ಹೊನ್ನಾವರ : ಮಂಕಿ ಪಟ್ಟಣ ಪಂಚಾಯತದ ಮೊದಲ ಚುನಾವಣೆ : ಬಿಜೆಪಿಗೆ ಭರ್ಜರಿ ಜಯ, ಕಾಂಗ್ರೆಸ್ಸಿಗೆ ಹಿನ್ನಡೆ

ಹೊನ್ನಾವರ : ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಪಟ್ಟಣ ಪಂಚಾಯತ ಆಗಿ ಘೋಷಣೆಯಾದ ನಂತರ ಮಂಕಿಯಲ್ಲಿ ನಡೆದ ಮೊದಲ ಮಹತ್ವದ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷವು (ಬಿಜೆಪಿ) ಅಭೂತಪೂರ್ವ ಗೆಲುವು ಸಾಧಿಸಿದ್ದು, ಆಡಳಿತದ ಚುಕ್ಕಾಣಿ ಹಿಡಿದಿದೆ. ಜಿಲ್ಲಾ ಉಸ್ತುವಾರಿ ಸಚಿವರ ತವರು ಕ್ಷೇತ್ರದಲ್ಲೇ ಕಾಂಗ್ರೆಸ್ಸಿಗೆ ಹಿನ್ನಡೆಯಾಗಿದೆ. ಸಚಿವ ಮಂಕಾಳ ವೈದ್ಯರಿಗೆ ಸ್ವಕ್ಷೇತ್ರದಲ್ಲಿ  ಹಿನ್ನಡೆಯಾದರೆ,ಮಾಜಿ ಸಚಿವ … Continued

ಗೋವಾ ಜಿಲ್ಲಾ ಪಂಚಾಯತ ಚುನಾವಣೆ : ಬಿಜೆಪಿಗೆ ಭರ್ಜರಿ ಜಯ; ಕಾಂಗ್ರೆಸ್ಸಿಗೆ ಹಿನ್ನಡೆ

ಪಣಜಿ: ಗೋವಾ ಜಿಲ್ಲಾ ಪಂಚಾಯತ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಅಮೋಘ ಗೆಲುವು ಸಾಧಿಸಿದೆ. ಸೋಮವಾರ (ಡಿಸೆಂಬರ್ 22) ಪ್ರಕಟವಾದ ಫಲಿತಾಂಶದಲ್ಲಿ, ಒಟ್ಟು 50 ಜಿಲ್ಲಾ ಪಂಚಾಯತ ಸ್ಥಾನಗಳ ಪೈಕಿ 30 ಸ್ಥಾನಗಳನ್ನು ಗೆಲ್ಲುವ ಮೂಲಕ ಬಿಜೆಪಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. 2027ರ ವಿಧಾನಸಭಾ ಚುನಾವಣೆಯ ಮುನ್ಸೂಚನೆ ಎಂದೇ ಪರಿಗಣಿಸಲಾಗಿದ್ದ ಈ ಚುನಾವಣೆಯಲ್ಲಿ ಮತದಾರರು … Continued

ಮಹಾರಾಷ್ಟ್ರ ಸ್ಥಳೀಯ ಸಂಸ್ಥೆಗಳ ಚುನಾವಣೆ ; ಬಿಜೆಪಿ ಅತಿದೊಡ್ಡ ಪಕ್ಷ, ಮೈತ್ರಿಕೂಟಕ್ಕೆ ಭರ್ಜರಿ ಗೆಲುವು

ಮುಂಬೈ: ಮಹಾರಾಷ್ಟ್ರದ ಒಟ್ಟು 246 ನಗರ ಪಾಲಿಕೆಗಳು ಹಾಗೂ 42 ನಗರ ಪಂಚಾಯತಗಳಿಗೆ ನಡೆದ ಚುನಾವಣೆಯಲ್ಲಿ ಮಹಾಯುತಿ ಮೈತ್ರಿಕೂಟ ಭರ್ಜರಿ ಗೆಲುವು ಸಾಧಿಸಿದೆ.  246 ನಗರ ಪಾಲಿಕೆಗಳಲ್ಲಿ ಮಹಾಯುತಿ ಮೈತ್ರಿಕೂಟವು  207 ನಗರ ಪಾಲಿಕೆಗಳಲ್ಲಿ ಅಧ್ಯಕ್ಷ ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ.  ಮಹಾ ವಿಕಾಸ ಅಘಾಡಿಯನ್ನು ಒಟ್ಟು 44 ಕ್ಕೆ ಸೀಮಿತಗೊಳಿಸಿದೆ. ರಾಜ್ಯ ಚುನಾವಣಾ ಆಯೋಗದ  ಪ್ರಕಾರ, … Continued

ಅರುಣಾಚಲ ಪ್ರದೇಶದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿಗೆ ಭರ್ಜರಿ ಗೆಲುವು

ನವದೆಹಲಿ: ಚುನಾವಣಾ ಆಯೋಗ (SEC) ಭಾನುವಾರ ಸಂಜೆ ಘೋಷಿಸಿದ ಅಂತಿಮ ಫಲಿತಾಂಶಗಳ ಪ್ರಕಾರ, ಅರುಣಾಚಲ ಪ್ರದೇಶದ ಜಿಲ್ಲಾ ಪರಿಷತ್‌ ಹಾಗೂ ಗ್ರಾಮ ಪಂಚಾಯತ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿ ಹೆಚ್ಚಿನ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ಜಿಲ್ಲಾ ಪರಿಷತ್ ಚುನಾವಣೆಯಲ್ಲಿ, ಬಿಜೆಪಿ 245 ಜಿಲ್ಲಾ ಪರಿಷತ್ ಸದಸ್ಯ (ZPM) ಸ್ಥಾನಗಳಲ್ಲಿ 170 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ, ಇದರಲ್ಲಿ 59 … Continued

ಮಹಾರಾಷ್ಟ್ರ ಸ್ಥಳೀಯ ಸಂಸ್ಥೆ ಚುನಾವಣೆ : ಅಭೂತಪೂರ್ವ ಗೆಲುವಿನತ್ತ ಬಿಜೆಪಿ ನೇತೃತ್ವದ ಮಹಾಯುತಿ…

ಮುಂಬೈ: ಮಹಾರಾಷ್ಟ್ರದಾದ್ಯಂತ ನಡೆದ ನಗರಸಭೆ ಮತ್ತು ನಗರ ಪಂಚಾಯತ ಚುನಾವಣೆಗಳಲ್ಲಿ ಆಡಳಿತಾರೂಢ ಬಿಜೆಪಿಯ ನೇತೃತ್ವದ ‘ಮಹಾಯುತಿ’ ಮೈತ್ರಿಕೂಟವು ಅಭೂತಪೂರ್ವ ಗೆಲುವು ಸಾಧಿಸುವ ಮೂಲಕ ತನ್ನ ಪಾರುಪತ್ಯ ಮೆರೆದಿದೆ. ಒಟ್ಟು 288 ಸ್ಥಳೀಯ ಸಂಸ್ಥೆಗಳ ಪೈಕಿ ಸಿಂಹಪಾಲು ಸ್ಥಾನಗಳನ್ನು ಗೆಲ್ಲುವ ಮೂಲಕ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ನೇತೃತ್ವದ ಮಹಾಯುತಿ ಮೈತ್ರಿಕೂಟವು ರಾಜ್ಯದ ಗ್ರಾಮೀಣ ಮತ್ತು ಅರೆ-ನಗರ ಪ್ರದೇಶಗಳಲ್ಲಿ … Continued

ಕಾಂಗ್ರೆಸ್ಸಿಗೆ ಆಘಾತ ; ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರಿದ ರಾಹುಲ್‌ ಗಾಂಧಿ ಆಪ್ತನ ಪತ್ನಿ…!

ಮುಂಬೈ: ಮಹಾರಾಷ್ಟ್ರ ರಾಜಕಾರಣದಲ್ಲಿ ಕಾಂಗ್ರೆಸ್ಸಿಗೆ ಮತ್ತೊಂದು ದೊಡ್ಡ ಆಘಾತ ಎದುರಾಗಿದ್ದು, ದಿವಂಗತ ಸಂಸದ ರಾಜೀವ ಸಾತವ್ ಅವರ ಪತ್ನಿ ಹಾಗೂ ವಿಧಾನ ಪರಿಷತ್ ಸದಸ್ಯೆ (MLC) ಪ್ರಜ್ಞಾ ಸಾತವ್ ಅವರು ಗುರುವಾರ ವಿಧಾನ ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಮುಂಬೈನ ನಾರಿಮನ್ ಪಾಯಿಂಟ್‌ನಲ್ಲಿರುವ ಪಕ್ಷದ ಕಚೇರಿಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದರು. … Continued

ಬಿಜೆಪಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷರಾಗಿ ನಿತಿನ್ ನಬಿನ್ ಅಧಿಕಾರ ಸ್ವೀಕಾರ

ನವದೆಹಲಿ: ನೂತನವಾಗಿ ನೇಮಕಗೊಂಡಿರುವ ಭಾರತೀಯ ಜನತಾ ಪಕ್ಷದ (ಬಿಜೆಪಿ) ರಾಷ್ಟ್ರೀಯ ಕಾರ್ಯಾಧ್ಯಕ್ಷರಾದ  ನಿತಿನ್ ನಬಿನ್ ಅವರು ದೆಹಲಿಯ ಪಕ್ಷದ ಕೇಂದ್ರ ಕಚೇರಿಯಲ್ಲಿ ಸೋಮವಾರ ಅಧಿಕಾರ ವಹಿಸಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ. ನಡ್ಡಾ ಮತ್ತು ಇತರೆ ಪಕ್ಷದ ಹಿರಿಯ ನಾಯಕರು ಉಪಸ್ಥಿತರಿದ್ದರು. ದೆಹಲಿಯ ಬಿಜೆಪಿ ಕೇಂದ್ರ … Continued

ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷರಾಗಿ ಬಿಹಾರ ಸಚಿವ ನಿತಿನ್ ನಬಿನ್ ನೇಮಕ ; ಇವರು ಯಾರು ಗೊತ್ತೆ ?

ನವದೆಹಲಿ : ಭಾರತೀಯ ಜನತಾ ಪಕ್ಷವು (ಬಿಜೆಪಿ) ಭಾನುವಾರ ಬಿಹಾರದ ಸಚಿವರಾದ ನಿತಿನ್ ನಬಿನ್ ಅವರನ್ನು ತನ್ನ ರಾಷ್ಟ್ರೀಯ ಕಾರ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿದೆ. ಈ ನಿರ್ಧಾರ ತಕ್ಷಣದಿಂದಲೇ ಜಾರಿಗೆ ಬಂದಿದೆ. ನಿತಿನ್‌ ನಬಿನ್ ಅವರು ಪ್ರಸ್ತುತ ನಿತೀಶಕುಮಾರ ನೇತೃತ್ವದ ಬಿಹಾರ ಸರ್ಕಾರದಲ್ಲಿ ಸಚಿವರಾಗಿದ್ದು, ಅಲ್ಲಿ ಅವರು ಲೋಕೋಪಯೋಗಿ (ರಸ್ತೆ ನಿರ್ಮಾಣ) ಖಾತೆಯನ್ನು ನಿಭಾಯಿಸುತ್ತಿದ್ದಾರೆ. ಬಿಜೆಪಿ ರಾಷ್ಟ್ರೀಯ … Continued

ಕೇರಳದಲ್ಲಿ ಇತಿಹಾಸ ನಿರ್ಮಿಸಿದ ಬಿಜೆಪಿ ; ಎಡ ಪಕ್ಷಗಳಿಂದ ತಿರುವನಂತಪುರಂ ಮಹಾನಗರ ಪಾಲಿಕೆ ಕಸಿದುಕೊಂಡ ಬಿಜೆಪಿ

ತಿರುವನಂತಪುರಂ: ಭಾರೀ ಕುತೂಹಲ ಕೆರಳಿಸಿದ್ದ ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯ(Kerala local body polls) ಫಲಿತಾಂಶ ಹೊರಬಿದಿದ್ದು, ಆಡಳಿತಾರೂಢ ಎಲ್‌ಡಿಎಫ್‌ಗೆ ಭಾರೀ ಮುಖಭಂಗವಾಗಿದೆ.ಕೇರಳದ ರಾಜಧಾನಿ ತಿರುವನಂತಪುರಂ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (NDA) ಇದೇ ಮೊದಲ ಬಾರಿಗೆ ಐತಿಹಾಸಿಕ ವಿಜಯ ಸಾಧಿಸಿದೆ. ಪಾಲಿಕೆಯ 101 ವಾರ್ಡ್‌ಗಳಲ್ಲಿ ಎನ್‌ಡಿಎ ಒಟ್ಟು 50 … Continued

ಕೇರಳದ ಪಂಚಾಯತ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ “ಸೋನಿಯಾ ಗಾಂಧಿ”…!

ಮುನ್ನಾರ್ (ಕೇರಳ): ಸೋನಿಯಾ ಗಾಂಧಿ ಅವರು ಕೇರಳದ ಮುನ್ನಾರ್‌ನಿಂದ ಪಂಚಾಯತ್ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ. ಇದಕ್ಕಿಂತ ಆಶ್ಚರ್ಯಕರ ವಿಷಯವೆಂದರೆ, ಅವರು ಬಿಜೆಪಿ ಅಭ್ಯರ್ಥಿ…! ಕೇರಳದಲ್ಲಿ, ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಡಿಸೆಂಬರ್ 9 ಮತ್ತು 11 ರಂದು ಎರಡು ಹಂತಗಳಲ್ಲಿ ನಡೆಸಲಾಗುತ್ತಿದೆ, ಡಿಸೆಂಬರ್ 13 ರಂದು ಮತ ಎಣಿಕೆ ನಡೆಯಲಿದೆ. ಕೇರಳದ ಗಿರಿಧಾಮವಾದ ಮುನ್ನಾರ್‌ನಲ್ಲಿ, ಸ್ಥಳೀಯ ಪಂಚಾಯತ್‌ನ ನಲ್ಲತಣ್ಣಿ … Continued