ಬೂಟುಗಳಿಂದ ಹೊಡೆದರೆ ನಮ್ಮನ್ನು ದೂಷಿಸಬೇಡಿ: ಬಿಜೆಪಿ, ಸಿಪಿಐ(ಎಂ) ಪಕ್ಷಗಳಿಗೆ ಟಿಎಂಸಿ ಸಂಸದ ಸೌಗತ ರಾಯ್ ಎಚ್ಚರಿಕೆ

ಕೋಲ್ಕತ್ತಾ:ಕೆಲವರ ದುಷ್ಕೃತ್ಯಗಳಿಗಾಗಿ ತಮ್ಮ ಪಕ್ಷದ ಮೇಲೆ ದಾಳಿ ಮಾಡುವಾಗ ಸಭ್ಯತೆಯ ಮಿತಿಯನ್ನು ದಾಟಬೇಡಿ ಎಂದು ತೃಣಮೂಲ ಕಾಂಗ್ರೆಸ್ ಸಂಸದ ಸೌಗತ ರಾಯ್ ಅವರು ಬಿಜೆಪಿ ಮತ್ತು ಸಿಪಿಐ(ಎಂ) ಪಕ್ಷಗಳಿಗೆ ಎಚ್ಚರಿಕೆ ನೀಡಿದ್ದು ಈಗ ವಿವಾದಕ್ಕೆ ಕಾರಣವಾಗಿದೆ. ಬೂಟುಗಳಿಂದ ಥಳಿಸಿ ಸ್ಥಳದಿಂದ ಓಡಿಸಿದರೆ ದೂರು ಹೇಳಬೇಡಿ ಎಂದು ಸಂsದ ರಾಯ್‌ ಬಿಜೆಪಿ ಮತ್ತು ಸಿಪಿಐ(ಎಂ) ಮುಖಂಡರಿಗೆ ಹೇಳಿದ್ದಾರೆ. … Continued

ಪರಿಷತ್ ಉಪ ಚುನಾವಣೆ: ಬಾಬೂರಾವ್ ಚಿಂಚನಸೂರಗೆ ಬಿಜೆಪಿ ಟಿಕೆಟ್ ಘೋಷಣೆ

ಬೆಂಗಳೂರು: ಒಂದು ಸ್ಥಾನಕ್ಕೆ ವಿಧಾನಪರಿಷತ್ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಬಿಜೆಪಿ ತನ್ನ ಅಭ್ಯರ್ಥಿ ಹೆಸರು ಘೋಷಣೆ ಮಾಡಿದೆ. ಮಾಜಿ ಸಚಿವ ಬಾಬುರಾವ್ ಚಿಂಚನಸೂರು ಅವರಿಗೆ ಟಿಕೆಟ್ ನೀಡಿದೆ.ವಿಧಾನ ಪರಿಷತ್‌ ಸದಸ್ಯರಾಗಿದ್ದ ಸಿ.ಎಂ ಇಬ್ರಾಹಿಂ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಜೆಡಿಎಸ್‌ ಸೇರಿದ ನಂತರ ಒಂದು ಸ್ಥಾನ ತೆರವಾಗಿದ್ದ ಹಿನ್ನೆಲೆಯಲ್ಲಿ ಈಗ ಉಪ ಚುನಾವಣೆ ಘೋಷಣೆಯಾಗಿದೆ. ವಿಧಾನ … Continued

ಅಗ್ನಿಪಥ್ ನೇಮಕಾತಿಯಲ್ಲಿ ಜಾತಿ-ಧರ್ಮದ ಕಾಲಂ: ಸರ್ಕಾರ ತರಾಟೆಗೆ ತೆಗೆದುಕೊಂಡ ಪ್ರತಿಪಕ್ಷಗಳು, ಸುಪ್ರೀಂ ಕೋರ್ಟ್ ಆದೇಶ ಉಲ್ಲೇಖಿಸಿದ ಬಿಜೆಪಿ

ನವದೆಹಲಿ: ಅಗ್ನಿಪಥ ಯೋಜನೆಯ ಸುತ್ತ ಮತ್ತೊಂದು ವಿವಾದದಲ್ಲಿ, ವಿರೋಧ ಪಕ್ಷಗಳು ಅಗ್ನಿವೀರ್ ನೇಮಕಾತಿಗಾಗಿ ಜಾತಿ ಮತ್ತು ಧರ್ಮದ ಪ್ರಮಾಣಪತ್ರಗಳನ್ನು ಕೇಳಲಾಗುತ್ತಿದೆ ಎಂದು ಪ್ರತಿಪಕ್ಷಗಳು ಆರೋಪಿಸಿವೆ.. ಅಗ್ನಿವೀರ್‌ಗಳನ್ನು ಬಳಸಿಕೊಂಡು ಜಾತಿವಾದಕ್ಕೆ ಕುಮ್ಮಕ್ಕು ನೀಡುತ್ತಿದೆ ಎಂದು ಆಮ್ ಆದ್ಮಿ ಪಕ್ಷ (ಎಎಪಿ) ಹೇಳಿದೆ. ಏತನ್ಮಧ್ಯೆ, ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಆರ್‌ಎಸ್‌ಎಸ್ ಪ್ರೇರಿತ ಜಾತಿ ಪಕ್ಷಪಾತವು ಅಗ್ನಿವೀರ್‌ನಲ್ಲಿ ಬೇರೂರಿದೆ … Continued

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಎಂಬುದು ಕಪೋಲಕಲ್ಪಿತ: ಬಿಜೆಪಿ‌ ರಾಜ್ಯ ಉಸ್ತುವಾರಿ ಅರುಣ ಸಿಂಗ್

ಬೆಂಗಳೂರು: ರಾಜ್ಯದಲ್ಲಿ ಮತ್ತೆ ನಾಯಕತ್ವ ಬದಲಾವಣೆ ಎಂಬುದು ಕಪೋಲಕಲ್ಪಿತ. ಬೊಮ್ಮಾಯಿ ಅವರೇ ಮುಖ್ಯಮಂತ್ರಿ ಆಗಿ ಮುಂದುವರೆಯಲಿದ್ದಾರೆ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ ಸಿಂಗ್ ಹೇಳಿದ್ದಾರೆ. ಮಲ್ಲೇಶ್ವರಂನಲ್ಲಿರುವ ರಾಜ್ಯ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಾಮನ್ ಮ್ಯಾನ್ ಮುಖ್ಯಮಂತ್ರಿ. ಒಳ್ಳೆಯ ಆಡಳಿತ ಕೊಡುತ್ತಿದ್ದಾರೆ. ಹೀಗಾಗಿ ಕಾಲ್ಪನಿಕ ಪ್ರಶ್ನೆಗಳಿಗೆ … Continued

ದೇಶದ ಜನತೆಗೆ ಭಗವದ್ಗೀತೆ, ರಾಮಾಯಣ-ಮಹಾಭಾರತ ತಲುಪಿಸಿದ್ದೆ ಕಾಂಗ್ರೆಸ್: ಬಿಜೆಪಿಗೆ ಡಿಕೆಶಿ ತಿರುಗೇಟು

ಮೈಸೂರು: ಇಡೀ ದೇಶದ ಜನತೆಗೆ ದೂರದರ್ಶನದ ಮೂಲಕ ಭಗವದ್ಗೀತೆ ತಲುಪಿಸಿರುವುದು ಕಾಂಗ್ರೆಸ್ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಹೇಳಿದ್ದಾರೆ. ಶಾಲಾ ಪಠ್ಯಪುಸ್ತಕದಲ್ಲಿ ಭಗವದ್ಗೀತೆ ಸೇರಿಸುವ ವಿಚಾರವಾಗಿ ಬಿಜೆಪಿ ನಾಯಕರ ಹೇಳಿಕೆಗೆ ತಿರುಗೇಟು ನೀಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ನಾವು ಸಹ ಹಿಂದೂಗಳೇ ಎಂದು ಹೇಳಿದ್ದಾರೆ. ರಾಜೀವ್ ಗಾಂಧಿಯವರು ರಾಮಾಯಣ, ಮಹಾಭಾರತವನ್ನು ದೇಶದ ಜನತೆ ತೋರಿಸಿದ್ದಾರೆ. … Continued

ಕಾಸರಗೋಡು: ಬಿಜೆಪಿಯಲ್ಲಿ ಭುಗಿಲೆದ್ದ ಅಸಮಾಧಾನ-ಪಕ್ಷದ ಕಚೇರಿಗೆ ಬೀಗ ಜಡಿದ ಕಾರ್ಯಕರ್ತರು

ಕಾಸರಗೋಡು(ಕೇರಳ): ಕಾಸರಗೋಡು ಬಿಜೆಪಿಯಲ್ಲಿ ಅಸಮಧಾನ ಭುಗಿಲೆದ್ದಿದ್ದು ಕಾರ್ಯಕರ್ತರು ಪಕ್ಷದ ಕಚೇರಿಗೆ ಮುತ್ತಿಗೆ ಹಾಕಿ ಕಚೇರಿಗೆ ಬೀಗ ಜಡಿದ ಘಟನೆ ಇಂದು, ಭಾನುವಾರ ನಡೆದಿದೆ. ಕುಂಬಳೆ ಗ್ರಾಮ ಪಂಚಾಯತ ಸ್ಥಾಯಿ ಸಮಿತಿ ಚುನಾವಣೆಯಲ್ಲಿ ಬದ್ಧ ರಾಜಕೀಯ ವೈರಿಗಳಾದ ಬಿಜೆಪಿ ಮತ್ತು ಸಿಪಿಎಂ ಅಪವಿತ್ರ ಮೈತ್ರಿ ಮಾಡಿಕೊಂಡಿರುವುದು ಬಿಜೆಪಿಯಲ್ಲಿ ಅಸಮಾಧಾನಕ್ಕೆ ಎಡೆ ಮಾಡಿಕೊಟ್ಟಿದೆ. . ಹಲವು ಬಾರಿ ರಾಜ್ಯ … Continued

ಹಿಜಾಬ್ ವಿವಾದದಲ್ಲಿ ಲಾಭ ಪಡೆಯಲು ಯತ್ನ: ಬಿಜೆಪಿ ವಿರುದ್ಧ ಖರ್ಗೆ ವಾಗ್ದಾಳಿ

ನವದೆಹಲಿ: ಕರ್ನಾಟಕದಲ್ಲಿನ ಬೆಳವಣಿಗೆಗಳಿಗೆ ಸರ್ಕಾರ, ಮುಖ್ಯವಾಗಿ ಬಿಜೆಪಿ ಸದಸ್ಯರು ಜವಾಬ್ದಾರರು ಮತ್ತು ಈಗ ಚುನಾವಣೆ ನಡೆಯುತ್ತಿರುವುದರಿಂದ ಅವರು ಲಾಭ ಪಡೆಯಲು ಅವರು ಬಯಸುತ್ತಾರೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದ್ದಾರೆ. ಸುದ್ದಿಸಂಸ್ಥೆಯೊಂದಿಗೆ ಮಾತನಾಡಿದ ಅವರು, ಪ್ರಧಾನಮಂತ್ರಿಗಳು ರಾಜ್ಯಸಭೆಯಲ್ಲಿ ಉಪಸ್ಥಿತರಿದ್ದರು, ನಾವು ಹಣದುಬ್ಬರ, ನಿರುದ್ಯೋಗ, ರೈತರು, ಜಿಡಿಪಿ, ರಾಷ್ಟ್ರೀಯ ಭದ್ರತೆ ಮತ್ತು ಏಕತೆಯ … Continued

ಸ್ವಾಮಿ ಪ್ರಸಾದ್ ಮೌರ್ಯ ಸಚಿವ ಸ್ಥಾನಕ್ಕೆ, ಬಿಜೆಪಿಗೆ ರಾಜೀನಾಮೆ ನೀಡಲು ಕಾರಣವೇನು..?

ನವದೆಹಲಿ: ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗೆ ಕೆಲವೇ ದಿನಗಳಿರುವಾಗ ಆಡಳಿತ ಪಕ್ಷವಾದ ಭಾರತೀಯ ಜನತಾ ಪಕ್ಷ (ಬಿಜೆಪಿ)ಕ್ಕೆ ಆಘಾತವಾಗಿದೆ. ಉತ್ತರ ಪ್ರದೇಶ ಸರ್ಕಾರದಲ್ಲಿ, ಸಂಪುಟ ದರ್ಜೆ ಸಚಿವರಾಗಿದ್ದ ಸ್ವಾಮಿ ಪ್ರಸಾದ್ ಮೌರ್ಯ ಬಿಜೆಪಿಗೆ ರಾಜೀನಾಮೆ ನೀಡಿದ್ದಾರೆ. ಇದಾದ ನಂತರ ಕೆಲವೇ ಗಂಟೆಗಳಲ್ಲಿ, ಅವರ ನಿಕಟವರ್ತಿಗಳಾದ ರೋಷನ್ ಲಾಲ್ ವರ್ಮಾ, ಬ್ರಿಜೇಶ್ ಪ್ರಜಾಪತಿ, ಭಗವತಿ ಸಾಗರ್ ಮತ್ತು … Continued

ಕಾಂಗ್ರೆಸ್ ಸರ್ಕಾರ ಮತಾಂತರ ಬಿಲ್ ತರಲು ತಯಾರಿ ನಡೆಸಿತ್ತು ಎಂಬ ಬಿಜೆಪಿ ಆರೋಪಕ್ಕೆ ಉತ್ತರ ನೀಡಿದ ಸಿದ್ದರಾಮಯ್ಯ

ಬೆಳಗಾವಿ: 2016ರಲ್ಲಿ ಕಾಂಗ್ರೆಸ್ ಸರ್ಕಾರ ಮತಾಂತರ ಬಿಲ್ ತರಲು ತಯಾರಿ ನಡೆಸಿತ್ತು. ಅದನ್ನು ತಡೆದಿದ್ದು ಸೋನಿಯಾ ಗಾಂಧಿ. ಕುರ್ಚಿಗೆ ಕಂಟಕ ಬರುತ್ತದೆಯೆಂಬ ಭಯದಲ್ಲಿ ಸಿದ್ದರಾಮಯ್ಯ ಈ ಮಸೂದೆ ಜಾರಿಗೆ ಮುಂದಾಗಲಿಲ್ಲ ಎಂದು ಬಿಜೆಪಿ ಆರೋಪಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಬಲವಂತವಾಗಿ, ಆಸೆ ಆಮಿಷ ಒಡ್ಡಿ ಅಥವಾ ಮೋಸದಿಂದ ಮತಾಂತರ ಮಾಡಿದರೆ ಅದು ಶಿಕ್ಷಾರ್ಹ … Continued

ಯಡಿಯೂರಪ್ಪ ನನ್ನ ನಡುವೆ ವೈಯಕ್ತಿಕ ಮೈತ್ರಿಯಾಗಿದೆ: ಕುಮಾರಸ್ವಾಮಿ

ಮೈಸೂರು:ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಮತ್ತು ನನ್ನ ನಡುವೆ ವೈಯಕ್ತಿಕ ಮೈತ್ರಿಯಾಗಿದೆ. ಯಡಿಯೂರಪ್ಪ ಮಾತ್ರ ನನಗೆ ಕರೆ ಮಾಡಿ ಬೆಂಬಲ ಕೇಳಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಬಹಿರಂಗವಾಗಿಯೇ ನಮಗೆ ಯಾರ ಬೆಂಬಲ ಬೇಡ ಎಂದು ಹೇಳಿದೆ. ಬೆಂಬಲ ಬೇಡ ಎಂದವರಿಗೆ ನಾವೇ ಹೋಗಿ ಬೆಂಬಲ ಕೊಡಲು ಸಾಧ್ಯವಿಲ್ಲ. … Continued