ಆಟಿಕೆ ಎಂದು ಭಾವಿಸಿ ಹಾವನ್ನೇ ಕಚ್ಚಿ ಸಾಯಿಸಿದ 1 ವರ್ಷದ ಬಾಲಕ ; ವೈದ್ಯರೇ ಕಂಗಾಲು…!

ಒಂದು ವಿಲಕ್ಷಣ ಘಟನೆಯಲ್ಲಿ, ಒಂದು ವರ್ಷದ ಮಗು ಅಂಬೆಗಾಲಿಡುವ ಮಗು ಹಾವನ್ನು ಕಚ್ಚಿ ಸಾಯಿಸಿದ ಬಗ್ಗೆ ವರದಿಯಾಗಿದೆ. ಕಳೆದ ವಾರ ಬಿಹಾರದ ಗಯಾ ಜಿಲ್ಲೆಯ ಜಮುಹರ್ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಅಂಬೆಗಾಲಿಡುವ ಮಗು ತನ್ನ ಟೆರೇಸ್‌ನಲ್ಲಿ ಆಟವಾಡುತ್ತಿದ್ದಾಗ ಹಾವನ್ನು ಕಂಡು ಅದನ್ನು ಕಚ್ಚಿದೆ. ಬಾಲಕ ಅಪಾಯದಿಂದ ಪಾರಾಗಿದ್ದು, ಹಾವು ಮಾತ್ರ ಸತ್ತಿದೆ. ಈ ಘಟನೆಯು … Continued

ಬಿಹಾರದಲ್ಲಿ 65%ಕ್ಕೆ ಹೆಚ್ಚಿಸಿದ್ದ ಮೀಸಲಾತಿ ರದ್ದುಪಡಿಸಿದ್ದ ಪಾಟ್ನಾ ಹೈಕೋರ್ಟ್ ತೀರ್ಪಿಗೆ ತಡೆ ನೀಡಲು ಸುಪ್ರೀಂ ಕೋರ್ಟ್‌ ನಕಾರ

ನವದೆಹಲಿ: ಉದ್ಯೋಗ ಮತ್ತು ಶಿಕ್ಷಣದ ಕ್ಷೇತ್ರದಲ್ಲಿ ಹಿಂದುಳಿದ ವರ್ಗಗಳು, ಅತ್ಯಂತ ಹಿಂದುಳಿದ ವರ್ಗಗಳು, ಪರಿಶಿಷ್ಟ ಜಾತಿಗಳು ಹಾಗೂ ಪರಿಶಿಷ್ಟ ಪಂಗಡಗಳಿಗೆ (ಎಸ್‌ಸಿ/ಎಸ್‌ಟಿ) ಇದ್ದ ಶೇಕಡಾ 50ರಷ್ಟು ಮೀಸಲಾತಿಯನ್ನು ಶೇ. 65ಕ್ಕೆ ಹೆಚ್ಚಿಸಿ 2023ರಲ್ಲಿ ಬಿಹಾರ ಶಾಸಕಾಂಗ ಮಾಡಿದ್ದ ತಿದ್ದುಪಡಿಗಳನ್ನು ರದ್ದುಪಡಿಸಿದ್ದ ಪಾಟ್ನಾ ಹೈಕೋರ್ಟ್‌ ತೀರ್ಪಿಗೆ ತಡೆ ನೀಡಲು ಸುಪ್ರೀಂ ಕೋರ್ಟ್‌ ಸೋಮವಾರ ನಿರಾಕರಿಸಿದೆ ಸೆಪ್ಟೆಂಬರ್‌ನಲ್ಲಿ ಪ್ರಕರಣದ … Continued

ಕರ್ನಾಟಕ ಸೇರಿ ಹಲವು ರಾಜ್ಯಗಳಿಗೆ ಉಸ್ತುವಾರಿ, ಸಹ ಉಸ್ತುವಾರಿ ನೇಮಿಸಿದ ಬಿಜೆಪಿ

ನವದೆಹಲಿ: ಬಿಜೆಪಿಯು ಕರ್ನಾಟಕ ಸೇರಿದಂತೆ ಅನೇಕ ರಾಜ್ಯಗಳಿಗೆ ರಾಜ್ಯ ಉಸ್ತುವಾರಿಗಳು ಮತ್ತು ಸಹ-ಉಸ್ತುವಾರಿಗಳನ್ನು ನೇಮಕ ಮಾಡಿದೆ. ಮುಂಬರುವ ಕೆಲವು ರಾಜ್ಯಗಳ ವಿಧಾನಸಭೆ ಚುನಾವಣೆಗಳನ್ನು ಗಮನದಲ್ಲಿಟ್ಟು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಶುಕ್ರವಾರ ಈ ನೇಮಕ ಮಾಡಿದ್ದಾರೆ. ವಿವಿಧ ರಾಜ್ಯಗಳ ಉಸ್ತುವಾರಿಗಳು ಹಾಗೂ ಸಹ ಉಸ್ತುವಾರಿಗಳು… ಕರ್ನಾಟಕ : ಡಾ. ರಾಧಾಮೋಹನದಾಸ್ ಅಗರ್ವಾಲ್-ಉಸ್ತುವಾರಿ, ಪ್ರಭಾಕರ ರೆಡ್ಡಿ- … Continued

ವೀಡಿಯೊ..| ಕುಸಿದು ಬಿದ್ದ ಹೊಸ ಸೇತುವೆ ; 12 ಕೋಟಿ ರೂ. ನೀರು ಪಾಲು

ಬಿಹಾರದ ಅರಾರಿಯಾದಲ್ಲಿ ನಿರ್ಮಾಣ ಹಂತದ ಸೇತುವೆಯ ಒಂದು ಭಾಗ ಮಂಗಳವಾರ ಕುಸಿದಿದೆ. ಕೋಟಿಗಟ್ಟಲೆ ಖರ್ಚು ಮಾಡಿ ಬಕ್ರಾ ನದಿಗೆ ನಿರ್ಮಿಸಿದ ಕಾಂಕ್ರೀಟ್ ಸೇತುವೆ ಕೆಲವೇ ಸೆಕೆಂಡ್ ಗಳಲ್ಲಿ ಕುಸಿದುಬಿದ್ದಿದೆ. ₹ 12 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ಸೇತುವೆ ಉದ್ಘಾಟನೆಗೂ ಮುನ್ನವೇ ಕುಸಿದಿದ್ದು, ಯಾವುದೇ ಪ್ರಾಣಹಾನಿ ಬಗ್ಗೆ ವರದಿಯಾಗಿಲ್ಲ. ಈ ಸೇತುವೆಯ ಸಂಪರ್ಕ ರಸ್ತೆಗಳ ನಿರ್ಮಾಣ ಬಾಕಿ … Continued

ಬಿಸಿಗಾಳಿಗೆ ಬಿಹಾರ ತತ್ತರ..: 24 ತಾಸಿನಲ್ಲಿ 19 ಮಂದಿ ಸಾವು

ಪಾಟ್ನಾ : ಕಳೆದ 24 ಗಂಟೆಗಳಲ್ಲಿ ಬಿಹಾರದ ವಿವಿಧ ಜಿಲ್ಲೆಗಳಲ್ಲಿ ಬಿಸಿಗಾಳಿಗೆ ಕನಿಷ್ಠ 19 ಜನರು ಸಾವಿಗೀಡಾಗಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಬಕ್ಸಾರ್‌ನಲ್ಲಿ ಸಿಕ್ರೌಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ರಸ್ತೆಬದಿಯಲ್ಲಿ ಪತ್ತೆಯಾದ ಯುವಕ ಸೇರಿದಂತೆ ಮೂವರು ಬಿಸಿಲಿನ ತಾಪದಿಂದ ಮೃತಪಟ್ಟಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ. ನಳಂದಾದಲ್ಲಿ ಮೂವರು ಪ್ರಾಣ ಕಳೆದುಕೊಂಡಿದ್ದಾರೆ. ಮೃತರಲ್ಲಿ ಓರ್ವ ಶಿಕ್ಷಕ, ಓರ್ವ … Continued

‘ಯಾರೂ ಮೋದಿಗೆ ಮತ ಹಾಕಬೇಡಿ’ ಎಂದು ತರಗತಿಯೊಳಗೆ ಹೇಳುತ್ತಿದ್ದ ಸರ್ಕಾರಿ ಶಾಲಾ ಶಿಕ್ಷಕನ ಬಂಧನ

ಮುಜಾಫರಪುರ : ತನ್ನ ತರಗತಿಯ ಮಕ್ಕಳಿಗೆ “ಯಾರೂ ಮೋದಿಗೆ ಮತ ಹಾಕಬೇಡಿ” ಎಂದು ಹೇಳುತ್ತಿದ್ದ ಆರೋಪದ ಮೇಲೆ ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ. ಮುಜಾಫರಪುರ ಎಸ್‌ಎಸ್‌ಪಿ ರಾಕೇಶಕುಮಾರ ಪ್ರಕಾರ, ಜಿಲ್ಲಾ ಶಿಕ್ಷಣಾಧಿಕಾರಿ ಎಫ್‌ಐಆರ್ ದಾಖಲಿಸಿದ ನಂತರ, ಚುನಾವಣಾ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಶಿಕ್ಷಕನ … Continued

ಬಿಜೆಪಿ ಹಿರಿಯ ನಾಯಕ- ಬಿಹಾರದ ಮಾಜಿ ಉಪಮುಖ್ಯಮಂತ್ರಿ ಸುಶೀಲಕುಮಾರ ಮೋದಿ ನಿಧನ

ನವದೆಹಲಿ: ಬಿಜೆಪಿಯ ಹಿರಿಯ ನಾಯಕ ಮತ್ತು ಬಿಹಾರದ ಮಾಜಿ ಉಪಮುಖ್ಯಮಂತ್ರಿ ಸುಶೀಲಕುಮಾರ ಮೋದಿ ಅವರು ಸೋಮವಾರ ಸಂಜೆ ದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ(ಏಮ್ಸ್‌)ಯಲ್ಲಿ ನಿಧನರಾದರು. 72 ವರ್ಷದ ಅವರು ಕ್ಯಾನ್ಸರ್‌ನಿಂದ ಬಳಲುತ್ತಿದ್ದು, ಕಳೆದ ಒಂದು ತಿಂಗಳಿನಿಂದ ಏಮ್ಸ್‌ನ ತೀವ್ರ ನಿಗಾ ಘಟಕದಲ್ಲಿ ದಾಖಲಾಗಿದ್ದರು. ಒಂದು ಕಾಲದಲ್ಲಿ ಬಿಹಾರದಲ್ಲಿ ಬಿಜೆಪಿಯ ಚಿರಪರಿಚಿತ ಮುಖವಾಗಿದ್ದ ಧೀಮಂತ … Continued

ವೀಡಿಯೊಗಳು : ಪೇಟ ಧರಿಸಿ ಐತಿಹಾಸಿಕ ಪಾಟ್ನಾ ಗುರುದ್ವಾರದಲ್ಲಿ ಭಕ್ತರಿಗೆ ಊಟ ಬಡಿಸಿದ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ (ಮೇ 13) ಪಾಟ್ನಾದ ಐತಿಹಾಸಿಕ ತಖತ್ ಶ್ರೀ ಹರಿಮಂದಿರ ಜಿ ಪಾಟ್ನಾ ಸಾಹಿಬ್ ಗುರುದ್ವಾರಕ್ಕೆ ಭೇಟಿ ನೀಡಿದರು ಮತ್ತು ಸಾಮೂಹಿಕ ಭೋಜನದಲ್ಲಿ ಸಿಖ್ ಭಕ್ತರಿಗೆ ಊಟ ಬಡಿಸಿದ್ದಾರೆ. ಕೇಸರಿ ಪೇಟವನ್ನು ಧರಿಸಿ ಮತ್ತು ಖೀರ್ ಪಾತ್ರೆ ಹಿಡಿದು ಆಗಮಿಸಿದ ಪ್ರಧಾನಿ ಮೋದಿ ಶ್ರೀ ಗುರು ಗೋವಿಂದ ಸಿಂಗ್ ಅವರ … Continued

ಖರ್ಗೆ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತಪಾಸಣೆ: ಚುನಾವಣಾಧಿಕಾರಿಗಳ ವಿರುದ್ಧ ಕಾಂಗ್ರೆಸ್‌ ಕಿಡಿ

ಪಾಟ್ನಾ : ಬಿಹಾರದ ಸಮಸ್ತಿಪುರದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ನ್ನು ಚುನಾವಣಾ ಅಧಿಕಾರಿಗಳು ತಪಾಸಣೆ ನಡೆಸಿದ್ದಾರೆ. ಖರ್ಗೆ ಅವರ ಹೆಲಿಕಾಪ್ಟರ್‌ನ್ನು ತಪಾಸಣೆ ನಡೆಸಿದ ವಿಚಾರವಾಗಿ ಕಾಂಗ್ರೆಸ್ ಮುಖಂಡ ರಾಜೇಶ ರಾಥೋರ ಅವರು ಚುನಾವಣಾ ಆಯೋಗದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪ್ರತಿಪಕ್ಷಗಳ ನಾಯಕರನ್ನು ಚುನಾವಣಾಧಿಕಾರಿಗಳು ಗುರಿಯಾಗಿಸುತ್ತಿದ್ದಾರೆ. ಬಿಜೆಪಿ ನೇತೃತ್ವದ ಎನ್‍ಡಿಎ ನಾಯಕರಿಗೆ ಮಾತ್ರ ಮುಕ್ತವಾಗಿ … Continued

ಪಾಟ್ನಾ ರೈಲ್ವೆ ನಿಲ್ದಾಣದ ಸಮೀಪದ ಹೊಟೇಲ್‌ ನಲ್ಲಿ ಬೆಂಕಿ ಅವಘಡ : 6 ಮಂದಿ ಸಾವು

ಪಾಟ್ನಾ : ಪಾಟ್ನಾ ಜಂಕ್ಷನ್ ರೈಲ್ವೆ ನಿಲ್ದಾಣದ ಸಮೀಪವಿರುವ ಹೊಟೇಲ್‌ನಲ್ಲಿ ಗುರುವಾರ ಸಂಭವಿಸಿದ ಬೆಂಕಿ ಅವಘಡಲ್ಲಿ ಕನಿಷ್ಠ ಆರು ಜನರು ಸಾವಿಗೀಡಾಗಿದ್ದಾರೆ ಮತ್ತು ಅನೇಕರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೇಲ್ನೋಟಕ್ಕೆ, ಸಿಲಿಂಡರ್ ಸ್ಫೋಟದಿಂದ ಬೆಂಕಿ ಹೊತ್ತಿಕೊಂಡಂತೆ ತೋರುತ್ತಿದೆ ಎಂದು ಅಗ್ನಿಶಾಮಕ ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ, ಬೆಂಕಿಯನ್ನು ನಂದಿಸಲಾಗಿದೆ. ಮೃತರಲ್ಲಿ ಮೂವರು ಪುರುಷರು ಹಾಗೂ ಮೂವರು … Continued