ವಾಲ್ಮೀಕಿ ನಿಗಮ ಹಗರಣ; ರಾಜ್ಯ ಸರ್ಕಾರದ ಮೊದಲ ವಿಕೆಟ್ ಪತನ; ಸಚಿವ ಸ್ಥಾನಕ್ಕೆ ರಾಜೀನಾಮೆ ಪ್ರಕಟಿಸಿದ ನಾಗೇಂದ್ರ

ಬೆಂಗಳೂರು : ವಾಲ್ಮೀಕಿ ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣದ ತನಿಖೆಯನ್ನು ಸಿಬಿಐ ಕೈಗೆತ್ತಿಕೊಂಡ ಬೆನ್ನಲ್ಲೇ ರಾಜ್ಯ ಸರ್ಕಾರದ ಮೊದಲ ವಿಕೆಟ್‌ ಪತನವಾಗಿದೆ. ತಾನು ಸ್ವಯಂಪ್ರೇರಣೆಯಿಂದ ರಾಜೀನಾಮೆ ನೀಡುತ್ತಿದ್ದೇನೆ ಎಂದು ಸಚಿವ ಬಿ.ನಾಗೇಂದ್ರ ಅವರು ಹೇಳಿದ್ದಾರೆ. ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವ ಬಿ. ನಾಗೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಪ್ರಕಟಿಸಿದ್ದಾರೆ. ಭ್ರಷ್ಟಾಚಾರ ಆರೋಪದ … Continued

3ನೇ ಬಾರಿಗೆ ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣವಚನಕ್ಕೆ ಮುಹೂರ್ತ ಫಿಕ್ಸ್

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಮೂರನೇ ಬಾರಿಗೆ ಭಾರತದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕಾರಕ್ಕೆ ದಿನಾಂಕ ಫಿಕ್ಸ್ ಆಗಿದೆ. ಅವರು ಜೂನ್ 9ರಂದು ಭಾನುವಾರ ಸಂಜೆ 6 ಗಂಟೆಗೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ವರದಿಯಾಗಿದೆ. ಇದಕ್ಕೂ ಮುನ್ನ ಜೂನ್ 8ರಂದು ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ನಡೆಯಲಿದೆ ಎಂದು ಸುದ್ದಿಯಾಗಿತ್ತು. ಮೋದಿ ಬುಧವಾರ ತಮ್ಮ … Continued

ʼಅಗ್ನಿವೀರʼ ಯೋಜನೆ ಮರುಪರಿಶೀಲಿಸುವಂತೆ ಎನ್‌ಡಿಎ ಸರ್ಕಾರ ರಚನೆಗೆ ಮೊದಲೇ ಜೆಡಿಯು ಒತ್ತಾಯ

ನವದೆಹಲಿ: ನರೇಂದ್ರ ಮೋದಿ ಸರ್ಕಾರದ ಮೂರನೇ ಅವಧಿಯು ಮೊದಲ ಎರಡಕ್ಕಿಂತ ಭಿನ್ನವಾಗಿರಬಹುದು ಎಂಬ ಮೊದಲ ಸಂಕೇತವಾಗಿ, ಸಶಸ್ತ್ರ ಪಡೆಗಳಲ್ಲಿ ನೇಮಕಾತಿಗಾಗಿ ಕೇಂದ್ರದ ಅಗ್ನಿಪಥ ಯೋಜನೆಯನ್ನು ಮರುಪರಿಶೀಲಿಸಲು ಪಕ್ಷವು ಬಯಸುತ್ತದೆ ಎಂದು ಜೆಡಿಯು ನಾಯಕರೊಬ್ಬರು ಹೇಳಿದ್ದಾರೆ. ಬಿಜೆಪಿ ಮಿತ್ರ ಪಕ್ಷ ಜೆಡಿಯುನ ಮುಖ್ಯ ವಕ್ತಾರ ಕೆ.ಸಿ. ತ್ಯಾಗಿ, ಹಲವಾರು ರಾಜ್ಯಗಳಲ್ಲಿ ಯೋಜನೆಯ ವಿರುದ್ಧ ಅಸಮಾಧಾನವಿದೆ ಎಂದು ಹೇಳಿದ್ದಾರೆ. … Continued

ಲೋಕಸಭೆ ಚುನಾವಣೆ ಫಲಿತಾಂಶ : ಬಿಜೆಪಿಗೆ ಸ್ವಂತ ಬಲದ ಬಹುಮತ ತಪ್ಪಿಸಿದ 32 ಕ್ಷೇತ್ರಗಳ ಕೇವಲ 6 ಲಕ್ಷ ಮತಗಳು…! ಕ್ಷೇತ್ರಗಳ ಪಟ್ಟಿ ಇಲ್ಲಿದೆ…

ಈ ಲೋಕಸಭಾ ಚುನಾವಣೆಯಲ್ಲಿ 543 ಸ್ಥಾನಗಳಲ್ಲಿ ಎನ್‌ಡಿಎ (NDA) 293 ಸ್ಥಾನಗಳನ್ನು ಪಡೆಯುವ ಮೂಲಕ ಬಹುಮತ ಪಡೆದುಕೊಂಡಿದೆ. ಪ್ರಧಾನಿ ನರೇಂದ್ರ ಮೋದಿ ಸತತ ಮೂರನೇ ಅವಧಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲು ಸಜ್ಜಾಗಿದ್ದಾರೆ. ಆದರೆ, 240 ಸ್ಥಾನಗಳನ್ನು ಪಡೆದ ಬಿಜೆಪಿ ತನ್ನದೇ ಆದ ಬಹುಮತ ಸಾಧಿಸಲು ವಿಫಲವಾಗಿದೆ. ಇದು 2014 ಹಾಗೂ 2019ರಲ್ಲಿ ಅದರ ಅದ್ಭುತ … Continued

ಮಹಾರಾಷ್ಟ್ರದಲ್ಲಿ ಬಿಜೆಪಿ ಕಳಪೆ ಸಾಧನೆ ಹೊಣೆ ಹೊತ್ತ ಫಡ್ನವೀಸ್‌ : ಡಿಸಿಎಂ ಸ್ಥಾನಕ್ಕೆ ರಾಜೀನಾಮೆ ಇಂಗಿತ

ಮುಂಬೈ: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯ ಹೀನಾಯ ಸೋಲಿನ ಹೊಣೆ ಹೊತ್ತು ಮಹಾರಾಷ್ಟ್ರ ಉಪಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್ ಮುಂದಾಗಿದ್ದಾರೆ. ಈ ವರ್ಷದ ಕೊನೆಯಲ್ಲಿ ನಡೆಯಲಿರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಪಕ್ಷವನ್ನು ಬಲಪಡಿಸುವತ್ತ ಗಮನ ಹರಿಸಲು ತಮ್ಮನ್ನು ಉಪಮುಖ್ಯಮಂತ್ರಿ ಕರ್ತವ್ಯಗಳಿಂದ ಮುಕ್ತಗೊಳಿಸುವಂತೆ ಬಿಜೆಪಿ ನಾಯಕತ್ವಕ್ಕೆ ವಿನಂತಿಸಿದ್ದಾರೆ. ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಮಾತನಾಡಿದ … Continued

ರಾಷ್ಟ್ರಪತಿಗೆ ರಾಜೀನಾಮೆ ಸಲ್ಲಿಸಿದ ಮೋದಿ ; ಜೂನ್ 8 ರಂದು 3ನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸಾಧ್ಯತೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಮೂರನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸಲಿದ್ದು, ಈ ಮೂಲಕ ಜವಾಹರಲಾಲ ನೆಹರು ನಂತರ ದೇಶದ ಮೂರನೇ ಅವಧಿಗೆ ಪ್ರಧಾನಿಯಾಗುವ ಏಕೈಕ ನಾಯಕರಾಗಿದ್ದಾರೆ. ಲೋಕಸಭೆ ಫಲಿತಾಂಶ ಪ್ರಕಟವಾದ ನಂತರ ಇಂದು ಬುಧವಾರ ದೆಹಲಿಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಕೇಂದ್ರ ಸಚಿವ ಸಂಪುಟ ಸಭೆ ನಡೆದಿದ್ದು, 17ನೇ … Continued

ಲೋಕಸಭೆ ಚುನಾವಣೆ ಫಲಿತಾಂಶ : ಪಕ್ಷವಾರು ಗೆದ್ದ ಸ್ಥಾನಗಳ ವಿವರ….

ನವದೆಹಲಿ: ಭಾರತೀಯ ಚುನಾವಣಾ ಆಯೋಗ (ECI) ಎಲ್ಲಾ 543 ಲೋಕಸಭಾ ಕ್ಷೇತ್ರಗಳಿಗೆ ಫಲಿತಾಂಶವನ್ನು ಪ್ರಕಟಿಸಿದೆ. ಇದರಲ್ಲಿ ಬಿಜೆಪಿ 240 ಸ್ಥಾನಗಳನ್ನು ಮತ್ತು ಕಾಂಗ್ರೆಸ್ 99 ಸ್ಥಾನಗಳನ್ನು ಗೆದ್ದಿದೆ. ಬಿಜೆಪಿಯ ಸೂರತ್ ಅಭ್ಯರ್ಥಿ ಮುಖೇಶ ದಲಾಲ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದರಿಂದ 542 ಸ್ಥಾನಗಳಿಗೆ ಮಾತ್ರ ಮತಗಳನ್ನು ಎಣಿಕೆ ಮಾಡಲಾಗಿದೆ. ಕೆಲವು ಹಿಂದಿ ರಾಜ್ಯಗಳಲ್ಲಿ ಪಕ್ಷದ ಹೀನಾಯ ಪ್ರದರ್ಶನದ … Continued

ಲೋಕಸಭೆ ಚುನಾವಣೆ: ಅತಿ ಹೆಚ್ಚು ಅಂತರದಿಂದ ಗೆದ್ದವರು-ಅತಿ ಕಡಿಮೆ ಅಂತರದಿಂದ ಗೆದ್ದವರು ಇವರು…

ನವದೆಹಲಿ: 2024 ರ ಲೋಕಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷದ (ಬಿಜೆಪಿ) ನಾಲ್ವರು ಸೇರಿದಂತೆ ಕನಿಷ್ಠ ಐದು ಅಭ್ಯರ್ಥಿಗಳು ಲೋಕಸಭೆ ಚುನಾವಣೆಯಲ್ಲಿ ಅತಿ ಹೆಚ್ಚು ಅಂತರದ ಗೆಲುವಿನ ಮೂಲಕ ಈ ಹಿಂದಿನ ಎಲ್ಲಾ ದಾಖಲೆಗಳನ್ನು ಮುರಿದಿದ್ದಾರೆ. ಮಂಗಳವಾರ ಮತ ಎಣಿಕೆ ನಡೆದು ಫಲಿತಾಂಶ ಪ್ರಕಟವಾಗಿದ್ದು, ಎನ್‌ಡಿಎ 293, ಇಂಡಿಯಾ ಮೈತ್ರಿಕೂಟ 232 ಹಾಗೂ ಇತರರು 18 … Continued

ಒಡಿಶಾ ವಿಧಾನಸಭೆ ಚುನಾವಣೆ ಫಲಿತಾಂಶ: ಬಿಜೆಪಿ ಜಯಭೇರಿ, ನವೀನ ಪಟ್ನಾಯಕ್ 24 ವರ್ಷಗಳ ಆಡಳಿತ ಅಂತ್ಯ

ಮಂಗಳವಾರ ನಡೆದ 147 ಸದಸ್ಯ ಬಲದ ಒಡಿಶಾ ವಿಧಾನಸಭೆ ಚುನಾವಣಾ ಫಲಿತಾಂಶದಲ್ಲಿ ಒಡಿಶಾ ವಿಧಾನಸಭೆಯಲ್ಲಿ ೭೮ ಸ್ಥಾನಗಳನ್ನು ಗೆಲ್ಲುವ ಮೂಲಕ ಬಿಜೆಪಿ ಬಹುಮತ ಪಡೆದಿದೆ ಎಂದು ಭಾರತೀಯ ಚುನಾವಣಾ ಆಯೋಗ ತಿಳಿಸಿದೆ. 2000 ದಿಂದ ಒಡಿಶಾದಲ್ಲಿ ಅಧಿಕಾರದಲ್ಲಿರುವ ಬಿಜೆಡಿಯು 50 ಸ್ಥಾನಗಳನ್ನು ಗೆದ್ದಿದ್ದು, ಒಂದು ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದೆ. ಕಾಂಗ್ರೆಸ್ 14 ವಿಧಾನಸಭಾ ಸ್ಥಾನಗಳನ್ನು ಗೆದ್ದಿದೆ. … Continued

ನಿತೀಶಕುಮಾರ ಎನ್‌ಡಿಎಗೆ ಬೆಂಬಲ ನೀಡ್ತಾರಾ? ಜೆಡಿಯು ಹೇಳಿದ್ದೇನು..?

ನವದೆಹಲಿ: ಲೋಕಸಭೆ ಚುನಾವಣೆ 2024ರ ಮತ ಎಣಿಕೆಯಲ್ಲಿ ಎನ್‌ಡಿಎ 300 ಸ್ಥಾನಗಳನ್ನು ಗೆಲ್ಲುವ ಸಮೀಪದಲ್ಲಿದೆ. ಇಂಡಿಯಾ ಮೈತ್ರಿಕೂಟವು 230ಕ್ಕೂ ಹೆಚ್ಚು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಇದರ ಬೆನ್ನಲ್ಲೇ ಬಿಹಾರದ ಮುಖ್ಯಮಂತ್ರಿ ನಿತೀಶಕುಮಾರ ಅವರೊಂದಿಗೆ ಇಂಡಿಯಾ ಮೈತ್ರಿಕೂಟದ ನಾಯಕ ಶರದ್ ಪವಾರ ಅವರು ಸಂಪರ್ಕದಲ್ಲಿದ್ದಾರೆ ಎಂಬ ವರದಿಗಳ ಹೊರಬಿದ್ದಿವೆ. ಕೇಂದ್ರದಲ್ಲಿ ಸರ್ಕಾರ ರಚಿಸಲು ನಿತೀಶಕುಮಾರ ಅವರ ಜೆಡಿಯು … Continued