ದೇವಸ್ಥಾನದಲ್ಲಿ ಕಾಲ್ತುಳಿತ : 7 ಮಂದಿ ಸಾವು, ಹಲವರಿಗೆ ಗಾಯ

ಲಖಿಸರಾಯಿ: ಬಿಹಾರದ ಲಖಿಸರಾಯಿ ಜಿಲ್ಲೆಯ ಅಶೋಕಧಾಮ ದೇವಸ್ಥಾನದಲ್ಲಿ ಸೋಮವಾರ ಬೆಳಗ್ಗೆ ಸಂಭವಿಸಿದ ಕಾಲ್ತುಳಿತದಂತಹ ಘಟನೆಯಲ್ಲಿ ಕನಿಷ್ಠ ಏಳು ಮಂದಿ ಮೃತಪಟ್ಟಿದ್ದಾರೆ. ಮೃತಪಟ್ಟವರೆಲ್ಲರೂ ಮಹಿಳೆಯರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪವಿತ್ರ ಶ್ರಾವಣ ಮಾಸದ ಸೋಮವಾರದ ಹಿನ್ನೆಲೆಯಲ್ಲಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ದೇವಸ್ಥಾನಕ್ಕೆ ಆಗಮಿಸಿ ಶಿವನ ದರ್ಶನ ಹಾಗೂ ಪೂಜೆ ಸಲ್ಲಿಸುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ. ಜಿಲ್ಲಾಧಿಕಾರಿ … Continued