ವೀಡಿಯೊ…| ಮೋದಿಪರ ಘೋಷಣೆ ಕೂಗುತ್ತಿದ್ದವರ ಜೊತೆ ಹಸ್ತಲಾಘವ ಮಾಡಿದ ರಾಹುಲ್ ಗಾಂಧಿ : ವೀಕ್ಷಿಸಿ

ಛತ್ತೀಸ್‌ಗಢ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸೋಮವಾರ ಛತ್ತೀಸ್‌ಗಢದ ಕೊರ್ಬಾ ಜಿಲ್ಲೆಯಲ್ಲಿ ನರೇಂದ್ರ ಮೋದಿ ಪರ ಘೋಷಣೆಗಳನ್ನು ಕೂಗುತ್ತಿದ್ದ ಜನಸಮೂಹದತ್ತ ನಡೆದು ಅವರ ಕೈಕುಲುಕಿದ್ದಾರೆ. ಇದಕ್ಕೆ ಕಾಂಗ್ರೆಸ್‌ ಪಕ್ಷವು “ಪ್ರೀತಿಯಲ್ಲಿ ದೊಡ್ಡ ಶಕ್ತಿ ಇದೆ” ಎಂದು ಹೇಳಿಕೆ ನೀಡಿದೆ. ಕಳೆದ ವಾರ ಒಡಿಶಾದ ಕೊರ್ಬಾದಿಂದ ಧೋಡಿಪಾರಾ ಮೂಲಕ ಕಟ್ಘೋರಾ ಮಾರ್ಗದಲ್ಲಿ ರಾಹುಲ್ ಗಾಂಧಿ … Continued

ಭಾರತ ಜೋಡೋ ನ್ಯಾಯ ಯಾತ್ರೆ : ಪಶ್ಚಿಮ ಬಂಗಾಳದಲ್ಲಿ ರ್ಯಾಲಿಗಳಿಗೆ ಅನುಮತಿ ನಿರಾಕರಣೆ-ಕಾಂಗ್ರೆಸ್ ಆರೋಪ

ಕೋಲ್ಕತ್ತಾ : ಪಶ್ಚಿಮ ಬಂಗಾಳದಲ್ಲಿ ಭಾರತ ಜೋಡೊ ನ್ಯಾಯಯಾತ್ರೆಯ ಭಾಗವಾಗಿ ಕೆಲವು ಸಾರ್ವಜನಿಕ ಸಭೆಗಳನ್ನು ಆಯೋಜಿಸಲು ಅನುಮತಿ ಕೋರಿದ್ದ ಕಾಂಗ್ರೆಸ್‌ಗೆ ಈಗ ಾನುಮತಿ ಪಡೆಯಲು ಸಮಸ್ಯೆಗಳು ಎದುರಾಗುತ್ತಿದೆ ಎಂದು ಪಶ್ಚಿಮ ಬಂಗಾಳ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್‌ ಚೌಧರಿ ಹೇಳಿದ್ದಾರೆ. ಮಾಧ್ಯಮದವರ ಜೊತೆ ಮಾತನಾಡಿದ ಅವರು, ಪಕ್ಷವು ಕೆಲವು ಸ್ಥಳಗಳಲ್ಲಿ ಸಾರ್ವಜನಿಕ ಸಭೆಗಳನ್ನು ಆಯೋಜಿಸಲು ಬಯಸಿದೆ, … Continued

ಅಸ್ಸಾಂನಲ್ಲಿ ʼಹಿಂಸಾಚಾರ, ಹಲ್ಲೆʼ ನಡೆಸಿದ ಆರೋಪ : ರಾಹುಲ್ ಗಾಂಧಿ, ಇತರ ಕಾಂಗ್ರೆಸ್ ನಾಯಕರ ವಿರುದ್ಧ ಎಫ್ಐಆರ್

ಗುವಾಹತಿ: ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಕೆ.ಸಿ. ವೇಣುಗೋಪಾಲ ಮತ್ತು ಪಕ್ಷದ ಇತರ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮಂಗಳವಾರ ಹೇಳಿದ್ದಾರೆ. ರಾಹುಲ್ ಗಾಂಧಿಯವರ ಭಾರತ ಜೋಡೋ ನ್ಯಾಯ ಯಾತ್ರೆಗೆ ಅದರ ಪ್ರಮುಖ ಮಾರ್ಗಗಳ ಮೂಲಕ ಗುವಾಹತಿ ಪ್ರವೇಶಿಸಲು ಅನುಮತಿ ನಿರಾಕರಿಸಿದ ನಂತರ ಕಾಂಗ್ರೆಸ್ ಕಾರ್ಯಕರ್ತರು ಪೊಲೀಸರೊಂದಿಗೆ … Continued

ವೀಡಿಯೊ….| ರಾಹುಲ್ ಗಾಂಧಿ ಯಾತ್ರೆಗೆ ನಗರದೊಳಕ್ಕೆ ಪ್ರವೇಶ ನಿರಾಕರಣೆ : ಗುವಾಹತಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು-ಪೊಲೀಸರ ಘರ್ಷಣೆ

ಗುವಾಹತಿ : ರಾಹುಲ್ ಗಾಂಧಿ ಅವರ ಭಾರತ ಜೋಡೋ ನ್ಯಾಯ ಯಾತ್ರೆಗೆ ಅಸ್ಸಾಂ ರಾಜಧಾನಿ ಗುವಾಹತಿ ಪ್ರಮುಖ ಮಾರ್ಗಗಳ ಮೂಲಕ ನಗರ ಪ್ರವೇಶಿಸಲು ಅನುಮತಿ ನಿರಾಕರಿಸಿದ ನಂತರ ಮಂಗಳವಾರ ಗುವಾಹಟಿತಿಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪೊಲೀಸರೊಂದಿಗೆ ಘರ್ಷಣೆ ನಡೆಸಿದ್ದರಿಂದ ಉದ್ವಿಗ್ನತೆ ಉಂಟಾಗಿದೆ. ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ನೇತೃತ್ವದ ಅಸ್ಸಾಂ ಸರ್ಕಾರವು ಯಾತ್ರೆಯನ್ನು ನಗರದಿಂದ ದೂರವಿರಿಸಲು ಮತ್ತು … Continued

ರಾಹುಲ್ ಗಾಂಧಿ ‘ಭಾರತ ಜೋಡೋ ನ್ಯಾಯ ಯಾತ್ರೆ’ ವಿರುದ್ಧ ಎಫ್‌ಐಆರ್ ದಾಖಲು

ಗುವಾಹತಿ : ಗುರುವಾರ ಜೋರ್ಹತ್ ಪಟ್ಟಣದಲ್ಲಿ ಅನುಮತಿಸಲಾದ ಮಾರ್ಗ ಬಿಟ್ಟು ಬೇರೆ ಮಾರ್ಗದಲ್ಲಿ ತೆರಳಿದ ಆರೋಪದ ಮೇಲೆ ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಮತ್ತು ಅದರ ಮುಖ್ಯ ಸಂಘಟಕ ಕೆ.ಬಿ. ಬೈಜು ಅವರ ನೇತೃತ್ವದ ‘ಭಾರತ ಜೋಡೋ ನ್ಯಾಯ ಯಾತ್ರೆ’ ವಿರುದ್ಧ ಅಸ್ಸಾಂ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಕಾಂಗ್ರೆಸ್‌ನ ಭಾರತ ಜೋಡೋ ನ್ಯಾಯ ಯಾತ್ರೆ ಗುರುವಾರ … Continued

ಕಾಂಗ್ರೆಸ್ಸಿನ ಭಾರತ ಜೋಡೋ ನ್ಯಾಯ ಯಾತ್ರೆಯಲ್ಲಿ ಅಖಿಲೇಶ ಯಾದವ್ ಪಾಲ್ಗೊಳ್ಳುವ ಸಾಧ್ಯತೆ ಇಲ್ಲ

ಲಕ್ನೋ : ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ ಯಾದವ್ ಅವರು ರಾಹುಲ್ ಗಾಂಧಿ ನೇತೃತ್ವದ ಕಾಂಗ್ರೆಸ್‌ನ ಭಾರತ ಜೋಡೋ ನ್ಯಾಯ ಯಾತ್ರೆಗೆ ಹೋಗುವ ಸಾಧ್ಯತೆಯಿಲ್ಲ ಎಂದು ಬುಧವಾರ ಹೇಳಿದ್ದಾರೆ. ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಯಾದವ್ ಅವರನ್ನು ಪ್ರಶ್ನಿಸಿದಾಗ, ‘ಕಾಂಗ್ರೆಸ್ ಆಗಲಿ, ಬಿಜೆಪಿಯಾಗಲಿ ನಮ್ಮನ್ನು ತಮ್ಮ ಕಾರ್ಯಕ್ರಮಗಳಿಗೆ ಆಹ್ವಾನಿಸುವುದಿಲ್ಲ ಎಂದು ಹೇಳಿದ್ದಾರೆ. ಇಲ್ಲಿನ ಪಕ್ಷದ … Continued