ಚಿನ್ನ ಕಳ್ಳಸಾಗಣೆ ಪ್ರಕರಣ : ಕಸ್ಟಡಿಯಲ್ಲಿ ನನಗೆ ಚಿತ್ರಹಿಂಸೆ, 10-15 ಬಾರಿ ಕಪಾಳಮೋಕ್ಷ ; ರನ್ಯಾ ರಾವ್ ಆರೋಪ

ಬೆಂಗಳೂರು: ತನಗೆ ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಲಾಗಿದೆ ಮತ್ತು ಚಿನ್ನದ ಕಳ್ಳಸಾಗಣೆ ಪ್ರಕರಣದಲ್ಲಿ ನನ್ನನ್ನು ತಪ್ಪಾಗಿ ಸಿಲುಕಿಸಲಾಗಿದೆ ಎಂದು ನಟಿ ರನ್ಯಾ ರಾವ್ ಹೇಳಿದ್ದಾರೆ. ಡೈರೆಕ್ಟರೇಟ್ ಆಫ್ ರೆವೆನ್ಯೂ ಇಂಟೆಲಿಜೆನ್ಸ್ (ಡಿಆರ್‌ಐ) ಯ ಹೆಚ್ಚುವರಿ ಮಹಾನಿರ್ದೇಶಕರಿಗೆ (ಎಡಿಜಿ) ಬರೆದಿದ್ದಾರೆ ಎನ್ನಲಾದ ಪತ್ರದಲ್ಲಿ ರನ್ಯಾ ರಾವ್ ಅವರು, ಅಧಿಕೃತವಾಗಿ ಹೇಳಿದಂತೆ ವಿಮಾನ ನಿಲ್ದಾಣದ ಟರ್ಮಿನಲ್‌ನಿಂದ ಅಲ್ಲ, ವಿಮಾನದಿಂದ ನೇರವಾಗಿ … Continued

ಚಿನ್ನದ ಕಳ್ಳಸಾಗಣೆ ಹಗರಣ | ‘ಯೂ ಟ್ಯೂಬ್‌ ನೋಡಿ ಚಿನ್ನ ಅಡಗಿಸಿಟ್ಟುಕೊಳ್ಳುವುದು ಕಲಿತೆ ಎಂದು ಬಾಯ್ಬಿಟ್ಟ ನಟಿ ರನ್ಯಾ ರಾವ್‌ : ವರದಿ

ಬೆಂಗಳೂರು: ₹ 12.56 ಕೋಟಿ ಮೌಲ್ಯದ 14.2 ಕೆಜಿ ಚಿನ್ನ ಕಳ್ಳಸಾಗಣೆ ಆರೋಪದಲ್ಲಿ ಬಂಧಿತಳಾಗಿರುವ ನಟಿ ರನ್ಯಾ ರಾವ್, ಚಿನ್ನ ಕಳ್ಳಸಾಗಣೆಯಲ್ಲಿ ಇದೇ ತನ್ನ ಮೊದಲ ಪ್ರಯತ್ನ ಎಂದು ಹೇಳಿಕೊಂಡಿದ್ದಾಳೆ. ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಚಿನ್ನದ ಬಿಸ್ಕೆಟ್‌ಗಳನ್ನು ಬ್ಯಾಂಡೇಜ್‌ ಒಳಗೆ ಅಡಗಿಸಿಟ್ಟುಕೊಂಡು ಬಂದಿಳಿದ ಆಕೆಯನ್ನು ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ವಶಕ್ಕೆ ತೆಗೆದುಕೊಂಡಿದೆ. ಕರ್ನಾಟಕ ಡಿಜಿಪಿ … Continued

ತಂದೆ-ತಾಯಿ, ಹಿರಿಯರ ಆರೈಕೆ ಮಾಡದೇ ಇದ್ರೆ ಅವರ ಆಸ್ತಿಯಲ್ಲಿ ಪಾಲಿಲ್ಲ : ಕೃಷ್ಣ ಬೈರೇಗೌಡ

ಬೆಂಗಳೂರು: ತಂದೆ-ತಾಯಿ ಹಾಗೂ ಹಿರಿಯರನ್ನು ಆರೈಕೆ ಮಾಡದಿದ್ದರೆ, ಅಂತಹ ಮಕ್ಕಳಿಗೆ ಅಥವಾ ಸಂಬಂಧಿಕರಿಗೆ ಅವರು ನೀಡಿದ ವಿಲ್ ಅಥವಾ ದಾನ ಪತ್ರವನ್ನು (Will, Gift Deed) ರದ್ದು ಮಾಡುವ ಅವಕಾಶವನ್ನು ಕೇಂದ್ರ ಸರ್ಕಾರದ ”ಪೋಷಕರು ಮತ್ತು ಹಿರಿಯ ನಾಗರಿಕರ ನಿರ್ವಹಣೆ ಮತ್ತು ಕಲ್ಯಾಣ ಕಾಯ್ದೆ 2007′ ನೀಡಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ. … Continued

ಬೆಂಗಳೂರಿನಲ್ಲಿ ಸ್ಥಳೀಯ ಕ್ರಿಕೆಟ್‌ ಆಡುವಾಗ ರಾಹುಲ್‌ ದ್ರಾವಿಡಗೆ ಗಾಯ….!

ಫೆಬ್ರವರಿಯಲ್ಲಿ ನಸ್ಸೂರ್ ಸ್ಮಾರಕ ಶೀಲ್ಡ್‌ಗಾಗಿ ಮೂರನೇ ಡಿವಿಷನ್ (ಗುಂಪು I) ಪಂದ್ಯದಲ್ಲಿ ವಿಜಯಾ ಕ್ರಿಕೆಟ್ ಕ್ಲಬ್(ಮಾಲೂರು)ಗಾಗಿ ಸ್ಥಳೀಯ ಕ್ರಿಕೆಟ್ ಪಂದ್ಯ ಆಡುವಾಗ ರಾಜಸ್ಥಾನ ರಾಯಲ್ಸ್ (RR) ಕೋಚ್ ರಾಹುಲ್ ದ್ರಾವಿಡ್ ಕಾಲಿಗೆ ಗಾಯ ಮಾಡಿಕೊಂಡಿದ್ದಾರೆ. ಫ್ರಾಂಚೈಸ್ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್‌ನೊಂದಿಗೆ ಸುದ್ದಿಯನ್ನು ಬಹಿರಂಗಪಡಿಸಿದೆ. ಅಲ್ಲಿ ಅವರು ಬುಧವಾರ ಜೈಪುರದಲ್ಲಿ ತಮ್ಮ ಪೂರ್ವ ಐಪಿಎಲ್ 2025ರ ಸೀಸನ್ … Continued

ಬೆಂಗಳೂರಿನ ಹಲವೆಡೆ ಮಳೆ

ಬೆಂಗಳೂರು: ಬಿಸಿಲ ಧಗೆಯಿಂದ ಬಸವಳಿದಿದ್ದ ಬೆಂಗಳೂರಿನಲ್ಲಿ ಕೊನೆಗೂ ಮಳೆಯಾಗಿದ್ದು, ಮಂಗಳವಾರ ಸಂಜೆ ಮಳೆ ಸುರಿದಿದೆ. ಮಾರ್ಚ್ ತಿಂಗಳ ಮೊದಲ ಮಳೆಯಾಗಿದ್ದು, ನಗರದ ತಾಪಮಾನ ಇಳಿಕೆಯಾಗಿದೆ. ಮಂಗಳವಾರ ಸಂಜೆ 6 ಗಂಟೆ ಹೊತ್ತಿಗೆ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಮಳೆ ಆರಂಭವಾಗಿದ್ದು, ಕಾರ್ಪೊರೇಷನ್, ರಿಚ್ಮಂಡ್​ ಸರ್ಕಲ್, ಕೆ.ಆರ್.ಮಾರ್ಕೆಟ್, ಮೆಜೆಸ್ಟಿಕ್​, ಹಲಸೂರು, ಇಂದಿರಾನಗರ, ಬನಶಂಕರಿ, ಜಯನಗ ಸೇರಿದಂತೆ ಹಲವೆಡೆ ಮಳೆಯಾಗಿದೆ. … Continued

ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣ: ಡಿವೈಎಸ್ಪಿ ಕನಕಲಕ್ಷ್ಮೀ ಬಂಧನ

ಬೆಂಗಳೂರು: ಭೋವಿ ಅಭಿವೃದ್ಧಿ ನಿಗಮ ಅಕ್ರಮದ ತನಿಖೆ ವೇಳೆ ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಡಿವೈಎಸ್ಪಿ ಕನಕಲಕ್ಷ್ಮಿ ಅವರನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ. ವಕೀಲೆ ಜೀವಾ ತನ್ನ ಆತ್ಮಹತ್ಯೆಗೆ ಡಿವೈಎಸ್ಪಿ ಕನಕಲಕ್ಷ್ಮೀ ಕಾರಣ ಎಂದು ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರು. ರಾಜ್ಯ ಭೋವಿ ನಿಗಮ ಹಗರಣದ ತನಿಖೆ ಎದುರಿಸಿದಾಗ ಪೊಲೀಸ್ ಅಧಿಕಾರಿ ವಿವಸ್ತ್ರಗೊಳಿಸಿ ವಿಚಾರಣೆ … Continued

ರನ್ಯಾ ರಾವ್‌ ಚಿನ್ನ ಕಳ್ಳಸಾಗಣೆ ಪ್ರಕರಣ | ಪ್ರೋಟೋಕಾಲ್ ದುರ್ಬಳಕೆ ; ಡಿಜಿಪಿ ರಾಮಚಂದ್ರ ರಾವ್ ವಿರುದ್ಧ ತನಿಖೆಗೆ ಆದೇಶ

ಬೆಂಗಳೂರು: ಸುಮಾರು 15 ಕೋಟಿ ರೂಪಾಯಿ ಮೌಲ್ಯದ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧಿತರಾಗಿರುವ ಕನ್ನಡದ ನಟಿ ರನ್ಯಾ ರಾವ್ ಗೆ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಪ್ರೋಟೋಕಾಲ್ ದುರ್ಬಳಕೆ ಮಾಡಿಕೊಂಡ ಬಗ್ಗೆ ತನಿಖೆ ನಡೆಸಿ ಒಂದು ವಾರದೊಳಗೆ ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರ ಆದೇಶಿಸಿದೆ ಎಂದು ವರದಿ  ತಿಳಿಸಿದೆ. ಅಲ್ಲದೆ, ರನ್ಯಾ ರಾವ್‌ ಮಲತಂದೆ ಡಿಜಿಪಿ ರಾಮಚಂದ್ರ … Continued

ಬಿಬಿಎಂಪಿ ವಿಭಜಿಸುವ ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ -2024 ವಿಧಾನಸಭೆಯಲ್ಲಿ ಅಂಗೀಕಾರ

ಬೆಂಗಳೂರು : ವಿಪಕ್ಷ ಬಿಜೆಪಿ ಸಭಾತ್ಯಾಗದ ನಡುವೆ ಬಿಬಿಎಂಪಿಯನ್ನು ಏಳು ಪಾಲಿಕೆಗಳ ವರೆಗೆ ವಿಭಜಿಸುವ ಹಾಗೂ ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ರಚಿಸುವ ‘ಗ್ರೇಟರ್‌ ಬೆಂಗಳೂರು ಆಡಳಿತ ಮಸೂದೆ’ (Greater Bengaluru Governance Bill 2024)ಯನ್ನು ಸೋಮವಾರ ವಿಧಾನಸಭೆಯಲ್ಲಿ ಅಂಗೀಕಾರವಾಯಿತು. ಆಡಳಿತ ವೀಕೆಂದ್ರಿಕರಣ ದೃಷ್ಟಿಯಿಂದ ಹಾಗೂ ಸಮನ್ವಯ ಮತ್ತು ಮೇಲ್ವಿಚಾರಣೆಗಾಗಿ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ರಚನೆ ಹಾಗೂ … Continued

ಚಿನ್ನ ಕಳ್ಳ ಸಾಗಣೆ ಪ್ರಕರಣ : ನಟಿ ರನ್ಯಾ ವಿರುದ್ಧ ಎಫ್‌ಐಆರ್‌ ದಾಖಲಿಸಿದ ಸಿಬಿಐ

ಬೆಂಗಳೂರು : ಚಿನ್ನ ಕಳ್ಳ ಸಾಗಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಸ್ಯಾಂಡಲ್‌ವುಡ್ ನಟಿ ರನ್ಯಾ ರಾವ್‌ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಈಗ ಸಿಬಿಐ ಪ್ರಕರಣ ದಾಖಲಿಸಿದೆ. ಚಿನ್ನ ಕಳ್ಳ ಸಾಗಣೆ ಪ್ರಕರಣದಲ್ಲಿ ಕೇಂದ್ರೀಯ ತನಿಖಾ ದಳ (ಸಿಬಿಐ) ಪ್ರತ್ಯೇಕವಾಗಿ ಎಫ್‌ಐಆರ್ ದಾಖಲಿಸಿಕೊಂಡಿದ್ದು, ಪ್ರತ್ಯೇಕವಾಗಿ ತನಿಖೆ ಆರಂಭಿಸಿದೆ.ಚಿನ್ನ ಕಳ್ಳ ಸಾಗಣೆಯ ಸಿಂಡಿಕೇಟ್‌ ಪತ್ತೆಗೆ ಮುಂದಾಗಿರುವ ಸಿಬಿಐ ದೆಹಲಿ, … Continued

ಕರ್ನಾಟಕ ಬಜೆಟ್‌ 2025 | ₹1.16 ಲಕ್ಷ ಕೋಟಿ ಹೊಸ ಸಾಲ ಪಡೆಯಲು ನಿರ್ಧಾರ ; ರಾಜ್ಯದ ಒಟ್ಟು ಸಾಲ…?

ಬೆಂಗಳೂರು: ಹಣಕಾಸು ಸಚಿವರೂ ಆಗಿರುವ ಸಿಎಂ ಸಿದ್ದರಾಮಯ್ಯ 2025-26ನೇ ಸಾಲಿಗೆ ದಾಖಲೆಯ 4.09 ಲಕ್ಷ ಕೋಟಿ ರೂ. ಗಾತ್ರದ ಬಜೆಟ್‌ ಅನ್ನು ಮಂಡಿಸಿದ್ದಾರೆ. ಇದರಲ್ಲಿ 19,262 ಕೋಟಿ ರೂ.‌ ರಾಜಸ್ವ ಕೊರತೆಯನ್ನು ಅವರು ಉಲ್ಲೇಖಿಸಿದ್ದಾರೆ. ಈ ಬಾರಿಯೂ ಪಂಚ ಗ್ಯಾರಂಟಿಗೆ 51,034 ಕೋಟಿ ರೂ. ಅನುದಾನ ನೀಡಲಾಗಿದೆ. ಹಾಗೂ ಕೆಲವು ಹೊಸ ಯೋಜನೆಗಳನ್ನು ಘೋಷಣೆ ಮಾಡಲಾಗಿದೆ. … Continued