ಮಂಡ್ಯ ಪಕ್ಷೇತರ ಸಂಸದೆ ಸುಮಲತಾ ಅಂಬರೀಶ ಬಿಜೆಪಿಗೆ ಸೇರ್ಪಡೆ

ಬೆಂಗಳೂರು: ನಟಿ-ಹಾಗೂ ಮಂಡ್ಯದ ಪಕ್ಷೇತರ ಸಂಸದೆ ಸುಮಲತಾ ಅಂಬರೀಶ ಅಧಿಕೃತವಾಗಿ ಶುಕ್ರವಾರ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೆಂಗಳೂರಿನ ಮಲ್ಲೇಶ್ವರಂನ ಬಿಜೆಪಿ ಕಚೇರಿಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಕರ್ನಾಟಕ ಚುನಾವಣಾ ಉಸ್ತುವಾರಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಧಾ ಮೋಹನ್ ದಾಸ್ ಅಗರ್ವಾಲ್‌, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ , ಮಾಜಿ ಮುಖ್ಯಮಂತ್ರಿ ಡಿ ವಿ ಸದಾನಂದ ಗೌಡ, ವಿರೋಧ … Continued

ಬಿಜೆಪಿ ಅಭ್ಯರ್ಥಿ ಡಾ. ಸಿ.ಎನ್. ಮಂಜುನಾಥ ನಾಮಪತ್ರ ಸಲ್ಲಿಕೆ ; ಆಸ್ತಿ ವಿವರ ಘೋಷಣೆ : ಪತ್ನಿಯೇ ಶ್ರೀಮಂತೆ…

ಬೆಂಗಳೂರು: ಡಾ. ಸಿಎನ್ ಮಂಜುನಾಥ್ ಅವರು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಗುರುವಾರ ಅವರು ರಾಮನಗರದಲ್ಲಿ ನಾಮಪತ್ರ ಸಲ್ಲಿಸಿದರು. ನಗರದ ಚಾಮುಂಡೇಶ್ವರಿ ದೇವಾಲಯಕ್ಕೆ ಪತಿಯೊಂದಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದರು,. ಅವರ ಜೊತೆ ಪತ್ನಿ ಎಚ್.ಡಿ. ಅನುಸೂಯ ಹಾಗೂ ಬೆಂಬಲಿಗರು ಇದ್ದರು. ನಾಮಪತ್ರ ಸಲ್ಲಿಸುವುದಕ್ಕಿಂತ ಮೊದಲು ಸುದ್ದಿಗಾರರೊಂದಿಗೆ ಮಾತನಾಡಿದ ಎಚ್.ಡಿ. ಅನುಸೂಯ ಅವರು, ವೈದ್ಯಕೀಯ … Continued

ಸುಮಲತಾ ಅಂಬರೀಶ ಬಿಜೆಪಿ ಸೇರ್ಪಡೆಗೆ ದಿನಾಂಕ ಫಿಕ್ಸ್

ಬೆಂಗಳೂರು : ಕಳೆದ ಬಾರಿ ಲೋಕಸಭೆ ಚುನಾವಣೆಯಲ್ಲಿ ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಭರ್ಜರಿ ಗೆಲುವು ಸಾಧಿಸಿದ್ದ ನಟಿ ಸುಮಲತಾ ಅಂಬರೀಶ ಈ ಬಾರಿ ಬಿಜೆಪಿ ಬೆಂಬಲಿಸಲು ನಿರ್ಧರಿಸಿ ಕಣದಿಂದ ಹಿಂದೆ ಸರಿದಿದ್ದಾರೆ. ಬುಧವಾರ (ಏಪ್ರಿಲ್‌ 3)ರಂದು ಕಣದಿಂದ ಹಿಂದೆ ಸರಿಯುವುದಾಗಿ ಹಾಗೂ ಬಿಜೆಪಿ ಬೆಂಬಲಿಸುವುದಾಗಿ ಘೋಷಿಸಿದ್ದರು. ಈಗ ಬಿಜೆಪಿ ಸೇರುವ ದಿನಾಂಕ ಘೋಷಣೆ ಮಾಡಿದ್ದು, … Continued

ನಟಿ-ಸಂಸದೆ ಹೇಮಮಾಲಿನಿ ವಿರುದ್ಧ ಅವಹೇಳನಕಾರಿ ಹೇಳಿಕೆ : ಸುರ್ಜೆವಾಲಾ ವಿರುದ್ಧ ಪ್ರಕರಣ ದಾಖಲಿಸಿದ ರಾಷ್ಟ್ರೀಯ ಮಹಿಳಾ ಆಯೋಗ

ನವದೆಹಲಿ : ಮಥುರಾ ಕ್ಷೇತ್ರದ ಹಾಲಿ ಬಿಜೆಪಿ ಸಂಸದೆ ಹಾಗೂ ನಟಿ ಹೇಮಮಾಲಿನಿ ವಿರುದ್ಧ ಕಾಂಗ್ರೆಸ್ ಸಂಸದ ರಣದೀಪ ಸಿಂಗ್ ಸುರ್ಜೆವಾಲ ಅವರು ಅವಹೇಳನಕಾರಿ ಹೇಳಿಕೆ ನೀಡಿರುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆಗಿದ್ದು, ಈ ಸಂಬಂಧ ರಾಷ್ಟ್ರೀಯ ಮಹಿಳಾ ಆಯೋಗ ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿದೆ. ಇದೇ ವೇಳೆ ಪ್ರಕರಣ ಸಂಬಂಧ ಹರಿಯಾಣದ ರಾಜ್ಯ … Continued

ಮಂಡ್ಯ : ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡಲ್ಲ ಎಂದು ಸುಮಲತಾ ಘೋಷಣೆ ; ಮುಂದಿನ ನಡೆ ಬಗ್ಗೆ ಹೇಳಿದ್ದೇನು..?

ಮಂಡ್ಯ : ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಮಂಡ್ಯದಿಂದ ಸ್ವತಂತ್ರವಾಗಿ ಸ್ಪರ್ಧೆ ಮಾಡುವುದಿಲ್ಲ ಎಂದು ಮಂಡ್ಯದ ಹಾಲಿ ಸಂಸದೆ ಸುಮಲತಾ ಅಂಬರೀಶ ಘೋಷಣೆ ಮಾಡಿದ್ದಾರೆ. ಹಾಗೂ ಇದೇ ವೇಳೆ ಬಿಜೆಪಿ ಸೇರುವುದಾಗಿ ಪ್ರಕಟಿಸಿದ್ದಾರೆ. ಮೈತ್ರಿ ಧರ್ಮ ಪಾಲನೆಗೆ ಮುಂದಾಗಿರುವ ಸುಮಲತಾ ಅಂಬರೀಶ ಜೆಡಿಎಸ್‌-ಬಿಜೆಪಿ ಮೈತ್ರಿ ಅಭ್ಯರ್ಥಿ ಎಚ್‌.ಡಿ. ಕುಮಾರಸ್ವಾಮಿ ಅವರಿಗೆ ಬೆಂಬಲ ಘೋಷಿಸಿದ್ದಾರೆ. ಮಂಡ್ಯದಲ್ಲಿ ಬುಧವಾರ … Continued

ಯುಗಾದಿ ನಂತರ ಮೊದಲ ಹಂತದಲ್ಲಿ ಶಿವರಾಮ ಹೆಬ್ಬಾರ ಪುತ್ರ, ಬೆಂಬಲಿಗರು ಕಾಂಗ್ರೆಸ್‌ ಸೇರಲು ತಯಾರಿ..?

ಶಿರಸಿ : ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ಶಿವರಾಮ ಹೆಬ್ಬಾರ ಬೆಂಬಲಿಗರು ಕಾಂಗ್ರೆಸ್ ಪಕ್ಷ ಸೇರುವುದಕ್ಕೆ ಸಿದ್ಧತೆ ನಡೆಸಿದ್ದು, ಯುಗಾದಿ ನಂತರ ಕಾಂಗ್ರೆಸ್ಸಿಗೆ ಸೇರುವ ಸಾಧ್ಯತೆ ದಟ್ಟವಾಗಿದೆ. ಈ ಬಗ್ಗೆ ಸ್ವತಃ ಶಿವರಾಮ ಹೆಬ್ಬಾರ ಮಂಗಳವಾರ ನಗರದಲ್ಲಿ ಬನವಾಸಿ ಹೋಬಳಿಯ ಎಲ್ಲ ಗ್ರಾಮ ಪಂಚಾಯತ ವ್ಯಾಪ್ತಿಗಳ ಬೆಂಬಲಿಗರ ಸಭೆ ನಡೆಸಿರುವುದು ಅವರು ಕಾಂಗ್ರೆಸ್ಸಿಗೆ ಸೇರುತ್ತಾರೆ … Continued

ಧಾರವಾಡ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ ವಿರುದ್ಧ ದಿಂಗಾಲೇಶ್ವರ ಸ್ವಾಮೀಜಿ ಸ್ಪರ್ಧೆ ; ಶ್ರೀಗಳು ಹೇಳಿದ್ದೇನು..?

ಧಾರವಾಡ: ಧಾರವಾಡ ಲೋಕಸಭಾ ಕ್ಷೇತ್ರದಿಂದ ಪಕ್ಷೇತರವಾಗಿ ಸ್ಪರ್ಧಿಸುವಂತೆ ಭಕ್ತರು ಒತ್ತಾಯಿಸಿದ್ದು, ಶೀಘ್ರದಲ್ಲಿ I ಈ ಬಗ್ಗೆ ನನ್ನ ನಿರ್ಧಾರ ತಿಳಿಸುತ್ತೇನೆ ಎಂದು ಶಿರಹಟ್ಟಿ ಫಕೀರ ದಿಂಗಾಲೇಶ್ವರ ಸ್ವಾಮೀಜಿ ತಿಳಿಸಿದರು. ಧಾರವಾಡದಲ್ಲಿ ಮಂಗಳವಾರ ನಡೆದ ಭಕ್ತರ ಸಭೆಯ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಚುನಾವಣೆಗೆ ನಾನೇ ಸ್ಪರ್ಧೆ ಮಾಡುವಂತೆ ಭಕ್ತರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಯಾವುದೇ ಆಮಿಷಕ್ಕೆ ಒಳಗಾಗುವುದಿಲ್ಲ, … Continued

ಶಿವಮೊಗ್ಗದಲ್ಲಿ ಬಂಡಾಯ : ಈಶ್ವರಪ್ಪಗೆ ಅಮಿತ್ ಶಾ ಕರೆ, ದೆಹಲಿಗೆ ಬುಲಾವ್‌ ; ಈಶ್ವರಪ್ಪ ಮುಂದಿನ ನಡೆ ಏನು..?

ಬೆಂಗಳೂರು : ಯಡಿಯೂರಪ್ಪ ವಿರುದ್ಧ ತಿರುಗಿಬಿದ್ದು ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಂಡಾಯವಾಗಿ ಸ್ಪರ್ಧಿಸಲು ಮುಂದಾಗಿರುವ ಕೆ.ಎಸ್‌. ಈಶ್ವರಪ್ಪ ಅವರಿಗೆ ಕೇಂದ್ರ ಸಚಿವ ಅಮಿತ್ ಶಾ ಅವರು ಕರೆ ಮಾಡಿದ್ದು, ನಾಳೆ (ಏಪ್ರಿಲ್‌ ೩) ಈಶ್ವರಪ್ಪ ಅವರನ್ನು ದೆಹಲಿಗೆ ಬುಲಾವ್‌ ಮಾಡಿದ್ದಾರೆ. ಹೀಗಾಗಿ ಈಶ್ವರಪ್ಪ ದೆಹಲಿಗೆ ತೆರಳಲಿದ್ದಾರೆ. ಮಗ ಕಾಂತೇಶ ಅವರಿಗೆ ಹಾವೇರಿ ಲೋಕಸಭಾ ಕ್ಷೇತ್ರದಲ್ಲಿ ಟಿಕೆಟ್ … Continued

ಅಮಿತ್ ಶಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ; ಯತೀಂದ್ರ ಸಿದ್ದರಾಮಯ್ಯಗೆ ನೋಟಿಸ್

ಚಾಮರಾಜನಗರ: ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ಗೂಂಡಾ, ರೌಡಿ ಎಂದು ಕರೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ಮಾಜಿ ಶಾಸಕ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಡಾ.ಯತೀಂದ್ರ ಸಿದ್ದರಾಮಯ್ಯ ಅವರಿಗೆ ಚುನಾವಣಾ ಆಯೋಗ ನೋಟಿಸ್‌ ಜಾರಿ ಮಾಡಿದೆ. ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾ ಅಧಿಕಾರಿಯೂ ಆಗಿರುವ ಶಿಲ್ಪಾ ನಾಗ್‌ ನೋಟಿಸ್‌ ಜಾರಿ ಮಾಡಿದ್ದಾರೆ. … Continued

ಕೆ.ಎಸ್. ಈಶ್ವರಪ್ಪ ವಿರುದ್ಧ ಪ್ರಕರಣ ದಾಖಲು

ಶಿವಮೊಗ್ಗ : ಧಾರ್ಮಿಕ ಕೇಂದ್ರದಲ್ಲಿ ಚುನಾವಣಾ ಪ್ರಚಾರ ಮಾಡಿದ ಆರೋಪದ ಮೇಲೆ ಬಿಜೆಪಿ ಬಂಡಾಯ ನಾಯಕ ಕೆ.ಎಸ್. ಈಶ್ವರಪ್ಪ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲಾಗಿದೆ ಎಂದು ವರದಿಯಾಗಿದೆ. ಈಶ್ವರಪ್ಪ ಅವರು ಶಿವಮೊಗ್ಗದ ಗೋಪಾಳದ ರಂಗನಾಥಸ್ವಾಮಿ ದೇವಾಲಯಕ್ಕೆ ತೆರಳಿದ್ದ ವೇಳೆ ಚುನಾವಣಾ ಪ್ರಚಾರ ಮಾಡಿದ್ದರು. ಧಾರ್ಮಿಕ ಕೇಂದ್ರದಲ್ಲಿ ಪ್ರಚಾರ ಮಾಡಿರುವ ಅವರಿಂದ ಮಾದರಿ ನೀತಿ … Continued