ಎನ್‌ಡಿಎ ಅಭ್ಯರ್ಥಿ ವಿರುದ್ಧ ಸ್ಪರ್ಧೆ : ಬಿಜೆಪಿಯಿಂದ ಭೋಜಪುರಿ ನಟನ ಉಚ್ಛಾಟನೆ

ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿಯ ವಿರುದ್ಧ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿರುವ ಭೋಜಪುರಿ ನಟ ಮತ್ತು ಗಾಯಕ ಪವನ್ ಸಿಂಗ್ ಅವರನ್ನು ಭಾರತೀಯ ಜನತಾ ಪಕ್ಷ (ಬಿಜೆಪಿ) ಪಕ್ಷದಿಂದ ಬುಧವಾರ ಉಚ್ಛಾಟಿಸಿದೆ. ಈ ಹಿಂದೆ ಪಶ್ಚಿಮ ಬಂಗಾಳದ ಅಸನ್ಸೋಲ್‌ ಕ್ಷೇತ್ರದಲ್ಲಿ ಅವರಿಗೆ ಬಿಜೆಪಿ ಟಿಕೆಟ್ ನೀಡಿತ್ತು. ಆದರೆ ಅವರು ಅಸನ್ಸೋಲ್‌ ಕ್ಷೇತ್ರದಲ್ಲಿ ಸ್ಪರ್ಧಿಸುವುದರಿಂದ ಹಿಂದೆ … Continued

ಚುನಾವಣೆಯಲ್ಲಿ ಬಿಜೆಪಿ ಸೋಲಿಸಲು ವಿಪಕ್ಷಗಳು 3 ಅವಕಾಶಗಳನ್ನು ಕಳೆದುಕೊಂಡಿವೆ…ಆದರೆ ಈಗ…: ರಾಜಕೀಯ ತಂತ್ರಜ್ಞ ಪ್ರಶಾಂತ ಕಿಶೋರ

ನವದೆಹಲಿ : 2024ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ನೇತೃತ್ವದ ವಿಪಕ್ಷಗಳ ಇಂಡಿಯಾ ಮೈತ್ರಿಕೂಟವು ಬಿಜೆಪಿಯನ್ನು ಸೋಲಿಸುವ ಸಾಧ್ಯತೆಗಳನ್ನು ತಳ್ಳಿಹಾಕಿದ ತಂತ್ರಗಾರ ಪ್ರಶಾಂತ ಕಿಶೋರ ಅವರು, ಪ್ರಧಾನಿ ಮೋದಿ ಸರ್ಕಾರ ಹಿನ್ನಡೆಯ ಸ್ಥಿತಿಯಲ್ಲಿದ್ದಾಗ ವಿಪಕ್ಷಗಳ ಒಕ್ಕೂಟ ಅದರ ಲಾಭ ಪಡೆಯಲು ಅನೇಕ ಬಾರಿ ವಿಫಲವಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ರಾಮಮಂದಿರ (ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಶಂಕುಸ್ಥಾಪನೆ) ಬಗ್ಗೆ ನಿರ್ದಿಷ್ಟವಾಗಿ … Continued

“ನೀವು ಮತವನ್ನೂ ಹಾಕಿಲ್ಲ…”: ತಮ್ಮದೇ ಪಕ್ಷದ ಸಂಸದನಿಗೆ ಶೋಕಾಸ್ ನೋಟಿಸ್ ನೀಡಿದ ಬಿಜೆಪಿ..

ನವದೆಹಲಿ: ಕೇಂದ್ರದ ಮಾಜಿ ಸಚಿವ ಹಾಗೂ ಸಂಸದ ಜಯಂತ ಸಿನ್ಹಾ ಅವರು ಸೋಮವಾರ ಮತದಾನ ಮಾಡದೇ ಇದ್ದ ಹಿನ್ನೆಲೆಯಲ್ಲಿ ಬಿಜೆಪಿ ಅವರ ವಿರುದ್ಧ ಕ್ರಮಕ್ಕೆ ಮುಂದಾಗಿದೆ. ಜಾರ್ಖಂಡ್‌ನ ಹಜಾರಿಬಾಗ್ ಕ್ಷೇತ್ರದಿಂದ ಅವರ ಬದಲಿಗೆ ಮನೀಶ ಜೈಸ್ವಾಲ್ ಅವರಿಗೆ ಟಿಕೆಟ್‌ ಘೋಷಿಸಿದಾಗಿನಿಂದ ಅವರು “ಸಂಘಟನಾ ಕೆಲಸ ಮತ್ತು ಚುನಾವಣಾ ಪ್ರಚಾರ” ದಲ್ಲಿ ಭಾಗವಹಿಸುತ್ತಿಲ್ಲ ಎಂದು ಆರೋಪಿಸಿ ಪಕ್ಷವು … Continued

ವೀಡಿಯೊ..: ಮುಸ್ಲಿಂ ಮೀಸಲಾತಿ ಬಗ್ಗೆ ಕಾಂಗ್ರೆಸ್‌ ವಿರುದ್ಧ ಮತ್ತೊಮ್ಮೆ ವಾಗ್ದಾಳಿ ನಡೆಸಿದ ಮೋದಿ : ರಾಹುಲ್ ಗಾಂಧಿ ವೈರಲ್ ವೀಡಿಯೊ ಉಲ್ಲೇಖ

ಪಶ್ಚಿಮ ಬಂಗಾಳದ ಜಾರ್‌ಗ್ರಾಮದಲ್ಲಿ ಸೋಮವಾರ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಮುಸ್ಲಿಮರಿಗೆ ಮೀಸಲಾತಿ ನೀಡುವ ಸಲುವಾಗಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿಯನ್ನು ಕಸಿದುಕೊಳ್ಳಲು ಕಾಂಗ್ರೆಸ್ ಉದ್ದೇಶಿಸಿದೆ ಎಂದು ಆರೋಪಿಸಿದರು. ಕಾಂಗ್ರೆಸ್‌ ಪಕ್ಷವು ಇನ್ನೂ ಮುಸ್ಲಿಂ ಲೀಗ್‌ನ ಚಿಂತನೆ ಹೊಂದಿರುವ ಕೋಮುವಾದಿ ಪಕ್ಷವಾಗಿದೆ ಎಂದು ಪ್ರಧಾನಿ ಆರೋಪಿಸಿದರು. “ನನ್ನ ಇತ್ತೀಚಿನ ಸಂದರ್ಶನಗಳಲ್ಲಿ … Continued

ಪೆನ್‌ಡ್ರೈವ್ ಕೇಸ್‌ನಲ್ಲಿ ಎಚ್‌.ಡಿ. ಕುಮಾರಸ್ವಾಮಿ ಹೆಸರು ಹೇಳಲು ನನಗೆ 100 ಕೋಟಿ ರೂ. ಆಫರ್ ನೀಡಿದ್ದ ಡಿ.ಕೆ.ಶಿವಕುಮಾರ : ದೇವರಾಜೇ ಗೌಡ ಸ್ಫೋಟಕ ಹೇಳಿಕೆ

ಹಾಸನ : ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೊ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಈಗ ಪ್ರಕರಣವೊಂದರಲ್ಲಿ ಪೊಲೀಸರ ವಶದಲ್ಲಿರುವ ವಕೀಲ ದೇವರಾಜೇ ಗೌಡ ಅವರು ಸ್ಫೋಟಕ ಹೇಳಿಕೆ ನೀಡಿದ್ದಾರೆ. ಅಶ್ಲೀಲ ವೀಡಿಯೊಗಳಿರುವ ಪೆನ್‌‌ಡ್ರೈವ್ ಹಂಚಿಕೆಯನ್ನು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರ ಸೂಚನೆಯಂತೆ ಮಾಡಿದ್ದೇನೆ ಎಂದು ಹೇಳಿದರೆ 100 ಕೋಟಿ ರೂಪಾಯಿ ಕೊಡುವುದಾಗಿ … Continued

ವೀಡಿಯೊ..| ಚುನಾವಣೆ ಪ್ರಚಾರದ ವೇಳೆ ಕಾಂಗ್ರೆಸ್ ಅಭ್ಯರ್ಥಿ ಕನ್ನಯ್ಯಕುಮಾರಗೆ ಕಪಾಳಮೋಕ್ಷ

ನವದೆಹಲಿ: ಈಶಾನ್ಯ ದೆಹಲಿಯ ಕಾಂಗ್ರೆಸ್ ಅಭ್ಯರ್ಥಿ ಕನ್ಹಯ್ಯಕುಮಾರ ಅವರು ಶುಕ್ರವಾರ ಮುಂಬರುವ ಲೋಕಸಭೆ ಚುನಾವಣೆ 2024 ರ ಪ್ರಚಾರ ಮಾಡುತ್ತಿದ್ದಾಗ ಯುವಕನೊಬ್ಬ ಅವರಿಗೆ ಕಪಾಳಮೋಕ್ಷ ಮಾಡಿದ ಘಟನೆ ನಡೆದಿದೆ. ಈ ಘಟನೆಯ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಮೂಲಗಳ ಪ್ರಕಾರ ಈ ಸಂಬಂಧ ಇಬ್ಬರು ಆರೋಪಿಗಳನ್ನು ಗಾಜಿಯಾಬಾದ್ ಪೊಲೀಸರು ಬಂಧಿಸಿದ್ದಾರೆ. ಕನ್ನಯ್ಯಕುಮಾರ ಅವರಿಗೆ ಕಪಾಳಮೋಕ್ಷ … Continued

ಪ್ರಧಾನಿಯವರು ಪತ್ರಿಕಾಗೋಷ್ಠಿಗಳನ್ನು ಏಕೆ ನಡೆಸುವುದಿಲ್ಲ? : ಹೆಚ್ಚು ಸಲ ಕೇಳಿದ ಪ್ರಶ್ನೆಗೆ ಕೊನೆಗೂ ಉತ್ತರಿಸಿದ ನರೇಂದ್ರ ಮೋದಿ

ನವದೆಹಲಿ:  ಗುಜರಾತ್ ಮುಖ್ಯಮಂತ್ರಿಯಾಗಿದ್ದ ಸಮಯಕ್ಕೆ ಹೋಲಿಸಿದರೆ ಈಗ ಏಕೆ ಪತ್ರಿಕಾಗೋಷ್ಠಿಗಳನ್ನು ನಡೆಸುವುದಿಲ್ಲ ಮತ್ತು ಏಕೆ ಪತ್ರಿಕಾ ಸಂದರ್ಶನಗಳನ್ನು ನೀಡುವುದಿಲ್ಲ ಎಂದು ಕೇಳಿದ ಪ್ರಶ್ನೆಗೆ ಪ್ರಧಾನಿ ಮೋದಿFront-lead  ಉತ್ತರಿಸಿದ್ದಾರೆ. ಮಾಧ್ಯಮಗಳ ಸ್ವರೂಪ ಬದಲಾಗಿದೆ ಮತ್ತು ಮಾಧ್ಯಮಗಳು ಈಗ ತಟಸ್ಥ ನಿಲುವಿನ ಸಂಸ್ಥೆಯಾಗಿ ಉಳಿದಿಲ್ಲ ಎಂದು ಹೇಳುವ ಮೂಲಕ ಪ್ರಧಾನಿ ಮೋದಿ ಅವರು ತಾವು ಏಕೆ ಪತ್ರಿಕಾಗೋಷ್ಠಿಯನ್ನು ನಡೆಸುವುದಿಲ್ಲ … Continued

ಬಿಜೆಪಿ 300ರ ಆಸುಪಾಸು ಸ್ಥಾನ ಪಡೆಯಬಹದು; ಬಿಜೆಪಿ ಸಂಖ್ಯೆ ಕುಸಿಯುವ ಗ್ರೌಂಡ್ ರಿಯಾಲಿಟಿ ನನಗೆ ಕಾಣುತ್ತಿಲ್ಲ : ರಾಜಕೀಯ ತಂತ್ರಜ್ಞ ಪ್ರಶಾಂತ ಕಿಶೋರ

ನವದೆಹಲಿ :  ರಾಜಕೀಯ ವಿಶ್ಲೇಷಕ ಪ್ರಶಾಂತ ಕಿಶೋರ ಅವರು ಇತ್ತೀಚಿನ ಸಂದರ್ಶನವೊಂದರಲ್ಲಿ ಭಾರತೀಯ ಜನತಾ ಪಕ್ಷವು 2024 ರ ಲೋಕಸಭಾ ಚುನಾವಣೆಯಲ್ಲಿ 300ರ ಆಸುಪಾಸು ಸೀಟುಗಳನ್ನು ಗೆಲ್ಲಲಿದೆ ಎಂದು ಹೇಳಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಸ್ಥಾನ ಗೆಲ್ಲುವುದರಲ್ಲಿ ಯಾವುದೇ ಅರ್ಥಪೂರ್ಣ ಕುಸಿತದ ಸಾಧ್ಯತೆಯಿಲ್ಲ ಎಂದು ಅವರು ಹೇಳಿದ್ದಾರೆ. “ಎಲ್ಲ ಟೀಕೆಗಳು ಮತ್ತು ಚರ್ಚೆಗಳ ನಂತರ, ಭಾರತದ … Continued

ಬಿಜೆಪಿ ಹಿರಿಯ ನಾಯಕ- ಬಿಹಾರದ ಮಾಜಿ ಉಪಮುಖ್ಯಮಂತ್ರಿ ಸುಶೀಲಕುಮಾರ ಮೋದಿ ನಿಧನ

ನವದೆಹಲಿ: ಬಿಜೆಪಿಯ ಹಿರಿಯ ನಾಯಕ ಮತ್ತು ಬಿಹಾರದ ಮಾಜಿ ಉಪಮುಖ್ಯಮಂತ್ರಿ ಸುಶೀಲಕುಮಾರ ಮೋದಿ ಅವರು ಸೋಮವಾರ ಸಂಜೆ ದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ(ಏಮ್ಸ್‌)ಯಲ್ಲಿ ನಿಧನರಾದರು. 72 ವರ್ಷದ ಅವರು ಕ್ಯಾನ್ಸರ್‌ನಿಂದ ಬಳಲುತ್ತಿದ್ದು, ಕಳೆದ ಒಂದು ತಿಂಗಳಿನಿಂದ ಏಮ್ಸ್‌ನ ತೀವ್ರ ನಿಗಾ ಘಟಕದಲ್ಲಿ ದಾಖಲಾಗಿದ್ದರು. ಒಂದು ಕಾಲದಲ್ಲಿ ಬಿಹಾರದಲ್ಲಿ ಬಿಜೆಪಿಯ ಚಿರಪರಿಚಿತ ಮುಖವಾಗಿದ್ದ ಧೀಮಂತ … Continued

ವಿಧಾನ ಪರಿಷತ್ ಚುನಾವಣೆ : ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ; ಬಿಜೆಪಿ ಮಾಜಿ ಶಾಸಕ ರಘುಪತಿ ಭಟ್‌

ಉಡುಪಿ : ವಿಧಾನ ಪರಿಷತ್‌ ಚುನಾವಣೆಯಲ್ಲಿ ನೈರುತ್ಯ ಪದವೀಧರ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಟಿಕೆಟ್ ಆಕಾಂಕ್ಷಿಯಾಗಿದ್ದ ಬಿಜೆಪಿ ಮಾಜಿ ಶಾಸಕ ರಘುಪತಿ ಭಟ್ ತೀರ್ಮಾನಿಸಿದ್ದಾರೆ. ನೈರುತ್ಯ ಪದವೀಧರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧರಿಸಿದ್ದೇನೆ ಎಂದು ಅವರು ಕರಂಬಳ್ಳಿಯ ತಮ್ಮ ನಿವಾಸದಲ್ಲಿ ಮಾಧ್ಯಮದವರಿಗೆ ತಿಳಿಸಿದ್ದಾರೆ. ನಾನು ಬಿಜೆಪಿ ಕಾರ್ಯಕರ್ತರ ಪ್ರತಿನಿಧಿಯಾಗಿ ಸ್ಪರ್ಧೆ ಮಾಡುತ್ತೇನೆ. ಸೋತರೂ … Continued