ಲೋಕಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆ-2024 ಮಂಡನೆ ; ಮಸೂದೆಯ ಪ್ರಮುಖ ಬದಲಾವಣೆ ಸೆಕ್ಷನ್ 40ರ ರದ್ದತಿ ; ಇತರ ಪ್ರಮುಖ ಅಂಶಗಳೆಂದರೆ…

ನವದೆಹಲಿ : ವಿಪಕ್ಷಗಳ ಆಕ್ಷೇಪ ಹಾಗೂ ಭಾರೀ ಗದ್ದಲದ ನಡುವೆ ವಕ್ಫ್ (ತಿದ್ದುಪಡಿ) ಮಸೂದೆ-2024 ಲೋಕಸಭೆಯಲ್ಲಿ ಬುಧವಾರ ಮಂಡನೆಯಾಗಿದೆ. ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರೆನ್‌ ರಿಜಿಜು ಲೋಕಸಭೆ ಕಲಾಪದ ಪ್ರಶ್ನೋತ್ತರ ಅವಧಿಯಲ್ಲಿ ಮಸೂದೆ ಮಂಡಿಸಿದರು. ವಕ್ಫ್ ಆಸ್ತಿಗಳ ನಿಯಂತ್ರಣಕ್ಕಾಗಿ 1995ರ ವಕ್ಫ್ ಕಾಯಿದೆಯನ್ನು ತಿದ್ದುಪಡಿ ಮಾಡುವ ಮಸೂದೆಯನ್ನು ಮೊದಲ ಬಾರಿಗೆ ಆಗಸ್ಟ್ 2024ರಲ್ಲಿ ಲೋಕಸಭೆಯಲ್ಲಿ … Continued

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳ ಕುರ್ಚಿಗಾಗಿ ಬಡಿದಾಡಿಕೊಂಡ ಬಿಜೆಪಿ ನಾಯಕರು….! ವೀಡಿಯೊ ವೈರಲ್‌

ಲಕ್ನೋ : ಮುಖ್ಯ ಅತಿಥಿಗಳ ಕುರ್ಚಿಗಾಗಿ ಬಿಜೆಪಿ ನಾಯಕರು ಹೊಡೆದಾಡಿಕೊಂಡ ಘಟನೆ ಉತ್ತರಪ್ರದೇಶದ ಉತ್ತರ ಪ್ರದೇಶದ ಮೊರಾದಾಬಾದ್‍ನ ಛಜಲತ್ ಬ್ಲಾಕ್‍ನಲ್ಲಿ ಗುರುವಾರ (ಮಾರ್ಚ್‌ 27) ನಡೆದಿದೆ. ಬಿಜೆಪಿ ಸರ್ಕಾರ ಎಂಟು ವರ್ಷಗಳನ್ನು ಪೂರೈಸಿದ ಸಂಭ್ರಮಾಚರಣೆ ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಮತ್ತು ಬ್ಲಾಕ್ ಅಧ್ಯಕ್ಷರ ನಡುವೆ ಮುಖ್ಯ ಅತಿಥಿಗಳ ಕುರ್ಚಿಗಾಗಿ ಜಗಳ ನಡೆದಿದ್ದು, ಈ ಜಗಳ ತಾರಕಕ್ಕೇರಿ … Continued

ಯತ್ನಾಳ ಉಚ್ಚಾಟನೆ ಆದೇಶ ಏ.10ರೊಳಗೆ ಹಿಂಪಡೆಯಿರಿ, ಇಲ್ಲದಿದ್ದರೆ ಪ್ರತಿಭಟನೆ : ಬಿಜೆಪಿಗೆ ಜಯಮೃತ್ಯುಂಜಯ ಸ್ವಾಮೀಜಿ ಎಚ್ಚರಿಕೆ

ಬೆಳಗಾವಿ: ಏಪ್ರಿಲ್‌ 10ರ ಒಳಗೆ ಬಸನಗೌಡ ಪಾಟೀಲ ಯತ್ನಾಳ​ ಅವರ ಉಚ್ಚಾಟನೆ ಮಾಡಿರುವ ಆದೇಶ ಹಿಂಪಡೆಯಬೇಕು. ಇಲ್ಲದಿದ್ದರೆ ಏಪ್ರಿಲ್‌ 13ರಂದು‌ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಕೂಡಲಸಂಗಮದ ಲಿಂಗಾಯತ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಬಿಜೆಪಿ ಹೈಕಮಾಂಡ್​ಗೆ ಎಚ್ಚರಿಕೆ ನೀಡಿದ್ದಾರೆ. ಬಿಜೆಪಿ ಶಿಸ್ತುಪಾಲನಾ ಸಮಿತಿ ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ​ ಅವರನ್ನು … Continued

ಸತ್ಯವಂತರಿಗಿದು ಕಾಲವಲ್ಲ…ದುಷ್ಟರಿಗೆ ಸುಭಿಕ್ಷ ಕಾಲ… : ಪಕ್ಷದಿಂದ ತಮ್ಮ ಉಚ್ಚಾಟಿಸಿದ್ದಕ್ಕೆ ಬಿಜೆಪಿಗೆ ಮಾರ್ಮಿಕವಾಗಿ ತಿವಿದ ಯತ್ನಾಳ

ಬೆಂಗಳೂರು: ಬಿಜೆಪಿಯಿಂದ ತಮ್ಮನ್ನು ಉಚ್ಚಾಟನೆ ಮಾಡಿರುವ ಬಗ್ಗೆ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಪುರಂದರ ದಾಸರ ಉಕ್ಕಿಯನ್ನು ಉಲ್ಲೇಖಿಸಿ ಬಿಜೆಪಿಗೆ ಮಾರ್ಮಿಕವಾಗಿ ಟಾಂಗ್‌ ನೀಡಿದ್ದಾರೆ. ಹೈ ಕಮಾಂಡ್‌ನಿಂದ ಉಚ್ಚಾಟನೆ ಆದೇಶ ಹೊರಬಿದ್ದ ನಂತರ ಪ್ರತಿಕ್ರಿಯಿಸಿರುವ ಅವರು, ಸತ್ಯವಂತರಿಗಿದು ಕಾಲವಲ್ಲ, ದುಷ್ಟಜನರಿಗೆ ಸುಭಿಕ್ಷಕಾಲ ಎಂದು ಪುರಂದರ ದಾಸರ ಹೇಳಿದ್ದಾರೆ. ಉಪಕಾರ ಮಾಡಿದರೆ ಅಪಕರಿಸುವ ಕಾಲ. ಸಕಲವು … Continued

ಬಿಜೆಪಿಯಿಂದ ಶಾಸಕ ಬಸನಗೌಡ ಪಾಟೀಲ ಯತ್ನಾಳ ಉಚ್ಚಾಟನೆ

ನವದೆಹಲಿ: ಬಿಜೆಪಿಯಿಂದ ಬಸನಗೌಡ ಪಾಟೀಲ ಯತ್ನಾಳ (Basanagouda Patil Yatnal) ಅವರನ್ನು ಉಚ್ಚಾಟನೆ ಮಾಡಲಾಗಿದೆ. ಶಿಸ್ತು ಸಮಿತಿ ನೀಡಿದ್ದ ಶೋಕಾಸ್‌ ನೋಟಿಸ್‌ಗೆ ಸರಿಯಾಗಿ ಉತ್ತರ ನೀಡದ ಕಾರಣ ಬಿಜೆಪಿ (BJP) ಹೈಕಮಾಂಡ್‌ ಈ ನಿರ್ಧಾರವನ್ನು ಕೈಗೊಂಡಿದ್ದು, ತಕ್ಷಣವೇ ಜಾರಿಗೆ ಬರುವಂತೆ 6 ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ. ಪಕ್ಷದ ಕೇಂದ್ರ ಶಿಸ್ತು ಸಮಿತಿಯು ಮಾರ್ಚ್ … Continued

ಪಕ್ಷದ ಶಿಸ್ತು ಉಲ್ಲಂಘನೆ ; ಶಿವರಾಮ ಹೆಬ್ಬಾರ, ಸೋಮಶೇಖರ ಸೇರಿ ರಾಜ್ಯದ ಐವರು ಬಿಜೆಪಿ ನಾಯಕರಿಗೆ ಹೈಕಮಾಂಡ್‌ ನೋಟಿಸ್‌

ನವದೆಹಲಿ: ಪಕ್ಷದ ಶಿಸ್ತು ಉಲ್ಲಂಘನೆ, ಪಕ್ಷದ ಇಮೇಜಿಗೆ ಧಕ್ಕೆ ಆಗುವಂತೆ ಬಹಿರಂಗವಾಗಿ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಕರ್ನಾಟಕದ ಐವರು ಬಿಜೆಪಿ ನಾಯಕರಿಗೆ ಹೈಕಮಾಂಡ್ ನೋಟಿಸ್ ಜಾರಿ ಮಾಡಿದೆ. ಬಿಜೆಪಿಯ ಕೇಂದ್ರ ಶಿಸ್ತು ಸಮಿತಿಯು ಯಲ್ಲಾಪುರ ಶಾಸಕ ಶಿವರಾಮ ಹೆಬ್ಬಾರ, ಯಶವಂತಪುರ ಶಾಸಕ ಎಸ್‌.ಟಿ. ಸೋಮಶೇಖ‌ರ ಸೇರಿದಂತೆ ಐವರಿಗೆ ಕಾರಣ ಕೇಳಿ ನೋಟಿಸ್ ನೀಡಿದೆ. ಸಾರ್ವಜನಿಕ ವೇದಿಕೆಗಳಲ್ಲಿ … Continued

ರಂಜಾನ್‌ | ‘ಸೌಗತ್-ಎ-ಮೋದಿ’ ಅಭಿಯಾನದಡಿ 32 ಲಕ್ಷ ಬಡ ಮುಸ್ಲಿಂ ಕುಟುಂಬಗಳಿಗೆ ಬಿಜೆಪಿಯಿಂದ ಈದ್ ಕಿಟ್ ವಿತರಣೆ ; ಅದರಲ್ಲಿ ಏನೇನಿದೆ..?

ನವದೆಹಲಿ : ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಅಲ್ಪಸಂಖ್ಯಾತ ಮೋರ್ಚಾವು ‘ಸೌಗತ್-ಎ-ಮೋದಿ’ ಅಭಿಯಾನ ಆರಂಭಿಸುತ್ತಿದ್ದು, ಈದ್‌ಗೆ ಮುಂಚಿತವಾಗಿ ದೇಶಾದ್ಯಂತ 32 ಲಕ್ಷ ಹಿಂದುಳಿದ ಮುಸ್ಲಿಮರಿಗೆ ವಿಶೇಷ ಕಿಟ್‌ಗಳನ್ನು ವಿತರಿಸಲು ಮುಂದಾಗಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರ ಮಾರ್ಗದರ್ಶನದಲ್ಲಿ ಮಂಗಳವಾರ ದೆಹಲಿಯ ನಿಜಾಮುದ್ದೀನ್‌ನಿಂದ ಪ್ರಾರಂಭವಾದ ಈ ‘ಸೌಗತ್-ಎ-ಮೋದಿ’ ಅಭಿಯಾನವು ಬಡ ಮುಸ್ಲಿಂ ಕುಟುಂಬಗಳು ಯಾವುದೇ … Continued

ಕೇರಳ ಬಿಜೆಪಿಯ ನೂತನ ಅಧ್ಯಕ್ಷರಾಗಿ ಮಾಜಿ ಸಚಿವ ರಾಜೀವ ಚಂದ್ರಶೇಖರ ಆಯ್ಕೆ

ತಿರುವನಂತಪುರಂ : ಭಾರತೀಯ ಜನತಾ ಪಕ್ಷದ (ಬಿಜೆಪಿ) ಕೇರಳ ರಾಜ್ಯ ಘಟಕದ ನೂತನ ಅಧ್ಯಕ್ಷರಾಗಿ ಕೇಂದ್ರದ ಮಾಜಿ ಐಟಿ ಸಚಿವ ಮತ್ತು ತಂತ್ರಜ್ಞ-ರಾಜಕಾರಣಿ ರಾಜೀವ ಚಂದ್ರಶೇಖರ ಸೋಮವಾರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅವರು ಸೋಮವಾರ ಬಿಜೆಪಿಯ ರಾಜ್ಯಾಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಬಿಜೆಪಿ ರಾಜ್ಯ ಪರಿಷತ್ ಸಭೆಯಲ್ಲಿ ಪಕ್ಷದ ಕೇಂದ್ರ ವೀಕ್ಷಕ ಪ್ರಹ್ಲಾದ ಜೋಶಿ ರಾಜ್ಯಾಧ್ಯಕ್ಷ … Continued

ಕರ್ನಾಟಕದ ಹನಿ ಟ್ರ್ಯಾಪ್ ಪ್ರಕರಣ : ಸುಪ್ರೀಂ ಕೋರ್ಟ್‌ನಲ್ಲಿ ಪಿಐಎಲ್

ನವದೆಹಲಿ: ದೇಶಾದ್ಯಂತ ಸಂಚಲನ ಮೂಡಿಸಿರುವ ಕರ್ನಾಟಕದಲ್ಲಿನ ಹಿರಿಯ ಸಚಿವರು, ಶಾಸಕರು, ರಾಜಕೀಯ ನಾಯಕರು ಸೇರಿದಂತೆ 48 ಜನರನ್ನು ಹನಿ ಟ್ರ್ಯಾಪ್ ಮಾಡಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ (ಪಿಐಎಲ್‌) ಸಲ್ಲಿಸಲಾಗಿದೆ. ಅರ್ಜಿಯನ್ನು ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸಂಜೀವ ಖನ್ನಾ ಅವರೆದುರು ಸೋಮವಾರ ಉಲ್ಲೇಖಿಸಲಾಯಿತು. ಪ್ರಕರಣವನ್ನು ನಾಳೆ ಪಟ್ಟಿ ಮಾಡಲಾಗುವುದು … Continued

ಪತ್ನಿ, ಮೂವರು ಮಕ್ಕಳ ಮೇಲೆ ಗುಂಡು ಹಾರಿಸಿದ ಬಿಜೆಪಿ ನಾಯಕ, ಇಬ್ಬರು ಮಕ್ಕಳು ಸಾವು

ಸಹರಾನ್ಪುರ: ಉತ್ತರ ಪ್ರದೇಶದ ಸಹರಾನಪುರ ಜಿಲ್ಲೆಯಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ ಬಿಜೆಪಿ ಮುಖಂಡ ಯೋಗೇಶ ರೋಹಿಲ್ಲಾ ಅವರು ಪತ್ನಿ ಮತ್ತು ಮೂವರು ಮಕ್ಕಳಿಗೆ ಗುಂಡು ಹಾರಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಘಟನೆ ಸಹರಾನಪುರ ಜಿಲ್ಲೆಯ ಗಂಗೋಹ ಪೊಲೀಸ್ ಠಾಣೆ ವ್ಯಾಪ್ತಿಯ ಸಂಗತೇಡ ಗ್ರಾಮದಲ್ಲಿ ನಡೆದಿದ್ದು, ಗುಂಡಿನ ದಾಳಿಯಲ್ಲಿ ಅವರ ಮಗ ಮತ್ತು 11 ವರ್ಷದ … Continued