ಬಿಜೆಪಿ ಸರ್ಕಾರದ ಅವಧಿಯ ಹಗರಣಗಳ ತನಿಖೆ ಪ್ರಗತಿ ಪರಿಶೀಲನೆಗೆ ಸಚಿವರ ಸಮಿತಿ ನೇಮಕ

ಬೆಂಗಳೂರು :ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿನ ಹಗರಣಗಳ ಮತ್ತು ಇತರ ಹಗರಣಗಳ ತನಿಖೆಯ ಪ್ರಗತಿ ಪರಿಶೀಲನೆಗೆ ಗೃಹ ಸಚಿವ ಡಾ. ಜಿ ಪರಮೇಶ್ವರ ನೇತೃತ್ವದಲ್ಲಿ ಸಮಿತಿ ರಚನೆ ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ. ಸರ್ಕಾರದ ಮತ್ತು ತನಿಖಾ ಸಂಸ್ಥೆಗಳ ಹಂತದಲ್ಲಿ ಚಾಲ್ತಿಯಲ್ಲಿರುವ ವಿವಿಧ ಹಗರಣಗಳ ತನಿಖೆಗಳ ಪ್ರಗತಿ, ಸಮನ್ವಯ ಮುಂತಾದವುಗಳಿಗೆ ಸಂಬಂಧಿಸಿದಂತೆ ಕ್ರಮ ವಹಿಸಲು … Continued

ವೀಡಿಯೊ..| ಹಳಿಯಾಳ: ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಜಗಳ, ನೂಕಾಟ

ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದಲ್ಲಿ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಜಗಳ ನಡೆದಿದೆ ಎಂದು ವರದಿಯಾಗಿದೆ. ಸಭೆಯಲ್ಲಿ ಮಾಜಿ ಶಾಸಕ ಸುನಿಲ ಹೆಗಡೆ ಬಣ ಹಾಗೂ ಜಿಲ್ಲಾ ಕಾರ್ಯದರ್ಶಿ ಶಿವಾಜಿ ನರಸಾನಿ ಗುಂಪಿಗಳ ಮಧ್ಯೆ ಗಲಾಟೆಯಾಗಿದೆ. ಹಳಿಯಾಳದ ಗಣೇಶ ಕಲ್ಯಾಣ ಮಂಟಪದಲ್ಲಿ ಜಿಲ್ಲಾಧ್ಯಕ್ಷ ಎನ್. ಎಸ್. ಹೆಗಡೆ ಕರ್ಕಿ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರ ಸಭೆ … Continued

ರಾಜಕೀಯ ಮುತ್ಸದ್ದಿ, ಮಾಜಿ ಸಚಿವ ಕೆ.ಎಚ್‌.ಶ್ರೀನಿವಾಸ ನಿಧನ

ಬೆಂಗಳೂರು : ಮಾಜಿ ಸಚಿವ, ಶಿವಮೊಗ್ಗ ಹಾಗೂ ಸಾಗರ ಕ್ಷೇತ್ರದ ಮಾಜಿ ಶಾಸ ಕೆ.ಎಚ್‌. ಶ್ರೀನಿವಾಸ (86) ನಿಧನರಾಗಿದ್ದಾರೆ. ಸಾಗರ ತಾಲ್ಲೂಕು ಕಾನುಗೋಡು ಗ್ರಾಮದವರಾದ ಶ್ರೀನಿವಾಸ ಅವರು ಮೊದಲು ಜನತಾ ಪರಿವಾರದಲ್ಲಿ ಗುರುತಿಸಿಕೊಂಡಿದ್ದರು. ಆನಂತರ ಆನಂತರದಲ್ಲಿ ಕಾಂಗ್ರೆಸ್‌, ಬಿಜೆಪಿ, ಜೆಡಿಎಸ್‌ ನಲ್ಲಿಯೂ ಇದ್ದರು.. ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರ ಆಪ್ತರಾಗಿದ್ದ ಅವರು ಸಾಂಸ್ಕೃತಿಕ ವಲಯದಲ್ಲೂ … Continued

ರೈತರ ಕುರಿತು ವಿವಾದಾತ್ಮಕ ಹೇಳಿಕೆ : ತಮ್ಮದೇ ಪಕ್ಷದ ಸಂಸದೆಗೆ ಬಿಜೆಪಿಯಿಂದ ಪಾಠ…!

ನವದೆಹಲಿ : ರೈತರ ಪ್ರತಿಭಟನೆ ಕುರಿತ ಹೇಳಿಕೆ ವಿವಾದಕ್ಕೆ ಕಾರಣವಾದ ನಂತರ ನಟಿ-ರಾಜಕಾರಣಿ ಕಂಗನಾ ರಣಾವತ್ ಅವರಿಗೆ ಬಿಜೆಪಿ ನಾಯಕತ್ವವು ಛೀಮಾರಿ ಹಾಕಿದೆ. ಅಲ್ಲದೆ ಕಂಗನಾ ರಣಾವತ್ ಅವರ ಹೇಳಿಕೆಗಳು ಪಕ್ಷದ ಅಭಿಪ್ರಾಯಗಳನ್ನು ಪ್ರತಿನಿಧಿಸುವುದಿಲ್ಲ ಎಂದು ಬಿಜೆಪಿ ಸ್ಪಷ್ಟಪಡಿಸಿದೆ. 38ರ ಹರೆಯದ ಬಿಜೆಪಿ ಸಂಸದರು ಸರಕಾರ ಕೈಗೊಂಡಿರುವ ದೃಢವಾದ ಕ್ರಮಗಳಿರದಿದ್ದಲ್ಲಿ ರೈತರ ಪ್ರತಿಭಟನೆಯು ಭಾರತದಲ್ಲಿ ಬಾಂಗ್ಲಾದೇಶದಂತಹ … Continued

ಮುಡಾ, ವಾಲ್ಮೀಕಿ ನಿಗಮ ಹಗರಣಗಳ ದಾಖಲೆ ನಮಗೆ ಕೊಟ್ಟಿದ್ದೇ ಕಾಂಗ್ರೆಸ್​​ ನಾಯಕರು: ಪ್ರಹ್ಲಾದ ಜೋಶಿ

ಹುಬ್ಬಳ್ಳಿ : ಮುಡಾ ಮತ್ತು ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಹಗರಣದ ದಾಖಲೆಗಳನ್ನು ನಮಗೆ ನೀಡಿದ್ದೇ ಕಾಂಗ್ರೆಸ್​ ನಾಯಕರು ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ. ಮಾಧ್ಯಮದವರ ಜೊತೆ ಮಾತನಾಡಿದ ಅವರು, ನಮ್ಮ ಬಳಿ‌ ಏನೂ ಇರಲಿಲ್ಲ, ಕೆಲ ಕಾಂಗ್ರೆಸ್​ನವರೇ ನಮಗೆ ಈ ದಾಖಲೆ ಕೊಟ್ಟಿದ್ದಾರೆ, ನಮಗೆ ಯಾರು ದಾಖಲೆ ಕೊಟ್ಟಿದ್ದಾರೆ ಎಂಬ ಮಾಹಿತಿ … Continued

ಹೈಟೆಕ್ ಡಿಫೆನ್ಸ್ ಏರೋಸ್ಪೇಸ್ ಪಾರ್ಕ್‌ನಲ್ಲಿ ಖರ್ಗೆ ಕುಟುಂಬದ ಟ್ರಸ್ಟ್‌ಗೆ 5 ಎಕರೆ ಜಮೀನು ; ಇದು ಅಧಿಕಾರ ದುರುಪಯೋಗವಲ್ಲವೇ- ಲೆಹರ್‌ ಸಿಂಗ್ ಪ್ರಶ್ನೆ

ಬೆಂಗಳೂರು : ರಾಜ್ಯ ರಾಜಕೀಯದಲ್ಲಿ ಮುಡಾ ಸೈಟ್ , ಜಿಂದಾಲ್ ಕಂಪನಿಗೆ ಸರ್ಕಾರ ಭೂಮಿ ಮಾರಾಟ ಮಾಡಲು ತೆಗೆದುಕೊಂಡಿರುವ ನಿರ್ಧಾರ ಸಾಕಷ್ಟು ಚರ್ಚೆಗೆ ಗ್ರಾಸವಾಗಿರುವ ಬೆನ್ನಲ್ಲೇ ಈಗ ಬಿಜೆಪಿ ಸಂಸದ ಲಹರ್‌ ಸಿಂಗ್ (Lahar Singh)​ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕುಟುಂಬಕ್ಕೆ ಕೆಐಎಡಿಬಿ ಭೂಮಿ ನೀಡಿರುವುದನ್ನು ಪ್ರಶ್ನಿಸಿದ್ದಾರೆ. ಈ ಬಗ್ಗೆ ಟ್ವೀಟ್​ ಮಾಡಿರುವ ಅವರು, … Continued

ಮೋದಿ ನಂತರ ಪ್ರಧಾನಿ ಅಭ್ಯರ್ಥಿಯಾಗಲು ಬಿಜೆಪಿಯಲ್ಲಿ ಯಾರು ಸೂಕ್ತ ? ‘ಮೂಡ್ ಆಫ್ ದಿ ನೇಷನ್’ ಸಮೀಕ್ಷೆ ಹೇಳಿದ್ದೇನು..?

ನವದೆಹಲಿ: ನರೇಂದ್ರ ಮೋದಿ ನಂತರ ಪ್ರಧಾನಿ ಹುದ್ದೆಗೆ ಬಿಜೆಪಿಯಲ್ಲಿ ಸೂಕ್ತ ವ್ಯಕ್ತಿ ಯಾರು? ಮೋದಿ ಅವರ ಬಳಿಕ ಪ್ರಧಾನಿ ಅಭ್ಯರ್ಥಿಯನ್ನಾಗಿ ಬಿಜೆಪಿ ಯಾರನ್ನು ಆಯ್ಕೆ ಮಾಡಬಹುದು? ಇಂಡಿಯಾ ಟುಡೆ ‘ಮೂಡ್ ಆಫ್ ದಿ ನೇಷನ್’ ಸಮೀಕ್ಷೆಯ ಆಗಸ್ಟ್ ಆವೃತ್ತಿಯಲ್ಲಿ ಮೋದಿ ಅವರ ಉತ್ತರಾಧಿಕಾರಿ ಸ್ಥಾನಕ್ಕೆ ಸೂಕ್ತ ವ್ಯಕ್ತಿ ಯಾರು ಎಂಬ ಬಗ್ಗೆ ಜನರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. … Continued

ರಾಜ್ಯಸಭೆಯ 12 ಸ್ಥಾನಗಳಿಗೆ ಉಪಚುನಾವಣೆ : ಬಿಜೆಪಿಯಿಂದ 9 ಅಭ್ಯರ್ಥಿಗಳ ಹೆಸರು ಪ್ರಕಟ

ನವದೆಹಲಿ : ರಾಜ್ಯಸಭೆಯ 12 ಸ್ಥಾನಗಳಿಗೆ ನಡೆಯಲಿರುವ ಉಪಚುನಾವಣೆಗೆ ಬಿಜೆಪಿ ಒಂಬತ್ತು ಹೆಸರುಗಳನ್ನು ಪ್ರಕಟಿಸಿದೆ. ಅಭ್ಯರ್ಥಿಗಳಲ್ಲಿ ಕೇಂದ್ರ ಸಚಿವರಾದ ರವನೀತ್ ಸಿಂಗ್ ಬಿಟ್ಟು ಮತ್ತು ಜಾರ್ಜ್ ಕುರಿಯನ್ ಸೇರಿದ್ದಾರೆ. 12 ರಾಜ್ಯಸಭಾ ಸ್ಥಾನಗಳಿಗೆ ಸೆಪ್ಟೆಂಬರ್‌ 3ರಂದು ಉಪಚುನಾವಣೆ ನಡೆಯಲಿದ್ದು, ಆಗಸ್ಟ್ 14ರಂದು ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ. ಆಗಸ್ಟ್ 21ರವರೆಗೆ ಅವಕಾಶವಿದೆ. ಕೇಂದ್ರ ಸಚಿವರಾದ ಪಿಯೂಷ್ … Continued

ಮೂರು ಆಯ್ಕೆಗಳಿವೆ…: ಬಿಜೆಪಿ ಸೇರ್ಪಡೆಯಾಗುವ ವದಂತಿ ಮಧ್ಯೆ ಜಾರ್ಖಂಡ್‌ ಮಾಜಿ ಸಿಎಂ ಚಂಪೈ ಸೊರೇನ್‌ ಮಾರ್ಮಿಕ ಹೇಳಿಕೆ

ನವದೆಹಲಿ: ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಮತ್ತು ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ನಾಯಕ ಚಂಪೈ ಸೊರೇನ್‌ ಅವರು ಬಿಜೆಪಿಗೆ ಸೇರ್ಪಡೆಯಾಗುತ್ತಾರೆ ಎಂಬ ವದಂತಿಗಳ ನಡುವೆ ತಾನು ಸಂಪೂರ್ಣ ಜೀವನವನ್ನು ಸಮರ್ಪಿಸಿಕೊಂಡ ಪಕ್ಷದಲ್ಲಿ ನನಗೆ ಅಸ್ತಿತ್ವವಿಲ್ಲ ಎಂಬ ಭಾವನೆ ಬರುವಂತಾಗಿದೆ ಹಾಗೂ ತನಗೆ ಪರ್ಯಾಯ ಮಾರ್ಗಹುಡುಕುವ ಅನಿವಾರ್ಯತೆ ಸೃಷ್ಟಿಸಲಾಗಿದೆ ಎಂದು ಹೇಳಿದ್ದಾರೆ. ಜಾರ್ಖಂಡ್ ವಿಧಾನಸಭೆ ಚುನಾವಣೆಗೂ ಮುನ್ನ … Continued

ಕೆಂಪುಕೋಟೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ | ರಾಜಕೀಯ ವಿವಾದಕ್ಕೆ ಕಾರಣವಾದ ವಿಪಕ್ಷ ನಾಯಕ ರಾಹುಲ್ ಗಾಂಧಿಗೆ 5ನೇ ಸಾಲಿನಲ್ಲಿ ಆಸನ ವ್ಯವಸ್ಥೆ

ನವದೆಹಲಿ: ಕೆಂಪು ಕೋಟೆಯಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಲೋಕಸಭೆಯಲ್ಲಿ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರಿಗೆ “ಐದನೇ ಸಾಲಿನಲ್ಲಿ ಆಸನ ವ್ಯವಸ್ಥೆ” ಮಾಡಿರುವುದು ರಾಜಕೀಯ ವಿವಾದಕ್ಕ ಕಾರಣವಾಗಿದೆ. ಹಾಗೂ ಪ್ರಜಾಪ್ರಭುತ್ವ ಸಂಪ್ರದಾಯಗಳಿಗೆ ಸರ್ಕಾರ ಗೌರವ ಕೊಡುತ್ತಿಲ್ಲ ಎಂದು ವಿಪಕ್ಷಗಳು ಟೀಕಿಸಿವೆ. ಕೆಂಪುಕೋಟೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ವೇಳೆ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರಿಗೆ ಐದನೇ … Continued