ʼ ನಾವು ಗೌತಮಿ ಪರವಾಗಿ ಇದ್ದೇವೆ ‘: ನಟಿಯ ರಾಜೀನಾಮೆ ನಂತರ ತಮಿಳುನಾಡು ಬಿಜೆಪಿ ಮುಖ್ಯಸ್ಥರ ಹೇಳಿಕೆ

ಚೆನ್ನೈ: ʼಬೆಂಬಲದ ಕೊರತೆʼಯನ್ನು ಉಲ್ಲೇಖಿಸಿ ಖ್ಯಾತ ನಟಿ ಗೌತಮಿ ತಡಿಮಲ್ಲ ಅವರು ಬಿಜೆಪಿಗೆ ರಾಜೀನಾಮೆ ನೀಡಿದ ಕೆಲವೇ ಗಂಟೆಗಳ ನಂತರ, ಬಿಜೆಪಿಯ ತಮಿಳುನಾಡು ಘಟಕದ ಅಧ್ಯಕ್ಷ ಕೆ.ಅಣ್ಣಾಮಲೈ ಅವರು ತಪ್ಪು ತಿಳುವಳಿಕೆಯಿಂದಾಗಿ ಹೀಗಾಗಿದೆ ಮತ್ತು ಪಕ್ಷವು ನಿಜವಾಗಿ ನಟಿ ಗೌತಮಿ ಅವರ ಪರವಾಗಿದೆ ಎಂದು ಹೇಳಿದ್ದಾರೆ. ಶುಕ್ರವಾರ, ಗೌತಮಿ ಅವರು ಬಿಜೆಪಿಯೊಂದಿಗಿನ ತನ್ನ 25 ವರ್ಷಗಳ … Continued

ಛತ್ತೀಸ್‌ಗಢ ವಿಧಾನಸಭಾ ಚುನಾವಣೆ : ಇಂಡಿಯಾ ಟಿವಿ-ಸಿಎನ್‌ಎಕ್ಸ್ ಸಮೀಕ್ಷೆ, ಗೆಲ್ಲುವ ಸಾಧ್ಯತೆ ಕಾಂಗ್ರೆಸ್ಸಿಗೋ..? ಬಿಜೆಪಿಗೋ..?

ಮುಂದಿನ ತಿಂಗಳು ನಡೆಯಲಿರುವ ಛತ್ತೀಸ್‌ಗಢ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸರಳ ಬಹುಮತದೊಂದಿಗೆ ಅಧಿಕಾರವನ್ನು ಉಳಿಸಿಕೊಳ್ಳಲಿದೆ ಎಂದು ಇಂಡಿಯಾ ಟಿವಿ-ಸಿಎನ್‌ಎಕ್ಸ್ ಸಮೀಕ್ಷೆಯಲ್ಲಿ ಕಂಡುಬಂದಿದೆ. ಛತ್ತೀಸ್‌ಗಢ ವಿಧಾನಸಭೆಯ 90 ವಿಧಾನಸಭಾ ಕ್ಷೇತ್ರಗಳಲ್ಲಿ ಐದು ವರ್ಷಗಳ ಹಿಂದೆ ಗೆದ್ದಿದ್ದ 68 ಸ್ಥಾನಗಳಿಗೆ ಹೋಲಿಸಿದರೆ ಕಾಂಗ್ರೆಸ್ 50 ಸ್ಥಾನಗಳಿಗೆ ಕುಸಿಯಲಿದೆ ಎಂದು ಟಿವಿ-ಸಿಎನ್‌ಎಕ್ಸ್ ಅಭಿಪ್ರಾಯ ಸಂಗ್ರಹದ ಪ್ರಕ್ಷೇಪಗಳು ತೋರಿಸಿವೆ. ಪ್ರಮುಖ ವಿರೋಧ … Continued

‘ನನಗೆ ಬೆಂಬಲವಿಲ್ಲ ಮಾತ್ರವಲ್ಲ…’: 25 ವರ್ಷಗಳ ನಂತರ ಬಿಜೆಪಿಗೆ ನಟಿ ಗೌತಮಿ ರಾಜೀನಾಮೆ

ಚೆನ್ನೈ: ತಮ್ಮ ಆಸ್ತಿ ಕಬಳಿಸಿದ ವ್ಯಕ್ತಿಗೆ ಪಕ್ಷದ ಹಿರಿಯರು ಸಹಾಯ ಮಾಡುತ್ತಿದ್ದಾರೆ ಎಂದು ಆರೋಪಿಸಿ ನಟಿ ಗೌತಮಿ ಬಿಜೆಪಿಗೆ ರಾಜೀನಾಮೆ ನೀಡಿದ್ದಾರೆ. ಗೌತಮಿ ಅವರು ತಮ್ಮ ದುಸ್ಥಿತಿಯನ್ನು ‘X’ ನಲ್ಲಿ ತಿಳಿಸಿದ್ದಾರೆ, ತಾನು ಕಳೆದ 25 ವರ್ಷಗಳಿಂದ ಬಿಜೆಪಿಯ ಸದಸ್ಯನಾಗಿದ್ದೆ ಮತ್ತು ಪ್ರಾಮಾಣಿಕ ಬದ್ಧತೆಯಿಂದ ಕೆಲಸ ಮಾಡಿದ್ದೇನೆ ಎಂದು ಅವರು ಹೇಳಿದ್ದಾರೆ. ಪಕ್ಷದಿಂದ ಬೆಂಬಲದ ಕೊರತೆಯನ್ನು … Continued

ಮಧ್ಯಪ್ರದೇಶ ವಿಧಾನಸಭೆ ಚುನಾವಣೆ 2023 : ಇಂಡಿಯಾ ಟಿವಿ-ಸಿಎನ್‌ಎಕ್ಸ್ ಸಮೀಕ್ಷೆ ; ಬಿಜೆಪಿ-ಕಾಂಗ್ರೆಸ್‌ ಮಧ್ಯೆ ತುರುಸಿನ ಸ್ಪರ್ಧೆ, ಮುಂದಿರುವವರು ಯಾರು..?

230 ಸದಸ್ಯ ಬಲದ ಮಧ್ಯಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಕಳೆದ ಬಾರಿ ಗೆದ್ದಿದ್ದ 109 ಸ್ಥಾನಗಳಿಗೆ ಹೋಲಿಸಿದರೆ ಬಿಜೆಪಿ ಈ ಬಾರಿ 115 ಸ್ಥಾನಗಳನ್ನು ಗೆಲ್ಲಬಹುದು ಎಂದು ಇಂಡಿಯಾ ಟಿವಿ-ಸಿಎನ್‌ಎಕ್ಸ್‌ ಸಮೀಕ್ಷೆಯ ಪ್ರಕ್ಷೇಪಗಳು ತೋರಿಸಿವೆ. ಕಳೆದ ಚುನಾವಣೆಯಲ್ಲಿ ಗೆದ್ದಿದ್ದ 114 ಸ್ಥಾನಗಳಿಗೆ ಹೋಲಿಸಿದರೆ ಪ್ರಮುಖ ವಿರೋಧ ಪಕ್ಷ ಕಾಂಗ್ರೆಸ್ ಈ ಬಾರಿ 110 ಸ್ಥಾನಗಳನ್ನು ಗೆಲ್ಲಬಹುದು ಎಂದು … Continued

ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ತನಿಖೆಗೆ ಕೋರಿ ʼಲೋಕಪಾಲʼಕ್ಕೆ ಪತ್ರ ಬರೆದ ಬಿಜೆಪಿ ಸಂಸದ

ನವದೆಹಲಿ: ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ಅವರು ಉದ್ಯಮಿಯೊಬ್ಬರಿಂದ “ನಗದು ಮತ್ತು ಉಡುಗೊರೆಗಳಿಗೆ ಬದಲಾಗಿ ಸಂಸತ್ತಿನಲ್ಲಿ ಪ್ರಶ್ನೆಗಳನ್ನು ಕೇಳಿದ್ದಾರೆ” ಎಂದು ಆರೋಪಿಸಿದ ನಂತರ, ಬಿಜೆಪಿ ಸಂಸದ ನಿಶಿಕಾಂತ ದುಬೆ ಈಗ ಅವರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದಾರೆ. ಶನಿವಾರ, ಅವರು ಭ್ರಷ್ಟಾಚಾರ ನಿಗ್ರಹ ಪ್ರಾಧಿಕಾರವಾದ ಲೋಕಪಾಲಕ್ಕೆ ತೆರಳಿ, “ನಗದು ಮತ್ತು ಉಡುಗೊರೆಗಳಿಗೆ ಬದಲಾಗಿ ಸಂಸತ್ತಿನಲ್ಲಿ ಪ್ರಶ್ನೆಗಳನ್ನು … Continued

ಸಂಸದೆ ಮಹುವಾ ಮೊಯಿತ್ರಾ ಭಾರತದಲ್ಲಿದ್ದಾಗ ದುಬೈನಲ್ಲಿ ಅವರ ಸಂಸದೀಯ ಲಾಗಿನ್ ಐಡಿ ಬಳಸಲಾಗಿದೆ : ಬಿಜೆಪಿ ಸಂಸದ ನಿಶಿಕಾಂತ ದುಬೆ ಆರೋಪ

ನವದೆಹಲಿ : ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಸಂಸತ್ತಿನಲ್ಲಿ ‘ಪ್ರಶ್ನೆಗಾಗಿ ಹಣ’ದ ಗಂಭೀರ ಆರೋಪದ ನಡುವೆಯೇ, ಲೋಕಸಭೆ ಸದಸ್ಯ ನಿಶಿಕಾಂತ ದುಬೆ ಅವರು ಈಗ ಮತ್ತೊಂದು ಆರೋಪ ಮಾಡಿದ್ದಾರೆ. ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಭಾರತದಲ್ಲಿದ್ದಾಗ ದುಬೈನಲ್ಲಿ ಅವರ ʼಸಂಸದೀಯ ಲಾಗಿನ್‌ ಐಡಿʼಯನ್ನು ಬಳಸಲಾಗಿದೆ ಎಂದು ಶನಿವಾರ ಆರೋಪಿಸಿದ್ದಾರೆ. ರಾಷ್ಟ್ರೀಯ ಮಾಹಿತಿ ಕೇಂದ್ರ (ಎನ್‌ಐಸಿ) … Continued

ರಾಜಸ್ಥಾನ ವಿಧಾನಸಭೆ ಚುನಾವಣೆ : ಇಂಡಿಯಾ ಟಿವಿ-ಸಿಎನ್‌ಎಕ್ಸ್ ಸಮೀಕ್ಷೆ ; ಬಿಜೆಪಿ-ಕಾಂಗ್ರಸ್ಸಿನಲ್ಲಿ ಯಾರಿಗೆ ಸಿಗಲಿದೆ ಬಹುಮತ..?

ಮುಂದಿನ ತಿಂಗಳು ನಡೆಯಲಿರುವ ರಾಜಸ್ಥಾನ ವಿಧಾನಸಭೆ ಚುನಾವಣೆಯಲ್ಲಿ ಸಂಪೂರ್ಣ ಬಹುಮತದೊಂದಿಗೆ ಭಾರತೀಯ ಜನತಾ ಪಕ್ಷವು (ಬಿಜೆಪಿ) ಈ ಬಾರಿ ಅಧಿಕಾರಕ್ಕೆ ಬರಬಹುದು ಎಂದು ಇಂಡಿಯಾ ಟಿವಿ-ಸಿಎನ್‌ಎಕ್ಸ್ ಚುನಾವಣಾ ಪೂರ್ವ ಸಮೀಕ್ಷೆ ಹೇಳಿದೆ. ರಾಜಸ್ಥಾನದ 200 ವಿಧಾಸಭಾ ಸ್ಥಾನಗಳಲ್ಲಿ ಬಿಜೆಪಿ ಹಿಂದಿನ ಚುನಾವಣೆಯಲ್ಲಿ ಗೆದ್ದಿದ್ದ 73 ಸ್ಥಾನಗಳಿಗೆ ಹೋಲಿಸಿದರೆ ಈ ಬಾರಿ 125 ಸ್ಥಾನಗಳನ್ನು ಗೆಲ್ಲಬಹುದು ಎಂದು … Continued

ಬಿಜೆಪಿ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ ಕಾಂಗ್ರೆಸ್ ಸೇರ್ಪಡೆ

ಬೆಂಗಳೂರು : ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ​​ ಬಿಜೆಪಿಗೆ ಗುಡ್ ಬೈ ಹೇಳಿದ್ದು, ಶುಕ್ರವಾರ (ಅಕ್ಟೋಬರ್‌ ೨೦) ಕಾಂಗ್ರೆಸ್ಸಿಗೆ ಸೇರ್ಪಡೆಯಾಗಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಸಮ್ಮುಖದಲ್ಲಿ ಪೂರ್ಣಿಮಾ ಶ್ರೀನಿವಾಸ ಹಾಗೂ ಟಿ.ಡಿ.ಶ್ರೀನಿವಾಸ್ ಅವರು ​​ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಪೂರ್ಣಿಮಾ ಶ್ರೀನಿವಾಸ, ಶ್ರೀನಿವಾಸ ಹಾಗೂ ನರಸಿಂಹ ನಾಯಕ … Continued

ಮಧ್ಯಪ್ರದೇಶದ ವಿಧಾನಸಭೆ ಚುನಾವಣೆ 2023 : ಇಂಡಿಯಾ ಟಿವಿ-ಸಿಎನ್‌ಎಕ್ಸ್‌ ಚುನಾವಣಾ ಪೂರ್ವ ಸಮೀಕ್ಷೆ, ಸದ್ಯ ಕಾಂಗ್ರೆಸ್‌ಗಿಂತ ಮುಂದಿರುವ ಬಿಜೆಪಿ

ಮಧ್ಯಪ್ರದೇಶ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಇಂಡಿಯಾ ಟಿವಿ-ಸಿಎನ್‌ಎಕ್ಸ್‌ (India TV-CNX) ಚುನಾವಣಾ ಪೂರ್ವ ಸಮೀಕ್ಷೆಯು ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತೊಮ್ಮೆ ಮಧ್ಯಪ್ರದೇಶದಲ್ಲಿ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಬಹುದು ಎಂದು ಹೇಳಿದೆ. ಇಂಡಿಯಾ ಟಿವಿ-ಸಿಎನ್‌ಎಕ್ಸ್ ಅಭಿಪ್ರಾಯ ಸಂಗ್ರಹದ ಮಾಹಿತಿಯ ಪ್ರಕಾರ, ಮುಂಬರುವ ರಾಜ್ಯ ವಿಧಾನಸಭೆ ಚುನಾವಣೆ 2023 ರಲ್ಲಿ 230 ಸದಸ್ಯ ಬಲದ ವಿಧಾನಸಭೆ ಚುನಾವಣೆಯಲ್ಲಿ … Continued