ಶಿರಸಿ: ಕಚೇರಿಗೆ ತೆರಳಿ ಬಿಜೆಪಿ ಸಂಸದ ಕಾಗೇರಿ ಅಭಿನಂದಿಸಿದ ಕಾಂಗ್ರೆಸ್ ಶಾಸಕ ಭೀಮಣ್ಣ ನಾಯ್ಕ…!

ಶಿರಸಿ: ಉತ್ತರ ಕನ್ನಡ ಜಿಲ್ಲೆಯ ಬಿಜೆಪಿಯ ನೂತನ ಸಂಸದ ವರ್ಷದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಕಾಂಗ್ರೆಸ್ ಶಾಸಕ ಭೀಮಣ್ಣ ಟಿ ನಾಯ್ಕ ಶುಕ್ರವಾರ ರಾತ್ರಿ ಶಿರಿಸಯಲ್ಲಿ ಅಭಿನಂದಿಸಿದ್ದಾರೆ..! ಸಂಸದರ  ಕಚೇರಿಗೆ ತೆರಳಿದ ಶಾಸಕ ಭೀಮಣ್ಣ ನಾಯ್ಕ ಅವರು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಹಾರ ಹಾಕಿ, ಫಲ‌ ನೀಡಿ ಅಭಿನಂದಿಸಿದರು‌. ಈ ವೇಳೆ … Continued

ಮಹಾರಾಷ್ಟ್ರ ವಿಧಾನ ಪರಿಷತ್ತಿನ ಚುನಾವಣೆಯಲ್ಲಿ 11ರಲ್ಲಿ 9 ಸ್ಥಾನ ಗೆದ್ದು ಬೀಗಿದ ಬಿಜೆಪಿ-ಮಿತ್ರಪಕ್ಷಗಳು

ಮುಂಬೈ : ಲೋಕಸಭೆ ಚುನಾವಣೆಯಲ್ಲಿ ಕಳಪೆ ಪ್ರದರ್ಶನದ ನಂತರ, ಶುಕ್ರವಾರ ನಡೆದ ಮಹಾರಾಷ್ಟ್ರ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟವು 11 ಸ್ಥಾನಗಳಲ್ಲಿ 9 ಸ್ಥಾನಗಳನ್ನು ಗೆದ್ದುಕೊಂಡಿದೆ. ಬಿಜೆಪಿಯ ಪಂಕಜಾ ಮುಂಡೆ, ಪರಿಣಯ ಫುಕೆ, ಅಮಿತ್ ಗೋರ್ಖೆ, ಯೋಗೇಶ ತಿಲೇಕರ ಮತ್ತು ಸದಾಭವ ಖೋತ್‌ ಐದು ಬಿಜೆಪಿ ಅಭ್ಯರ್ಥಿಗಳು ಜಯಗಳಿಸಿದರು.ಅಜಿತ ಪವಾರ್ ಅವರ … Continued

ಕರ್ನಾಟಕ ಸೇರಿ ಹಲವು ರಾಜ್ಯಗಳಿಗೆ ಉಸ್ತುವಾರಿ, ಸಹ ಉಸ್ತುವಾರಿ ನೇಮಿಸಿದ ಬಿಜೆಪಿ

ನವದೆಹಲಿ: ಬಿಜೆಪಿಯು ಕರ್ನಾಟಕ ಸೇರಿದಂತೆ ಅನೇಕ ರಾಜ್ಯಗಳಿಗೆ ರಾಜ್ಯ ಉಸ್ತುವಾರಿಗಳು ಮತ್ತು ಸಹ-ಉಸ್ತುವಾರಿಗಳನ್ನು ನೇಮಕ ಮಾಡಿದೆ. ಮುಂಬರುವ ಕೆಲವು ರಾಜ್ಯಗಳ ವಿಧಾನಸಭೆ ಚುನಾವಣೆಗಳನ್ನು ಗಮನದಲ್ಲಿಟ್ಟು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಶುಕ್ರವಾರ ಈ ನೇಮಕ ಮಾಡಿದ್ದಾರೆ. ವಿವಿಧ ರಾಜ್ಯಗಳ ಉಸ್ತುವಾರಿಗಳು ಹಾಗೂ ಸಹ ಉಸ್ತುವಾರಿಗಳು… ಕರ್ನಾಟಕ : ಡಾ. ರಾಧಾಮೋಹನದಾಸ್ ಅಗರ್ವಾಲ್-ಉಸ್ತುವಾರಿ, ಪ್ರಭಾಕರ ರೆಡ್ಡಿ- … Continued

ಚುನಾವಣೆ ವೇಳೆ ಮಾಡಿದ್ದ ವಾಗ್ದಾನದಂತೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ರಾಜಸ್ಥಾನದ ಸಚಿವ ಕಿರೋಡಿ ಲಾಲ ಮೀನಾ

ಜೈಪುರ: ಬಿಜೆಪಿ ನಾಯಕ ಕಿರೋಡಿ ಲಾಲ ಮೀನಾ ಅವರು ರಾಜಸ್ಥಾನದ ತಮ್ಮ ಸಚಿವ ರಾಜೀನಾಮೆ ನೀಡಿರುವುದಾಗಿ ಗುರುವಾರ ಹೇಳಿದ್ದಾರೆ. ಬಿಜೆಪಿ ಪಕ್ಷವು ತನ್ನ ಉಸ್ತುವಾರಿಯಲ್ಲಿರುವ ಏಳು ಲೋಕಸಭಾ ಸ್ಥಾನಗಳಲ್ಲಿ ಯಾವುದಾದರು ಒಂದು ಸ್ಥಾನ ಕಳೆದುಕೊಂಡರೆ ರಾಜೀನಾಮೆ ನೀಡುವುದಾಗಿ ಾವರು ಹೇಳಿದ್ದರು. ಅದರಂತೆ ಅವರು ರಾಜೀನಾಮೆ ನೀಡಿದ್ದಾರೆ ಎಂದು ಅವರ ಸಹಾಯಕ ಗುರುವಾರ ತಿಳಿಸಿದ್ದಾರೆ. ಲೋಕಸಭೆ ಚುನಾವಣೆ … Continued

ಕಾಂಗ್ರೆಸ್‌ ವಿರುದ್ಧದ ಆಕ್ಷೇಪಾರ್ಹ ಅನಿಮೇಟೆಡ್‌ ವೀಡಿಯೊ : ನಡ್ಡಾ, ಮಾಳವಿಯಾಗೆ ರಿಲೀಫ್‌ ನೀಡಿದ ಹೈಕೋರ್ಟ್‌

ಬೆಂಗಳೂರು : ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯ ಕುರಿತು ಬಿಜೆಪಿಯ ಅಧಿಕೃತ ಸಾಮಾಜಿಕ ಖಾತೆಯಲ್ಲಿ ಪ್ರಸಾರ ಮಾಡಲಾಗಿದ್ದ ಆಕ್ಷೇಪಾರ್ಹ ಅನಿಮೇಟೆಡ್ ವೀಡಿಯೊಕ್ಕೆ ಆಕ್ಷೇಪಿಸಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹಾಗೂ ಅಮಿತ ಮಾಳವಿಯಾ ವಿರುದ್ಧ ದಾಖಲಾಗಿರುವ ಪ್ರಕರಣದ ವಿಚಾರಣೆ ವೇಳೆ ಖುದ್ದು ಹಾಜರಾತಿಗೆ ಹೈಕೋರ್ಟ್‌ ವಿನಾಯಿತಿ ನೀಡಿದೆ. ಕಲಬುರ್ಗಿಯ ಸೈಬರ್‌ ಠಾಣೆಯಲ್ಲಿ ದಾಖಲಾಗಿರುವ … Continued

ಬಳ್ಳಾರಿ ನೂತನ ಮೇಯರ್ ಆಗಿ ನಂದೀಶಬಾಬು, ಉಪಮೇಯರ್ ಆಗಿ ಡಿ. ಸುಕುಂ ಆಯ್ಕೆ

ಬಳ್ಳಾರಿ: ಬಳ್ಳಾರಿ ಮಹಾನಗರ ಪಾಲಿಕೆಯ 23ನೇ ಮೇಯರ್‌ ಆಗಿ ಕಾಂಗ್ರೆಸ್ಸಿನ ಮುಲ್ಲಂಗಿ ನಂದೀಶಬಾಬು ಶುಕ್ರವಾರ ಆಯ್ಕೆಯಾಗಿದ್ದಾರೆ. ಉಪ ಮೇಯರ್‌ ಆಗಿ ಕಾಂಗ್ರೆಸ್ಸಿನ ಡಿ. ಸುಕುಂ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಬಳ್ಳಾರಿ ನಗರ ಪಾಲಿಕೆಯ 39 ಸದಸ್ಯರಲ್ಲಿ ಕಾಂಗ್ರೆಸ್ ಪಕ್ಷದ 21 ಹಾಗೂ ಪಕ್ಷೇತರರಾಗಿ ಆರಿಸಿ ಬಂದು ಕಾಂಗ್ರೆಸ್ ಬೆಂಬಲಿಸಿರುವ 5 ಜನ ಸದಸ್ಯರು ಸೇರಿದಂತೆ 26 ಜನರ … Continued

ಬಿಜೆಪಿಯ ಭರ್ತೃಹರಿ ಮಹತಾಬ್ ಲೋಕಸಭೆಯ ಹಂಗಾಮಿ ಸ್ಪೀಕರ್

ನವದೆಹಲಿ: ಏಳು ಅವಧಿಯ ಲೋಕಸಭಾ ಸದಸ್ಯ ಭರ್ತೃಹರಿ ಮಹತಾಬ್ ಅವರನ್ನು ಗುರುವಾರ ಲೋಕಸಭೆಯ ಹಂಗಾಮಿ ಸ್ಪೀಕರ್ ಆಗಿ ನೇಮಿಸಲಾಗಿದೆ. ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಈ ವಿಷಯ ತಿಳಿಸಿದ್ದಾರೆ. ಹಂಗಾಮಿ ಸ್ಪೀಕರ್ ಲೋಕಸಭೆ ಚುನಾವಣೆಯ ನಂತರ ಸಂಸತ್ತಿನ ಕೆಳಮನೆಯ ಮೊದಲ ಸಭೆಯ ಅಧ್ಯಕ್ಷತೆ ವಹಿಸುತ್ತಾರೆ, ಜೊತೆಗೆ ಅದು ಹೊಸದಾಗಿ ರಚಿತವಾದ ಸದನವಾಗಿದ್ದರೆ ಸ್ಪೀಕರ್ ಮತ್ತು … Continued

ನಾಲ್ಕು ರಾಜ್ಯಗಳ ವಿಧಾನಸಭೆ ಚುನಾವಣೆ : ಉಸ್ತುವಾರಿಗಳ ನೇಮಕ ಮಾಡಿದ ಬಿಜೆಪಿ

ನವದೆಹಲಿ : ವಿಧಾನಸಭೆ ಚುನಾವಣೆ ನಡೆಯಲಿರುವ ಮಹಾರಾಷ್ಟ್ರ, ಹರಿಯಾಣ, ಜಾರ್ಖಂಡ್ ಮತ್ತು ಜಮ್ಮು ಮತ್ತು ಕಾಶ್ಮೀರಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಸೋಮವಾರ ಪಕ್ಷದ ಚುನಾವಣಾ ಉಸ್ತುವಾರಿಗಳು ಮತ್ತು ಸಹ-ಪ್ರಭಾರಿಗಳನ್ನು ನೇಮಿಸಿದ್ದಾರೆ. ಬಿಜೆಪಿಯ ಹಿರಿಯ ನಾಯಕ ಮತ್ತು ಕೇಂದ್ರ ಸಚಿವ ಭೂಪೇಂದರ ಯಾದವ್ ಅವರನ್ನು ಮಹಾರಾಷ್ಟ್ರದ ಉಸ್ತುವಾರಿಯಾಗಿ ನೇಮಿಸಲಾಗಿದೆ ಮತ್ತು ಕೇಂದ್ರ ಸಚಿವ ಅಶ್ವಿನಿ … Continued

ಶಿವಮೊಗ್ಗ : ತೈಲ ಬೆಲೆ ಏರಿಕೆ ಪ್ರತಿಭಟನೆ ವೇಳೆ ಹೃದಯಾಘಾತ ; ಬಿಜೆಪಿ ನಾಯಕ ಭಾನುಪ್ರಕಾಶ ನಿಧನ

ಶಿವಮೊಗ್ಗ: ತೈಲ ಬೆಲೆ ಏರಿಕೆ ಖಂಡಿಸಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಸೋಮವಾರ ಪ್ರತಿಭಟನಾ ಸಭೆಯಲ್ಲಿ ಪಾಲ್ಗೊಂಡಿದ್ದ ಬಿಜೆಪಿಯ ಹಿರಿಯ ಮುಖಂಡ ಮತ್ತೂರಿನ ಎಂ.ಬಿ‌.ಭಾನುಪ್ರಕಾಶ ಅವರು ತೀವ್ರವಾಗಿ ಅಸ್ವಸ್ಥಗೊಂಡು ಕುಸಿದುಬಿದ್ದು ಮೃತಪಟ್ಟಿದ್ದಾರೆ. ಅವರಿಗೆ 69 ವರ್ಷ ವಯಸ್ಸಾಗಿತ್ತು. ಗೋಪಿ ಸರ್ಕಲ್‌ನಲ್ಲಿ ಸೋಮವಾರ ನಡೆದ ಬಿಜೆಪಿ ಪ್ರತಿಭಟನೆ ಕಾರ್ಯಕ್ರಮದ ನಂತರ ಭಾನುಪ್ರಕಾಶ ಅವರಿಗೆ ಹೃದಯಾಘಾತವಾಗಿದೆ. ಅವರು ಅಲ್ಲಿಯೇ … Continued

ಕ್ರೈಸ್ತ ಧರ್ಮ ಗುರು ಪೋಪ್ ಫ್ರಾನ್ಸಿಸ್ ಜೊತೆಗಿನ ಮೋದಿ ಭೇಟಿ ಅಣಕಿಸಿದ ಕಾಂಗ್ರೆಸ್; ಭಾರೀ ಆಕ್ರೋಶದ ನಂತರ ಕ್ರೈಸ್ತರ ಕ್ಷಮೆಯಾಚನೆ

ನವದೆಹಲಿ : ಇಟಲಿಯಲ್ಲಿ ನಡೆದ ಜಿ7 ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕ್ರೈಸ್ತ ಧರ್ಮ ಗುರು ಪೋಪ್ ಫ್ರಾನ್ಸಿಸ್ ಅವರ ಭೇಟಿಯನ್ನು ಅಣಕಿಸಿ ಕಾಂಗ್ರೆಸ್ ಪಕ್ಷದ ಕೇರಳ ಘಟಕವು ಸಾಮಾಜಿಕ ಮಾಧ್ಯಮದಲ್ಲಿ ವ್ಯಂಗ್ಯಾತ್ಮಕ ಪೋಸ್ಟ್ ಮಾಡಿದ ನಂತರ ವ್ಯಾಪಕ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ಈಗ ಕೇರಳ ಕಾಂಗ್ರೆಸ್‌ ಘಟಕವು ಕ್ರೈಸ್ತ ಸಮುದಾಯದ ಕ್ಷಮೆಯಾಚಿಸಿದೆ. ಅಳಿಸಲಾದ … Continued