2022ರ ನಂತರ ಮೊದಲ ಬಾರಿಗೆ 100 ದಾಟಿದ ಬಿಜೆಪಿ ರಾಜ್ಯಸಭಾ ಸದಸ್ಯರ ಸಂಖ್ಯೆ

ನವದೆಹಲಿ: ಸೆಪ್ಟೆಂಬರ್ 9 ರಂದು ನಡೆಯಲಿರುವ ಉಪರಾಷ್ಟ್ರಪತಿ ಚುನಾವಣೆಗೆ ಮುನ್ನ ಆಡಳಿತಾರೂಢ ಬಿಜೆಪಿಗೆ ಇನ್ನಷ್ಟು ಬಲ ನೀಡುವ ನಿಟ್ಟಿನಲ್ಲಿ, ಏಪ್ರಿಲ್ 2022ರ ನಂತರ ಮೊದಲ ಬಾರಿಗೆ ಪಕ್ಷವು ರಾಜ್ಯಸಭೆಯಲ್ಲಿ 100 ರ ಗಡಿ ದಾಟಿದೆ. ಮೂವರು ನಾಮನಿರ್ದೇಶಿತ ಸದಸ್ಯರು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಕಳೆದ ತಿಂಗಳು ರಾಜ್ಯಸಭಾ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ ಖ್ಯಾತ ವಕೀಲ ಉಜ್ವಲ … Continued

ಸ್ಟಾಲಿನ್ ಜೊತೆ ಬೆಳಗಿನ ವಾಕಿಂಗ್‌ ನಂತರ ಎನ್‌ ಡಿಎ ಜೊತೆ ಮೈತ್ರಿ ಕೊನೆಗೊಳಿಸಿದ ತಮಿಳುನಾಡು ಮಾಜಿ ಸಿಎಂ ಪನ್ನೀರಸೆಲ್ವಂ

ಚೆನ್ನೈ: ತಮಿಳುನಾಡು ಮಾಜಿ ಮುಖ್ಯಮಂತ್ರಿ ಮತ್ತು ಎಐಎಡಿಎಂಕೆಯಿಂದ ಹೊರಹಾಕಲ್ಪಟ್ಟ ನಾಯಕ ಓ ಪನ್ನೀರಸೆಲ್ವಂ (ಒಪಿಎಸ್) ಅವರು ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ಜೊತೆಗಿನ ಸಂಬಂಧ ಕಡಿದುಕೊಳ್ಳುವ ತಮ್ಮ ಬಣದ ನಿರ್ಧಾರವನ್ನು ಪ್ರಕಟಿಸಿದ್ದಾರೆ. ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರನ್ನು ಬೆಳಗಿನ ವಾಕಿಂಗ್‌ ಸಮಯದಲ್ಲಿ ಭೇಟಿಯಾದ ಸ್ವಲ್ಪ ಸಮಯದ ನಂತರ ಅವರಿಂದ ಈ ನಿರ್ಧಾರ ಹೊರಬಿದ್ದಿದೆ. … Continued

ಉಪರಾಷ್ಟ್ರಪತಿ ಚುನಾವಣೆಯಲ್ಲಿ ಸಂಖ್ಯೆಗಳ ಲೆಕ್ಕಾಚಾರ ಎನ್‌ಡಿಎಗೆ ಹೇಗೆ ಅನುಕೂಲಕರ..?

ನವದೆಹಲಿ: ಸೋಮವಾರ ಉಪರಾಷ್ಟ್ರಪತಿ ಸ್ಥಾನಕ್ಕೆ ಜಗದೀಪ ಧನಕರ ಅವರ ಅನಿರೀಕ್ಷಿತ ರಾಜೀನಾಮೆಯಿಂದ ಅನಿವಾರ್ಯವಾದ ಮುಂದಿನ ಉಪರಾಷ್ಟ್ರಪತಿಗಳ ಹುದ್ದೆಗೆ ನಡೆವ ಚುನಾವಣೆಯಲ್ಲಿ ಆಡಳಿತಾರೂಢ ಎನ್‌ಡಿಎ ಮೈತ್ರಿಕೂಟವು ಸಂಖ್ಯಾಬಲವನ್ನು ಹೊಂದಿದೆ. ಲೋಕಸಭೆ ಮತ್ತು ರಾಜ್ಯಸಭೆಯ ಸದಸ್ಯರು ಉಪರಾಷ್ಟ್ರಪತಿಗಳನ್ನು ಆಯ್ಕೆ ಮಾಡುತ್ತಾರೆ. ಅಲ್ಲಿ ಮೇಲ್ಮನೆಯ ನಾಮನಿರ್ದೇಶಿತ ಸದಸ್ಯರು ಸಹ ತಮ್ಮ ಮತ ಚಲಾಯಿಸಲು ಅರ್ಹರಾಗಿರುತ್ತಾರೆ. 543 ಸದಸ್ಯರ ಲೋಕಸಭೆಯಲ್ಲಿ ಒಂದು … Continued

ಉಪರಾಷ್ಟ್ರಪತಿ ಸ್ಥಾನಕ್ಕೆ ಜಗದೀಪ ಧನಕರ ಅನಿರೀಕ್ಷಿತ ರಾಜೀನಾಮೆ ನಂತರದ ವದಂತಿಗಳು

ನವದೆಹಲಿ : ಸೋಮವಾರದ ಅಚ್ಚರಿಯ ನಡೆಯಲ್ಲಿ, 74 ವರ್ಷ ವಯಸ್ಸಿನ ಉಪರಾಷ್ಟ್ರಪತಿ ಜಗದೀಪ ಧನಕರ ಆರೋಗ್ಯದ ಕಾಳಜಿಯನ್ನು ಉಲ್ಲೇಖಿಸಿ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಆದರೆ, ಅವರು ನೀಡಿದ ಈ ಕಾರಣವನ್ನು ಒಪ್ಪುವವರು ಕಡಿಮೆ. ಇದರ ಹಿಂದೆ ಇದಕ್ಕೂ ಮಿಗಿಲಾದ ಕಾರಣಗಳಿವೆ ಎಂದು ಅನೇಕರು ಭಾವಿಸುತ್ತಾರೆ. ಧನಕರ ಅವರ ಅಧಿಕಾರಾವಧಿಯಲ್ಲಿ ಆಗಾಗ್ಗೆ ಅವರ ಜೊತೆ ಘರ್ಷಣೆ … Continued

ಮಾಜಿ ಸಂಸದ ಅನಂತಕುಮಾರ ಹೆಗಡೆಗೆ ಜೀವ ಬೆದರಿಕೆ : ದೂರು ದಾಖಲು

ಶಿರಸಿ: ಉತ್ತರಕನ್ನಡದ ಮಾಜಿ ಸಂಸದ ಅನಂತಕುಮಾರ ಹೆಗಡೆಗೆ ಅಪರಿಚಿತ ವ್ಯಕ್ತಿಯೊಬ್ಬ ಇ-ಮೇಲ್ ಮೂಲಕ ಜೀವ ಬೆದರಿಕೆ ಹಾಕಿದ್ದು, ಈ ಸಂಬಂಧ ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ದೂರು ದಾಖಲಾಗಿದೆ. ಮಾಜಿ ಸಂಸದ ಅನಂತಕುಮಾರ ಹೆಗಡೆ ಅವರ ಆಪ್ತ ಕಾರ್ಯದರ್ಶಿ ಸುರೇಶ ಶೆಟ್ಟಿ ಅವರು ಬೆದರಿಕೆಯ ಇ ಮೇಲ್‌ ಬಂದಿದ್ದರ ಬಗ್ಗೆ ಶಿರಸಿ ಮಾರುಕಟ್ಟೆ ಪೊಲೀಸ್ ಠಾಣೆಯಲ್ಲಿ … Continued

ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ ವಿರುದ್ಧ ಅವಹೇಳನಕಾರಿ ಪದ ಬಳಕೆ ಆರೋಪ ; ಪರಿಷತ್‌ ಸದಸ್ಯ ರವಿಕುಮಾರಗೆ ನಿರೀಕ್ಷಣಾ ಜಾಮೀನು

ಬೆಂಗಳೂರು : ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ ಕುರಿತು ಅವಹೇಳನಕಾರಿಯಾಗಿ ಮಾತನಾಡಿದ ಆರೋಪ ಎದುರಿಸುತ್ತಿರುವ ವಿಧಾನ ಪರಿಷತ್ತಿನ ವಿಪಕ್ಷದ ಮುಖ್ಯ ಸಚೇತಕ ಎನ್ ರವಿಕುಮಾರ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಬುಧವಾರ ಷರತ್ತುಬದ್ಧ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಬಿಜೆಪಿ ವಿಧಾನ ಪರಿಷತ್‌ ಸದಸ್ಯರಾದ ರವಿಕುಮಾರ ಅವರು ಸಲ್ಲಿಸಿದ್ದ ಅರ್ಜಿಯನ್ನು ವಿಶೇಷ ನ್ಯಾಯಾಲಯದ … Continued

ವೀಡಿಯೊ..| ರಸ್ತೆ ಬೇಕಂದ್ರೆ ಗ್ಯಾರಂಟಿ ಯೋಜನೆಗಳು ಬಂದ್ ಆಗ್ತವೆ : ಸಿಎಂ ಆರ್ಥಿಕ ಸಲಹೆಗಾರ ರಾಯರೆಡ್ಡಿ ಹೇಳಿಕೆ ಚರ್ಚೆಗೆ ಗ್ರಾಸ

ಕೊಪ್ಪಳ: ”ಗ್ರಾಮೀಣ ಭಾಗದಲ್ಲಿ ರಸ್ತೆ ನಿರ್ಮಿಸಬೇಕೆಂದರೆ ಅನ್ನಭಾಗ್ಯ ಯೋಜನೆಯ ಅಕ್ಕಿ ಸೇರಿ ಎಲ್ಲ ಬಂದ್‌ ಆಗುತ್ತವೆ,” ಎಂದು ಮುಖ್ಯಮಂತ್ರಿ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಹೇಳಿಕೆ ನೀಡಿರುವುದು ತೀವ್ರ ಚರ್ಚೆಗೆ ಗ್ರಾಸವಾಗಿದೆ. ಜಿಲ್ಲೆಯ ಕುಕನೂರು ತಾಲೂಕಿನ ಗ್ರಾಮವೊಂದರಲ್ಲಿ ಶನಿವಾರ ನಡೆದ ಸರಕಾರಿ ಪ್ರೌಢಶಾಲೆ ಉದ್ಘಾಟನೆ ಕಾರ್ಯಕ್ರಮದಲ್ಲಿ ರೈತರೊಬ್ಬರು, ” ಮಹಿಳೆಯರಿಗೆ ಹಣ ಕೊಡ್ತೀರಿ, ಸೌಲಭ್ಯ ಕೊಡ್ತೀರಿ. … Continued

ದೇಶದಲ್ಲಿ ಮೊದಲ ಬಾರಿಗೆ ಜಾತಿಗಣತಿ ಕೈಗೊಂಡಿದ್ದು ಕಾಂಗ್ರೆಸ್ ಸರ್ಕಾರ ; ಬಿಜೆಪಿ ವಿರುದ್ಧ ವಸಂತ ಲದವಾ ವಾಗ್ದಾಳಿ

ಹುಬ್ಬಳ್ಳಿ : ಸ್ವಾತಂತ್ರ್ಯ ಬಂದ ನಂತರ ಮೊದಲ ಬಾರಿಗೆ ಜಾತಿಗಣತಿ ಕೈಗೊಂಡಿದ್ದು ಕಾಂಗ್ರೆಸ್ ಸರ್ಕಾರವೇ ಹೊರತು ಬಿಜೆಪಿ ಸರ್ಕಾರ ಅಲ್ಲ ಎಂದು ಕಾಂಗ್ರೆಸ್‌ ವಕ್ತಾರ ವಸಂತ ಲದವಾ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ೨೦೧೧ರಲ್ಲಿ ಭಾರತದ ಸಾಮಾಜಿಕ, ಆರ್ಥಿಕ ಜಾತಿ ಗಣತಿ ನಡೆಸಲಾಗಿದೆ. ೨೦೧೦ರಲ್ಲಿ ಸಂಸತ್ತಿನ ಉಭಯ … Continued

ಪಕ್ಷದ ರಾಜ್ಯಾಧ್ಯಕ್ಷರ ನೇಮಕ ವಿಚಾರದಲ್ಲಿ ತೆಲಂಗಾಣ ಬಿಜೆಪಿಯಲ್ಲಿ ಬಿರುಕು ; ಬಿಜೆಪಿಗೆ ಶಾಸಕ ಟಿ.ರಾಜಾ ಸಿಂಗ್ ರಾಜೀನಾಮೆ

ಹೈದರಾಬಾದ್‌ : ತೆಲಂಗಾಣ ಬಿಜೆಪಿಗೆ ಹಿನ್ನಡೆಯಾಗಿ, ರಾಜ್ಯದ ಗೋಶಮಹಲ್ ಶಾಸಕ ಟಿ ರಾಜಾ ಸಿಂಗ್ ಸೋಮವಾರ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ರಾಮಚಂದ್ರ ರಾವ್ ಅವರನ್ನು ತೆಲಂಗಾಣ ರಾಜ್ಯ ಬಿಜೆಪಿ ಅಧ್ಯಕ್ಷರನ್ನಾಗಿ ನೇಮಿಸಲಾಗುವುದು ಎಂಬ ಮಾಧ್ಯಮ ವರದಿಗಳ ಬಗ್ಗೆ ತೀವ್ರ ನಿರಾಶೆ ವ್ಯಕ್ತಪಡಿಸಿ ಅವರು ರಾಜೀನಾಮೆ ನೀಡಿದ್ದಾರೆ. ಕ್ರಿಮಿನಲ್ ವಕೀಲ ಮತ್ತು ತೆಲಂಗಾಣ ಬಿಜೆಪಿಯಲ್ಲಿ … Continued

ಹುಬ್ಬಳ್ಳಿ-ಧಾರವಾಡ ಪಾಲಿಕೆ ನೂತನ ಮೇಯರ್ ಆಗಿ ಜ್ಯೋತಿ ಪಾಟೀಲ, ಉಪಮೇಯರ್ ಆಗಿ ಸಂತೋಷ ಚವ್ಹಾಣ ಆಯ್ಕೆ

ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆಯ ಮೇಯರ್ ಆಗಿ ಜ್ಯೋತಿ ಪಾಟೀಲ ಆಯ್ಕೆಯಾಗಿದ್ದಾರೆ. ಹಾಗೂ ಉಪಮೇಯರ್‌ ಆಗಿ ಸಂತೋಷ ಚವ್ಹಾಣ ಆಯ್ಕೆಯಾಗಿದ್ದಾರೆ. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಯಲ್ಲಿ ಪಾಲಿಕೆ ಸದಸ್ಯರು, ಲೋಕಸಭಾ ಸದಸ್ಯರು, ಶಾಸಕರು ಮತ್ತು ವಿಧಾನ ಪರಿಷತ್ತು ಸದಸ್ಯರು ಸೇರಿ ಒಟ್ಟು 90 ಜನ ಮತದಾರರು ಇದ್ದು, ಇಂದು, ಸೋಮವಾರ ನಡೆದ ಮೇಯರ್ ಹಾಗೂ ಉಪಮೇಯರ್ … Continued