ವೀಡಿಯೊ..: ಸಾವರ್ಕರ್ ದನದ ಮಾಂಸ ತಿನ್ನುತ್ತಿದ್ದರು, ಗೋಹತ್ಯೆಯ ವಿರುದ್ಧ ಇರಲಿಲ್ಲ : ಭಾರೀ ವಿವಾದಕ್ಕೆ ಕಾರಣವಾದ ಸಚಿವ ದಿನೇಶ್ ಗುಂಡೂರಾವ್ ಹೇಳಿಕೆ

ಬೆಂಗಳೂರು : ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ ಸಾವರ್ಕರ್ ಅವರು ಮಾಂಸ ತಿನ್ನುತ್ತಿದ್ದರು ಮತ್ತು ಗೋಹತ್ಯೆಯ ವಿರುದ್ಧ ಇರಲಿಲ್ಲ ಎಂದು ಆರೋಗ್ಯ ಸಚಿವ ದಿನೇಶ ಗುಂಡೂರಾವ್ ಅವರು ಹೇಳಿರುವುದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ‘ಚಿತ್ಪಾವನ ಬ್ರಾಹ್ಮಣ’ರಾದ ಸಾವರ್ಕರ್ ಮಾಂಸ ತಿನ್ನುತ್ತಿದ್ದರು. ಅವರು ಮಾಂಸಾಹಾರಿ ಮತ್ತು ಅವರು ಗೋಹತ್ಯೆಯ ವಿರೋಧಿಯಾಗಿರಲಿಲ್ಲ. ಅವರು ಗೋಮಾಂಸವನ್ನೂ ತಿನ್ನುತ್ತಿದ್ದರು ಎಂದು … Continued

ದಕ್ಷಿಣ ಕನ್ನಡ ವಿಧಾನ ಪರಿಷತ್ ಉಪ ಚುನಾವಣೆ : ಬಿಜೆಪಿ ಅಭ್ಯರ್ಥಿ ಘೋಷಣೆ

ಬೆಂಗಳೂರು: /ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಕಿಶೋರಕುಮಾರ ಬೊಟ್ಯಾಡಿ ಅವರಿಗೆ ವಿಧಾನ ಪರಿಷತ್ ಟಿಕೆಟ್ ಘೋಷಣೆಯಾಗಿದೆ. ಸಂಸದರಾಗಿ ಆಯ್ಕೆಯಾದ ಕೋಟ ಶ್ರೀನಿವಾಸ ಪೂಜಾರಿಯವರಿಂದ ತೆರವಾಗಿರುವ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿದ್ದಾರೆ. ಅತ್ಯಂತ ಹಿಂದುಳಿದ ವರ್ಗಕ್ಕೆ ಸೇರಿದ ಕಿಶೋರಕುಮಾರ ಬೊಟ್ಯಾಡಿ ಅವರಿಗೆ ಬಿಜೆಪಿ ಕೇಂದ್ರೀಯ ಚುನಾವಣಾ … Continued

ಮುಡಾ ಹಗರಣ: ಹೈಕೋರ್ಟ್‌ ಆದೇಶದ ನಂತರ ಮೊದಲ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ನಾನು ಯಾವುದೇ ತನಿಖೆಗೆ ಹಿಂಜರಿಯುವುದಿಲ್ಲ. ಕಾನೂನು ಅಡಿ ಅಂತಹ ತನಿಖೆಗೆ ಅವಕಾಶ ಇದೆಯೋ ಇಲ್ಲವೋ ಎಂಬ ಬಗ್ಗೆ ಕಾನೂನು ತಜ್ಞರ ಜೊತೆ ಚರ್ಚಿಸಿದ ನಂತರ ಮುಂದಿನ ನಿರ್ಧಾರ ಕೈಗೊಳ್ಳುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮುಡಾ ಹಗರಣಕ್ಕೆ (MUDA Scam) ಸಂಬಂಧಿಸಿದಂತೆ ರಾಜ್ಯಪಾಲ ಥಾವರ ಚಂದ ಗೆಹ್ಲೋಟ್‌ ಅವರ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ … Continued

ರಾಹುಲ್ ಗಾಂಧಿ ವಿರುದ್ಧ ಬೆಂಗಳೂರಿನಲ್ಲಿ ದೂರು ದಾಖಲು

ಬೆಂಗಳೂರು : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಇತ್ತೀಚೆಗೆ ಅಮೆರಿಕಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಸಿಖ್ ಸಮುದಾಯದ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿರುವುದು ಹಾಗೂ ಮೀಸಲಾತಿ ಕುರಿತು ಹೇಳಿಕೆ ನೀಡಿದ್ದಕ್ಕಾಗಿ ಕರ್ನಾಟಕ ಬಿಜೆಪಿ ಶನಿವಾರ ಬೆಂಗಳೂರಿನ ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದೆ. ಸಿಖ್‌ ಸಮುದಾಯದ ಬಗ್ಗೆ ದೂಷಣೆ ಹಾಗೂ ಎಸ್‌ಸಿ, ಎಸ್‌ಟಿ ಮತ್ತು … Continued

ಸಿಖ್ಖರ ಭಾವನೆಗಳಿಗೆ ಧಕ್ಕೆ ತಂದ ಆರೋಪ ; ರಾಹುಲ್‌ ಗಾಂಧಿ ವಿರುದ್ಧ 3 ಎಫ್‌ಐಆರ್‌ ದಾಖಲು

ರಾಯ್ಪುರ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇತ್ತೀಚಿನ ಅಮೆರಿಕ ಭೇಟಿಯ ವೇಳೆ ನೀಡಿದ ಹೇಳಿಕೆಗಳು  ಸಿಖ್ ಸಮುದಾಯದ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದೆ ಎಂದು ಆರೋಪಿಸಿ ಛತ್ತೀಸ್‌ಗಢದಲ್ಲಿ ರಾಹುಲ್‌ ಗಾಂಧಿಯವರ ಮೇಲೆ ಮೂರು ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ರಾಜಧಾನಿ ರಾಯ್ಪುರದ ಸಿವಿಲ್ ಲೈನ್ಸ್ ಪೊಲೀಸ್ ಠಾಣೆಯಲ್ಲಿ ಒಂದು ಮತ್ತು ಬಿಲಾಸ್‌ಪುರ … Continued

ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ನಾಯಕರ ಆಕ್ಷೇಪಾರ್ಹ ಹೇಳಿಕೆ ಬಗ್ಗೆ ಖರ್ಗೆ ಪತ್ರದ ನಂತರ ಮೋದಿ ವಿರುದ್ಧ ಕಾಂಗ್ರೆಸ್‌ ಬಳಸಿದ ʼಅವಹೇಳನಕಾರಿ ಪದʼಗಳ ಬಗ್ಗೆ ಬಿಜೆಪಿ ಪತ್ರ

ನವದೆಹಲಿ: ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ನಾಯಕರ ಆಕ್ಷೇಪಾರ್ಹ ಹೇಳಿಕೆಯನ್ನು ಖಂಡಿಸಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದ ಎರಡು ದಿನಗಳ ನಂತರ ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್ ನಾಯಕರು ಬಳಸಿರುವ ಅವಹೇಳನಕಾರಿ ಪದಗಳನ್ನು ಪಟ್ಟಿ ಮಾಡಿ ಖರ್ಗೆ ಅವರಿಗೆ … Continued

ನೀವು ಪ್ರಧಾನಿಯಾಗಲು ಬಯಸಿದ್ರೆ ನಿಮ್ಮನ್ನು ಬೆಂಬಲಿಸ್ತೇವೆ ಎಂದಿದ್ದರು : ಕೇಂದ್ರ ಸಚಿವ ನಿತಿನ್ ಗಡ್ಕರಿ

ನಾಗ್ಪುರ: ‘ನೀವು ಪ್ರಧಾನಿಯಾಗುವುದಾದರೆ ನಾವು ನಿಮಗೆ ಬೆಂಬಲ ನೀಡುತ್ತೇವೆ’ ಎಂದು ರಾಜಕೀಯ ನಾಯಕರೊಬ್ಬರು ಲೋಕಸಭಾ ಚುನಾವಣೆ ವೇಳೆ ನನಗೆ ಭರವಸೆ ನೀಡಿದ್ದರು. ಆದರೆ, ಅವರ ಪ್ರಸ್ತಾಪವನ್ನು ನಾನು ತಿರಸ್ಕರಿಸಿದ್ದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ” ನನಗೆ ಒಂದು ಘಟನೆ ನೆನಪಿದೆ. ನಾನು ಯಾರನ್ನೂ ಹೆಸರಿಸುವುದಿಲ್ಲ. ಆ ವ್ಯಕ್ತಿ ನೀವು ಪ್ರಧಾನಿಯಾಗಲು ಬಯಸಿದರೆ … Continued

ಬಿಜೆಪಿ ಶಿಸ್ತು ಸಮಿತಿಯಿಂದ ಶಾಸಕ ಮುನಿರತ್ನಗೆ ಶೋಕಾಸ್‌ ನೋಟಿಸ್

ಬೆಂಗಳೂರು : ಜೀವ ಬೆದರಿಕೆ ಹಾಗೂ ಜಾತಿ ನಿಂದನೆ ಆರೋಪದ ಅಡಿ ದಾಖಲಾಗಿದ್ದ ಪ್ರಕರಣದ ಸಂಬಂಧ ಬಿಜೆಪಿ ಶಾಸಕ ಮುನಿರತ್ನ ಅವರಿಗೆ ಸಂಕಷ್ಟ ಎದುರಾಗಿರುವ ಬೆನ್ನಲ್ಲೇ ಬಿಜೆಪಿಯಿಂದ ಅವರಿಗೆ ಕಾರಣ ಕೇಳಿ ನೋಟಿಸ್ ಜಾರಿಯಾಗಿದೆ. ಬಿಜೆಪಿ ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ ಅವರು ಮುನಿರತ್ನ ಮೇಲೆ ಕೇಳಿ ಬಂದಿರುವ ಆರೋ ಪದ ಬಗ್ಗೆ … Continued

ನಾಗಮಂಗಲ ಗಲಭೆ : ಕರ್ನಾಟಕ ಬಿಜೆಪಿಯಿಂದ ‘ಸತ್ಯ ಶೋಧನ ತಂಡ’ ರಚನೆ

ಬೆಂಗಳೂರು: ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆಯ ಮೆರವಣಿಗೆ ಸಂದರ್ಭದಲ್ಲಿ ನಡೆದ ದುರ್ಘಟನೆಯ ಕುರಿತು ಸತ್ಯಾಸತ್ಯತೆ ತಿಳಿಯಲು ರಾಜ್ಯ ಬಿಜೆಪಿಯು ‘ಸತ್ಯ ಶೋಧನ ತಂಡʼವನ್ನು ರಚಿಸಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಸೂಚನೆಯ ಮೇರೆಗೆ ಮಾಜಿ ಸಚಿವ ಡಾ.ಸಿಎನ್ ಅಶ್ವತ್ಥನಾರಾಯಣ ಅವರ ನೇತೃತ್ವದಲ್ಲಿ ಸತ್ಯ ಶೋಧನ ತಂಡವನ್ನು ರಚನೆ ಮಾಡಲಾಗಿದೆ. ಶಾಸಕ ಬೈರತಿ ಬಸವರಾಜು, ಮಾಜಿ … Continued

ಕಾಂಗ್ರೆಸ್‌ ಜೊತೆಗೆ ಹೆಜ್ಜೆ ಹಾಕ್ತಾರಾ ಬಿಜೆಪಿ ಶಾಸಕ ಶಿವರಾಮ ಹೆಬ್ಬಾರ..? ಚರ್ಚೆಗೆ ಗ್ರಾಸವಾಯ್ತು ಫೋಟೋಗಳು…!

ಯಲ್ಲಾಪುರ : ಮಾನಸಿಕವಾಗಿ ಬಿಜೆಪಿಯಲ್ಲಿ ಇಲ್ಲದ ಯಲ್ಲಾಪುರ-ಮುಂಡಗೋಡ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಶಿವರಾಮ ಹೆಬ್ಬಾರ ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬೆಂಗಳೂರಿನಲ್ಲಿ ಪ್ರತ್ಯೇಕವಾಗಿ ಭೇಟಿ ಮಾಡಿರುವುದು ಕುತೂಹಲಕ್ಕೆ ಕಾರಣವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಏನು ಮಾತುಕತೆ ನಡೆದಿದೆ ಎಂಬುದು ಬಹಿರಂಗವಾಗಿಲ್ಲ. ಆದರೆ ತಾನು ಕ್ಷೇತ್ರದ ಅಭಿವೃದ್ಧಿಗೆ ಹಾಗೂ ನೀರಾವರಿಗೆ ವಿಶೇಷ ಅನುದಾನ ನೀಡುವಂತೆ … Continued