು ಹಾಗೂ ಹಾಸ್ಯ ಪಾತ್ರಗಳಲ್ಲಿ ನಟಿಸಿರುವ ಮನದೀಪ ರಾಯ್‌ ಅವರ ಆಪ್ತರು ಆಸ್ಪತ್ರೆಗೆ … Continued

ವೃದ್ಧೆಯನ್ನು ಹತ್ಯೆಗೈದು ಬೀರುವಿನಲ್ಲಿಟ್ಟು ಪರಾರಿಯಾದ ಮಹಿಳೆ

ಬೆಂಗಳೂರು: ದೆಹಲಿಯ ಶದ್ಧಾ ವಾಕರ್‌ ಕೊಲೆ ಪ್ರಕರಣಕ್ಕೆ ಹೋಲುವಂತೆ ವೃದ್ಧೆಯೊಬ್ಬಳನ್ನು ಕೊಂದು ಶವವನ್ನು ಬೀರುವಿನಲ್ಲಿಟ್ಟು ಮಹಿಳೆಯೊಬ್ಬರು ಪರಾರಿಯಾಗಿರುವ ಘಟನೆ ಆನೇಕಲ್ ತಾಲೂಕಿನ ಅತ್ತಿಬೆಲೆ ಗ್ರಾಮದಲ್ಲಿ ನಡೆದಿದೆ. ಕೊಲೆಯಾದ ಮಹಿಳೆಯನ್ನು ಪಾರ್ವತಮ್ಮ (65 ವರ್ಷ) ಎಂದು ಗುರುತಿಸಲಾಗಿದೆ. ಅತ್ತಿಬೆಲೆ ಗ್ರಾಮದಲ್ಲಿ ಮನೆಯೊಂದರ 4ನೇ ಮಹಡಿಯಲ್ಲಿ ಮುಸ್ಲಿಂ ಮಹಿಳೆ ಬಾಡಿಗೆಗೆ ಇದ್ದಳು. 3ನೇ ಮಹಡಿಯಲ್ಲಿ ಪಾರ್ವತಮ್ಮ ಕುಟುಂಸ್ಥರು ವಾಸವಾಗಿದ್ದರು. … Continued

ವಿಕಲಚೇತನರಿಗೆ ಆರೋಗ್ಯ ಸಿರಿ ವಿಶೇಷ ಯೋಜನೆ ಘೋಷಣೆ ಮಾಡಿದ ಸಿಎಂ ಬೊಮ್ಮಾಯಿ

ಬೆಂಗಳೂರು: ಅಂಗವಿಕಲರಿಗಾಗಿ ರಾಜ್ಯ ಸರ್ಕಾರ ಆರೋಗ್ಯ ಸಿರಿ ವಿಶೇಷ ಯೋಜನೆ ಜಾರಿ ಮಾಡಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಕಟಿಸಿದ್ದಾರೆ. ರಾಜ್ಯದ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಆಯೋಜಿಸಿದ್ದ ವಿಶ್ವ ವಿಕಲಚೇತನರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಅಂಗವಿಕಲ ಮಕ್ಕಳಿಗೆ 5 ಲಕ್ಷ ರೂ.ಗಳ ವಿಶೇಷ ಆರೋಗ್ಯ ವಿಮೆಯಾದ … Continued

ಮತದಾರರ ಮಾಹಿತಿ ಕಳುವು ಪ್ರಕರಣ : ಚಿಲುಮೆ ಮುಖ್ಯಸ್ಥ ಅರೆಸ್ಟ್, ಪೊಲೀಸರಿಂದ ತೀವ್ರ ವಿಚಾರಣೆ

ಬೆಂಗಳೂರು: ಮತದಾರರ ಮಾಹಿತಿ ಕಳುವು ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಲುಮೆ ಸಂಸ್ಥೆ ಸಂಸ್ಥಾಪಕರಾದ ರವಿಕುಮಾರ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ. ಈಗಾಗಲೇ ನಾಲ್ವರನ್ನು ಹಲಸೂರು ಗೇಟ್ ಠಾಣೆ ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದು, ಅದರಲ್ಲಿ ರವಿಕುಮಾರ ಅವರ ಸಹೋದರ ಎಂದು ಹೇಳಲಾದ ಕೆಂಪೃ ಗೌಡ ಸಹ ಸೇರಿದ್ದಾರೆ. ಈಗ ಪ್ರಮುಖ ಆರೋಪಿ ರವಿಕುಮಾರ ಅವರನ್ನು ಬಂಧಿಸುವಲ್ಲಿ ಹಲಸೂರು ಗೇಟ್ … Continued

ಒಂದು ವರ್ಷದ ಬಾಲಕನ ಮೇಲೆ ಲೈಂಗಿಕ ಶೋಷಣೆ, ಹತ್ಯೆ : ಆರೋಪಿಗೆ ಗಲ್ಲು ಶಿಕ್ಷೆ ನೀಡಿದ ಬೆಂಗಳೂರಿನ ವಿಶೇಷ ಕೋರ್ಟ್‌

ಬೆಂಗಳೂರು: ಒಂದು ವರ್ಷದ ಬಾಲಕನ ಮೇಲೆ  ಲೈಂಗಿಕದೌರ್ಜನ್ಯ ನಡೆಸಿ ಬರ್ಬರವಾಗಿ ಕೊಲೆ ಮಾಡಿದ ಆರೋಪಿಗೆ ಬೆಂಗಳೂರಿನ ತ್ವರಿತಗತಿ ವಿಶೇಷ ನ್ಯಾಯಾಲಯವು ಮರಣ ದಂಡನೆ ವಿಧಿಸಿ ತೀರ್ಪು ನೀಡಿದೆ. ಯಶವಂತಪುರದ ಕರಿಮಣಿ ಕೊಳಚೆ ಪ್ರದೇಶದ ನಿವಾಸಿ ಮೂರ್ತಿ ಎಂಬಾತ ಬಾಲಕನೊಂದಿಗೆ ಅಸ್ವಾಭಾವಿಕ ಲೈಂಗಿಕ ಕ್ರಿಯೆ ನಡೆಸಿ ಕೊಲೆಗೈದಿದ್ದಾನೆ ಎಂದು ಆರೋಪಿಸಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ ನಗರದ 1ನೇ … Continued

ಕಳ್ಳತನವಾದ 4 ತಿಂಗಳ ನಂತರ ಅದೇ ಬಸ್ಸನ್ನೇರಿ ಕುಳಿತಿದ್ದ ಕಳ್ಳರ ಮುಖಚಹರೆ ಗುರುತಿಸಿ ಪೊಲೀಸರಿಗೆ ಒಪ್ಪಿಸಿದ ಬಸ್‌ ಕಂಡಕ್ಟರ್‌…!

ಬೆಂಗಳೂರು: ಬಸ್‌ನಲ್ಲಿ ಪ್ರಯಾಣಿಕರ ಸೋಗಿನಲ್ಲಿ ಸಂಚರಿಸಿ ಪ್ರಯಾಣಿಕರೊಬ್ಬರ ಲಕ್ಷಾಂತರ ರೂ.ಗಳ ಮೌಲ್ಯದ ಒಡವೆ, ಹಣ ದೋಚಿ ಪರಾರಿಯಾಗಿದ್ದ ಕಳ್ಳರು ನಾಲ್ಕು ತಿಂಗಳ ಬಳಿಕ ಅದೇ ಬಸ್‌ನಲ್ಲಿ ಸಂಚರಿಸಿತ್ತಿದ್ದ ವೇಳೆ ಬಸ್ ನಿರ್ವಾಹಕರು ಅವರ ಮುಖಚಹರೆ ಗುರುತಿಸಿ ಕಳ್ಳರನ್ನು ಪೊಲೀಸರ ಅತಿಥಿಯಾಗುವಂತೆ ಮಾಡಿದ ಘಟನೆ ನಡೆದಿದೆ. ತಾನು ನಿರ್ವಾಹಕನಾಗಿದ್ದ ಬಸ್‌ನಲ್ಲಿ ಈ ಹಿಂದೆ ಕಳ್ಳತನ ಮಾಡಿ ಮಾರ್ಗ … Continued