ದೇಶದಲ್ಲಿ ಮೊದಲ ಬಾರಿಗೆ ಜಾತಿಗಣತಿ ಕೈಗೊಂಡಿದ್ದು ಕಾಂಗ್ರೆಸ್ ಸರ್ಕಾರ ; ಬಿಜೆಪಿ ವಿರುದ್ಧ ವಸಂತ ಲದವಾ ವಾಗ್ದಾಳಿ

ಹುಬ್ಬಳ್ಳಿ : ಸ್ವಾತಂತ್ರ್ಯ ಬಂದ ನಂತರ ಮೊದಲ ಬಾರಿಗೆ ಜಾತಿಗಣತಿ ಕೈಗೊಂಡಿದ್ದು ಕಾಂಗ್ರೆಸ್ ಸರ್ಕಾರವೇ ಹೊರತು ಬಿಜೆಪಿ ಸರ್ಕಾರ ಅಲ್ಲ ಎಂದು ಕಾಂಗ್ರೆಸ್‌ ವಕ್ತಾರ ವಸಂತ ಲದವಾ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ೨೦೧೧ರಲ್ಲಿ ಭಾರತದ ಸಾಮಾಜಿಕ, ಆರ್ಥಿಕ ಜಾತಿ ಗಣತಿ ನಡೆಸಲಾಗಿದೆ. ೨೦೧೦ರಲ್ಲಿ ಸಂಸತ್ತಿನ ಉಭಯ … Continued

ಪಕ್ಷದ ರಾಜ್ಯಾಧ್ಯಕ್ಷರ ನೇಮಕ ವಿಚಾರದಲ್ಲಿ ತೆಲಂಗಾಣ ಬಿಜೆಪಿಯಲ್ಲಿ ಬಿರುಕು ; ಬಿಜೆಪಿಗೆ ಶಾಸಕ ಟಿ.ರಾಜಾ ಸಿಂಗ್ ರಾಜೀನಾಮೆ

ಹೈದರಾಬಾದ್‌ : ತೆಲಂಗಾಣ ಬಿಜೆಪಿಗೆ ಹಿನ್ನಡೆಯಾಗಿ, ರಾಜ್ಯದ ಗೋಶಮಹಲ್ ಶಾಸಕ ಟಿ ರಾಜಾ ಸಿಂಗ್ ಸೋಮವಾರ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ರಾಮಚಂದ್ರ ರಾವ್ ಅವರನ್ನು ತೆಲಂಗಾಣ ರಾಜ್ಯ ಬಿಜೆಪಿ ಅಧ್ಯಕ್ಷರನ್ನಾಗಿ ನೇಮಿಸಲಾಗುವುದು ಎಂಬ ಮಾಧ್ಯಮ ವರದಿಗಳ ಬಗ್ಗೆ ತೀವ್ರ ನಿರಾಶೆ ವ್ಯಕ್ತಪಡಿಸಿ ಅವರು ರಾಜೀನಾಮೆ ನೀಡಿದ್ದಾರೆ. ಕ್ರಿಮಿನಲ್ ವಕೀಲ ಮತ್ತು ತೆಲಂಗಾಣ ಬಿಜೆಪಿಯಲ್ಲಿ … Continued

ಹುಬ್ಬಳ್ಳಿ-ಧಾರವಾಡ ಪಾಲಿಕೆ ನೂತನ ಮೇಯರ್ ಆಗಿ ಜ್ಯೋತಿ ಪಾಟೀಲ, ಉಪಮೇಯರ್ ಆಗಿ ಸಂತೋಷ ಚವ್ಹಾಣ ಆಯ್ಕೆ

ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆಯ ಮೇಯರ್ ಆಗಿ ಜ್ಯೋತಿ ಪಾಟೀಲ ಆಯ್ಕೆಯಾಗಿದ್ದಾರೆ. ಹಾಗೂ ಉಪಮೇಯರ್‌ ಆಗಿ ಸಂತೋಷ ಚವ್ಹಾಣ ಆಯ್ಕೆಯಾಗಿದ್ದಾರೆ. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಯಲ್ಲಿ ಪಾಲಿಕೆ ಸದಸ್ಯರು, ಲೋಕಸಭಾ ಸದಸ್ಯರು, ಶಾಸಕರು ಮತ್ತು ವಿಧಾನ ಪರಿಷತ್ತು ಸದಸ್ಯರು ಸೇರಿ ಒಟ್ಟು 90 ಜನ ಮತದಾರರು ಇದ್ದು, ಇಂದು, ಸೋಮವಾರ ನಡೆದ ಮೇಯರ್ ಹಾಗೂ ಉಪಮೇಯರ್ … Continued

ಕರ್ನಾಟಕದ 10 ಜಿಲ್ಲೆಗಳಿಗೆ ನೂತನ ಅಧ್ಯಕ್ಷರನ್ನು ನೇಮಕ ಮಾಡಿದ ಬಿಜೆಪಿ

ಬೆಂಗಳೂರು: ಬಿಜೆಪಿಯು ಕರ್ನಾಟಕ 10 ಜಿಲ್ಲೆಗಳಿಗೆ ನೂತನ ಅಧ್ಯಕ್ಷರನ್ನು ನೇಮಕ ಮಾಡಿದೆ. ಈ ಬಗ್ಗೆ ಬಿಜೆಪಿ ರಾಜ್ಯ ಚುನಾವಣಾ ಅಧಿಕಾರಿಗಳು ಬುಧವಾರ ಪ್ರಕಟಣೆ ಹೊರಡಿಸಿದ್ದಾರೆ. ದೇಶದಾದ್ಯಂತ ಪಕ್ಷದ ಸಂಘಟನಾ ಪರ್ವ 2024-25 ನಡೆಯುತ್ತಿದ್ದು, ಇದರ ಅಂಗವಾಗಿ ರಾಜ್ಯದಲ್ಲಿ ಎರಡನೇ ಹಂತದಲ್ಲಿ ಬಾಕಿ ಉಳಿದಿರುವ 10 ಸಂಘಟನಾತ್ಮಕ ಜಿಲ್ಲೆಗಳ ಜಿಲ್ಲಾ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಲಾಗಿದೆ ಎಂದು … Continued

ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧೆ ; ಕೇಂದ್ರ ಸಚಿವ ಚಿರಾಗ್‌ ಪಾಸ್ವಾನ್‌ ಘೋಷಣೆ ; ಬದಲಾಗಲಿದೆಯೇ ಬಿಹಾರ ರಾಜಕೀಯ ಚಿತ್ರಣ..?

ನವದೆಹಲಿ: ಲೋಕ ಜನಶಕ್ತಿ ಪಕ್ಷದ (ರಾಮ ವಿಲಾಸ್) ಮುಖ್ಯಸ್ಥ ಮತ್ತು ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ ಭಾನುವಾರ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ “ಜನರು ತಮಗಾಗಿ ನಿರ್ಧರಿಸುವ” ಸ್ಥಾನದಿಂದ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ. ಇದು ಅವರು ರಾಜ್ಯ ರಾಜಕೀಯಕ್ಕೆ ಮರಳುವ ಬಗ್ಗೆ ವಾರಗಳ ಊಹಾಪೋಹಗಳಿಗೆ ಕೊನೆ ಹಾಡಿದೆ. “ನಾನು ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆಯೇ ಎಂದು ಎಲ್ಲರೂ ತಿಳಿದುಕೊಳ್ಳಲು ಬಯಸುತ್ತಾರೆ. … Continued

ಪಾಣೆಮಂಗಳೂರು : ಪುತ್ತೂರು ನಗರಸಭೆ ಬಿಜೆಪಿ ಸದಸ್ಯ ಶವವಾಗಿ ಪತ್ತೆ

ಮಂಗಳೂರು: ನಾಪತ್ತೆಯಾಗಿದ್ದ ಪುತ್ತೂರು ನಗರಸಭೆಯ ಸದಸ್ಯ ರಮೇಶ ರೈ ನೆಲ್ಲಿಕಟ್ಟೆ ಅವರು ಪಾಣೆಮಂಗಳೂರಿನ ಹಳೆಯ ನೇತ್ರಾವತಿ ಸೇತುವೆಯ ಬಳಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ಗುರುವಾರ ಬೆಳಿಗ್ಗೆ ಸುಮಾರು 11 ಗಂಟೆಗೆ ಸುಮಾರಿಗೆ ಪಾಣೆಮಂಗಳೂರು ಹಳೆ ಸೇತುವೆಯ ಕೆಳಭಾಗದಲ್ಲಿ ಬೈಕ್, ಅಂಗಿ ಮೊಬೈಲ್ ಮತ್ತು ಚಪ್ಪಲಿ ಬಿದ್ದಿರುವುದನ್ನು ಗಮನಿಸಿ, ಸ್ಥಳೀಯರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದರು. … Continued

ದೇಶಭಕ್ತನಾಗುವುದು ಅಷ್ಟು ಕಷ್ಟವೇ?: ಕಾಂಗ್ರೆಸ್ ನಾಯಕರಿಗೆ ಕುಟುಕಿದ ಮಾಜಿ ಸಚಿವ ಸಲ್ಮಾನ್ ಖುರ್ಷಿದ್…!

ನವದೆಹಲಿ: ಏಪ್ರಿಲ್ 22 ರ ಪಹಲ್ಗಾಮ್ ಭಯೋತ್ಪಾದಕ ದಾಳಿ ಮತ್ತು ಆಪರೇಷನ್ ಸಿಂಧೂರ ನಂತರ ಪಾಲುದಾರ ರಾಷ್ಟ್ರಗಳಿಗೆ ತೆರಳಿರುವ ಸರ್ವಪಕ್ಷಗಳ ನಿಯೋಗದ ಸದಸ್ಯರಾಗಿರುವ ಕಾಂಗ್ರೆಸ್ ನಾಯಕ ಸಲ್ಮಾನ್ ಖುರ್ಷಿದ್, ತಮ್ಮ ಪಕ್ಷ ಕಾಂಗ್ರೆಸ್‌ ಸೇರಿದಂತೆ ಟೀಕಾಕಾರರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ, “ಭಯೋತ್ಪಾದನೆಯ ವಿರುದ್ಧದ ಕಾರ್ಯಾಚರಣೆಯಲ್ಲಿ, ಜಗತ್ತಿಗೆ ಭಾರತದ ಸಂದೇಶವನ್ನು ಹೇಳುವುದರ ಬಗ್ಗೆಯೂ ಜನರು ರಾಜಕೀಯ ನಿಷ್ಠೆಯನ್ನು ಲೆಕ್ಕ … Continued

ಬಿಜೆಪಿ ಮುಖಂಡ ಅರುಣಕುಮಾರ ಪುತ್ತಿಲಗೆ ಗಡಿಪಾರು ನೋಟಿಸ್

ಮಂಗಳೂರು: ಬಿಜೆಪಿ (BJP) ಮುಖಂಡ ಹಾಗೂ ಪುತ್ತಿಲ ಪರಿವಾರದ ಸಂಸ್ಥಾಪಕ ಅರುಣಕುಮಾರ ಪುತ್ತಿಲ (Arun Kumar Puthila) ವಿರುದ್ಧ ಗಡೀಪಾರು ನೋಟಿಸ್ (Deportation Notice) ನೀಡಲಾಗಿದೆ. ಪುತ್ತೂರು ವಿಭಾಗದ ಸಹಾಯಕ ಆಯುಕ್ತರು ಗಡೀಪಾರು ನೋಟಿಸ್ ನೀಡಿದ್ದು, ಜೂನ್‌ ೬ರಂದು ವಿಚಾರಣೆಗೆ ಹಾಜರಾಗುವಂತೆ ತಿಳಿಸಲಾಗಿದೆ. ಪೊಲೀಸರು ಮತ್ತು ಗೃಹ ಇಲಾಖೆಯ ವಿರುದ್ಧ ಮುಸ್ಲಿಂ ಮುಖಂಡರು ಆಕ್ರೋಶ ವ್ಯಕ್ತಪಡಿಸಿ, … Continued

ಮಣಿಪುರ | ಸರ್ಕಾರ ರಚಿಸಲು 44 ಶಾಸಕರು ಸಿದ್ಧ ; ರಾಜ್ಯಪಾಲರ ಭೇಟಿ ಬಳಿಕ ಬಿಜೆಪಿ ನಾಯಕನ ಹೇಳಿಕೆ

ಇಂಫಾಲ : ಮಣಿಪುರದಲ್ಲಿ ಹೊಸ ಸರ್ಕಾರ ರಚಿಸಲು 44 ಶಾಸಕರು ಸಿದ್ಧರಿದ್ದಾರೆ ಎಂದು ಬಿಜೆಪಿ ಶಾಸಕ ಥೋಕ್ಚೋಮ್ ರಾಧೇಶ್ಯಾಮ ಸಿಂಗ್ ಅವರು ಬುಧವಾರ ರಾಜ್ಯಪಾಲ ಅಜಯಕುಮಾರ ಭಲ್ಲಾ ಅವರನ್ನು ಭೇಟಿ ಮಾಡಿದ ನಂತರ ಹೇಳಿದ್ದಾರೆ. ರಾಧೆಶ್ಯಾಮ ಸಿಂಗ್‌ ಮತ್ತು ಇತರ ಒಂಬತ್ತು ಶಾಸಕರು ಬುಧವಾರ ರಾಜಭವನದಲ್ಲಿ ರಾಜ್ಯಪಾಲರನ್ನು ಭೇಟಿಯಾದರು. “ಜನರ ಇಚ್ಛೆಯಂತೆ 44 ಶಾಸಕರು ಸರ್ಕಾರ … Continued

ಬಿಜೆಪಿಯಿಂದ ಶಾಸಕರಾದ ಶಿವರಾಮ ಹೆಬ್ಬಾರ, ಎಸ್‌.ಟಿ. ಸೋಮಶೇಖರ ಉಚ್ಚಾಟನೆ

ಬೆಂಗಳೂರು: ಶಾಸಕರಾದ ಶಿವರಾಮ ಹೆಬ್ಬಾರ (Shivaram Hebbar) ಹಾಗೂ ಎಸ್.ಟಿ. ಸೋಮಶೇಖರ (ST Somashekhar) ಅವರನ್ನು ಬಿಜೆಪಿ (BJP)ಯಿಂದ ಉಚ್ಚಾಟನೆ ಮಾಡಲಾಗಿದೆ. ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಇಬ್ಬರು ಶಾಸಕರನ್ನು 6 ವರ್ಷಗಳ ಕಾಲ ಬಿಜೆಪಿ ಹೈಕಮಾಂಡ್‌ ಪಕ್ಷದಿಂದ ಉಚ್ಚಾಟನೆ ಮಾಡಿದೆ. ಬಸವನಗೌಡ ಪಾಟೀಲ ಯತ್ನಾಳ್‌ ಅವರ ಉಚ್ಚಾಟನೆ ಮಾಡಿದ ಕೆಲವು ದಿನಗಳ ನಂತರ ಈ … Continued