ಲೋಕಸಭೆ ಚುನಾವಣೆ: ಬಿಡುಗಡೆಯಾದ ಬಿಜೆಪಿ 267 ಬಿಜೆಪಿಯ ಅಭ್ಯರ್ಥಿಗಳ ಪಟ್ಟಿಯಲ್ಲಿ 24%ರಷ್ಟು ಹಾಲಿ ಸಂಸದರಿಗೆ ಕೈತಪ್ಪಿದ ಟಿಕೆಟ್‌…!

ನವದೆಹಲಿ: ಬಿಜೆಪಿ ಇದುವರೆಗೆ ಬಿಡುಗಡೆ ಮಾಡಿರುವ ಎರಡು ಪಟ್ಟಿಗಳಲ್ಲಿ ಲೋಕಸಭೆ ಚುನಾವಣೆಗೆ ಪಕ್ಷವು 267 ಅಭ್ಯರ್ಥಿಗಳನ್ನು ಹೆಸರಿಸಿದೆ. ಅದರಲ್ಲಿ ಸುಮಾರು 24%ರಷ್ಟು ಹಾಲಿ ಸಂಸದರಿಗೆ ಟಿಕೆಟ್‌ ನೀಡಿಲ್ಲ ಎಂದು ವರದಿಯೊಂದು ಹೇಳಿದೆ. ಅವರ ಕ್ಷೇತ್ರದಲ್ಲಿ ಸಂಭಾವ್ಯ ವಿರೋಧಿ ಅಲೆಯನ್ನು ಗಮನದಲ್ಲಿಟ್ಟುಕೊಂಡು ಕಾರ್ಯತಂತ್ರವನ್ನು ವಿನ್ಯಾಸಗೊಳಿಸಲಾಗಿದೆ ಮತ್ತು ಪಕ್ಷವು ತಳಮಟ್ಟದಿಂದ ಪಡೆದ ಪ್ರತಿಕ್ರಿಯೆಯನ್ನು ಆಧರಿಸಿ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ ಎಂದು … Continued

ಬಿಜೆಪಿ ಲೋಕಸಭೆ ಅಭ್ಯರ್ಥಿಯಾಗಿ ರಾಜಕೀಯಕ್ಕೆ ಪದಾರ್ಪಣೆ ಮಾಡಿದ ಖ್ಯಾತ ಹೃದ್ರೋಗ ತಜ್ಞ, ದೇವೇಗೌಡರ ಅಳಿಯ ಪದ್ಮಶ್ರೀ ಡಾ ಸಿ.ಎನ್. ಮಂಜುನಾಥ

ಬೆಂಗಳೂರು : ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರ ಅಳಿಯ ಹಾಗೂ ಬೆಂಗಳೂರಿನ ಜಯದೇವ ಆಸ್ಪತ್ರೆ ನಿರ್ದೇಶಕ ಡಾ ಸಿ.ಎನ್. ಮಂಜುನಾಥ ಅವರು ರಾಜಕೀಯ ಪ್ರವೇಶಿಸಿದ್ದಾರೆ. ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಿಂದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರ ಸಹೋದರ ಡಿ.ಕೆ. ಸುರೇಶ ವಿರುದ್ಧ ಡಾ ಮಂಜುನಾಥ ಅವರನ್ನು ಬಿಜೆಪಿ ಕಣಕ್ಕಿಳಿಸಿದೆ. ಬೆಂಗಳೂರು ಗ್ರಾಮಾಂತರ ಕ್ಷೇತ್ರವನ್ನು ಶಿವಕುಮಾರ ಸಹೋದರರ … Continued

ಹೊರಬಿತ್ತು ಮತ್ತೊಂದು ಸಮೀಕ್ಷೆ : ಕರ್ನಾಟಕದಲ್ಲಿ ಬಿಜೆಪಿ-ಜೆಡಿಎಸ್‌ ಮೈತ್ರಿಗೆ ಹೆಚ್ಚಿನ ಸ್ಥಾನ-ಎಬಿಪಿ ನ್ಯೂಸ್-ಸಿ ವೋಟರ್ ಸಮೀಕ್ಷೆ ಭವಿಷ್ಯ

ನವದೆಹಲಿ :  ಲೋಕಸಭಾ ಚುನಾವಣೆಗಳು ಹತ್ತಿರವಾಗುತ್ತಿದ್ದು, ಯಾವುದೇ ಸಮಯದಲ್ಲಿಯೂ ಚುನಾವಣೆ ಘೋಷಣೆಯಾಗಬಹುದಾಗಿದೆ. ರಾಜಕೀಯ ಪಕ್ಷಗಳು ತಮ್ಮ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುತ್ತಿವೆ. ಲೋಕಸಭೆ ಚುನಾವಣೆಗೂ ಮುನ್ನ ಎಬಿಪಿ ನ್ಯೂಸ್-ಸಿ ವೋಟರ್ಸ್ ಚುನಾವಣಾ ಪೂರ್ವ ಒಪಿನಿಯನ್‌ ಪೋಲ್‌ ನಡೆಸಿದ್ದು, ಕರ್ನಾಟಕದಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಜಯ ಸಾಧಿಸಲಿದೆ ಎಂಬುದು ಸಮೀಕ್ಷೆಯಲ್ಲಿ ಕಂಡುಬಂದಿದೆ. ಎಬಿಪಿ ನ್ಯೂಸ್-ಸಿವೋಟರ್ ಒಪಿನಿಯನ್ … Continued

ಲೋಕಸಭೆ ಚುನಾವಣೆ 2024 : ಬಿಜೆಪಿಯಿಂದ 72 ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ ; ಸಂಪೂರ್ಣ ಪಟ್ಟಿ ಇಲ್ಲಿದೆ….

ನವದೆಹಲಿ: ಭಾರತೀಯ ಜನತಾ ಪಕ್ಷ (ಬಿಜೆಪಿ) ಲೋಕಸಭೆ ಚುನಾವಣೆಗೆ ತನ್ನ 72 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬುಧವಾರ ಬಿಡುಗಡೆ ಮಾಡಿದೆ. ಬಿಜೆಪಿ ತನ್ನ ಎರಡನೇ ಪಟ್ಟಿಯಲ್ಲಿ ಮಹಾರಾಷ್ಟ್ರ, ಕರ್ನಾಟಕ, ಉತ್ತರಾಖಂಡ, ಗುಜರಾತ್, ಹಿಮಾಚಲ ಪ್ರದೇಶ, ತ್ರಿಪುರ, ತೆಲಂಗಾಣ, ದೆಹಲಿ, ಹರಿಯಾಣ ಮತ್ತು ಮಧ್ಯಪ್ರದೇಶದಿಂದ ಅಭ್ಯರ್ಥಿಗಳನ್ನು ಘೋಷಿಸಿದೆ. ಬಿಜೆಪಿಯು ಪಕ್ಷವು ನಾಗ್ಪುರದಿಂದ ಕೇಂದ್ರ ಸಚಿವರಾದ ನಿತಿನ್ ಗಡ್ಕರಿ, … Continued

ಲೋಕಸಭಾ ಚುನಾವಣೆ : ಬಿಜೆಪಿಯ 2ನೇ ಪಟ್ಟಿ ಪ್ರಕಟ ; 20 ಕ್ಷೇತ್ರಗಳಿಗೆ ಅಭ್ಯರ್ಥಿಗಳು ಪ್ರಕಟ, ಹಲವು ಹಾಲಿ ಸಂಸದರಿಗೆ ಕೈತಪ್ಪಿದ ಟಿಕೆಟ್‌

ನವದೆಹಲಿ : ಲೋಕಸಭಾ ಚುನಾವಣೆಗೆ ಬಿಜೆಪಿಯ ಎರಡನೇ ಪಟ್ಟಿ ಪ್ರಕಟವಾಗಿದ್ದು, ಕರ್ನಾಟಕದ 28 ಕ್ಷೇತ್ರಗಳ ಪೈಕಿ 20 ಕ್ಷೇತ್ರಗಳಿಗೆ ಅಭ್ಯರ್ಥಿಯನ್ನು ಘೋಷಣೆ ಮಾಡಲಾಗಿದೆ. ಎಂಟು ಹಾಲಿ ಸಂಸದರಿಗೆ ಟಿಕೆಟ್​ ಕೈತಪ್ಪಿದ್ದು ಬಿಜೆಪಿ ಹೈಕಮಾಂಡ್‌ ಹೊಸ ಮುಖಗಳಿಗೆ ಮಣೆ ಹಾಕಿದೆ. ಟಿಕೆಟ್ ಮಿಸ್ ಆಗಿದ್ದು, ಆರು ಹೊಸ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ. ಮೈಸೂರು-ಪ್ರತಾಪ ಸಿಂಹ, ಬೆಂಗಳೂರು ಉತ್ತರ- … Continued

ಲೋಕಸಭೆ ಚುನಾವಣೆಗೂ ಮುನ್ನ ಕಾಂಗ್ರೆಸ್ಸಿಗೆ ಮತ್ತೊಂದು ಹಿನ್ನಡೆ : ಮಹಾರಾಷ್ಟ್ರದ ಹಿರಿಯ ನಾಯಕ ಬಿಜೆಪಿಗೆ ಸೇರ್ಪಡೆ

ಮುಂಬೈ: ಮುಂಬರುವ ಲೋಕಸಭೆ ಚುನಾವಣೆಗೆ ಮುನ್ನ ಕಾಂಗ್ರೆಸ್ಸಿಗೆ ಮಹಾರಾಷ್ಟ್ರದಲ್ಲಿ ಮತ್ತೊಂದು ಹಿನ್ನಡೆಯಾಗಿದ್ದು, ಪಕ್ಷದ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಪದ್ಮಾಕರ ವಾಲ್ವಿ ಬುಧವಾರ ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ) ಸೇರ್ಪಡೆಗೊಂಡಿದ್ದಾರೆ. ಮುಂಬೈನಲ್ಲಿ ಮಹಾರಾಷ್ಟ್ರ ಬಿಜೆಪಿ ಅಧ್ಯಕ್ಷ ಅಧ್ಯಕ್ಷ ಚಂದ್ರಶೇಖರ ಬವಾಂಕುಲೆ ಮತ್ತು ಪಕ್ಷದ ಮುಖಂಡ ಅಶೋಕ ಚವ್ಹಾಣ ಅವರ ಸಮ್ಮುಖದಲ್ಲಿ ಅವರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. … Continued

ಶಿವಮೊಗ್ಗದಲ್ಲಿ ಪಕ್ಷೇತರನಾಗಿ ಸ್ಪರ್ಧಿಸಿ ಎಂದು ಒತ್ತಡ ಬರ್ತಿದೆ ಎಂದ ಈಶ್ವರಪ್ಪ ಈ ಬಗ್ಗೆ ಹೇಳಿದ್ದೇನು..?

ಶಿವಮೊಗ್ಗ : ಹಾವೇರಿ ಲೋಕಸಭಾ ಕ್ಷೇತ್ರದ ಟಿಕೆಟ್ ​ಅನ್ನು ಪುತ್ರ ಕಾಂತೇಶ ಅವರಿಗೆ ಕೊಡಿಸಲು ಮಾಜಿ ಸಚಿವ ಹಾಗೂ ಬಿಜೆಪಿ ನಾಯಕ ಈಶ್ವರಪ್ಪ ಪ್ರಯತ್ನ ನಡೆಸಿದ್ದಾರೆ. ಆದರೆ ಬಿಜೆಪಿ ಹೈಕಮಾಂಡ್​ ಹಾವೇರಿ ಕ್ಷೇತ್ರದಲ್ಲಿ ಟಿಕೆಟ್​ ಸಿಗುವ ಸಾಧ್ಯತೆ ಕಡಿಮೆ ಎಂದು ಹೇಳಲಾಗುತ್ತಿದೆ. ಯಾಕೆಂದರೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಸಿಗುವ ಸಾಧ್ಯತೆ ಹೆಚ್ಚಾಗಿದೆ ಎಂದು … Continued

ಬಿಜೆಪಿಯ ಮೂವರು ಹಾಲಿ ಸಂಸದರು ನಮ್ಮ ಸಂಪರ್ಕದಲ್ಲಿದ್ದಾರೆ : ಚುನಾವಣೆ ಸನಿಹದಲ್ಲಿ ಡಿಕೆ ಶಿವಕುಮಾರ ಅಚ್ಚರಿಯ ಹೇಳಿಕೆ

ಕಲಬುರಗಿ : ಬಿಜೆಪಿಯ ಮೂವರು ಹಾಲಿ ಸಂಸದರು ನಮ್ಮ ಸಂಪರ್ಕದಲ್ಲಿದ್ದು, ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾಗುವುದರ ಬಗ್ಗೆ ಮಾತನಾಡಿದ್ದಾರೆ ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಕಲ್ಬುರಗಿಯಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ನಮ್ಮ ಜೊತೆ ಯಾವ್ಯಾವ ಸಂಸದರು ಸಂಪರ್ಕದಲ್ಲಿದ್ದಾರೆ ಎಂಬ ಬಗ್ಗೆ ನಾನು ಈಗಲೇ ಮಾಹಿತಿ ಬಹಿರಂಗಪಡಿಸುವುದಿಲ್ಲ. ನಮ್ಮ … Continued

ಎಐಎಸ್ಎಂಕೆ ಪಕ್ಷವನ್ನು ಬಿಜೆಪಿಯಲ್ಲಿ ವಿಲೀನಗೊಳಿಸಿದ ತಮಿಳು ನಟ ಶರತ್ ಕುಮಾರ

ಚೆನ್ನೈ: ಲೋಕಸಭೆ ಚುನಾವಣೆಗೆ ಮುನ್ನ, ತಮಿಳು ಹಿರಿಯ ನಟ ಆರ್. ಶರತಕುಮಾರ ಅವರು ಮಂಗಳವಾರ (ಮಾರ್ಚ್ 12) ತಮ್ಮ ಅಖಿಲ ಭಾರತೀಯ ಸಮತುವ ಮಕ್ಕಳ್ ಕಚ್ಚಿ (AISMK) ಪಕ್ಷವನ್ನು ಬಿಜೆಪಿಯೊಂದಿಗೆ ವಿಲೀನಗೊಳಿಸಿದ್ದಾರೆ. ಎಐಎಸ್‌ಎಂಕೆ (AISMK) ಪದಾಧಿಕಾರಿಗಳು ಮತ್ತು ಬಿಜೆಪಿ ತಮಿಳುನಾಡು ಘಟಕದ ಅಧ್ಯಕ್ಷ ಕೆ.ಅಣ್ಣಾಮಲೈ ಅವರ ಸಮ್ಮುಖದಲ್ಲಿ ಶರತಕುಮಾರ ತಮ್ಮ ಪಕ್ಷವನ್ನು ಬಿಜೆಪಿ ಪಕ್ಷದೊಂದಿಗೆ ವಿಲೀನಗೊಳಿಸಿದರು. … Continued

ಮನೋಹರಲಾಲ ಖಟ್ಟರ್ ರಾಜೀನಾಮೆ ನಂತರ ಹರಿಯಾಣದ ನೂತನ ಸಿಎಂ ಆಗಿ ನಯಾಬ್ ಸಿಂಗ್ ಸೈನಿ ಆಯ್ಕೆ

ನವದೆಹಲಿ : ನಯಾಬ್ ಸಿಂಗ್ ಸೈನಿ ಅವರು ಹರಿಯಾಣದ ನೂತನ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಬಿಜೆಪಿ ಮಂಗಳವಾರ ಮಧ್ಯಾಹ್ನ ಪ್ರಕಟಿಸಿದೆ. ಮುಖ್ಯಮಂತ್ರಿ ಮನೋಹರ ಲಾಲ ಖಟ್ಟರ್ , ಉಪಮುಖ್ಯಮಂತ್ರಿ ದುಷ್ಯಂತ್ ಚೌತಾಲಾ ಅವರ ಜೆಜೆಪಿಯ ಮೂವರು ಸದಸ್ಯರು ಸೇರಿದಂತೆ ಮನೋಹರ ಖಟ್ಟರ್‌ ಅವರ ಇಡೀ ಸಚಿವ ಸಂಪುಟ ರಾಜೀನಾಮೆ ನೀಡಿದ ಕೆಲವೇ ಗಂಟೆಗಳ ನಂತರ ನೂತನ ಮುಖ್ಯಮಂತ್ರಿ … Continued