ಬಿಜೆಪಿ ಶಾಸಕ ಯತ್ನಾಳ ವಿರುದ್ಧ ದೂರು ದಾಖಲು

ವಿಜಯಪುರ : ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವ ಜಮೀರ್ ಅಹ್ಮದ್ ಖಾನ್ ಅವರ ವಿರುದ್ಧ ಅವಹೇಳನಕಾರಿ ಪದಬಳಸಿ ಭಾಷಣ ಮಾಡಿದ್ದಾರೆ ಎಂದು ಆರೋಪಿಸಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹಾಗೂ ಇತರರ ವಿರುದ್ಧ ದೂರು ದಾಖಲಾಗಿದೆ ಎಂದು ವರದಿಯಾಗಿದೆ. ಅಕ್ಟೋಬರ್ ೧೫ರಂದು ನಡೆದ ‘ವಕ್ಫ್ ಹಠಾವೋ ದೇಶ ಬಚಾವೋ’ … Continued

ಬಿಜೆಪಿ ಶಾಸಕ ಮುನಿರತ್ನ ಮತ್ತೆ ಬಂಧನ

ಬೆಂಗಳೂರು: ಬೆಂಗಳೂರು ಆರ್​ಆರ್​ ನಗರ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಪೊಲೀಸರು ಮತ್ತೆ ಬಂಧಿಸಿದ್ದಾರೆ. ಮಹಿಳೆಯೊಬ್ಬರು ನೀಡಿದ ಅತ್ಯಾಚಾರ ಆರೋಪದಡಿ ಮುನಿರತ್ನ ಅವರನ್ನು ಬಂಧಿಸಲಾಗಿದೆ. ಗುತ್ತಿಗೆದಾರನಿಗೆ ಬೆದರಿಕೆ ಹಾಕಿದ ಹಾಗೂ ಜಾತಿ ನಿಂದನೆ ಮಾಡಿದ ಪ್ರಕರಣದಲ್ಲಿ ಗುರುವಾರ ಜಾಮೀನು ಪಡೆದು ಜೈಲಿನಿಂದ ಹೊರಬಂದಿದ್ದ ಶಾಸಕ ಮುನಿರತ್ನ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ರಾಮನಗರದ ಕಗ್ಗಲೀಪುರ ಠಾಣೆ ಪೊಲೀಸರು … Continued

ಜಾತಿ ನಿಂದನೆ ಪ್ರಕರಣ : ಶಾಸಕ ಮುನಿರತ್ನಗೆ ಜಾಮೀನು ಮಂಜೂರು

ಬೆಂಗಳೂರು : ಬಿಬಿಎಂಪಿ ಮಾಜಿ ಸದಸ್ಯನಿಗೆ ಜಾತಿ ಉಲ್ಲೇಖಿಸಿ ನಿಂದಿಸಿದ ಆರೋಪದಲ್ಲಿ ಬಿಜೆಪಿ ಶಾಸಕ ಮುನಿರತ್ನ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಸತ್ರ ನ್ಯಾಯಾಲಯವು ಗುರುವಾರ ಜಾಮೀನು ಮಂಜೂರು ಮಾಡಿದೆ. ಬಿಬಿಎಂಪಿ ಮಾಜಿ ಸದಸ್ಯ ವೇಲು ನಾಯ್ಕರ್‌ ನೀಡಿದ್ದ ದೂರಿನ ಅನ್ವಯ ವೈಯಾಲಿಕಾವಲ್‌ ಠಾಣೆಯಲ್ಲಿ ದಾಖಲಾಗಿರುವ ಜಾತಿ ನಿಂದನೆ ಆರೋಪದ ಪ್ರಕರಣದಲ್ಲಿ ಜಾಮೀನು ಕೋರಿ ರಾಜರಾಜೇಶ್ವರಿ … Continued

ಬಿಜೆಪಿ ಶಾಸಕ ಮುನಿರತ್ನ ಸೇರಿ 7 ಜನರ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲು

ಬೆಂಗಳೂರು : ಗುತ್ತಿಗೆದಾರನಿಗೆ ಜೀವ ಬೆದರಿಕೆ ಮತ್ತು ಜಾತಿನಿಂದನೆ ಮಾಡಿರುವ ಪ್ರಕರಣದ ನಂತರ ಬಿಜೆಪಿ ಶಾಸಕ ಮುನಿರತ್ನಗೆ ಈಗ ಮತ್ತೊಂದು ಕಂಟಕ ಎದುರಾಗಿದೆ. ಬೆಂಗಳೂರು ಮೂಲದ ಮಹಿಳೆಯೊಬ್ಬರು ಶಾಸಕ ಮುನಿರತ್ನ ವಿರುದ್ಧ ರಾಮನಗರ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಕಗ್ಗಲಿಪುರ ಪೊಲೀಸ್ ಠಾಣೆಯಲ್ಲಿ ಲೈಂಗಿಕ ದೌರ್ಜನ್ಯದ ಆರೋಪ ಮಾಡಿ ದೂರು ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ. ಬಿಜೆಪಿ ಶಾಸಕ … Continued

ವೀಡಿಯೊ..| ವಂದೇ ಭಾರತ ರೈಲಿಗೆ ಚಾಲನೆ ನೀಡುವ ವೇಳೆ ರೈಲ್ವೆ ಹಳಿ ಮೇಲೆ ಬಿದ್ದ ಶಾಸಕಿ…

ಇಟಾವಾ : ಆಗ್ರಾ-ವಾರಾಣಸಿ ವಂದೇ ಭಾರತ ಎಕ್ಸ್‌ಪ್ರೆಸ್‌ ರೈಲಿಗೆ ಸೋಮವಾರ ಹಸಿರು ನಿಶಾನೆ ತೋರಿಸುವಾಗ ಬಿಜೆಪಿಯ ಇಟಾವಾ ಶಾಸಕಿ ಸರಿತಾ ಬಹ್ದೌರಿಯಾ ಅವರು ರೈಲ್ವೆ ಹಳಿ ಮೇಲೆ ಬಿದ್ದ ಘಟನೆ ನಡೆದಿದೆ. ಘಟನೆಯ ಉದ್ದೇಶಿತ ವೀಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿವೆ. ಸೋಮವಾರ ಸಂಜೆ 6 ಗಂಟೆ ಸುಮಾರಿಗೆ ರೈಲು ಆಗಮಿಸುತ್ತಿದ್ದಂತೆ ಕಿಕ್ಕಿರಿದ ಪ್ಲಾಟ್‌ಫಾರ್ಮ್ ನಡುವೆ ಈ … Continued

ಬಿಜೆಪಿ ಶಿಸ್ತು ಸಮಿತಿಯಿಂದ ಶಾಸಕ ಮುನಿರತ್ನಗೆ ಶೋಕಾಸ್‌ ನೋಟಿಸ್

ಬೆಂಗಳೂರು : ಜೀವ ಬೆದರಿಕೆ ಹಾಗೂ ಜಾತಿ ನಿಂದನೆ ಆರೋಪದ ಅಡಿ ದಾಖಲಾಗಿದ್ದ ಪ್ರಕರಣದ ಸಂಬಂಧ ಬಿಜೆಪಿ ಶಾಸಕ ಮುನಿರತ್ನ ಅವರಿಗೆ ಸಂಕಷ್ಟ ಎದುರಾಗಿರುವ ಬೆನ್ನಲ್ಲೇ ಬಿಜೆಪಿಯಿಂದ ಅವರಿಗೆ ಕಾರಣ ಕೇಳಿ ನೋಟಿಸ್ ಜಾರಿಯಾಗಿದೆ. ಬಿಜೆಪಿ ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ ಅವರು ಮುನಿರತ್ನ ಮೇಲೆ ಕೇಳಿ ಬಂದಿರುವ ಆರೋ ಪದ ಬಗ್ಗೆ … Continued

ಜೀವ ಬೆದರಿಕೆ, ಜಾತಿನಿಂದನೆ ಪ್ರಕರಣ: ಬಿಜೆಪಿ ಶಾಸಕ ಮುನಿರತ್ನ ಪೊಲೀಸ್​ ವಶಕ್ಕೆ

ಬೆಂಗಳೂರು : ಗುತ್ತಿಗೆದಾರ ಚಲುವರಾಜು ಅವರಿಗೆ ಜೀವ ಬೆದರಿಕೆ ಹಾಕಿ, ಜಾತಿ ನಿಂದನೆ ಮಾಡಿದ ಆರೋಪಿತ ಪ್ರಕರಣದಲ್ಲಿ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೋಲಾರ ಜಿಲ್ಲೆಯ ಮುಳುಬಾಗಿಲು ತಾಲೂಕಿನ ನಂಗಲಿ ಗ್ರಾಮದಲ್ಲಿ ಅವರನ್ನು ವಶಕ್ಕೆ ಪಡೆಯಲಾಗಿದೆ ಎಂದು ವರದಿಯಾಗಿದ್ದು, ಕೋಲಾರದಿಂದ ಆಂಧ್ರದ ಚಿತ್ತೂರಿಗೆ ತೆರಳುತ್ತಿದ್ದಾಗ ಮೊಬೈಲ್ ಫೋನ್ ಲೊಕೇಷನ್ ಆಧಾರದ ಮೇಲೆ … Continued

ಗುತ್ತಿಗೆದಾರನಿಗೆ ಜೀವ ಬೆದರಿಕೆ ಆರೋಪ: ಶಾಸಕ ಮುನಿರತ್ನ ವಿರುದ್ಧ 2 ಎಫ್ಐಆರ್ ದಾಖಲು

ಬೆಂಗಳೂರು : ಗುತ್ತಿಗೆದಾರನಿಗೆ ಜೀವ ಬೆದರಿಕೆ ಹಾಕಿದ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಎರಡು ಎಫ್‌ಆರ್‌ಐ ದಾಖಲಾಗಿವೆ ಎಂದು ತಿಳಿದುಬಂದಿದೆ. ಜೀವ ಬೆದರಿಕೆ, ಜಾತಿ ನಿಂದನೆ ಮಾಡಿದ ಆರೋಪದಡಿಯಲ್ಲಿ ಅವರ ವಿರುದ್ಧ ಪ್ರತ್ಯೇಕ ಎರಡು ಪ್ರಕರಣ ದಾಖಲಾಗಿವೆ. ಜೀವ ಬೆದರಿಕೆ ಪ್ರಕರಣದಲ್ಲಿ ನಾಲ್ವರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದ್ದು, ಶಾಸಕ ಮುನಿರತ್ನ ಎ1 … Continued

ಬಿಜೆಪಿ ಶಾಸಕ ಸುರೇಶಕುಮಾರ ಆಸ್ಪತ್ರೆಗೆ ದಾಖಲು

ಬೆಂಗಳೂರು : ತೀವ್ರ ಜ್ವರದಿಂದ ಬಳಲುತ್ತಿರುವ ಬಿಜೆಪಿ ಮಾಜಿ ಸಚಿವ ಹಾಗೂ ಹಾಲಿ ಶಾಸಕ ಎಸ್. ಸುರೇಶಕುಮಾರ ಅವರು ಆಸ್ಪತ್ರೆಗೆ ದಾಖಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೆಂಗಳೂರು ಶೇಷಾದ್ರಿಪುರಂನ ಖಾಸಗಿ ಆಸ್ಪತ್ರೆಗೆ ಸುರೇಶಕುಮಾರ ಅವರನ್ನು ದಾಖಲಿಸಲಾಗಿದೆ. ತೀವ್ರ ನಿಗಾ ಘಟಕದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಕುಟುಂಬದ ಮೂಲಗಳಿಂದ ತಿಳಿದುಬಂದಿದೆ. ಕಳೆದ ತಿಂಗಳು … Continued

ತ್ಯಾಜ್ಯ ನದಿಗೆ ಬಿಡುಗಡೆ ಆರೋಪ : ಶಾಸಕ ಯತ್ನಾಳ ಒಡೆತನದ ಕಾರ್ಖಾನೆ ವಿರುದ್ಧದ ದೂರು ವಜಾ ಮಾಡಿದ ಹೈಕೋರ್ಟ್‌

ಬೆಂಗಳೂರು : ಸಂಸ್ಕರಣೆ ಮಾಡದೆ ತ್ಯಾಜ್ಯವನ್ನು ನದಿಗೆ ಬಿಡುಗಡೆ ಮಾಡುವ ಮೂಲಕ ಜಲ ಮತ್ತು ಪರಿಸರ ಕಾಯಿದೆ ಉಲ್ಲಂಘನೆ ಮಾಡಲಾಗಿದೆ ಎಂದು ಆರೋಪಿಸಿ ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಒಡೆತನದ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಮೆಸರ್ಸ್‌ ಸಿದ್ಧಸಿರಿ ಸೌಹಾರ್ದ ಸಹಕಾರಿ ನಿಯಮಿತ ಸಕ್ಕರೆ ಕಾರ್ಖಾನೆ ವಿರುದ್ಧ ದಾಖಲಾಗಿದ್ದ ಖಾಸಗಿ ದೂರನ್ನು ಕರ್ನಾಟಕ ಹೈಕೋರ್ಟ್‌ … Continued