ಭಟ್ಕಳ : ಮೀನುಗಾರಿಕಾ ಬೋಟ್ ಮುಳುಗಡೆ

ಕಾರವಾರ : ಅರಬ್ಬೀ ಸಮುದ್ರದಲ್ಲಿ ಮೀನುಗಾರಿಕಾ ತೆರಳಿದ್ದ ಬೋಟ್ ಭಾರಿ ಗಾಳಿ ಮಳೆಯಿಂದಾಗಿ ಮುಳುಗಡೆಯಾದ ಘಟನೆ ಉತ್ತರಕನ್ನಡ ಜಿಲ್ಲೆಯಲ್ಲಿ ವರದಿಯಾಗಿದ್ದು, ಬೋಟ್‌ನಲ್ಲಿದ್ದ ನಾಲ್ಕು ಮಂದಿ ಮೀನುಗಾರರನ್ನು ರಕ್ಷಿಸಲಾಗಿದೆ. ಉತ್ತರಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮಾವಿನಕುರ್ವೆ ಮೀನುಗಾರಿಕಾ ಬಂದರು ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಮಹಾದೇವ ಖಾರ್ವಿ ಮಾಲಕತ್ವದ ಓಂ ಮಹಾಗಣಪತಿ ಹೆಸರಿನ ಬೋಟ್ ಗಾಳಿಮಳೆಗೆ ಸಿಲುಕಿ ಮುಳುಗಡೆಯಾಗಿದೆ. … Continued

ವೀಡಿಯೊ…| ಭಟ್ಕಳ : ಸಮುದ್ರಕ್ಕೆ ಜಿಗಿದು ಈಜಿದ ಸಚಿವ ಮಂಕಾಳ ವೈದ್ಯ…!

ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಬೆಳಕೆ ಸಮೀಪ ಅರಬ್ಬಿ ಸಮುದ್ರದಲ್ಲಿ ಕೃತಕ ಬಂಡೆಸಾಲು ಅಳವಡಿಕೆ ಕಾಮಗಾರಿಗೆ ಚಾಲನೆ ನೀಡಲು ಆಗಮಿಸಿದ್ದ ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಮಂಕಾಳ ವೈದ್ಯ ಸಮುದ್ರದಲ್ಲಿ ಈಜಿ ಗಮನ ಸೆಳೆದಿದ್ದಾರೆ. ಬೆಳಕೆಯ ಸಮುದ್ರ ತೀರದಲ್ಲಿ ಕೃತಕ ಬಂಡೆಗಳನ್ನು ಸ್ಥಾಪಿಸುವ ಕಾರ್ಯಕ್ರಮಕ್ಕೆ … Continued

ಭಟ್ಕಳ : ತೆರವು ಮಾಡಿದ ಸ್ಥಳದಲ್ಲೇ ಮತ್ತೆ ಹನುಮ ಧ್ವಜ ಹಾರಿಸಿದ ಸಂಸದ ಅನಂತಕುಮಾರ ಹೆಗಡೆ-ಇತರರು…!

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ತೆಂಗಿನಗುಂಡಿ ಗ್ರಾಮದಲ್ಲಿ ಹನುಮ ಧ್ವಜ ತೆರವು ಮಾಡಿದ ಸ್ಥಳದಲ್ಲೇ ಉತ್ತರ ಕನ್ನಡ ಸಂಸದ ಅನಂತಕುಮಾರ ಹೆಗಡೆ ಸಮ್ಮುಖದಲ್ಲಿ ಮತ್ತೆ ಹನುಮ ಧ್ವಜವನ್ನು ಹಾರಿಸಲಾಗಿದೆ ಎಂದು ವರದಿಯಾಗಿದೆ. ಸೋಮವಾರ ಕಾರ್ಯಕರ್ತರ ಸಭೆಗೆ ಸಂಸದ ಅನಂತಕುಮಾರ ಹೆಗಡೆ ಅವರು ತೆಂಗಿನಗುಂಡಿ ಗ್ರಾಮಕ್ಕೆ ಭೇಟಿ ನೀಡಿದ ಸಮಯದಲ್ಲಿ ಅವರ ನೇತೃತ್ವದಲ್ಲಿ ಹನುಮ … Continued

ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ಫೆ.೧೬ರ ಬಜೆಟ್‌ ನಲ್ಲೇ ಹಣ ನೀಡಿ : ಪಾದಯಾತ್ರೆಯಲ್ಲಿ ಸಾಗಿ ಸಚಿವರಿಗೆ ಮನವಿ ನೀಡಿ ಅನಂತಮೂರ್ತಿ ಹೆಗಡೆ ಒತ್ತಾಯ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯಲ್ಲಿ ಅತ್ಯಗತ್ಯವಾದ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯನ್ನು ಅತಿ ಶೀಘ್ರದಲ್ಲಿ ಆರಂಭಿಸಬೇಕು, ಆಸ್ಪತ್ರೆ ನಿರ್ಮಾಣಕ್ಕೆ ಈ ವರ್ಷದ ಬಜೆಟ್‌ನಲ್ಲಿ ಹಣ ಮೀಸಲಿಡಬೇಕು ಎಂದು ಆಗ್ರಹಿಸಿ ಕುಮಟಾದಿಂದ ಭಟ್ಕಳದಲ್ಲಿರುವ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳು ವೈದ್ಯ ಅವರ ಕಚೇರಿ ವರೆಗೆ ಮೂರು ದಿನಗಳ ಕಾಲ ಪಾದಯಾತ್ರೆ ನಡೆಸಿದ ಸಾಮಾಜಿಕ ಹೋರಾಟಗಾರ ಬುಧವಾರ ಸಚಿವರಿಗೆ ಮನವಿ … Continued

ಬಜೆಟ್‌ ಅಧಿವೇಶನದಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ಹಣ ಬಿಡುಗಡೆ ಮಾಡದಿದ್ರೆ ಉಸ್ತುವಾರಿ ಸಚಿವರ ಕಚೇರಿ ಮುಂದೆಯೇ ಆಮರಣಾಂತ ಉಪವಾಸ : ಸರ್ಕಾರಕ್ಕೆ ಅನಂತಮೂರ್ತಿ ಹೆಗಡೆ ಎಚ್ಚರಿಕೆ

 ಕುಮಟಾ : ಭೌಗೋಳಿಕ ಪರಿಸ್ಥಿತಿ ಹಾಗೂ ಜಿಲ್ಲೆಯ ವಿಸ್ತಾರ ಗಮನಿಸಿದರೆ ಉತ್ತರ ಕನ್ನಡ ಜಿಲ್ಲೆಗೆ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ತುರ್ತು ಅಗತ್ಯವಿದ್ದು, ಒಂದು ವೇಳೆ ಫೆಬ್ರವರಿ ೧೬ರಿಂದ ನಡೆಯುವ ಬಜೆಟ್ ಅಧಿವೇಶನದಲ್ಲಿ ನಮ್ಮ ಜಿಲ್ಲೆಯ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ಹಣ ಬಿಡುಗಡೆ ಮಾಡದಿದ್ದರೆ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯರ ಕಚೇರಿ ಮುಂದೆ ಕುಳಿತು ಆಮರಣಾಂತ … Continued

ಉತ್ತರ ಕನ್ನಡ ಜಿಲ್ಲೆಗೆ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ : ನನ್ನ ಹೋರಾಟ ಜಿಲ್ಲೆಯ ಲಕ್ಷಾಂತರ ಜನರ ಹಕ್ಕೊತ್ತಾಯದ ಧ್ವನಿ- ಅನಂತಮೂರ್ತಿ ಹೆಗಡೆ

ಶಿರಸಿ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಆಗಬೇಕು ಎಂದು ನಾನು ಮಾಡುತ್ತಿರುವ ಹೋರಾಟದಲ್ಲಿ ಲಕ್ಷಾಂತರ ಜನರ ಒಳಿತು ಹಾಗೂ ಹಿತಾಸಕ್ತಿ ಅಡಗಿದೆ. ಜಿಲ್ಲೆಯಲ್ಲಿ ಸುಸಜ್ಜಿತ ಆಸ್ಪತ್ರೆ ನಿರ್ಮಾಣವಾಗಬೇಕು ಎಂಬುದು ಈ ಜಿಲ್ಲೆಯ ಜನರ ಭಾವನೆ ಹಾಗೂ ಬಹುದಿನಗಳ ಬೇಡಿಕೆ. ಜನರ ಭಾವನೆಯ ಪ್ರತೀಕವಾಗಿಯೇ ನಾನು ಹೋರಾಟ ಮಾಡುತ್ತಿದ್ದೇನೆಯೇ ಹೊರತು ಇದರಲ್ಲಿ ಉಳಿದ ಯಾವುದೇ … Continued

ಭಟ್ಕಳ : ಪತ್ನಿಯ ಕತ್ತು ಸೀಳಿ ಕೊಲೆ ಮಾಡಿದ ಪತಿ

ಕಾರವಾರ : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತಿಯೇ ತನ್ನ ಪತ್ನಿಯ ಕತ್ತು ಸೀಳಿ ಭೀಕರವಾಗಿ ಕೊಲೆ ಮಾಡಿದ ಘಟನೆ ಉತ್ತರ ಕನ್ನಡ ಜಿಲ್ಲೆ ಭಟ್ಕಳಯ ತಾಲೂಕಿನ ಮುರುಡೇಶ್ವರದ ಬಳಿ ನಡೆದಿದೆ ಎಂದು ವರದಿಯಾಗಿದೆ. ಕೊಲೆಯಾದ ಮಹಿಳೆಯನ್ನು ನಂದಿನಿ(30) ಎಂದು ಗುರುತಿಸಲಾಗಿದೆ. ನಂದಿನಿ ಹಾಗೂ ಲೋಕೇಶ ನಾಯ್ಕ ದಂಪತಿ ನಗ ಹಾಗೂ ಮಗಳೊಂದಿಗೆ ಮೂರು ದಿನಗಳಿಂದ  ಮುರುಡೇಶ್ವರದ … Continued

ಭಟ್ಕಳ : ಚಾಕೊಲೇಟ್​​ ಎಂದು ಭಾವಿಸಿ ಪ್ಯಾಂಟ್ ಬಟನ್​ ನುಂಗಿದ ಹಸುಳೆ

ಕಾರವಾರ: ಎರಡು ತಿಂಗಳ ಮಗುವೊಂದು ಪ್ಯಾಂಟ್‌ ಬಟನ್‌ ನುಂಗಿ ಅಸ್ವಸ್ಥಗೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಭಟ್ಕಳ ನಗರದ ರಂಗೀಕಟ್ಟೆ ಬಳಿ ವಾಸವಿರುವ ಬಿಹಾರ ಮೂಲದ, ಕಳೆದ 12-13 ವರ್ಷಗಳಿಂದ ಭಟ್ಕಳ ರಂಗೀಕಟ್ಟೆಯಲ್ಲಿ ವಾಸಿಸುತ್ತಿರುವ ಬಿಹಾರ ಮೂಲದ ಕಮಲ ಕಿಶೋರ ಅವರ ಪುತ್ರಿ ಎರಡು ತಿಂಗ ಅಮೃತ ಬಟನ್​ ನುಂಗಿದ್ದ … Continued

ಭಟ್ಕಳ: ಹಾಡುವಳ್ಳಿಯಲ್ಲಿ ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ ಪ್ರಕರಣ; ಪ್ರಮುಖ ಆರೋಪಿ ವಶಕ್ಕೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಹಾಡುವಳ್ಳಿಯಲ್ಲಿ ನಡೆದ ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ ಪ್ರಕರಣದ ಪ್ರಮುಖ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಮೂಲಗಳು ತಿಳಿಸಿವೆ. ಆದರೆ ಪೊಲೀಸ್‌ ಹಿರಿಯ ಅಧಿಕಾರಿಗಳು ಇನ್ನೂ ಇದನ್ನು ದೃಢಪಡಿಸಿಲ್ಲ. ಭಟ್ಕಳ ತಾಲೂಕಿನ ಹಾಡವಳ್ಳಿ ಸಮೀಪದ ಓಣಿಬಾಗಿಲು ಗ್ರಾಮದಲ್ಲಿ ಇತ್ತೀಚಿಗೆ ಒಂದೇ ಮನೆಯ ನಾಲ್ವರನ್ನ ಕೊಚ್ಚಿ … Continued

ಭಟ್ಕಳ: ಹಾಡುವಳ್ಳಿಯಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ, ಇಬ್ಬರು ವಶಕ್ಕೆ

ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ತಾಲೂಕಿನ ಹಾಡುವಳ್ಳಿಯಲ್ಲಿ ಎಂಬಲ್ಲಿ ಕುಟುಂಬದ ನಾಲ್ವರನ್ನು ಹತ್ಯೆಗೈದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಕೊಲೆಯಾದ ಶಂಭು ಭಟ್ಟ ಅವರ ಹಿರಿಯ ಸೊಸೆ ವಿದ್ಯಾ ಶ್ರೀಧರ ಭಟ್ಟ ಹಾಗೂ ಆಕೆಯ ತಂದೆ ಶ್ರೀಧರ ಜನಾರ್ಧನ ಭಟ್ಟ ಎಂಬವರನ್ನು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸಿದ್ದಾರೆ. ಶುಕ್ರವಾರ ಶಂಭು ಹೆಗಡೆ (65), … Continued