ರಾಜಸ್ಥಾನದ ಬಿಜೆಪಿ ಅಧ್ಯಕ್ಷರ ಎದುರೇ ಹೊಡೆದಾಡಿಕೊಂಡ ಇಬ್ಬರು ಬಿಜೆಪಿ ನಾಯಕರು ; ವೀಡಿಯೊ ವೈರಲ್‌

ಜೈಪುರ: ರಾಜಸ್ಥಾನದ ಬಿಜೆಪಿ ಅಧ್ಯಕ್ಷ ಮದನ್ ರಾಥೋಡ್ ಅವರ ಸಮ್ಮುಖದಲ್ಲಿ ಬಿಜೆಪಿಯ ಇಬ್ಬರು ನಾಯಕರು ಹೊಡೆದಾಡಿಕೊಂಡಿದ್ದು, ಪರಸ್ಪರ ಕಪಾಳಮೋಕ್ಷ ಮಾಡಿಕೊಂಡಿರುವ ಆಘಾತಕಾರಿ ಘಟನೆ ಗುರುವಾರ ನಡೆದಿದೆ. ಬಿಜೆಪಿ ಅಲ್ಪಸಂಖ್ಯಾತ ಘಟಕದ ಸಭೆಯಲ್ಲಿ ಇಬ್ಬರು ಬಿಜೆಪಿ ನಾಯಕರ ನಡುವಿನ ಮಾತಿನ ಚಕಮಕಿ ವಿಕೋಪಕ್ಕೆ ಹೋಗಿ ಇಬ್ಬರು ನಾಯಕರು ಪರಸ್ಪರ ಕಪಾಳಮೋಕ್ಷ ಮಾಡಿಕೊಂಡಿದ್ದಾರೆ. ಇಬ್ಬರ ನಡುವೆ ಜಗಳ ನಡೆಯುತ್ತಿದ್ದಂತೆ … Continued

ಪರಿಷ್ಕೃತ ವಕ್ಫ್ ಮಸೂದೆಗೆ ಸಂಪುಟದ ಅನುಮೋದನೆ ; ಬಜೆಟ್ ಅಧಿವೇಶನದ ದ್ವಿತೀಯಾರ್ಧದಲ್ಲಿ ಮಂಡನೆಗೆ ಸರ್ಕಾರದ ಸಿದ್ಧತೆ ; ಮೂಲಗಳು

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟವು ತನ್ನ ಇತ್ತೀಚಿನ ಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆ, 2024 ಕ್ಕೆ ತನ್ನ ಅನುಮೋದನೆ ನೀಡಿದೆ ಎಂದು ಮೂಲಗಳು ತಿಳಿಸಿವೆ. ಫೆಬ್ರವರಿ 13 ರಂದು ಸಂಸತ್ತಿನಲ್ಲಿ ಮಂಡಿಸಲಾದ ಜಂಟಿ ಸಂಸದೀಯ ಸಮಿತಿ (ಜೆಪಿಸಿ) ವರದಿಯ ಆಧಾರದ ಮೇಲೆ ಕೇಂದ್ರ ಸಚಿವ ಸಂಪುಟವು ವಕ್ಫ್ (ತಿದ್ದುಪಡಿ) ಮಸೂದೆಯನ್ನು … Continued

ಸ್ಯಾಮ್ ಪಿತ್ರೋಡಾ ವಿರುದ್ಧ ಕರ್ನಾಟಕದಲ್ಲಿ ಭೂ ಹಗರಣದ ಆರೋಪ ; ಲೋಕಾಯುಕ್ತ, ಇ.ಡಿ.ಗೆ ಎನ್.ಆರ್. ರಮೇಶ ದೂರು

ಬೆಂಗಳೂರು: ಕರ್ನಾಟಕ ಅರಣ್ಯ ಇಲಾಖೆಗೆ ಸೇರಿದ 150 ಕೋಟಿ ರೂ.ಗಳ ಮೌಲ್ಯದ ಸರ್ಕಾರಿ ಭೂಮಿಯನ್ನು ಅಕ್ರಮವಾಗಿ ಸ್ವಾಧೀನಪಡಿಸಿಕೊಂಡ ಆರೋಪದ ಮೇಲೆ ಕಾಂಗ್ರೆಸ್‌ ಪಕ್ಷದ ಸಾಗರೋತ್ತರ ಘಟಕದ ಅಧ್ಯಕ್ಷ ಸ್ಯಾಮ್ ಪಿತ್ರೋಡಾ ಮತ್ತು ಇತರ ಐವರ ವಿರುದ್ಧ ಜಾರಿ ನಿರ್ದೇಶನಾಲಯ (ED) ಮತ್ತು ಲೋಕಾಯುಕ್ತದಲ್ಲಿ ಪ್ರಕರಣ ದಾಖಲಾಗಿದೆ. ಕರ್ನಾಟಕ ಅರಣ್ಯ ಮತ್ತು ಪರಿಸರ ಇಲಾಖೆಯ ಮಾಜಿ ಹೆಚ್ಚುವರಿ … Continued

ಶಿರಸಿ ಸಾರ್ವಜನಿಕ ಆಸ್ಪತ್ರೆಗೆ ಹೈಟೆಕ್‌ ಸೌಲಭ್ಯ | 15 ದಿನದಲ್ಲಿ ಶಾಸಕರ ಪ್ರತಿಕ್ರಿಯೆ ಬೇಕು; ಇಲ್ಲದಿದ್ರೆ ʼಆಸ್ಪತ್ರೆ ಉಳಿಸಿʼ ಸಹಿ ಸಂಗ್ರಹ ಅಭಿಯಾನ ; ಅನಂತಮೂರ್ತಿ ಹೆಗಡೆ

ಶಿರಸಿ : ಶಿರಸಿಯ ಪಂಡಿತ ಸಾರ್ವಜನಿಕ ಆಸ್ಪತ್ರೆಗೆ ಸಂಬಂಧಿಸಿದಂತೆ ಸರ್ಕಾರ ವೈದ್ಯಕೀಯ ಸಲಕರಣೆಗಳಿಗೆ 30 ಕೋಟಿ ರೂಪಾಯಿ ಕೊಡುತ್ತಿಲ್ಲ ಎಂಬ ಕಾರಣಕ್ಕೆ ಹೈಟೆಕ್ ಅಸ್ಪತ್ರೆಯನ್ನ ಕೆಳದರ್ಜೆಗೆ ತಳ್ಳುವ ಪ್ರಯತ್ನ ಮಾಡುತ್ತಿರುವ ಶಾಸಕರಾದ ಭೀಮಣ್ಣ ನಾಯ್ಕ ಜನತೆಯ ಕ್ಷಮೆ ಕೇಳಬೇಕು ಎಂದು ಬಿಜೆಪಿ ಮುಖಂಡ ಅನಂತಮೂರ್ತಿ ಹೆಗಡೆ ಆಗ್ರಹಿಸಿದ್ದಾರೆ. ಶಿರಸಿಯ ಪತ್ರಿಕಾಭವನದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, … Continued

ದೆಹಲಿ ಸಿಎಂ ಆಗಿ ಇಂದು ರೇಖಾ ಗುಪ್ತಾ ಪ್ರಮಾಣ ವಚನ ; ಸಂಪುಟದಲ್ಲಿ 6 ಮಂದಿ ಸಚಿವರು

ನವದೆಹಲಿ : ಬಿಜೆಪಿ ನಾಯಕರಾದ ಪರ್ವೇಶ ವರ್ಮಾ, ಕಪಿಲ್ ಮಿಶ್ರಾ, ಮಂಜಿಂದರ್ ಸಿಂಗ್ ಸಿರ್ಸಾ ಮತ್ತು ಆಶಿಶ್ ಸೂದ್ ಸೇರಿದಂತೆ ಆರು ಮಂದಿ ಗುರುವಾರ ರೇಖಾ ಗುಪ್ತಾ ನೇತೃತ್ವದ ದೆಹಲಿಯ ಬಿಜೆಪಿ ಸರ್ಕಾರದಲ್ಲಿ ಸಂಪುಟ ಸಚಿವರಾಗಿ ಪ್ರಮಾಣ ವಚನ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಬುಧವಾರ ಸಂಜೆ ಇಲ್ಲಿ ನಡೆದ ಬಿಜೆಪಿ ಶಾಸಕಾಂಗ ಪಕ್ಷದ … Continued

ಮೊದಲ ಬಾರಿಗೆ ಶಾಸಕಿ ರೇಖಾ ಗುಪ್ತಾ ದೆಹಲಿಯ ನೂತನ ಮುಖ್ಯಮಂತ್ರಿ

ನವದೆಹಲಿ : ರೇಖಾ ಗುಪ್ತಾ ಅವರು ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ. ಪರ್ವೇಶ ವರ್ಮಾ ಉಪಮುಖ್ಯಮಂತ್ರಿಯಾಗಲಿದ್ದಾರೆ. ದೆಹಲಿಯಲ್ಲಿ ಬುಧವಾರ ನಡೆದ ಬಿಜೆಪಿಯ ಶಾಸಕಾಂಗ ಪಕ್ಷದ ಸಭೆಯಲ್ಲಿ ಇಬ್ಬರೂ ನಾಯಕರ ಹೆಸರನ್ನು ಘೋಷಿಸಲಾಯಿತು.ಪ್ರಸ್ತುತ ಬಿಜೆಪಿ ಆಡಳಿತ ನಡೆಸುತ್ತಿರುವ ರಾಜ್ಯಗಳ ಪೈಕಿ ರೇಖಾ ಗುಪ್ತಾ ಅವರು ಏಕೈಕ ಮಹಿಳಾ ಮುಖ್ಯಮಂತ್ರಿಯಾಗಲಿದ್ದಾರೆ. ದೆಹಲಿ ಚುನಾವಣೆಯಲ್ಲಿ ಶಾಲಿಮಾರ್ ಬಾಗ್ ವಿಧಾನಸಭಾ ಕ್ಷೇತ್ರದಿಂದ … Continued

ರಂಜಾನ್ ಮಾಸದಲ್ಲಿ ಮುಸ್ಲಿಂ ಸರ್ಕಾರಿ ನೌಕರರಿಗೆ ಕಚೇರಿಯಿಂದ ಬೇಗನೆ ಹೊರಡಲು ಅನುಮತಿ ನೀಡಿದ ತೆಲಂಗಾಣ ಸರ್ಕಾರ

ಹೈದರಾಬಾದ್: ಕಾಂಗ್ರೆಸ್ ನೇತೃತ್ವದ ತೆಲಂಗಾಣ ಸರ್ಕಾರವು ಸೋಮವಾರ ರಂಜಾನ್ ಉಪವಾಸದ ಸಮಯದಲ್ಲಿ ಮುಸ್ಲಿಂ ಉದ್ಯೋಗಿಗಳಿಗೆ ಕೆಲಸದ ಸಮಯವನ್ನು ಕಡಿತಗೊಳಿಸಿದೆ. ಚಂದ್ರನ ದರ್ಶನದ ಆಧಾರದ ಮೇಲೆ ಮಾರ್ಚ್ 1 ಅಥವಾ 2 ರಂದು ಪ್ರಾರಂಭವಾಗುವ ರಂಜಾನ್ ತಿಂಗಳಲ್ಲಿ ಮುಸ್ಲಿಂ ಉದ್ಯೋಗಿಗಳಿಗೆ ಒಂದು ಗಂಟೆ ಮುಂಚಿತವಾಗಿ ಕಚೇರಿಗಳಿಂದ ಹೋಗಲು ತೆಲಂಗಾಣ ಮುಖ್ಯ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ. ಆದೇಶಗಳು ಮುಸ್ಲಿಂ … Continued

ಚೀನಾ ನಮ್ಮ ಶತ್ರುವಲ್ಲ ; ಭಾರತದ ಧೋರಣೆ ಬದಲಾಗಬೇಕು : ಮತ್ತೆ ನಾಲಿಗೆ ಹರಿಬಿಟ್ಟ ಕಾಂಗ್ರೆಸ್‌ ನಾಯಕ ಸ್ಯಾಮ್‌ ಪಿತ್ರೋಡಾ

ನವದೆಹಲಿ : ತಮ್ಮ ಹೇಳಿಕೆಗಳ ಮೂಲಕ ವಿವಾದ ಸೃಷ್ಟಿಸುವ ಕಾಂಗ್ರೆಸ್‌ ಪಕ್ಷದ  ಸಾಗರೋತ್ತರ ಘಟಕದ ಮುಖ್ಯಸ್ಥ ಸ್ಯಾಮ್ ಪಿತ್ರೋಡಾ (Sam Pitroda) ಈಗ ನೀಡಿರುವ ಮತ್ತೊಂದು ಹೇಳಿಕೆ ವಿವಾದ ಸೃಷ್ಟಿಸಿದೆ. ಕಾಂಗ್ರೆಸ್‌ ಈ ಹೇಳಿಕೆಯಿಂದ ಅಂತರ ಕಾಯ್ದುಕೊಂಡಿದೆ. ಸುದ್ದಿ ಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಸ್ಯಾಂ ಪಿತ್ರೋಡಾ ಅವರು, ಭಾರತದ ಮನಸ್ಥಿತಿಯನ್ನು ಬದಲಾಯಿಸುವ ಅವಶ್ಯಕತೆಯಿದ್ದು, ಭಾರತವು … Continued

ಶೀಶ್ ಮಹಲ್ ವಿವಾದ : ಅರವಿಂದ ಕೇಜ್ರಿವಾಲ್ ಹಿಂದಿನ ಬಂಗಲೆ ನವೀಕರಣ ಪ್ರಕರಣದ ತನಿಖೆಗೆ ಸಿವಿಸಿ ಆದೇಶ

ನವದೆಹಲಿ: ಸಿಪಿಡಬ್ಲ್ಯುಡಿ ಸಲ್ಲಿಸಿದ ವಾಸ್ತವ ವರದಿಯ ಆಧಾರದ ಮೇಲೆ ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನಿವಾಸ, 6 ಫ್ಲಾಗ್‌ಸ್ಟಾಫ್ ಬಂಗಲೆಯ ನವೀಕರಣದ ಕುರಿತು ಕೇಂದ್ರ ಜಾಗೃತ ಆಯೋಗ(Central Vigilance Commission)ವು ತನಿಖೆಗೆ ಆದೇಶಿಸಿದೆ. 6 ಫ್ಲಾಗ್‌ಸ್ಟಾಫ್ ಬಂಗಲೆಯ ಬಂಗಲೆ ನವೀಕರಣದ ತನಿಖೆಗೆ ಫೆಬ್ರವರಿ 13 ರಂದು ಆದೇಶ ನೀಡಲಾಯಿತು. ಕೇಂದ್ರ ಲೋಕೋಪಯೋಗಿ ಇಲಾಖೆ … Continued

ಬಿರೇನ್ ಸಿಂಗ್ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಕೆಲವೇ ದಿನಗಳಲ್ಲಿ ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿ

ನವದೆಹಲಿ: ಎನ್ ಬಿರೇನ್ ಸಿಂಗ್ ಅವರು ರಾಜೀನಾಮೆ ನೀಡಿದ ಮೂರು ದಿನಗಳ ನಂತರವೂ ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಒಮ್ಮತ ಮೂಡದ ಕಾರಣ ಮಣಿಪುರವನ್ನು ರಾಷ್ಟ್ರಪತಿ ಆಳ್ವಿಕೆ ಜಾರಿ ಮಾಡಲಾಗಿದೆ. ರಾಜ್ಯ ವಿಧಾನಸಭೆಯನ್ನು ತಾತ್ಕಾಲಿಕವಾಗಿ ಅಮಾನತಿನಲ್ಲಿ ಇಡಲಾಗಿದೆ. ಭಾನುವಾರ ಮುಖ್ಯಮಂತ್ರಿ ಸ್ಥಾನಕ್ಕೆ ಎನ್ ಬಿರೇನ್ ಸಿಂಗ್ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಸೋಮವಾರದಿಂದ ಆರಂಭವಾಗಬೇಕಿದ್ದ ಬಜೆಟ್ ಅಧಿವೇಶನವನ್ನು ರಾಜ್ಯಪಾಲ … Continued